ನವಲಗುಂದ: ಸುಮಾರು 4 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣಗೊಂಡು ಮೂರು ವರ್ಷ ಕಳೆದರೂ ಹೈಟೆಕ್ ಬಸ್ ನಿಲ್ದಾಣ ಇನ್ನೂ ಉದ್ಘಾಟನೆ ಭಾಗ್ಯ ಕಂಡಿಲ್ಲ. ನಿಲ್ದಾಣದಲ್ಲಿರುವ ವಾಣಿಜ್ಯ ಮಳಿಗೆಗಳು ಆರಂಭಗೊಂಡು ಸಂಸ್ಥೆಗೆ ಲಾಭವನ್ನೂ ನೀಡುತ್ತಿವೆ ಆದರೆ ಬಸ್ ನಿಲ್ದಾಣ ಲೋಕಾರ್ಪಣೆಗೆ ಮುಹೂರ್ತ ನಿಗದಿ ಮಾಡದಿರುವುದು ತೀವ್ರ ಚರ್ಚೆಗೆ ಕಾರಣವಾಗಿದೆ. ಈ ಬಸ್ ನಿಲ್ದಾಣದಲ್ಲಿ ಶುದ್ಧ ಕುಡಿಯುವ ನೀರಿನ ಅರವಟಗಿ ಇದೆ ಆದರೆ ನೀರೇ ಇರಲ್ಲ. ಸ್ಥಳಾವಕಾಶ ಇಲ್ಲದ್ದರಿಂದ ಎಲ್ಲೆಂದರಲ್ಲಿ ದ್ವಿಚಕ್ರ ವಾಹನ, ಖಾಸಗಿ ವಾಹನ, …
Read More »Yearly Archives: 2021
ದೇಶದ್ರೋಹ ಪ್ರಕರಣ: ಪೊಲೀಸ್ ವಿಚಾರಣೆಗೆ ಹಾಜರಾದ ಕಂಗನಾ ರಣಾವತ್,ಸಹೋದರಿ ರಂಗೋಲಿ
ಮುಂಬೈ: ನಟಿ ಕಂಗನಾ ರಣಾವತ್ ಹಾಗೂ ಆಕೆಯ ಸಹೋದರಿ ತಮ್ಮ ವಿರುದ್ಧ ದಾಖಲಾಗಿರುವ ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿ ಮುಂಬೈನ ಬಾಂದ್ರಾ ಪೊಲೀಸ್ ಠಾಣೆಗೆ ತೆರಳಿ ತಮ್ಮ ಹೇಳಿಕೆಯನ್ನು ದಾಖಲಿಸಿದರು. ಕಂಗನಾ ಹಾಗೂ ಆಕೆಯ ಸಹೋದರಿ ರಂಗೋಲಿ ಚಾಂದೇಲ್ ಗೆ ಬಂಧನದಿಂದ ಮಧ್ಯಂತರ ರಕ್ಷಣೆ ಜಾರಿ ಮಾಡಿರುವ ಬಾಂಬೆ ಹೈಕೋರ್ಟ್ ಶುಕ್ರವಾರ ಮುಂಬೈ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ರಣಾವತ್ ಗೆ ವೈ-ಪ್ಲಸ್ ಭದ್ರತೆಯನ್ನು ಒದಗಿಸಲಾಗಿದ್ದು, ಮಧ್ಯಾಹ್ನ 1 ಗಂಟೆ …
Read More »BREAKING : ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲು
ಮಡಿಕೇರಿ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೊಡವರು ಗೋ ಮಾಂಸ ತಿನ್ನುತ್ತಾರೆ ಎಂಬುದಾಗಿ ಇತ್ತೀಚಿಗೆ ಹೇಳಿಕೆ ನೀಡಿದ್ದರು. ಇದರಿಂದಾಗಿ ಕೊಡವರ ಭಾವನೆಗೆ ಧಕ್ಕೆಯಾಗಿದೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಗೆ ವ್ಯಕ್ತಿಯೊಬ್ಬರು ದೂರು ನೀಡಿದ ಹಿನ್ನಲೆಯಲ್ಲಿ, ಅವರ ವಿರುದ್ಧ ಇದೀಗ ಎಫ್ ಐ ಆರ್ ದಾಖಲಾಗಿದೆ. ಕೊಡವರು ಗೋಮಾಂಸ ತಿನ್ನುತ್ತಾರೆಂಬ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಯಿಂದಾಗಿ ಕೊಡವರ ಭಾವನಗೆ ಧಕ್ಕೆಯಾಗಿದೆ ಎಂಬುದಾಗಿ …
Read More »ಜ.22ರವರೆಗೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ನ್ಯಾಯಾಂಗ ಬಂಧನ ವಿಸ್ತರಣೆ
ಧಾರವಾಡ : ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂದಿಸಿದಂತೆ, ಜೈಲು ಸೇರಿರುವಂತ ಮಾಜಿ ಸಚಿವ ವಿನಯ್ ಕುಲಕರ್ಣಿ ಇಂದು ಜಾಮೀನು ದೊರೆತಿಲ್ಲ. ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ ಜನವರಿ 22ರವರೆಗೆ ವಿಸ್ತರಣೆ ಮಾಡಿ ಕೋರ್ಟ್ ಆದೇಶಿಸಿದೆ. ಇಂದು ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಜೈಲು ಸೇರಿರುವಂತ ಮಾಜಿ ಸಚಿವ ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನದ ಅವಧಿ …
Read More »ಮಾನವಿಯತೆ ಮೆರೆದ ಮಾಜಿ ಸಚಿವ ಪ್ರಕಾಶ್ ಹುಕ್ಕೇರಿ..
ಬೆಳಗಾವಿ: ಅಭಿವೃದ್ಧಿ ವಿಚಾರದಲ್ಲಿ ರಾಜ್ಯದಲ್ಲೆ ನಂಬರ್ ಒನ್ ಎನಿಸಿಕೊಂಡಿರುವ ಮಾಜಿ ಸಚಿವ ಪ್ರಕಾಶ್ ಹುಕ್ಕೆರಿಯವರು ಮಾನವಿಯತೆ ಮೆರೆಯುವ ಕೆಲಸ ಮಾಡಿದ್ದಾರೆ. ಹಿರೆಬಾಗೆವಾಡಿ ಬಳಿಯ ರಾಷ್ಟೀಯ ಹೆದ್ದಾರಿ 4 ರಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ಅಪಘಾತ ಸಂಭವಿಸಿತ್ತು.. ಆ ಸಮಯದಲ್ಲಿ ಮಾಜಿ ಸಚಿವರಾದ ಪ್ರಕಾಶ್ ಹುಕ್ಕೇರಿ ಯವರು ಬೆಳಗಾವಿಯಿಂದ ಬೆಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದರು.. ಅಪಘಾತ ಆಗಿದ್ದನ್ನು ಕಂಡು ಕೂಡಲೆ ಸ್ಥಳಿಯ ಆಸ್ಪತ್ರೆಗೆ ಮಾಹಿತಿ ನೀಡಿ ಆಂಬ್ಯುಲೆನ್ಸ್ ಬರುವಂತೆ ಸೂಚಿಸಿದ್ರು.. …
Read More »ನಿರಂತರ ನೀರು ಯೋಜನೆ ನಗರದ ಜನತೆಗೆ ಕುಡಿಯುವ ನೀರು ಒದಗಿಸುವ ಮಹತ್ವಾಕಾಂಕ್ಷಿ ಯೋಜನೆ:ಮಹಾನಗರ ಪಾಲಿಕೆ ಕಾರ್ಯವೈಖರಿಗೆ ಶಾಸಕ ಅಭಯ ಪಾಟೀಲ ಗರಂ; ಸಚಿವರ ಸ್ಪಂದನೆ
ಬೆಳಗಾವಿ –: ನಿರಂತರ ನೀರು ಯೋಜನೆ ನಗರದ ಜನತೆಗೆ ಕುಡಿಯುವ ನೀರು ಒದಗಿಸುವ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಈ ಯೋಜನೆಯ ಅನುಷ್ಠಾನ ಕುರಿತು ವಿಶೇಷ ಕಾಳಜಿ ವಹಿಸಬೇಕು ಎಂದು ನಗರಾಭಿವೃದ್ಧಿ ಇಲಾಖೆಯ ಸಚಿವರಾದ ಬಿ.ಎ.ಬಸವರಾಜ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಶುಕ್ರವಾರ (ಜ.8) ನಡೆದ ಪಾಲಿಕೆ, ಸ್ಮಾರ್ಟ್ ಸಿಟಿ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. …
Read More »ನಗರದಲ್ಲಿ ನಿಯಮಾವಳಿ ಮೀರಿ ಅಕ್ರಮವಾಗಿ ಕಟ್ಟಡ ನಿರ್ಮಿಸಿದ ಅನಧಿಕೃತ ಕಟ್ಟಡಗಳನ್ನು ಗುರುತಿಸಿ ನಿಯಮಾವಳಿ ನೋಟಿಸ್ ನೀಡಿ
–ಬೆಳಗಾವಿ :ನಗರದಲ್ಲಿ ನಿಯಮಾವಳಿ ಮೀರಿ ಅಕ್ರಮವಾಗಿ ಕಟ್ಟಡ ನಿರ್ಮಿಸಿದ ಅನಧಿಕೃತ ಕಟ್ಟಡಗಳನ್ನು ಗುರುತಿಸಿ ನಿಯಮಾವಳಿ ನೋಟಿಸ್ ನೀಡಿ ಅಂತಹ ಕಟ್ಟಡಗಳನ್ನು ತೆರವುಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸಚಿವ ಬಿ.ಎ.ಬಸವರಾಜ್ ಕಟ್ಟುನಿಟ್ಟಿನ ಸೂಚನೆ ನೀಡಿದರು. ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಶುಕ್ರವಾರ (ಜ.8) ನಡೆದ ನಗರಾಭಿವೃದ್ಧಿ ಪ್ರಾಧಿಕಾರದ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮೂರು ಅಂತಸ್ತುಗಳ ಕಟ್ಟಡ ನಿರ್ಮಾಣಕ್ಕೆ ಪಾಲಿಕೆಯ ವತಿಯಿಂದ ಅನುಮತಿ ಪಡೆದುಕೊಂಡು ಆರು ಅಂತಸ್ತುಗಳ …
Read More »ಬೆಂಗಳೂರಿನ ಪ್ರಿಂಟಿಂಗ್ ಪ್ರೆಸ್ನಲ್ಲಿ ಕೆಲಸ ಮಾಡುತ್ತಿದ್ದ ಆಕೆ ಬಾರ್ ಕ್ಯಾಷಿಯರ್ ಮನೆಯಲ್ಲಿ ಸಾವು!
ಬೆಂಗಳೂರು (ಜ. 8): ಆಕೆ ಪ್ರಿಂಟಿಂಗ್ ಪ್ರೆಸ್ನಲ್ಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದಳು. ಆ ದಿನ ಮನೆಗೆ ಪೋನ್ ಮಾಡಿ ಬರೋದು ತಡವಾಗುತ್ತದೆ ಎಂದು ಹೇಳಿದ್ದಳು. ಆದರೆ, ರಾತ್ರಿಯಾದರೂ ಅಮ್ಮ ಮನೆಗೆ ಬಾರದಿರುವುದನ್ನು ನೋಡಿ ಮಕ್ಕಳು ಪೊಲೀಸ್ ಠಾಣೆಗೆ ಮಿಸ್ಸಿಂಗ್ ದೂರು ಕೊಟ್ಟಿದ್ದರು. ಆ ಮಹಿಳೆಯ ಮೊಬೈಲ್ ಲೊಕೇಷನ್ ಜಾಡು ಹಿಡಿದು ಹೊರಟ ಪೊಲೀಸರಿಗೆ ಆಕೆ ಸಿಕ್ಕಿದ್ದು ಶವವಾಗಿ. ಯೆಸ್, ಈ ಮಹಿಳೆಯ ಹೆಸರು ಅರುಣ ಕುಮಾರಿ. 43 ವರ್ಷದ …
Read More »ಅಕ್ಷಯ್ ಕುಮಾರ್ ರೌಡಿ ಅವತಾರ ನೋಡಿ ದಂಗಾದ ಅಭಿಮಾನಿಗಳು
ಬಾಲಿವುಡ್ ನ ಖ್ಯಾತ ನಟ ಅಕ್ಷಯ್ ಕುಮಾರ್ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ವೇಗವಾಗಿ ಸಿನಿಮಾ ಚಿತ್ರೀಕರಣ ಮುಗಿಸುತ್ತಿರುವ ನಟ ಅಕ್ಷಯ್ ಕುಮಾರ್ ಇದೀಗ ರೌಡಿ ಅವತಾರದಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ತಲೆಗೆ ಕೆಂಪು ಬಣ್ಣದ ಬಟ್ಟೆ ಕಟ್ಟಿ, ಕೊರಳಿಗೆ ದಪ್ಪನೆಯ ಚೈನ್ ಗಳನ್ನು ಹಾಕಿ ಹಾಗೂ ಕೈಯಲ್ಲಿ ದೊಡ್ಡದಾದ ಬ್ರೇಸ್ಲೇಟ್, ಕಪ್ಪು ಬಣ್ಣದ ಶರ್ಟ್ ತೊಟ್ಟು ಯಾರನ್ನೊ ಹೊಡೆಯಲು ಸ್ಕೆಚ್ ಹಾಕಿ ಕುಳಿತಿರುವ ಅಕ್ಷಯ್ ಕುಮಾರ್ ಗೆಟಪ್ …
Read More »ಖ್ಯಾತ ಕಮಿಡಿಯನ್, ನಟ ಕಪಿಲ್ ಶರ್ಮಾ ಗೆ ಮುಂಬೈನ ಕ್ರೈಂ ಬ್ರ್ಯಾಂಚ್ ಪೊಲೀಸರು ಸಮನ್ಸ
ಖ್ಯಾತ ಕಮಿಡಿಯನ್, ನಟ ಕಪಿಲ್ ಶರ್ಮಾ ಗೆ ಮುಂಬೈನ ಕ್ರೈಂ ಬ್ರ್ಯಾಂಚ್ ಪೊಲೀಸರು ಸಮನ್ಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಕೆಲವು ದಿನಗಳ ಹಿಂದಷ್ಟೆ ಕಮಿಡಿಯನ್ ಕಪಿಲ್ ಶರ್ಮಾ, ಕಾರ್ ಡಿಸೈನರ್ ಒಬ್ಬರ ಮೇಲೆ ವಂಚನೆ ಪ್ರಕರಣ ದಾಖಲಿಸಿದ್ದರು. ಇದೇ ಪ್ರಕರಣ ಸಂಬಂಧ ಕಪಿಲ್ ಶರ್ಮಾ ಅವರನ್ನು ವಿಚಾರಣೆಗೆ ಕರೆದಿದ್ದಾರೆ ಪೊಲೀಸರು. ಕಾರು ಡಿಸೈನ್ ಸಂಸ್ಥೆ ಡಿಸಿ ಡಿಸೈನ್ ಸ್ಟುಡಿಯೋ ಮಾಲೀಕ ದಿಲಿಪ್ ಛಬ್ರಿಯಾ ವಿರುದ್ಧ ಪ್ರಕರಣ ದಾಖಲಿಸಿದ್ದರು ಕಪಿಲ್ …
Read More »