Breaking News
Home / 2021 (page 11)

Yearly Archives: 2021

ಹಿಂದೆ ಬ್ರಿಟಿಷರು ಮಾಡುತ್ತಿದ್ದ ಕೆಲಸವನ್ನು ಈಗ ಕಾಂಗ್ರೆಸ್ ಮಾಡ್ತಿದೆ: ಧನಂಜಯ್ ಜಾದವ್

ಬೆಳಗಾವಿ: ಹಿಂದೆ ಬ್ರಿಟಿಷರು ಮಾಡುತ್ತಿದ್ದ ಕೆಲಸವನ್ನು, ಇಂದು ಕಾಂಗ್ರೆಸ್ ಪಕ್ಷದವರು ಮಾಡ್ತಿದ್ದಾರೆ ಎಂದು ಬಿಜೆಪಿ ಮುಖಂಡ ಧನಂಜಯ್ ಜಾದವ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಹಿಂದೂಪರ ಕಾರ್ಯಕರ್ತರ ಸ್ನೇಹಮಿಲನ ಮತ್ತು ಸ್ನೇಹ ಭೋಜನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಧನಂಜಯ್ ಜಾದವ್ ಅವರು, ಮೊದಲು ಬ್ರಿಟಿಷರು ಜಾತಿ ಮಧ್ಯೆ ಭಾಷೆ ತಂದು ಜಗಳ ಹಚ್ಚುತ್ತಿದ್ರು. ಈಗ ಆ ಕೆಲಸ ಕಾಂಗ್ರೆಸ್ ಪಕ್ಷದವರು ಮಾಡ್ತಿದ್ದಾರೆ ಎಂದು ಕಿಡಿಕಾರಿದರು. ಎಲ್ಲಿ ಧ್ವಜ ಹಚ್ಚಿದ್ರೆ ಬೆಂಕಿ ಹೊತ್ತುತ್ತೆ, …

Read More »

ಮಂಡಿ ನೋವಿನಿಂದ ಬಳಲುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ: ಪ್ರಖ್ಯಾತ ನಾಟಿ ವೈದ್ಯರಲ್ಲಿ ಚಿಕಿತ್ಸೆ

ಬೆಳಗಾವಿ: ಮಂಡಿ ನೋವಿನಿಂದ ಬಳಲುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೈಸೂರು ಮೂಲದ ಪ್ರಖ್ಯಾತ ನಾಟಿ ವೈದ್ಯರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಖ್ಯಮಂತ್ರಿಗಳು ಮಂಡಿ ನೋವಿನ ಚಿಕಿತ್ಸೆಗಾಗಿ ಅಮೆರಿಕಗೆ ತೆರಳುತ್ತಿದ್ದಾರೆಂದು ಮತ್ತು ಸಂಕ್ರಾಂತಿ ನಂತರ ರಾಜ್ಯ ಮತ್ತೊಬ್ಬ ಮುಖ್ಯಮಂತ್ರಿಯನ್ನು ಕಾಣಲಿದೆ ಎಂಬ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೇ ಬೊಮ್ಮಾಯಿ ಚಿಕಿತ್ಸೆ ಪಡೆಯುತ್ತಿರುವ ದೃಶ್ಯಗಳು ಲಭ್ಯವಾಗಿದೆ. ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಚಿಕಿತ್ಸೆ ನೀಡಿ ಗುಣಮುಖಗೊಳಿಸಿದ್ದ ಲೋಕೇಶ್ ಟೇಕಲ್ ಅವರನ್ನು ಸಂಪರ್ಕಿಸಿ ಮಂಡಿ ನೋವಿಗೆ …

Read More »

ಹಿಂದೂ ಮಸೀದಿ, ಚರ್ಚ್‍ಗೆ ಹೋಗಬಹುದು, ಮತಾಂತರವಾದ್ರೆ ದೇವಸ್ಥಾನದ ಬಾಗಿಲು ಬಂದ್: ಸಿ.ಟಿ.ರವಿ

ಚಿಕ್ಕಮಗಳೂರು: ಓರ್ವ ಹಿಂದೂವಾಗಿ ಜೀಸಸ್-ಅಲ್ಲಾ ದೇವರು ಎಂದು ಒಪ್ಪಿಕೊಳ್ಳಬಹುದು. ನಮ್ಮಲ್ಲಿ ದೇವನೊಬ್ಬ ನಾಮ ಹಲವು ಎಂಬ ತತ್ವದಿದೆ. ಆದರೆ, ಇಸ್ಲಾಂ-ಕ್ರೈಸ್ತ ಆದ ಕೂಡಲೇ ದೇವಸ್ಥಾನದ ಬಾಗಿಲು ಬಂದ್ ಆಗಲಿದೆ. ಅವರಿಗೆ ಉಳಿದ ದೇವರುಗಳ ಬಗ್ಗೆ ನಿರಾಕರಣೆ ಇದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸರ್ವಧರ್ಮ ಸಮನ್ವಯದ ಕುರಿತು ಮಾತನಾಡಿದ್ದಾರೆ. ಚಿಕ್ಕಮಗಳೂರು ನಗರಸಭೆ ಚುನಾವಣೆ ಹಿನ್ನೆಲೆ ಮತದಾನ ಮಾಡಿ ಮಾತನಾಡಿದ ಅವರು, ನಮ್ಮಲ್ಲಿ ಬಹುದೇವತಾರಾಧನೆ ಇದೆ. ಹಿಂದೂವಾಗಿ ಅಲ್ಲಾ-ಕ್ರೈಸ್ತನನ್ನು ಒಪ್ಪಿಕೊಳ್ಳಬಹುದು. …

Read More »

ಕರ್ನಾಟಕ ಬಂದ್’ ದಿನ ಕರ್ತವ್ಯಕ್ಕೆ ಹಾಜರಾಗದಿದ್ದರೆ ಸಾರಿಗೆ ನೌಕರರ ಸಂಬಳ ಕಡಿತ

ಬೆಂಗಳೂರು : ಎಂಇಎಸ್ ನಿಷೇಸುವಂತೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಡಿ.31ರಂದು ಕರ್ನಾಟಕ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಅಂದು ಸಾರಿಗೆ ಸಂಸ್ಥೆಯ ಎಲ್ಲ ನೌಕರರು ಕರ್ತವ್ಯಕ್ಕೆ ಹಾಜರಾಗುವಂತೆ ನಿರ್ದೇಶನ ನೀಡಲಾಗಿದೆ. ಕರ್ತವ್ಯಕ್ಕೆ ಗೈರು ಹಾಜರಾಗುವ ನೌಕರರ ವೇತನ ಕಡಿತಗೊಳಿಸುವ ಎಚ್ಚರಿಕೆಯನ್ನು ನೀಡಲಾಗಿದೆ.   ಕೆ.ಎಸ್.ಆರ್.ಟಿಸಿ ಮತ್ತು ಬಿಎಂಟಿಸಿ ಸೇರಿದಂತೆ ಸಾರಿಗೆ ಸಂಸ್ಥೆಗಳು ಅಗತ್ಯ ಸೇವಾಗಳಡಿಯಲ್ಲಿ ಬರುವುದರಿಂದ ಯಾವುದೇ ಕಾರಣಕ್ಕೂ ಬಸ್ ಸಂಚಾರ ನಿಲ್ಲಿಸುವಂತಿಲ್ಲ. ಹೀಗಾಗಿ ಎಲ್ಲ ನೌಕರರು ತಪ್ಪದೇ ಕರ್ತವ್ಯಕ್ಕೆ ಹಾಜರಾಗುವಂತೆ …

Read More »

ರಾಜ್ಯದಲ್ಲಿ ‘ಶಾಲೆ ಹಂತದಲ್ಲಿಯೇ ‘ಮಕ್ಕಳಿಗೆ ಲಸಿಕೆ’ ನೀಡಿಕೆ – ಸಿಎಂ ಬೊಮ್ಮಾಯಿ

ಬೆಂಗಳೂರು: ಕೇಂದ್ರ ಸರ್ಕಾರ ಜನವರಿ 3ರಿಂದ 15-18 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ನೀಡಲು ಘೋಷಣೆ ಮಾಡಿದೆ. ರಾಜ್ಯದಲ್ಲಿ ಆಯಾ ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಕೋವಿಡ್ ಲಸಿಕೆಯನ್ನು ನೀಡಲಾಗುತ್ತದೆ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.   ಶಾಲೆಗಳಲ್ಲಿ ಲಸಿಕೆ ಅಭಿಯಾನ ಜನವರಿ 3 ರಿಂದ ಪ್ರಾರಂಭವಾಗಲಿದ್ದು, ಜನವರಿ 10 ರಿಂದ 60 ವರ್ಷಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಸಹ-ಅಸ್ವಸ್ಥತೆಹೊಂದಿರುವ ಅರ್ಹರಿಗೆ ಇನ್ನೋಕ್ಯುಲೇಷನ್ ಶಿಬಿರಗಳು ಕೇಂದ್ರದ ನಿರ್ದೇಶನದಂತೆ ಪ್ರಾರಂಭವಾಗುತ್ತವೆ ಎಂದು ಹೇಳಿದರು. ಈ …

Read More »

ಒಮಿಕ್ರಾನ್‌ ಮಟ್ಟಹಾಕಲು ಲಸಿಕೆಯ ಮೂರನೇ ಡೋಸ್ ಪರಿಚಯ!

ನವದೆಹಲಿ : ಕೇಂದ್ರ ಸರ್ಕಾರವು ಒಮಿಕ್ರಾನ್‌ ಮಟ್ಟಹಾಕಲು ಲಸಿಕೆಯ ಮೂರನೇ ಡೋಸ್ ಪರಿಚಯಿಸಿದ್ದು, ‘ಮುನ್ನೆಚ್ಚರಿಕೆ ಡೋಸ್’ ಎಂದು ಕರೆದಿದೆ.ಕೋವಿನ್‌ನ ಮುಖ್ಯ ವೈದ್ಯ ಡಾ.ಆರ್.ಎಸ್.ಶರ್ಮಾ, ‘ನೀವು 60 ವರ್ಷ ವಯಸ್ಸಿನವರಾಗಿದ್ದರೆ ಮತ್ತು ಎರಡೂ ಡೋಸ್‌ಗಳನ್ನ ತೆಗೆದುಕೊಂಡಿದ್ದರೆ, ಎರಡನೇ ಡೋಸ್ ಮತ್ತು ನೀವು ನೋಂದಾಯಿಸುವ ದಿನದ ನಡುವಿನ ವ್ಯತ್ಯಾಸವು 9 ತಿಂಗಳುಗಳಿಗಿಂತ ಹೆಚ್ಚಿದ್ರೆ (39 ವಾರಗಳು) ನೀವು ಮೂರನೇ ಡೋಸ್‌ ತೆಗೆದುಕೊಳ್ಳಲು ಅರ್ಹರು ಎಂದಿದ್ದಾರೆ.   ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ರಾಷ್ಟ್ರವನ್ನುದ್ದೇಶಿಸಿ …

Read More »

ಧರ್ಮಕ್ಕೆ ಸಂಕಷ್ಟ ಬಂದಾಗ ತಲ್ವಾರ್ ಹಿಡಿಯಬೇಕು.. ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ

ಬೆಳಗಾವಿ: ಧರ್ಮಕ್ಕೆ ಸಂಕಷ್ಟ ಬಂದಾಗ ಪ್ರತಿಯೊಬ್ಬ ತಲ್ವಾರ್ ಹಿಡಿದು ಹೊರ ಬರಬೇಕು ಎಂದು ಹೈದರಾಬಾದ್‌ನ ಭಾಗ್ಯನಗರ ಬಿಜೆಪಿ ಶಾಸಕ ರಾಜಾಸಿಂಗ್ ಠಾಕೂರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬೆಳಗಾವಿ ತಾಲೂಕಿನ ಗಣೇಶ್ ಭಾಗ್‌ನಲ್ಲಿ ಹಿಂದೂಪರ ಕಾರ್ಯಕರ್ತರ ಸ್ನೇಹಮಿಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಾನು ನಿಮಗೆ ಒಂದು ಕೆಲಸ ಒಪ್ಪಿಸಲು ಬಯಸುತ್ತೇನೆ. ದೇಶ, ಧರ್ಮದ ಸಲುವಾಗಿ ಸಂಘಟಿತರಾಗಿ ಕೆಲಸ ಮಾಡಬೇಕು. ದೇಶದಲ್ಲಿ ಮೋದಿ ಸರ್ಕಾರ ಇದೆ. ಕರ್ನಾಟಕದಲ್ಲೂ ಬಿಜೆಪಿ ಸರ್ಕಾರ ಇದೆ. ಆದ್ರೆ, …

Read More »

ನಿನಗೆ ‘ರಾಜಕೀಯ’ ಸಹವಾಸ ಬೇಡಪ್ಪ: ಮಾಜಿ ಸಿಎಂ ಕುಮಾರಸ್ವಾಮಿ ಮಗನಿಗೆ ಹೀಗೆ ಹೇಳಿದ್ದೇಕೆ?

ಬೆಂಗಳೂರು: ರಾಜಕೀಯಕ್ಕಿಂತಲೂ ಹೆಚ್ಚಾಗಿ, ಕನ್ನಡ ಚಿತ್ರರಂಗದಲ್ಲಿ ಕಲಾವಿದನಾಗಿ ನಿಖಿಲ್​ ಅವರು ಅನೇಕ ವರ್ಷಗಳು ಈ ವೃತ್ತಿಯಲ್ಲಿ ತೊಡಗಿಕೊಳ್ಳಲಿ. ಉತ್ತಮವಾದ ಕಲಾವಿದನಾಗುವ ಸಾಮರ್ಥ್ಯವನ್ನು ದೇವರು ಅವರಿಗೆ ಕೊಟ್ಟಿದ್ದಾನೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರನಲ್ಲಿ ಪುತ್ರ ನಿಖಿಲ್ ನಟನೆಯ ರೈಡರ್ ಸಿನಿಮಾ ವೀಕ್ಷಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಮೂರನೇ ಸಿನಿಮಾದಲ್ಲಿ ನಿಖಿಲ್ ಅತ್ಯುತ್ತಮವಾಗಿ ಅಭಿನಯಿಸಿದ್ದಾರೆ. ಕನ್ನಡ ಚಿತ್ರರಂಗಕ್ಕೆ ನಟರ ಅವಶ್ಯಕತೆ ಇದೆ. ಅದನ್ನು ನಿಖಿಲ್​ ಪೂರೈಸಲಿ ಎಂದು ಸಲಹೆ …

Read More »

ಮಾಗಡಿ ರಸ್ತೆಯಲ್ಲಿ ಪೋಲಿ ಆಟ ಆಡಿ ಬಂದವನು ನಾನು- ಹಂಸಲೇಖ

ಬೆಂಗಳೂರು: ನನಗೇನು ಭಯ! ಮಾಗಡಿ ರಸ್ತೆಯಲ್ಲಿ ದೊಡ್ಡ ದೊಡ್ಡ ಪೋಲಿ ಆಟಗಳನ್ನು ಆಡಿ ಬಂದಿದ್ದೇನೆ. ಅದಕ್ಕೊಂದು ಚರಿತ್ರೆಯೇ ಇದೆ ಎಂದು ನಾದಬ್ರಹ್ಮ ಹಂಸಲೇಖ ಹೇಳಿದ್ದಾರೆ. ಬಹುರೂಪಿ ಪ್ರಕಾಶನ ಮತ್ತು ಲಂಡನ್ ನ ಬಸವ ಅಂತಾರಾಷ್ಟ್ರೀಯ ಪ್ರತಿಷ್ಠಾನ ನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪ್ರೊಫೆಸರ್ ಎಸ್. ಜಿ. ಸಿದ್ದರಾಮಯ್ಯ ಅವರ ಆತ್ಮಕಥೆ ‘ಯರೆಬೇವು’ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಹಂಸಲೇಖ, ಇತ್ತೀಚಿಗೆ ಒಂದು ವಿವಾದವಾಗಿ ನನಗೆ ಗೊತ್ತಿಲ್ಲದ ಸಮುದಾಯದವರೆಲ್ಲ ನನ್ನ ಜೊತೆಗೆ ನಿಂತರು. ಹೀಗೆಲ್ಲ …

Read More »

ರಾಜ್ಯದಾದ್ಯಂತ ಡಿ.28ರಿಂದ ರಾತ್ರಿ ಕರ್ಪ್ಯೂ ಜಾರಿ ಮಾಡಲಾಗಿದೆ. ಈ ಆದೇಶವನ್ನು ಪುನರ್ ಪರಿಶೀಲನೆ ಮಾಡುವುದಿಲ್ಲ: ಬೊಮ್ಮಾಯಿ

ಮೈಸೂರು: ರಾಜ್ಯದಾದ್ಯಂತ ಡಿ.28ರಿಂದ ರಾತ್ರಿ ಕರ್ಪ್ಯೂ ಜಾರಿ ಮಾಡಲಾಗಿದೆ. ಈ ಆದೇಶವನ್ನು ಪುನರ್ ಪರಿಶೀಲನೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಅಕ್ಕಪಕ್ಕದ ರಾಜ್ಯಗಳ ಕೋವಿಡ್ ಪರಿಸ್ಥಿತಿ ನೋಡಿ ನೈಟ್ ಕರ್ಪ್ಯೂ ಜಾರಿ ಮಾಡಲಾಗಿದೆ.ಇದರ ಜೊತೆಗೆ ಹಲವು ಕಠಿಣ ನಿಯಮ ಜಾರಿ ಮಾಡಲಾಗಿದೆ.   ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಅಕ್ಕಪಕ್ಕದ ರಾಜ್ಯಗಳ ಕೋವಿಡ್ ಪರಿಸ್ಥಿತಿ ನೋಡಿ ನೈಟ್ ಕರ್ಪ್ಯೂ ಜಾರಿ ಮಾಡಲಾಗಿದೆ.ಇದರ …

Read More »