Breaking News

Daily Archives: ಡಿಸೆಂಬರ್ 26, 2021

ಕರ್ನಾಟಕ ರಾಜ್ಯ ಬಂದ್‍ಗೆ ನಮ್ಮ ನೈತಿಕ ಬೆಂಬಲ ಇದೆ.: ಸಿದ್ದರಾಮಯ್ಯ

ಕರ್ನಾಟಕ ರಾಜ್ಯ ಬಂದ್‍ಗೆ ನಮ್ಮ ನೈತಿಕ ಬೆಂಬಲ ಇದೆ. ಕರ್ನಾಟಕದ ಬಾವುಟವನ್ನು ಮಹಾರಾಷ್ಟ್ರದಲ್ಲಿ ಸುಟ್ಟಿದ್ದಾರೆ. ಎಂಇಎಸ್ ಪುಂಡರ ವಿರುದ್ಧ ಕ್ರಮಕ್ಕೆ ಒತ್ತಾಯಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಶಿವಸೇನೆ ಪುಂಡರ ಕೃತ್ಯ ಮತ್ತು ಬೆಳಗಾವಿಯಲ್ಲಿ ಎಂಇಎಸ್ ಪುಂಡರ ಪುಂಡಾಟಿಕೆ ಖಂಡಿಸಿ ಡಿ.31ರಂದು ಕರ್ನಾಟಕ ಬಂದ್‍ಗೆ ಕೆಲ ಕನ್ನಡ ಸಂಘಟನೆಗಳು ಕರೆ ಕೊಟ್ಟಿವೆ. ಈ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಬೆಂಗಳೂರಿನಲ್ಲಿ ಪ್ರತಿಕ್ರಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ …

Read More »

ರಾಜ್ಯ ಸರ್ಕಾರದಿಂದ ವಸತಿ ರಹಿತರಿಗೆ ಭರ್ಜರಿ ಸಿಹಿಸುದ್ದಿ

ಹಾವೇರಿ : ನಮ್ಮ ಸರ್ಕಾರದ ಒಂದೂವರೆ ವರ್ಷದ ಅವಧಿಯಲ್ಲಿ ನಗರ ಪ್ರದೇಶದಲ್ಲಿ ಒಂದು ಲಕ್ಷ ಹಾಗೂ ಗ್ರಾಮೀಣ ಪ್ರದೇಶದಲ್ಲಿ ನಾಲ್ಕು ಸೇರಿದಂತೆ ಐದು ಲಕ್ಷ ಮನೆಗಳನ್ನು ನಿರ್ಮಾಣ ಮಾಡುವ ಗುರಿ ಹಾಕಿಕೊಳ್ಳಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ರಾಣೆಬೆನ್ನೂರು ನಗರದ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಶನಿವಾರ ವಿವಿಧ ಅಭಿವೃದ್ಧಿ ಕಾರ್ಯಕ್ರಮ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ರಾಣೇಬೆನ್ನೂರ ಮತ್ತು ಬ್ಯಾಡಗಿ ತಾಲೂಕಿನ ಕೋವಿಡ್‍ನಿಂದ ಮೃತರಾದವರ ಕುಟುಂಬಗಳಿಗೆ ತಲಾ ರೂ. ಒಂದು …

Read More »

ರೈತರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಉಚಿತವಾಗಿ ಮನೆ ಬಾಗಿಲಿಗೆ ಪಹಣಿ, ನಕ್ಷೆ, RTC

ವಿಜಯಪುರ: ರಾಜ್ಯದಲ್ಲೆಡೆ ಆರ್.ಟಿ.ಸಿ. ಅಭಿಯಾನ ನಡೆಸಲಾಗುವುದು. ಒಂದೇ ದಿನ ರೈತರ ಮನೆ ಬಾಗಿಲಿಗೆ ಉಚಿತವಾಗಿ ಆರ್.ಟಿ.ಸಿ., ಪಹಣಿ, ಸ್ಕೆಚ್ ಕಾಪಿ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ವಿಜಯಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೈತರ ಜಮೀನುಗಳಿಗೆ ನ್ಯಾಯವಾದ ಬೆಲೆ ಒದಗಿಸಲು 79 /ಎ/ಬಿ ತೆಗೆದುಹಾಕಲಾಗಿದೆ. ಒಂದೇ ದಿನದಲ್ಲಿ ಭೂ ಪರಿವರ್ತನೆ ಮಾಡಲು ನಿಯಮವನ್ನು ಸರಳಿಕರಣ ಮಾಡಲಾಗಿದೆ. ಒಂದೇ ದಿನ ರಾಜ್ಯದ ಸುಮಾರು 40 ಲಕ್ಷ ರೈತರ ಮನೆ …

Read More »

ಆಟೋದಲ್ಲಿ ವಿಲೀಂಗ್ ಮಾಡಲು ಹೋಗಿ ಸಂಭವಿಸಿದ ಅಪಘಾತ

ಬೆಂಗಳೂರು: ಆಟೋದಲ್ಲಿ ವಿಲೀಂಗ್ ಮಾಡಲು ಹೋಗಿ ಸಂಭವಿಸಿದ ಅಪಘಾತದಲ್ಲಿ ಯುವಕ ಸಾವನ್ನಪ್ಪಿರುವ ಘಟನೆ ಬಾಣಸವಾಡಿಯಲ್ಲಿ ನಡೆದಿದೆ. ಮುತ್ತು ಮೃತ ದುರ್ದೈವಿ. ಮುತ್ತು ತನ್ನ ಸ್ನೇಹಿತರೊಂದಿಗೆ ಆಟೋದಲ್ಲಿ ತೆರಳಿದ್ದ, ಈ ವೇಳೆ ಮುತ್ತು ವೀಲಿಂಗ್​ ಮಾಡಲು ಯತ್ನಿಸಿದ್ದು, ಆಟೋ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಮುತ್ತು ತಲೆಗೆ ಗಂಭೀರ ಗಾಯವಾಗಿದ್ದು, ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಘಟನೆ ಸಂಬಂಧ ಬಾಣಸವಾಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಪೊಲೀಸರು ಆಟೋ …

Read More »

ಬಟ್ಟೆ ಮಾಸ್ಕ್ ಬೇಡ.. ಎನ್95, ಕೆ95 ಮಾಸ್ಕ್‌ಗಳನ್ನೇ ಬಳಸಿ – ತಜ್ಞರ ಸಲಹೆ

ಕೊರೊನಾ ವೈರಸ್‌ನ ಹೊಸ ರೂಪಾಂತರದ ಭೀತಿಯನ್ನು ಇಡೀ ಪ್ರಪಂಚ ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ತಜ್ಞರು ಮಾಸ್ಕ್‌ಗಳ ಅಪ್ಗ್ರೇಡ್ ಮಾಡಲು ಸೂಚಿಸುತ್ತಿದ್ದಾರೆ. ಕೋವಿಡ್-19 ಪ್ರಾರಂಭವಾದಾಗ ವೈದ್ಯಕೀಯ ಸಾಧನಗಳ ಕೊರತೆಯಿತ್ತು. ಈ ಕಾರಣ ಆರೋಗ್ಯ ಅಧಿಕಾರಿಗಳು ಸಾರ್ವಜನಿಕರಿಗೆ ಎನ್95 ಮಾಸ್ಕ್‌ಗಳ ಬದಲು ಬಟ್ಟೆಯ ಮಾಸ್ಕ್‌ಗಳನ್ನು ಬಳಸಲು ಪ್ರೋತ್ಸಾಹಿಸಿದ್ದರು. ಈ ಬಟ್ಟೆಯ ಮಾಸ್ಕ್‌ಗಳನ್ನು ಜನರು ಕಡಿಮೆ ಬೆಲೆಯಲ್ಲಿ ಕೊಳ್ಳಬಹುದಿತ್ತು. ಅವುಗಳನ್ನು ಮರುಬಳಕೆಯೂ ಮಾಡಬಹುದಿತ್ತು. ಹೀಗಾಗಿ ಜನರು ಸಿಂಗಲ್ ಲೇಯರ್‌ನ ಬಟ್ಟೆಯ ಮಾಸ್ಕ್‌ಗಳನ್ನೇ ಹೆಚ್ಚಾಗಿ …

Read More »

ಲಖನ್ ಜಾರಕಿಹೊಳಿ ಬಿಜೆಪಿ ಸೇರಿಸಲು ಸಾಹುಕಾರ್ ಪ್ಲಾನ್ ಬಿಜೆಪಿ ಸೇರೋದಕ್ಕೆ ಜಾರಕಿಹೊಳಿ ಸಹೋದರರ ಷರತ್ತು..!

ವಿಧಾನಸಭಾ ಚುನಾವಣೆಗೆ ಅಬ್ಬಬ್ಬಾ ಅಂದ್ರೆ ಒಂದು ವರ್ಷ ಇದೆ. ಪಕ್ಷಗಳು ಈಗಾಗಲೇ ಚುನಾವಣೆಗೆ ತಯಾರಿ ನಡೆಸ್ತಿವೆ. ಈ ನಡುವೆ ಬಿಜೆಪಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಎಲೆಕ್ಷನ್ ದೃಷ್ಟಿಯಲ್ಲಿಟ್ಟುಕೊಂಡೇ ನೂತನ ಐಡಿಯಾವೊಂದನ್ನು ಜಾರಿಗೊಳಿಸಲು ಪ್ಲಾನ್ ಮಾಡಿದೆ. ಒಂದೆಡೆ ಸಿಎಂ ಬದಲಾವಣೆ ಚರ್ಚೆ, ಮತ್ತೊಂದೆಡೆ ಎಲೆಕ್ಷನ್ ಕ್ಯಾಬಿನೆಟ್ ರಚನೆಗೆ ತಯಾರಿ.. ಕ್ಯಾಬಿನೆಟ್​ಗೆ ಸರ್ಜರಿ ನಡೆಯೋದಾದ್ರೆ ನಮ್ಗೂ ಸಚಿವ ಸ್ಥಾನ ಬೇಕು ಅನ್ನೋ ಲಾಬಿ ಶುರುವಾಗಿದೆ. ಇನ್ನು ಒಂದೆರಡು ತಿಂಗಳಲ್ಲಿ ಚುನಾವಣೆಗಾಗಿ ಕ್ಯಾಬಿನೆಟ್ ರಚನೆ …

Read More »

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಹಾವು ಕಡಿದಿದ್ದು, ಅದೃಷ್ಟವಶಾತ್ ನಟ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಹಾವು ಕಡಿದಿದ್ದು, ಅದೃಷ್ಟವಶಾತ್ ನಟ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪಾನ್ವೆಲ್ ಫಾರ್ಮ್ ಹೌಸ್‍ನಲ್ಲಿ ಸಲ್ಮಾನ್ ಖಾನ್ ಅವರಿಗೆ ಹಾವು ಕಡಿದಿದೆ. ಈ ಹಾವು ವಿಷಕಾರಿ ಆಗಿರಲಿಲ್ಲ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಹೀಗಾಗಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.ಶನಿವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ. ನಟನನ್ನು ಚಿಕಿತ್ಸೆಗಾಗಿ ಕಾಮೋಥೆಯಲ್ಲಿರುವ ಎಂಜಿಎಂ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಚಿಕಿತ್ಸೆ ನಂತರ ಬೆಳಗ್ಗೆ …

Read More »

ಧಾರವಾಡ: ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ವಿಶೇಷ ಸಭೆ -ಬಸವರಾಜ ಹೊರಟ್ಟಿ

ಹುಬ್ಬಳ್ಳಿ: ‘ಶಿಕ್ಷಕರ ಬೇಡಿಕೆಗಳನ್ನು ಪರಿಹರಿಸಲು ಶಿಕ್ಷಣ ಇಲಾಖೆಯ ಅಧಿಕಾರಿಗಳ ವಿಶೇಷ ಸಭೆಯನ್ನು ಮುಂದಿನ ಜ. 15ರ ನಂತರ ಕರೆಯಲಾಗುವುದು’ ಎಂದು ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ನಗರದ ಸಿದ್ಧಾರೂಢ ಮಠದ ಕಲ್ಯಾಣಮಂಟಪದಲ್ಲಿ ಶನಿವಾರ ಆಯೋಜಿಸಿದ್ದ ‘ಗ್ರಾಮೀಣ ಶಿಕ್ಷಕ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.   ‘ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸುವುದಕ್ಕಾಗಿ, ನಾನು ಸಚಿವನಾಗಿದ್ದಾಗ ವರ್ಗಾವಣೆ …

Read More »

ನಾನು ಹುಬ್ಬಳಿಗೆ ಹೋದರೆ ಬೊಮ್ಮಾಯಿ ಮನೆಗೆ ಹೋಗಿ ಚಹಾ ಕುಡಿಯದೇ ಮುಂದೆ ಹೋಗಲ್ಲ., ಕಾಣದ ಶಕ್ತಿಗಳು ಮುಖ್ಯಮಂತ್ರಿಗಳಿಂದ ನನ್ನ ದೂರ ಮಾಡುತ್ತಿವೆ:

ಈಶ್ವರಪ್ಪನವರು ಮಾತನಾಡಿದ ನಂತರ ನಾನು ಈ ಬಗ್ಗೆ ಕ್ಲ್ಯಾರಿಫೈ ಮಾಡಿದ್ದೇನೆ. ನಾನು ಸಿಎಂ ಸ್ಥಾನದ ಆಕಾಂಕ್ಷಿಯಲ್ಲ. 2023ರವರೆಗೂ ಬೊಮ್ಮಾಯಿಯವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ. ಅವರು ಒಳ್ಳೆಯ ಕೆಲಸ ಮಾಡ್ತಿದ್ದಾರೆ ಎಂದು ಶಿಗ್ಗಾಂವಿಯಲ್ಲೂ ಹೇಳಿದ್ದೇನೆ. ಒಂದಿಲ್ಲ ಒಂದು ದಿನ ಅವರಿಗೆ ಕೇಂದ್ರದಲ್ಲಿ ಉನ್ನತ ಸ್ಥಾನ ಸಿಗುತ್ತದೆ ಎಂದು ಹೇಳಿದ್ದೇನೆ. 2023ರ ಒಳಗೆ ಇಂಥ ಬೆಳವಣಿಗೆಯಾಗುತ್ತದೆ ಎಂದು ನಾನು ಹೇಳಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಸ್ಪಷ್ಟಪಡಿಸಿದ್ದಾರೆ. ಬಾಗಲಕೋಟೆಯಲ್ಲಿ …

Read More »

ರಾಜ್ಯದಲ್ಲಿ ಡಿ.28 ರಿಂದ 10 ದಿನ ನೈಟ್​​ ಕರ್ಫ್ಯೂ ಜಾರಿ

ಬೆಂಗಳೂರು: ಒಮಿಕ್ರಾನ್ ತಡೆಯಲು ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲಿ ಡಿಸೆಂಬರ್ 28 ರಿಂದ 10 ದಿನಗಳ ಕಾಲ ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯವರೆಗೂ ನೈಟ್ ಕರ್ಫ್ಯೂ ಜಾರಿಗೊಳಿಸುತ್ತಿರುವುದಾಗಿ ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ತಜ್ಞರ ಸಮಿತಿ ಸಭೆ ನಂತರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಒಮಿಕ್ರಾನ್ ಯಾವ ರೀತಿಯಲ್ಲಿ ಹರಡಿದೆ ಎಂದು ಬೇರೆ ದೇಶ ಮತ್ತು ರಾಜ್ಯಗಳ ಅಧ್ಯಯನ ಮಾಡಿ, ನಮ್ಮ ರಾಜ್ಯದಲ್ಲಿ …

Read More »