ಬೆಂಗಳೂರು. ಸುಗ್ರೀವಾಜ್ಞೆಯ ಪ್ರಕಾರ ರಾಜ್ಯದಲ್ಲಿ ಜಾನುವಾರು ಸಾಗಾಣಿಕೆ, ಹತ್ಯೆಗೆ ನಿರ್ಬಂಧ ಹೇರಲಾಗಿದೆ. ಜೊತೆಗೆ, ಹತ್ಯೆಗಾಗಿ ಜಾನುವಾರು ಮಾರಾಟ, ಖರೀದಿ ಮೇಲೆ ಸಹ ನಿರ್ಬಂಧ ವಿಧಿಸಲಾಗಿದೆ. ಒಂದು ವೇಳೆ, ಹತ್ಯೆಗಾಗಿ ಮಾರಾಟ ಮಾಡಿದರೆ ಆ ಜಾನುವಾರುಗಳನ್ನು ಜಪ್ತಿ ಮಾಡಲಾಗುವುದು. ನಿಯಮ ಉಲ್ಲಂಘಿಸಿದರೆ ಮೂರು ವರ್ಷದಿಂದ ಏಳು ವರ್ಷ ಜೈಲು ಶಿಕ್ಷೆ ಸಹ ವಿಧಿಸಲಾಗುವುದು ಎಂದು ಹೇಳಲಾಗಿದೆ. ಅಲ್ಲದೆ 50 ಸಾವಿರದಿಂದ 5 ಲಕ್ಷ ರೂಪಾಯಿವರೆಗೆ ದಂಡ ಸಹ ವಿಧಿಸಲಾಗುವುದು. ಆದರೆ, ಕೃಷಿ …
Read More »Yearly Archives: 2021
ಪ್ರತಿಭಟನೆ ನಿರತ ರೈತರಿಂದ ಟ್ರ್ಯಾಕ್ಟರ್ ಜಾಥ ನಾಳೆಗೆ ಮುಂದೂಡಿಕೆ
ನವದೆಹಲಿ: ಹೊಸ ಕೃಷಿ ಕಾನೂನುಗಳನ್ನು ರದ್ಧತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಜ.06 ರಂದು ನಿಗದಿಪಡಿಸಿದ್ದ ಟ್ರ್ಯಾಕ್ಟರ್ ಜಾಥವನ್ನು ಜ.07 ಕ್ಕೆ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ. ಸಿಂಘು ಗಡಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ರೈತರ ಒಕ್ಕೂಟಗಳು ಈ ಬಗ್ಗೆ ಮಾಹಿತಿ ನೀಡಿದ್ದು, ಹವಾಮಾನ ವೈಪರಿತ್ಯದ ಕಾರಣದಿಂದಾಗಿ ಟ್ರ್ಯಾಕ್ಟರ್ ಜಾಥಾವನ್ನು ಜ.07 ಕ್ಕೆ ಮುಂದೂಡಿರುವುದಾಗಿ ತಿಳಿಸಿದ್ದಾರೆ. ಇದೇ ವೇಳೆ ತಮ್ಮ ಪ್ರತಿಭಟನೆಯನ್ನು ಮುಂದಿನ ದಿನಗಳಲ್ಲಿ ತೀವ್ರಗೊಳಿಸುವ ಎಚ್ಚರಿಕೆಯನ್ನೂ ನೀಡಿದ್ದಾರೆ. ಜ.07 ರಂದು ಟ್ರ್ಯಾಕ್ಟರ್ …
Read More »BIG NEWS: ಜಿಪಂ, ಗ್ರಾಪಂ ಸಾಕು – ತಾಲೂಕು ಪಂಚಾಯಿತಿ ರದ್ದು ಮಾಡಲು ಬೇಡಿಕೆ
ಬೆಂಗಳೂರು: ತಾಲೂಕು ಪಂಚಾಯಿತಿಯನ್ನು ರದ್ದುಗೊಳಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಬಿಜೆಪಿ ಶಾಸಕರು ನಡೆಸಿದ ಸಭೆಯಲ್ಲಿ ಇಂತಹುದೊಂದು ಪ್ರಸ್ತಾಪ ಕೇಳಿಬಂದಿದ್ದು, ರಾಜ್ಯದಲ್ಲಿ ತಾಲೂಕು ಪಂಚಾಯಿತಿ ವ್ಯವಸ್ಥೆ ರದ್ದುಗೊಳಿಸಲು ಕಾನೂನು ತಿದ್ದುಪಡಿ ತರುವಂತೆ ಸಲಹೆ ನೀಡಲಾಗಿದೆ ಎಂದು ಹೇಳಲಾಗಿದೆ. ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಹೀಗೆ ಮೂರು ಸ್ತರದ ವ್ಯವಸ್ಥೆಗಳಿದ್ದರೂ ತಾಲೂಕು ಪಂಚಾಯಿತಿಗೆ ಯಾವುದೇ ಅನುದಾನ ಮತ್ತು ನಿರ್ದಿಷ್ಟ ಕೆಲಸ ಇಲ್ಲದಂತಾಗಿದೆ. ಅನಗತ್ಯವಾಗಿರುವ …
Read More »ಶಾಸಕರ ಮನವೊಲಿಸುವ ಕಸರತ್ತನ್ನು ಮುಂದುವರೆಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ,
ಬೆಂಗಳೂರು,-ಶಾಸಕರ ಮನವೊಲಿಸುವ ಕಸರತ್ತನ್ನು ಮುಂದುವರೆಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, 2ನೇ ದಿನವಾದ ಇಂದು ಶಾಸಕರ ಕುಂದುಕೊರತೆಗಳನ್ನು ಆಲಿಸುವ ಮೂಲಕ ಸಮಾಲೋಚನಾ ಸಭೆ ನಡೆಸಿದರು. ನಗರದ ಖಾಸಗಿ ಹೋಟೆಲ್‍ನಲ್ಲಿ ಇಂದು ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಹಾಸನ, ಮೈಸೂರು , ಚಾಮರಾಜನಗರ ಜಿಲ್ಲೆಗಳು ಸೇರಿದಂತೆ 20ಕ್ಕೂ ಹೆಚ್ಚು ಶಾಸಕರ ಜೊತೆ ಸಿಎಂ ಸಭೆ ನಡೆಸಿದರು. ಈ ವೇಳೆ ಕೆಲವು ಶಾಸಕರು ತಮ್ಮ ಕ್ಷೇತ್ರಗಳಲ್ಲಿನ ಅನುದಾನದ ಕೊರತೆ, ಅಭಿವೃದ್ದಿ ಹಿನ್ನಡೆ, ಕುಡಿಯುವ ನೀರು, …
Read More »ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಸೆಂಟ್ರಲ್ ವಿಸ್ತಾ ಯೋಜನೆ ಸುಪ್ರೀಂ ಅಸ್ತು
ನವದೆಹಲಿ, ಜ.5- ರಾಷ್ಟ್ರಪತಿ ಭವನದಿಂದ ಇಂಡಿಯಾ ಗೇಟ್‍ವರೆಗೆ 3 ಕಿ.ಮೀ. ವಿಸ್ತಾರವಾಗುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಸೆಂಟ್ರಲ್ ವಿಸ್ತಾ ಯೋಜನೆಗೆ ಇದ್ದ ತಡೆಯನ್ನು ಸರ್ವೋಚ್ಛ ನ್ಯಾಯಾಲಯ ತೆರವುಗೊಳಿಸಿದೆ. ಪರಿಸರ ಅನುಮತಿ ಮತ್ತು ಭೂ ಬಳಕೆಯಲ್ಲಿನ ಅಧಿಸೂಚನೆಯನ್ನು ಸುಪ್ರೀಂ ಕೋರ್ಟು ಬಹುಮತದ ತೀರ್ಪಿನ ಮೂಲಕ ವಿಸ್ತಾ ಯೋಜನೆ ಚಾಲನೆಗೊಳ್ಳಲು ದಾರಿ ಮಾಡಿಕೊಟ್ಟಿದೆ. 2019ರ ಸೆಪ್ಟೆಂಬರ್‍ನಲ್ಲಿ ಘೋಷಿಸಲಾದ ಸೆಂಟ್ರಲ್ ವಿಸ್ತಾ ಪುನರುಜ್ಜೀವನ ಯೋಜನೆ 900 ರಿಂದ 1,200 ಸಂಸದರಿಗೆ ಆಸನ ಕಲ್ಪಿಸುವ ಸಾಮಥ್ರ್ಯವನ್ನು …
Read More »ಟೋಲ್ ಪ್ಲಾಜಾಗಳಲ್ಲಿ ಹಗಲು ದರೋಡೆ : ಜನರ ಆಕ್ರೋಶ
ಹಿರಿಯೂರು ,- ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಿಸಲಾಗಿರುವ ಟೋಲ್ ಪ್ಲಾಜಗಳಲ್ಲಿ ಖಾಸಗಿ ಕಂಪನಿ ಹೆಸರಿನಲ್ಲಿ ಏಜೆನ್ಸಿಗಳು ವಾಹನಗಳ ಮಾಲೀಕರಿಂದ ಡಬಲ್ ಚಾರ್ಜ್ ವಸೂಲಿ ಮಾಡುವ ಮೂಲಕ ಹಗಲು ದರೋಡೆ ನಡೆಸುತ್ತಿದ್ದಾರೆ ಎಂದು ಚಾಲಕರು ಹಾಗೂ ವಾಹನಗಳ ಮಾಲೀಕರು ಆರೋಪಿಸಿದ್ದಾರೆ. ತಾಲೂಕಿನ ಗುಯಿಲಾಳು ಮತ್ತು ಶಿರಾ ತಾಲೂಕಿನ ಕಳ್ಳಂಬೆಳ್ಳ ಸಮೀಪದ ಖಾಸಗಿ ಕಂಪನಿ ನಿರ್ವಹಿಸುತ್ತಿರುವ ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಈ ಎರಡು ಟೋಲ್ ಪ್ಲಾಜಾಗಳಲ್ಲಿ ವಾಹನಗಳಿಗೆ ಫಾಸ್ಟ್ಯಾಗ್ ಮಾಡಿಸಿಲ್ಲ ಎಂಬ ನೆಪವೊಡ್ಡಿ ಡಬಲ್ ಶುಲ್ಕ …
Read More »ಹಲವು ದಾಖಲೆಗಳಿಗೆ ಸಾಕ್ಷಿಯಾಗಲಿದೆ ಇಂಡೋ- ಆಸೀಸ್ `ಸಿಡ್ನಿ’ಟೆಸ್ಟ್
ಸಿಡ್ನಿ, ಜ.5- ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಸರಣಿಯೆಂದರೆ ಅಲ್ಲಿ ದಾಖಲೆಗಳಿಗೇನೂ ಭರವಿಲ್ಲ, ಈಗ ನಡೆಯುತ್ತಿರುವ ಬಾರ್ಡರ್- ಗವಾಸ್ಕರ್ ಟೆಸ್ಟ್ ಸರಣಿಯಲ್ಲೂ ಪ್ರಮುಖ ದಾಖಲೆಗಳು ಮಾಡಲು ಆಟಗಾರರು ಸಜ್ಜಾಗಿ ದ್ದಾರೆ. ಮೊದಲೆರಡು ಟೆಸ್ಟ್‍ಗಳಿಂದ ತಂಡದಿಂದ ದೂರ ಉಳಿದಿದ್ದ ಸ್ಟಾರ್ ಆಟಗಾರರಾದ ಭಾರತದ ರೋಹಿತ್ ಶರ್ಮಾ ಹಾಗೂ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಅವರು ಸಿಡ್ನಿ ಟೆಸ್ಟ್‍ನಲ್ಲಿ ಆಡುವ ಮೂಲಕ ಕೇಂದ್ರಬಿಂದುವಾಗಿದ್ದು ಅವರು ಕೂಡ ದಾಖಲೆ ಬರೆಯಲು ಉತ್ಸುಕದಲ್ಲಿದ್ದಾರೆ. 6 ಸಾವಿರ ಟೆಸ್ಟ್‍ನತ್ತ …
Read More »ಬೇಟೆಗೆ ಕಾಯ್ತಿದ್ದಾನೆ ರಣ ಬೇಟೆಗಾರ
ಬೆಂಗಳೂರು: ಕೆಜಿಎಫ್ ಮೊದಲ ಭಾಗ ನೋಡಿದವರು ಹಲವು ಪ್ರಶ್ನೆಗಳ ಜೊತೆ ಸಿನಿಮಾ ಮಂದಿರದಿಂದ ಹೊರ ಬಂದಿರ್ತಾರೆ. ಆ ಪ್ರಶ್ನೆಗಳ ಉತ್ತರ ಕಂಡುಕೊಳ್ಳಲು ಕೆಜಿಎಫ್-2ರ ನೋಡುವ ತವಕಲ್ಲಿದೆ ಅಭಿಮಾನಿ ಬಳಗ. ಜನವರಿ 8ರಂದು ಅಂದ್ರೆ ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ದಿನ ಕೆಜಿಎಫ್ ಚಾಪ್ಟರ್ 2ರ ಟೀಸರ್ ಅನಾವರಣಗೊಳ್ಳಲಿದೆ. ಟೀಸರ್ ನಲ್ಲಿ ಕೆಲ ಪ್ರಶ್ನೆಗಳಿಗೆ ಉತ್ತರ ಸಿಗಬಹುದು ಎಂಬ ಸಣ್ಣದಾದ ಸುಳಿವನ್ನ ನಿರ್ದೇಶಕ ಪ್ರಶಾಂತ್ ನೀಲ್ ನೀಡಿದ್ದಾರೆ. ಪ್ರಶಾಂತ್ ನೀಲ್ ಕಲ್ಪನೆಯ …
Read More »ಮಲಗಿದ್ದ ಪತಿಯ ಕತ್ತು ಹಿಸುಕಿ ಕೊಂದು ಮೂರು ಮಕ್ಕಳನ್ನ ಬಾವಿಗೆ ತಳ್ಳಿ ಮಹಿಳೆ ಆತ್ಮಹತ್ಯೆಗೆ ಯತ್ನ
ರಾಯ್ಪುರ: ಮಲಗಿದ್ದ ಪತಿಯ ಕತ್ತು ಹಿಸುಕಿ ಕೊಂದು ಮೂರು ಮಕ್ಕಳನ್ನ ಬಾವಿಗೆ ತಳ್ಳಿ ಮಹಿಳೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಛತ್ತೀಸಗಢದ ಗೌರ್ಲಾ-ಪೆಂಡ್ರಾ-ಮರವಾಹಿಯಲ್ಲಿ ನಡೆದಿದೆ. ಮಕ್ಕಳು ಬಾವಿಗೆ ತಳ್ಳಿದ ನಂತರ ತಾನು ಜಿಗಿದಿದ್ದಾಳೆ. ಮಕ್ಕಳು ಮತ್ತು ಮಹಿಳೆಯ ಧ್ವನಿ ಕೇಳಿದ ಸ್ಥಳೀಯರು ನಾಲ್ವರನ್ನ ರಕ್ಷಿಸಿದ್ದಾರೆ. ವಿದ್ಯಾ ಪೈಕರಾ (32) ಪತಿಯನ್ನ ಕೊಂದ ಮಹಿಳೆ. ಅಮಾಮಡಂಡಾ ನಿವಾಸಿಯಾಗಿರುವ ಮಹಿಳೆ ಪತಿ ಅನರೂಪ್ ಸಿಂಗ್ (35) ಮಲಗಿದ್ದ ವೇಳೆ ಬಟ್ಟೆಯಿಂದ ಆತನ ಕತ್ತು ಹಿಸುಕಿ …
Read More »ಬಿಎಸ್‍ವೈ ವಿರುದ್ಧ ತನಿಖೆ ಮುಂದುವರೆಸಲು ಹೈಕೋರ್ಟ್ ಸೂಚನೆ ನೀಡಿದ್ದು, ಯಡಿಯೂರಪ್ಪ ಅವರಿಗೆ ಮತ್ತಷ್ಟು ಸಂಕಷ್ಟ
ಬೆಂಗಳೂರು,ಜ.5- ಡಿನೋಟಿಫಿಕೇಷನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಮೇಲಿನ ಎಫ್‍ಐಆರ್ ರದ್ದುಪಡಿಸಬೇಕೆಂದು ಕೋರಿ ಮುಖ್ಯಮಂತ್ರಿ ಯಡಿಯೂರಪ್ಪ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. 2015ರಲ್ಲಿ ಮಠದ ಬಳಿ 1.1 ಎಕರೆ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯಕುಮಾರ್ ಹಿರೇಮಠ್ ಅವರು ಲೋಕಾಯುಕ್ತಕ್ಕೆ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ದಾಖಲಾಗಿದ್ದ ಎಫ್‍ಐಆರ್‍ನ್ನು ರದ್ದು ಮಾಡಬೇಕೆಂದು ಕೋರಿ ಹೈಕೋರ್ಟ್‍ಗೆ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದ ನ್ಯಾಯಾಲಯ, ಲೋಕಾಯುಕ್ತ ತನಿಖೆಗೆ ಗ್ರೀನ್ ಸಿಗ್ನಲ್ ನೀಡಿದೆ.ಬಿಎಸ್‍ವೈ …
Read More »