Breaking News

Yearly Archives: 2021

ವಾರ ಭವಿಷ್ಯ

  ಮೇಷ ರಾಶಿ( ಅಶ್ವಿನಿ ಭರಣಿ ಕೃತಿಕ 1) ಸಂಪನ್ಮೂಲಗಳಿಗಾಗಿ ಸಾಕಷ್ಟು ಹುಡುಕಾಟ ನಡೆಸುವಿರಿ. ಇತರರ ಕೆಲಸಗಳ ಯಶಸ್ಸಿಗಾಗಿ ಸಲಹೆ ನೀಡುವ ಅವಕಾಶ ದೊರೆಯುತ್ತದೆ. ಈ ಹಿಂದೆ ನಿಲ್ಲಿಸಿದ್ದ ವಿದ್ಯಾಭ್ಯಾಸವನ್ನು ಪುನಃ ಆರಂಭಿಸಲು ಸೂಕ್ತ ಆಲೋಚನೆ ಮಾಡುವಿರಿ. ಹಣದ ಒಳಹರಿವು ನಿಮ್ಮ ನಿರೀಕ್ಷೆಯ ಮಟ್ಟಕ್ಕೆ ಇದ್ದೇ ಇರುತ್ತದೆ. ಸದ್ಯದಲ್ಲೇ ಕೌಟುಂಬಿಕ ಸಮಸ್ಯೆಗಳು ಎದುರಾದರೂ ನಂತರ ತಿಳಿಯಾಗುತ್ತವೆ. ಹೊಸ ವ್ಯವಹಾರದಲ್ಲಿ ಭಾಗವಹಿಸಲು ಅವಕಾಶವನ್ನು ಪಡೆಯುವ ಯತ್ನದಲ್ಲಿ ಯಶಸ್ವಿಯಾಗುವಿರಿ. ನಿಮ್ಮ ಹಿರಿಯರಿಗೆ ಆರೋಗ್ಯ …

Read More »

ಒಮಿಕ್ರಾನ್ ಸೋಂಕಿನ ಪ್ರಕರಣಗಳು ಹೆಚ್ಚಳಇಂದು ಬೆಳಗ್ಗೆ 9 ಗಂಟೆಗೆ ಮಹತ್ವದ ಸಭೆ

ಹುಬ್ಬಳ್ಳಿ : ರಾಜ್ಯದಲ್ಲಿ ಕೊರೊನಾ ರೂಪಾಂತರಿ ಒಮಿಕ್ರಾನ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ವಾರದಿಂದ ಕೋವಿಡ್ ನಿಯಮಗಳನ್ನು ಮತ್ತಷ್ಟು ಬಿಗಿಗೊಳಿಸುವ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ತಜ್ಞರ ಜೊತೆಗೆ ಇಂದು ಬೆಳಗ್ಗೆ 9 ಗಂಟೆಗೆ ಮಹತ್ವದ ಸಭೆ ನಡೆಸಲಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆಯ ಮಹಾರಾಷ್ಟ್ರ ಮತ್ತು ಕೇರಳದ ಜೊತೆಗೆ ತಮಿಳುನಾಡು ರಾಜ್ಯದಲ್ಲೂ ಒಮಿಕ್ರಾನ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವುದು ಆತಂಕ ಮೂಡಿಸಿದೆ. ಆದ್ದರಿಂದ ರಾಜ್ಯದಲ್ಲಿ ಕಟ್ಟೆಚ್ಚರ …

Read More »

ಗೋವಾದಲ್ಲಿ ಮಮತಾಗೆ ಶಾಕ್​.. ಪಕ್ಷ ಸೇರಿದ್ದ ಕೆಲ ತಿಂಗಳಲ್ಲಿ TMC ತೊರೆದ ಐವರು ಮುಖಂಡರು

ಪಣಜಿ(ಗೋವಾ): ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವ ಇರಾದೆ ಇಟ್ಟುಕೊಂಡಿರುವ ಮಮತಾ ಬ್ಯಾನರ್ಜಿ ಟಿಎಂಸಿ ಪಕ್ಷಕ್ಕೆ ಇದೀಗ ಬಹುದೊಡ್ಡ ಹಿನ್ನಡೆಯಾಗಿದೆ. ಕಳೆದ ಕೆಲ ತಿಂಗಳ ಹಿಂದೆ ತೃಣಮೂಲ ಕಾಂಗ್ರೆಸ್​ ಸೇರಿಕೊಂಡಿದ್ದ ಐವರು ಪಕ್ಷಕ್ಕೆ ಗುಡ್​​ಬೈ ಹೇಳಿದ್ದಾರೆ. ಧರ್ಮದ ಆಧಾರದ ಮೇಲೆ ಗೋವಾ ವಿಭಜನೆ ಮಾಡಲು ಟಿಎಂಸಿ ಪ್ರಯತ್ನಿಸುತ್ತಿದೆ ಎಂದು ಆರೋಪ ಮಾಡಿರುವ ಐವರು ಮುಖಂಡರು ಪಕ್ಷದಿಂದ ಹೊರ ಬಂದಿದ್ದಾರೆ. ಇದೇ ವರ್ಷ ಆಲ್​ ಇಂಡಿಯಾ ತೃಣಮೂಲ …

Read More »

ಬದಲಾವಣೆ ಆಗತ್ತಾ ಬಿಜೆಪಿ ರಾಜ್ಯಾಧ್ಯಕ್ಷ ರ ಸ್ಥಾನ

ಬೆಂಗಳೂರು: ಮುಂಬರುವ 2023ರ ವಿಧಾನಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ಧತೆ ನಡೆಸಿದ್ದು, ರಾಜಕೀಯ ವಲಯದಲ್ಲಿ ಲೆಕ್ಕಾಚಾರಗಳು ಆರಂಭವಾಗಿವೆ. ನಳೀನ್ ಕುಮಾರ್ ಕಟೀಲ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬದಲಾವಣೆ ಮಾಡುವ ಬಗ್ಗೆಯೂ ಬಿಜೆಪಿ ಪಾಳಯದಲ್ಲಿ ಚರ್ಚೆ ಆರಂಭವಾಗಿದೆ. ಒಂದೊಮ್ಮೆ ನಳೀನ್ ಕುಮಾರ್ ಅವರನ್ನು ಬದಲಾವಣೆ ಮಾಡಿದರೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಂದಾಯ ಸಚಿವ ಆರ್.ಅಶೋಕ್ ಅವರ ಹೆಸರು ಕೇಳಿಬಂದಿದೆ. ಅಲ್ಲದೇ ನಳೀನ್ ಕುಮಾರ್ ಕಟೀಲ್ ಅವರಿಗೆ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ …

Read More »

ಅಥಣಿ : ಅನಧಿಕೃತ ಸಿಸಿ ಕ್ಯಾಮೆರಾ ಅಳವಡಿಕೆಗೆ ಮುಂದಾದ ಯುವಕರಿಗೆ ಚಳಿ ಬಿಡಿಸಿದ ಮಹಿಳೆಯರು

ಅಥಣಿ(ಬೆಳಗಾವಿ): ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ 7ನೇ ಮತ್ತು 17ನೇ ನಂಬರ್ ವಾರ್ಡ್​ನಲ್ಲಿ ಅನಧಿಕೃತವಾಗಿ ಸಿಸಿ ಕ್ಯಾಮೆರಾ ಅಳವಡಿಸಲು ಬಂದ ಯುವಕರನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡರು.ವಾರ್ಡ್​​ಗಳಲ್ಲಿ ಕ್ಯಾಮೆರಾ ಅಳವಡಿಸುವ ವಿರುದ್ಧ ಮಹಿಳೆಯರು ಆಕ್ರೋಶ ಹೊರ ಹಾಕಿದರು. ವಾರ್ಡ್​ಗಳಲ್ಲಿ ಮೂಲಸೌಕರ್ಯಗಳು ಇಲ್ಲದೇ ಇರುವುದರಿಂದ ನಮ್ಮ ಖಾಸಗಿ ವ್ಯಕ್ತಿತ್ವಕ್ಕೆ ಹಾನಿ ಸಂಭವಿಸುತ್ತದೆ. ಹಾಗಾಗಿ, ಕ್ಯಾಮೆರಾಗಳನ್ನು ಅಳವಡಿಸದಂತೆ ಮಹಿಳೆಯರು ತೀವ್ರವಾಗಿ ಆಕ್ರೋಶ ಹೊರ ಹಾಕಿದರು. ಸ್ಥಳೀಯರ ಆಕ್ರೋಶ ಹೆಚ್ಚಾಗುತ್ತಿದ್ದಂತೆ, ಸಿಸಿ ಕ್ಯಾಮೆರಾ ಅಳವಡಿಸಲು ಬಂದ ಯುವಕರು …

Read More »

ಸಿ ಎಂ ಬದಲಾವಣೆ ಬಗ್ಗೆ ಮುರ ಗೇಶ್ ನಿರಾಣಿ ಹೇಳಿದ್ದೇನು…?

ಬಾಗಲಕೋಟೆ : ಸಚಿವ ಸಂಪುಟದ ಬದಲಾವಣೆ ಬಗ್ಗೆ ಮಾಹಿತಿ ಇಲ್ಲ. ಮುಖ್ಯಮಂತ್ರಿಗಳ ಪರಮಾಧಿಕಾರ ಇದೆ. ಪಕ್ಷದ ಮುಖಂಡರು,ರಾಜ್ಯ ಮುಖಂಡರು, ರಾಷ್ಟ್ರೀಯ ನಾಯಕರು, ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ. ನಗರದ ತೋಟಗಾರಿಕೆ ಮೇಳದ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ಸ್ನೇಹಿತರು ಅಥವಾ ಮಾಧ್ಯಮದವರ ಮುಂದೆ ನಾನು ಮುಂದಿನ ಮುಖ್ಯಮಂತ್ರಿ ಎಂದು ಹೇಳಿದ್ದರೆ ಕೇಳಿಕೊಳ್ಳಿ, ಸುಮ್ಮನೆ ಯಾರಾದರೂ ಹೇಳಿದ್ದರೆ, ನನ್ನ …

Read More »

ಕರ್ನಾಟಕ ಬಂದ್ ಮಾಡುವ ಅಗತ್ಯ ಇಲ್ಲ,: ಪ್ರಹ್ಲಾದ್ ಜೋಶಿ

ಮರಾಠಿ ಮತ್ತು ಕನ್ನಡಿಗರ ನಡುವೆ ಉತ್ತಮ ಸುಮಧುರ ಬಾಂಧವ್ಯ ಇದೆ, ಘಟನೆಗೆ ಎಲ್ಲ ಎಂಇಎಸ್ ಅಂತಲೂ ಹೇಳುವುದಿಲ್ಲ, ಮರಾಠಿಗರ ಹೆಸರಿನಲ್ಲಿ ಈ ರೀತಿ ಮಾಡುತ್ತಿದ್ದಾರೆ, ದೇಶದಲ್ಲಿ ಎಲ್ಲರೂ ಚೆನ್ನಾಗಿ ಇರಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಹುಬ್ಬಳ್ಳಿ ನಗರದಲ್ಲಿಂದು ಮಾತಾನಾಡಿದ ಅವರು ಕನ್ನಡಿಗರು ಮತ್ತು ಮರಾಠಿಗರು ಇಲ್ಲಿ ಎಲ್ಲರೂ ಒಂದಾಗಿದ್ದೇವೆ, ಕೆಲವರು ತಮ್ಮ ಬೇಳೆ ಬೇಯಿಸಿಕೊಳ್ಳಲು ಈ ರೀತಿ ಮಾಡುತ್ತಿದ್ದಾರೆ,ಸಿ ಎಮ್ ಉದ್ಧವ್ ಠಾಕ್ರೆ, ಶರತ್ ಪವಾರ್ …

Read More »

ಕಾಂಗ್ರೆಸ್ ಸದಸ್ಯರ ಮಾತಿನಿಂದ ರಾಜೀನಾಮೆಗೆ ಮುಂದಾಗಿದ್ದೆ: ಸಭಾಪತಿ ಹೊರಟ್ಟಿ

ಬೆಳಗಾವಿಯ ಅಧಿವೇಶನದ ಕೊನೆಯ ದಿನ ಕಾಂಗ್ರೆಸ್ ಸದಸ್ಯರು ತಮ್ಮ ಕಚೇರಿಗೆ ಮುತ್ತಿಗೆ ಹಾಕಿ ಮಾತನಾಡಿದ ಪದಗಳು ನನಗೆ ಬೇಸರ ತರಿಸಿತ್ತು. ಇದರಿಂದಾಗಿ ನಾನು ರಾಜೀನಾಮೆಗೆ ಮುಂದಾಗಿದ್ದೆ ಎಂದು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಮ್ಮ ಬೇಸರವನ್ನು ಹೊರ ಹಾಕಿದ್ದಾರೆ. ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಭಾಪತಿ ಬಸವರಾಜ್ ಹೊರಟ್ಟಿ ಅವರು ನನ್ನ 40 ವರ್ಷದ ರಾಜಕೀಯ ಜೀವನದಲ್ಲಿ ಈ ತರಹದ ಮಾತುಗಳನ್ನು ಎಂದಿಗೂ …

Read More »

ಅಂತರ್ಜಾತಿ ಮದುವೆಯಾದ ನವಜೋಡಿಗೆ ಪ್ರಾಣಭೀತಿ; ಪೊಲೀಸ್ ರಕ್ಷಣೆಗೆ ಮೊರೆ

ಬಳ್ಳಾರಿ: ಅವರಿಬ್ಬರೂ ಪ್ರೀತಿಸಿ ಮದುವೆಯಾದ ನವಜೋಡಿ. ಪ್ರೀತಿಸೋ ಸಮಯದಲ್ಲಿ ಹತ್ತಾರು ಕನಸು ಕಂಡಿದ್ದ ಜೋಡಿಹಕ್ಕಿಗಳು. ಒಳ್ಳೆ ಜೀವನ ನಡೆಸಬೇಕು ಎಂದುಕೊಂಡಿದ್ದ ದಂಪತಿ. ಅಂತರ್ಜಾತಿ ಮದುವೆಯಾದ ಅಥವಾ ಪ್ರೀತಿಸಿ ಮದುವೆಯಾದ (Intercaste love and marriage) ಮೇಲೆ ಎಲ್ಲೆಡೆಯೂ ನಡೆಯೋ ಹಾಗೆ ಇವರ ಮನೆಯಲ್ಲೂ ವಿರೋಧ ವ್ಯಕ್ತವಾಗಿದೆ. ಹೀಗಾಗಿ ನಮಗೆ ಜೀವಭಯ ಇದೆ ರಕ್ಷಣೆ ಕೊಡಿ ಅಂತ ಈ ಜೋಡಿ ಈಗ ಪೊಲೀಸರ ಮೊರೆಹೋಗಿದ್ದಾರೆ. ಎಸ್ಪಿ ಎದುರು ನಮಗೆ ರಕ್ಷಣೆ ಕೊಡಿ ಅಂತ …

Read More »

ಕೆಪಿಎಸ್​ಸಿ ಪರೀಕ್ಷೆಗಳು ಮುಂದೂಡಿಕೆ: 2022ರ ಫೆಬ್ರವರಿ-ಮಾರ್ಚ್​ನಲ್ಲಿ ನಡೆಯಲಿದೆ ಎಕ್ಸಾಂ

    ಕೆಪಿಎಸ್​ಸಿ ಪರೀಕ್ಷೆಗಳು ಮುಂದೂಡಿಕೆ: 2022ರ ಫೆಬ್ರವರಿ-ಮಾರ್ಚ್​ನಲ್ಲಿ ನಡೆಯಲಿದೆ ಎಕ್ಸಾಂ ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗವು 2021ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷಾ ದಿನಾಂಕಗಳನ್ನು ಕಾರಣಾಂತರಗಳಿಂದ ಮುಂದೂಡಿದೆ. ಪ್ರಥಮ ಹಂತವಾಗಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ 2022ರ ಫೆ.19 ಮತ್ತು 21 ಪರೀಕ್ಷೆ ನಡೆಯಲಿದೆ.  

Read More »