Breaking News

Yearly Archives: 2021

ಸಂಪುಟ ವಿಸ್ತರಣೆ ವಿಚಾರವಾಗಿ ಯಾರೂ ಹಗುರವಾಗಿ ಮಾತನಾಡುವುದು ಬೇಡ. B.S.Y.

ಬೆಂಗಳೂರು: ರಾಜ್ಯ ಸಚಿವ ಸಂಪುಟಕ್ಕೆ 7 ಸಚಿವರ ಸೇರ್ಪಡೆ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಸಚಿವಾಕಾಂಕ್ಷಿಗಳು ವರಿಷ್ಠರಿಗೆ ದೂರು ನೀಡಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಸಮಾಧಾನಗೊಂಡಿರುವ ಶಾಸಕರಿಗೆ ಖಡಕ್ ಸಂದೇಶ ರವಾನಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಸಂಪುಟ ವಿಸ್ತರಣೆ ಬಗ್ಗೆ ಶಾಸಕರಿಗೆ ಅಸಮಾಧಾನ, ವಿರೋಧವಿದ್ದರೆ ದೆಹಲಿಗೆ ಹೋಗಿ ವರಿಷ್ಠರಿಗೆ ದೂರು ನೀಡಿ. ಇದಕ್ಕೆ ನನ್ನದೇನೂ ಅಭ್ಯಂತರವಿಲ್ಲ ಎಂದಿದ್ದಾರೆ. ಸಂಪುಟ ವಿಸ್ತರಣೆ ವಿಚಾರವಾಗಿ ಯಾರೂ ಹಗುರವಾಗಿ …

Read More »

ಸಿ.ಪಿ.ಯೋಗೇಶ್ವರ್ ಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಿರುವುದು ಸರಿಯಾಗಿದೆ: ರಮೇಶ್ ಜಾರಕಿಹೊಳಿ

ಬೆಳಗಾವಿ: ಸಿ.ಪಿ.ಯೋಗೇಶ್ವರ್ ಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಿರುವುದು ಸರಿಯಾಗಿದೆ ಎಂದು ಯೋಗೇಶ್ವರ್ ಪರ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಬ್ಯಾಟಿಂಗ್ ಮಾಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಸಚಿವ ಜಾರಕಿಹೊಳಿ, ಬಿಜೆಪಿ ಸರ್ಕಾರ ರಚನೆಯಲ್ಲಿ ಯೋಗೇಶ್ವರ್ ಪಾತ್ರ ಪ್ರಮುಖವಾಗಿದೆ. ವಲಸೆ ಬಂದ ಶಾಸಕರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಅವರು ಸಾಕಷ್ಟು ಕಷ್ಟಪಟ್ಟಿದ್ದಾರೆ. ಯೋಗೇಶ್ವರ್ ತನ್ನ ಮನೆಯ ಮೇಲೆ 9 ಕೋಟಿ ರೂ ಸಾಲ ಮಾಡಿ ನಮ್ಮನ್ನು ರಕ್ಷಿಸಿದ್ದರು. ಎಂಟಿಬಿ ನಾಗರಾಜ್ ಅವರಿಂದ ಸಾಲ …

Read More »

ವಿವಾಹೇತರ ಸಂಬಂಧ ಬಯಲಿಗೆ ಬರುತ್ತಿದ್ದಂತೆ ಮಹಿಳೆಯೊಬ್ಬಳು ತನ್ನ ಪ್ರಿಯಕರನ ಜತೆ ಆತ್ಮಹತ್ಯೆ

ಕಾಚಿಗುಡ: ವಿವಾಹೇತರ ಸಂಬಂಧ ಬಯಲಿಗೆ ಬರುತ್ತಿದ್ದಂತೆ ಮಹಿಳೆಯೊಬ್ಬಳು ತನ್ನ ಪ್ರಿಯಕರನ ಜತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್​ನ ಕಾಚಿಗುಡದಲ್ಲಿ ನಡೆದಿದೆ. ಕಾಚಿಗುಡದ ಚಪ್ಪಲ್​​ ಬಜಾರ್​ನಲ್ಲಿ ವಾಸವಿದ್ದ ಕರ್ನಾಟಕ ಮೂಲದ ಆಟೋ ಚಾಲಕ ಹನಮಂತು (23) ಮತ್ತು ಅದೇ ಏರಿಯಾದಲ್ಲಿ ವಾಸವಿದ್ದ ಮಹಾರಾಷ್ಟ್ರದ ಲಾತುರ್​ ಮೂಲದ 23 ವರ್ಷದ ಮಹಿಳೆ ಮೃತ ದುರ್ದೈವಿಗಳು.ಕೆಲವು ದಿನಗಳಿಂದ ಹನುಮಂತು ಜತೆ ಮಹಿಳೆ ವಿವಾಹೇತರ ಸಂಬಂಧ ಇಟ್ಟುಕೊಂಡಿದ್ದಳು. ಈ ವಿಚಾರ ಮಹಿಳೆಯ ಪತಿಗೆ ತಿಳಿದು ಇಬ್ಬರ ನಡುವೆ …

Read More »

ಚಿನ್ನದ ಅಂಗಡಿಯ ಮಾಲೀಕನ ಪುತ್ರನನ್ನು ಅವರ ಮನೆಯಲ್ಲಿಯೇ ಕೊಲೆ

ಹುಣಸಗಿ: ಪಟ್ಟಣದಲ್ಲಿ ಮಧ್ಯಾಹ್ನ ಚಿನ್ನದ ಅಂಗಡಿಯ ಮಾಲೀಕನ ಪುತ್ರನನ್ನು ಅವರ ಮನೆಯಲ್ಲಿಯೇ ಕೊಲೆ ಮಾಡಿದ ಘಟನೆ ಬುಧವಾರ ನಡೆದಿದೆ. ಕೊಲೆಯಾದ ಯುವಕನನ್ನು ನರೇಂದ್ರ ಶಿರೂರಿ (22) ಎಂದು ಗುರುತಿಸಲಾಗಿದೆ. ಮಧ್ಯಾಹ್ನ ಮನೆಗೆ ಊಟಕ್ಕೆ ಬಂದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಪಟ್ಟಣ ಸೇರಿದಂತೆ ತಾಲ್ಲೂಕಿನೆಲ್ಲೆಡೆ ಜನ ಭಯಭೀತರಾಗಿದ್ದು, ಜನ ತಂಡೋಪತಂಡವಾಗಿ ಕೊಲೆಯಾದ ಸ್ಥಳದತ್ತ ಆಗಮಿಸುತ್ತಿದ್ದರು. ‘ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಕಿಶೋರ ಕಣ್ಮರೆಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿದ್ದು, ಮೃತ …

Read More »

ಅಸಮಾಧಾನ ಇರೋರು ವರಿಷ್ಠರ ಜೊತೆ ಮಾತಾಡಲಿ : ಸಿಎಂ

ಬೆಂಗಳೂರು : ಅಸಮಾಧಾನ ಇರೋರು ಬೇಕಾದ್ರೆ ದೆಹಲಿಗೆ ಹೋಗಿ ವರಿಷ್ಠರ ಜೊತೆ ಮಾತನಾಡಲಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಸಂಪುಟ ವಿಸ್ತರಣೆ ಬೆನ್ನಲ್ಲೆ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಬಿಜೆಪಿಯ ಕೆಲ ಶಾಸಕರು ಬಹಿರಂಗವಾಗಿಯೇ ಪಕ್ಷದ ವಿರುದ್ಧ ಬೇಸರ ಹೊರಹಾಕುತ್ತಿದ್ದಾರೆ.ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ನಮ್ಮ ಯಾವುದೇ ಶಾಸಕರು ವಿರೋಧ ಇದ್ರೆ ದೆಹಲಿಗೆ ಹೋಗಲಿ. ವರಿಷ್ಠರಿಗೆ ದೆಹಲಿಗೆ ಹೋಗಿ ದೂರು ಕೊಡಲಿ. ಇಲ್ಲಿ ಬಹಿರಂಗವಾಗಿ ಮಾತನಾಡಿ ಪಕ್ಷದ …

Read More »

ದೆಹಲಿಯ ಜನತೆಗೆ ನಾವು ಕೋವಿಡ್ 19 ಲಸಿಕೆ ಉಚಿತವಾಗಿ ನೀಡುತ್ತೇವೆ: ಕೇಜ್ರಿವಾಲ್

                        ನವದೆಹಲಿ  : ಆಮ್ ಆದ್ಮಿ ಸರ್ಕಾರ ದೆಹಲಿ ಜನರಿಗೆ ಕೋವಿಡ್ 19 ಲಸಿಕೆ ಉಚಿತವಾಗಿ ನೀಡಲಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಉಚಿತ ವ್ಯಾಕ್ಸಿನೇಷನ್ ಮಾಡಬೇಕೆಂದು ಈಗಾಗಲೇ ಕೇಂದ್ರಕ್ಕೆ ಮನವಿ ಮಾಡಿದ್ದೇವೆ. ಕೇಂದ್ರವು ಏನು ಮಾಡುತ್ತದೆ ಎಂಬುದನ್ನು ನಾವು ನೋಡುತ್ತೇವೆ. ಅಗತ್ಯವಿದ್ದರೆ, ಕೇಂದ್ರವು ಲಸಿಕೆಯನ್ನು ಉಚಿತವಾಗಿ ನೀಡದಿದ್ದರೆ, ನಾವು ಲಸಿಕೆಯನ್ನು ದೆಹಲಿ …

Read More »

ಮಕ್ಕಳ ಎದುರೇ ಪತ್ನಿ, ಅತ್ತೆಯನ್ನು ಹತ್ಯೆ ಮಾಡಿದ ಭೂಪ

    ಗುವಾಹತಿ : ವ್ಯಕ್ತಿಯೋರ್ವ ತನ್ನ ಪತ್ನಿ ಹಾಗೂ ಅತ್ತೆಯನ್ನು ಕೊಂದಿದ್ದಲ್ಲದೆ ಕೋಳಿ ಮಾಂಸ ಕಟ್ ಮಾಡುವ ಹಾಗೆ ಅವರಿಬ್ಬರನ್ನು ತುಂಡರಿಸಿದ್ದಾನೆ. ತ್ರಿಪುರಾದಧಲೈ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ. ಘಟನೆಯ ಬಳಿಕ ಆತ ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಾವು ಆರೋಪಿಯನ್ನು ಬಂಧಿಸಿದ್ದೇವೆ. ಆತನಿಗೆ ವೈದ್ಯಕೀಯ ಪರೀಕ್ಷೆ ನಡೆಸಿದ್ದೇವೆ. ಆತನ ದೇಹದಲ್ಲಿ ವಿಷಾಂಶ ಪತ್ತೆಯಾಗಿದೆ. ಆತ ಅಪಾಯದಿಂದ ಪಾರಾಗಿದ್ದಾನೆ. ಆತನನ್ನು ವಿಚಾರಣೆಗೆ ಒಳಪಡಿಸಲು …

Read More »

ಸಚಿವ ಸ್ಥಾನ ಆಕಾಂಕ್ಷಿಗಳ ಆಕ್ರೋಶ ಭುಗಿಲೆದ್ದಿದೆ

ಬೆಂಗಳೂರು : ಬಹುದಿನಗಳಿಂದ ಕಗ್ಗಂಟಾಗಿದ್ದ ಸಚಿವ ಸಂಪುಟ ವಿಸ್ತರಣೆ ಮುಕ್ತಾಯವಾಗಿದ್ದು, 7 ಜನರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಮತ್ತೊಂದೆಡೆ ಸಚಿವ ಸ್ಥಾನ ಆಕಾಂಕ್ಷಿಗಳ ಆಕ್ರೋಶ ಭುಗಿಲೆದ್ದಿದ್ದು, ಮತ್ತೊಂದಷ್ಟು ಅಸಮಾಧಾನಗಳು ಸೃಷ್ಟಿಯಾಗಿವೆ. ಅವುಗಳನ್ನ ಸಮಾಧಾನಪಡಿಸುವ ಕಾರ್ಯವು ಸಹ ನಡೆದಿದೆ.   ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಐದಾರು ಗಂಟೆಯಲ್ಲೇ ನಾಗೇಶ್‌ಗೆ ಮಹತ್ವದ ಹುದ್ದೆ ಹೌದು…ಸಚಿವ ಸ್ಥಾನವನ್ನು ವಾಪಸ್ ಪಡೆದಿರುವುದಕ್ಕೆ ನಾಗೇಶ್ ಅಸಮಾಧಾನಗೊಂಡಿದ್ದಾರೆ. ಇನ್ನು ಹೇಳಿದಂತೆ ಸಚಿವ ಸ್ಥಾನ ಕೊಟ್ಟಿಲ್ಲವೆಂದು ಮುನಿರತ್ನ …

Read More »

ಪುಣೆಯಿಂದ ಹಳ್ಳಿಯಲ್ಲಿರುವ ಆರೋಗ್ಯ ಕೇಂದ್ರದವರೆಗೆ ಕೊವಿಶೀಲ್ಡ್ ಲಸಿಕೆ ತಲುಪಿದ್ದು ಹೇಗೆ

  ಬೆಂಗಳೂರು : ದೇಶಾದ್ಯಂತ ಕೊವಿಡ್-19 ಲಸಿಕೆ ವಿತರಣೆ ಅಭಿಯಾನಕ್ಕೆ ದಿನಗಣನೆ ಶುರುವಾಗಿದೆ. ಡಿಸೆಂಬರ್.12ರಂದೇ ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯಿಂದ ದೇಶದ 13 ರಾಜ್ಯಗಳಿಗೆ ಕೊವಿಶೀಲ್ಡ್ ಲಸಿಕೆಯನ್ನು ರವಾನಿಸಲಾಗಿದೆ. ಭಾರತದಲ್ಲಿ ಜನವರಿ.16ರಿಂದ ಕೊರೊನಾವೈರಸ್ ಲಸಿಕೆ ವಿತರಣೆ ಮಾಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಮೊದಲ ಹಂತದಲ್ಲಿ ವೈದ್ಯಕೀಯ ಸಿಬ್ಬಂದಿ, 50 ವರ್ಷಕ್ಕಿಂತ ಮೇಲ್ಪಟ್ಟ ವೃದ್ಧರಿಗೆ ಲಸಿಕೆ ನೀಡುವಲ್ಲಿ ಆದ್ಯತೆ ನೀಡುವುದಕ್ಕೆ ತೀರ್ಮಾನಿಸಲಾಗಿದೆ. ಮೊದಲ ಹಂತದಲ್ಲಿ ದೇಶದ 13 ಕಡೆಗಳಿಗೆ …

Read More »

ಹೈಕಮಾಂಡ್ ಗೆ ದೂರು ನೀಡಲು ಶಾಸಕ ರೇಣುಕಾಚಾರ್ಯ ದೆಹಲಿಗೆ ಪ್ರಯಾಣ

ಬೆಂಗಳೂರು : ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಅಸಮಾಧಾಣ ಸ್ಪೋಟಗೊಂಡಿದ್ದು, ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಹೈಕಮಾಂಡ್ ಗೆ ದೂರು ನೀಡಲು ಇಂದು ಶಾಸಕ ರೇಣುಕಾಚಾರ್ಯ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎನ್ನಲಾಗಿದೆ. ಇಂದು ಬೆಳಗ್ಗೆ 8.20 ರ ಸುಮಾರಿಗೆ ಶಾಸಕ ರೇಣುಕಾಚಾರ್ಯ ಅವರು ದೆಹಲಿಗೆ ಪ್ರಯಾಣ ಬೆಳಸಲಿದ್ದು, ಹೈಕಮಾಂಡ್ ಗೆ ದೂರು ಸಲ್ಲಿಸಲಿದ್ದಾರೆ ಎನ್ನಲಾಗಿದೆ. ಎಂಎಲ್ ಸಿಗಳಿಗೆ ಸಚಿವ ಸ್ಥಾನ ನೀಡಿದ್ದಾರೆ. ಗೆದ್ದವರನ್ನು ಬಿಟ್ಟು ಸೋತವರನ್ನು ಮಂತ್ರಿ …

Read More »