ಅಕ್ಟೋಬರ್ 29 ರ ಶುಕ್ರವಾರದಂದು ಹೃದಯಾಘಾತದಿಂದ ಪುನೀತ್ ರಾಜ್‌ಕುಮಾರ್ ಅವರ ಅಕಾಲಿಕ ಮರಣವು ಇಡೀ ಕರ್ನಾಟಕಕ್ಕೆ ಆಘಾತವನ್ನುಂಟು ಮಾಡಿದೆ. ಕೇವಲ 46 ವರ್ಷ ವಯಸ್ಸಿನ ನಟ, ಶುಕ್ರವಾರ ಜಿಮ್ ಗೆ ಹೋಗುವ ಮೊದಲು ಕೊಂಚ ಸುಸ್ತಿನ ಬಗ್ಗೆ ಬಗ್ಗೆ ಹೇಳಿಕೊಂಡಿದ್ದರು ಮತ್ತು ಅವರು ಜಿಮ್‌ನಲ್ಲಿ ವ್ಯಾಯಾಮ ಮಾಡುವಾಗ ಹೃದಯಾಘಾತವಾಗಿದೆ ಎಂದು ಶಂಕಿಸಲಾಗಿದೆ. ಪುನೀತ್ ರಾಜ್‌ಕುಮಾರ್ ಫಿಟ್‌ನೆಸ್ ಮತ್ತು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವ ಕುರಿತು ಯಾವಾಗಲೂ ಹೆಚ್ಚಿನ ಕಾಳಜಿ ವಹಿಸುತ್ತಿದ್ದರು. ಅಪ್ಪು …
Read More »Yearly Archives: 2021
ಕೆರೆಯಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ
ಎಂ.ಕೆ.ಹುಬ್ಬಳ್ಳಿ :ಕಾಲು ಜಾರಿ ಕೆರೆಯಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಕಿತ್ತೂರು ಎಂ.ಕೆ.ಹುಬ್ಬಳ್ಳಿ ಪಟ್ಟಣದ ಹೊರ ವಲಯದಲ್ಲಿ ನಡೆದಿದೆ.ಬೆಳ್ಳಂ ಬೆಳಿಗ್ಗೆ ಬಹಿರ್ದೆಸೆಗೆ ಕೆರೆ ಕಡೆಗೆ ಹೋಗಿದ್ದ ಇಬ್ಬರು ಕಾಲು ಜಾರಿ ನೀರಿನಲ್ಲಿ ಬಿದ್ದಿದ್ದಾರೆ. ಈ ವೇಳೆ ಈಜಲು ಬಾರದೇ ಇಬ್ಬರು ನೀರಿನಲ್ಲಿಯೇ ಮುಳುಗಿದ್ದು. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸ್ಥಳಿಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆ ಶೋಧ ಕಾರ್ಯ ಮುಂದುವರಿಸಿದ್ದಾರೆ. ಓರ್ವ ವ್ಯಕ್ತಿಯ ಶವವನ್ನು ನೀರಿನಿಂದ …
Read More »ಪುನೀತ್ ರಾಜ್ಕುಮಾರ್ ಅಂತ್ಯಕ್ರಿಯೆ ವೇಳೆ ಪ್ರಜ್ಞೆ ತಪ್ಪಿದಂತಾಯಿತು’ ಎಂದು ಕಿಚ್ಚ ಸುದೀಪ್
ಪುನೀತ್ ರಾಜ್ಕುಮಾರ್ ಅಂತ್ಯಕ್ರಿಯೆ ವೇಳೆ ಮಕ್ಕಳ ಪರಿಸ್ಥಿತಿ ಹೇಗಿರಬಹುದು ಅಂತ ಚಿಂತೆ ಆಯಿತು. ಕುಟುಂಬದ ಹಿರಿಯರಿಗೆ ಹೇಗೆ ಆಗಿರಬಹುದು? ಇದನ್ನೆಲ್ಲ ಯೋಚಿಸುತ್ತ ಪ್ರಜ್ಞೆ ತಪ್ಪಿದಂತಾಯಿತು’ ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ.ಪುನೀತ್ ಇನ್ನಿಲ್ಲ ಎಂಬ ಮಾತನ್ನು ನಂಬೋಕೆ ಸಾಧ್ಯವಾಗುತ್ತಿಲ್ಲ. ಆದರೂ ಕೂಡ ಅದನ್ನು ಒಪ್ಪಿಕೊಂಡು ಬದುಕು ಸಾಗಿಸಲೇಬೇಕಿದೆ. ಅವರನ್ನು ಕಳೆದುಕೊಂಡ ಸ್ನೇಹಿತರು, ಸೆಲೆಬ್ರಿಟಿಗಳು ಪರಿಪರಿಯಾಗಿ ನೋವು ಅನುಭವಿಸುತ್ತಿದ್ದಾರೆ. ಬಾಲ್ಯದಿಂದಲೂ ಪುನೀತ್ ಜೊತೆ ಗೆಳೆತನ ಹೊಂದಿದ್ದ ಕಿಚ್ಚ ಸುದೀಪ್ ಅವರು ಈ ಘಟನೆಯಿಂದ …
Read More »: ಮಣ್ಣಲ್ಲಿ ಮಣ್ಣಾದ ಪುನೀತ್ ರಾಜ್ ಕುಮಾರ್
ಬೆಂಗಳೂರು : ಹೃದಯಾಘಾತದಿಂದ ನಿಧನಹೊಂದಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಕಂಠೀರವ ಸ್ಟುಡಿಯೋದಲ್ಲಿ ಡಾ.ರಾಜ್ ಕುಮಾರ್ ಹಾಗೂ ಪಾರ್ವತಮ್ಮ ರಾಜ್ ಕುಮಾರ್ ಸಮಾಧಿಯ ಪಕ್ಕದಲ್ಲೇ ಈಡಿಗ ಸಂಪ್ರದಾಯದಂತೆ ನಡೆದಿದೆ. ಅಪಾರ ಸಂಖ್ಯೆಯ ಜನ ಅಂತಿಮ ದರ್ಶನ ಪಡೆದ ನಂತರ ಕಂಠೀರ ಸ್ಟೇಡಿಯಂನಿಂದ ಪುನೀತ್ ರಾಜ್ ಕುಮಾರ್ ಪಾರ್ಥಿವ ಶರೀರದ ಮೆರವಣಿಗೆ ಮೂಲಕ ಕಂಠೀರವ ಸ್ಟುಡಿಯೋ ತಲುಪಿತು. ಕಂಠೀರವ ಸ್ಟುಡಿಯೋದಲ್ಲಿ ರಾಜ್ ಕುಮಾರ್ ಕುಟುಂಬದವರು ಬಂಧುಗಳು ಮತ್ತು ಗಣ್ಯರು …
Read More »ಆತ್ಮೀಯ ಮಿತ್ರನಿಗೆ ಸಿಎಂ ಮುತ್ತಿನ ವಿದಾಯ
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಂತ್ಯಕ್ರಿಯೆ ಭಾನುವಾರ ಬೆಳಗ್ಗೆ ಸಕಲ ಸರಕಾರಿ ಗೌರವಗಳೊಂದಿಗೆ ನಡೆಯಿತು. ಪುನೀತ್ ರಾಜಕುಮಾರ್ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ಹಲವು ಸಚಿವರು, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹಾಜರಿದ್ದು ಅಂತಿಮ ನಮನ ಸಲ್ಲಿಸಿದರು. ನಸುಕಿನಲಿ ಪುನೀತ್ ರಾಜ್‍ಕುಮಾರ್ ಅಂತಿಮಯಾತ್ರೆ ಮುಕ್ತಾಯಗೊಂಡಿತು. ಸೂರ್ಯ ಉದಯಿಸುವ ಮುಂಚೆಯೇ ಪುನೀತ್ ಪಾರ್ಥೀವ ಶರೀರ ಕಂಠೀರವ ಸ್ಟೇಡಿಯಂ ತಲುಪಿತು. ನಿಗದಿಗಿಂತ ಸಮಯಕ್ಕಿಂತ …
Read More »‘ಕರುನಾಡಿನ ವೀರ ಕನ್ನಡಿಗ’, ಸ್ಯಾಂಡಲ್ವುಡ್ನ ‘ಪವರ್ಸ್ಟಾರ್’, ಕನ್ನಡಿಗರ ಪ್ರೀತಿಯ ಅಪ್ಪು ಇನ್ನು ನೆನಪು ಮಾತ್ರ.
ಬೆಂಗಳೂರು: ಅಸಂಖ್ಯಾತ ಅಭಿಮಾನಿಗಳ ಮನದಲ್ಲಿ ‘ರಾಜಕುಮಾರ’ನಂತೆ ಮೆರೆದಿದ್ದ ಕರುನಾಡಿನ ‘ಕರುನಾಡಿನ ವೀರ ಕನ್ನಡಿಗ’, ಸ್ಯಾಂಡಲ್ವುಡ್ನ ‘ಪವರ್ಸ್ಟಾರ್’, ಕನ್ನಡಿಗರ ಪ್ರೀತಿಯ ಅಪ್ಪು ಇನ್ನು ನೆನಪು ಮಾತ್ರ. ಕಂಠೀರವ ಸ್ಟುಡಿಯೋದಲ್ಲಿ ಇಂದು ಬೆಳಗ್ಗೆ ಸಕಲ ಸರ್ಕಾರಿ ಗೌರವದೊಂದಿಗೆ ಪುನೀತ್ ರಾಜ್‌ಕುಮಾರ್ ಅವರ ಅಂತ್ಯಕ್ರಿಯೆ ನೆರವೇರಿದ್ದು, ಕುಟುಬಂಸ್ಥರು, ಅಭಿಮಾನಗಳ ಆಕ್ರಂದ ಮುಗಿಲು ಮುಟ್ಟಿದೆ. ಅಪ್ಪ-ಅಮ್ಮನ ಸಮಾಧಿ ಬಳಿಯೇ ಪುನೀತ್ ಲೀನವಾಗಿದ್ದಾರೆ. ಕಂಠೀರವ ಸ್ಟೇಡಿಯಂನಿಂದ ಹೂವಿನ ಪಲ್ಲಕ್ಕಿಯಲ್ಲಿ ಭಾನುವಾರ ಮುಂಜಾನೆಯೇ ಪುನೀತ್ರ ಪಾರ್ಥಿವ ಶರೀರವನ್ನ ಮೆರವಣಿಗೆ ಮೂಲಕ …
Read More »ರಾಜ್ಯದಲ್ಲಿ ಇಂದಿನಿಂದ ನವೆಂಬರ್ 4 ರವರೆಗೆ ಭಾರೀ ಮಳೆಯಾಗುವಸಾಧ್ಯತೆ
ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ನವೆಂಬರ್ 4 ರವರೆಗೆ ಭಾರೀ ಮಳೆಯಾಗುವ (Heavy rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಇಂದಿನಿಂದ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಮುಂದಿನ 4 ದಿನ ಹಾಗೂ …
Read More »ಪುನೀತ್ ರಾಜ್ ಕುಮಾರ್ ಅಂತ್ಯಸಂಸ್ಕಾರ; ಮುಂಜಾನೆಯೇ ಅಂತಿಮಯಾತ್ರೆ, ಪಾರ್ಥೀವ ಶರೀರ ಸಾಗುವ ಮಾರ್ಗ ವಿವರ ಇಂತಿದೆ
ಬೆಂಗಳೂರು: ಹೃದಯಾಘಾತದಿಂದ ನಿಧನರಾದ ಪವರ್ ಸ್ಚಾರ್ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಭಾನುವಾರ ಬೆಳಗ್ಗೆ ನೆರವೇರಲಿದ್ದು, ಪಾರ್ಥೀವ ಶರೀರದ ಅಂತಿಮಯಾತ್ರೆಯು ಭಾನುವಾರ (ಅಕ್ಟೋಬರ್ 31) ಮುಂಜಾನೆಯೇ ನಡೆಯಲಿದೆ. ನಾಳೆ ಮುಂಜಾನೆ ನಟ ಪುನೀತ್ ಅಂತಿಮಯಾತ್ರೆ ಆರಂಭ ಆಗಲಿದ್ದು, ಮುಂಜಾನೆ 4 ರಿಂದ ನಗರದಾದ್ಯಂತ ಪೊಲೀಸರ ಭದ್ರತೆ ಇರಲಿದೆ. ಆದಷ್ಟು ಬೇಗ ಕಂಠೀರವ ಸ್ಟುಡಿಯೋ ತಲುಪಲು ನಿರ್ಧಾರ ಮಾಡಲಾಗಿದೆ. ಅಂತಿಮ ಯಾತ್ರೆ ಸಾಗಲಿರುವ ಪ್ರತಿ ಜಂಕ್ಷನ್ನಲ್ಲಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ. ಅಂತಿಮಯಾತ್ರೆ …
Read More »ಧಾರವಾಡದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಮ್ಯಾನೇಜರ್ ಮೇಲೆ ಎಸಿಬಿ ರೆಡ್
ಧಾರವಾಡದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಮ್ಯಾನೇಜರ್ ಮೇಲೆ ಎಸಿಬಿ ರೆಡ್: ದಾಳಿಯಲ್ಲಿ 5 ಲಕ್ಷಕ್ಕೂ ಅಧಿಕ ನಗದು ಹಣ ವಶಕ್ಕೆ.* ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ ಸರ್ಕಾರಿ ಕೆಲಸ ಕಾರ್ಯಗಳಿಗೆ ಬಂದಂತಹ ಸಾರ್ವಜನಿಕರಿಗೆ ಹಣಕ್ಕೆ ಬೇಡಿಕೆ ಇಡುತ್ತಿದ್ದ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ, ಧಾರವಾಡದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಮ್ಯಾನೇಜರ್ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ …
Read More »ಎರಡೂ ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ನಡೆಯುತ್ತಿರುವ ಮತದಾನ; ಅಲ್ಲಲ್ಲಿ ಕಾರ್ಯಕರ್ತರ ನಡುವೆ ಗಲಾಟೆ
ವಿಜಯಪುರ/ ಹಾವೇರಿ; ಇವತ್ತು ಸಿಂದಗಿ ಮತ್ತು ಹಾನಗಲ್ (Sindagi, Hangal By Election) ಕ್ಷೇತ್ರಗಳಲ್ಲಿ ಮತದಾನ ಆರಂಭಗೊಂಡಿದೆ. ಬೆಳಗ್ಗೆ ನೀರಸವಾಗಿ ಮತದಾನ ಕಂಡು ಬಂದ್ರೂ 10 ಗಂಟೆಯ ನಂತರ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಆಗಮಿಸುತ್ತಿದ್ದಾರೆ. ಗಂಟೆಯಿಂದ ಗಂಟೆಗೆ ಶೇಕಡಾವಾರು ಮತದಾನ ಪ್ರಮಾಣ ಸಹ ಏರಿಕೆಯಾಗುತ್ತಿದೆ. ಜೊತೆಗೆ ಮತದಾನ (Voting)ಕೇಂದ್ರ ವ್ಯಾಪ್ತಿಯಲ್ಲಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿರುವ ಬಗ್ಗೆಯೂ ವರದಿಗಳು ಪ್ರಕಟವಾಗಿವೆ. ಹಾನಗಲ್ ವಿಧಾನಸಭಾ ಕ್ಷೇತ್ರದ ಮೂರು ಬೂತ್ ಗಳಲ್ಲಿ ಇವಿಎಂ …
Read More »