ಬೆಂಗಳೂರು,ಡಿ.25- ರಾಜ್ಯದಲ್ಲಿ ಮತ್ತೆ ನಿಧಾನಗತಿಯಲ್ಲಿ ಕೋವಿಡ್ ಸೋಂಕಿನ ಜೊತೆಗೆ ಓಮೈಕ್ರಾನ್ ಕೂಡ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ (ನೈಟ್ ಕರ್ಫ್ಯೂ ) ಸೇರಿದಂತೆ ಕೆಲವು ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳಲು ಸರ್ಕಾರ ಮುಂದಾಗಿದೆ. ಮಧ್ಯಪ್ರದೇಶದಲ್ಲಿ ಒಂದೇ ಒಂದು ಪ್ರಕರಣಗಳು ದಾಖಲಾಗದಿದ್ದರೂ ಅಲ್ಲಿನ ಸರ್ಕಾರ ಮೂರು ದಿನಗಳ ಹಿಂದೆಯೇ ನೈಟ್ ಕಫ್ರ್ಯೂನ್ನು ಜಾರಿಗೊಳಿಸಿ ಆದೇಶ ಹೊರಡಿಸಿದೆ.
Read More »Yearly Archives: 2021
6ನೇ ಕ್ಲಾಸ್ ಪರೀಕ್ಷೆಯಲ್ಲಿ ಸೈಫ್-ಕರೀನಾ ಪುತ್ರನ ಬಗ್ಗೆ ಪ್ರಶ್ನೆ! ಇಲ್ಲಿದೆ ಪ್ರಶ್ನೆ ಪತ್ರಿಕೆಯ ವೈರಲ್ ಫೋಟೋ
6ನೇ ಕ್ಲಾಸ್ ಪರೀಕ್ಷೆಯಲ್ಲಿ ಸೈಫ್-ಕರೀನಾ ಪುತ್ರನ ಬಗ್ಗೆ ಪ್ರಶ್ನೆ! ಇಲ್ಲಿದೆ ಪ್ರಶ್ನೆ ಪತ್ರಿಕೆಯ ವೈರಲ್ ಫೋಟೋ ಸೈಫ್ ಅಲಿ ಖಾನ್ ಮತ್ತು ಕರೀನಾ ಕಪೂರ್ ಖಾನ್ ಅವರು ತಮ್ಮ ಮಗ ತೈಮೂರ್ ಅಲಿ ಖಾನ್ ಬಗ್ಗೆ ಆಗಾಗ ಅಪ್ಡೇಟ್ ನೀಡುತ್ತ ಇರುತ್ತಾರೆ. ಈಗ ಶಾಲೆಯೊಂದರ ಪರೀಕ್ಷೆಯಲ್ಲೂ ತೈಮೂರ್ ಬಗ್ಗೆ ಪ್ರಶ್ನೆ ಕೇಳಲಾಗಿದೆ. ಮಕ್ಕಳು ಅಗತ್ಯಕ್ಕಿಂತ ಹೆಚ್ಚಿನ ಸಮಯ ಟಿವಿ ನೋಡುತ್ತಿದ್ದರೆ ಪೋಷಕರು ಗದರುತ್ತಾರೆ.
Read More »ಪಿಯು ಸೈನ್ಸ್ ಕಾಲೇಜು ಉಪನ್ಯಾಸಕ ಮಾರ್ಗಮಧ್ಯೆ ದುರಂತ ಅಂತ್ಯ: ಸಾವಿನ ಸುತ್ತ ಅನುಮಾನದ ಹುತ್ತ
ವಿಜಯಪುರ: ಪಿಯು ಸೈನ್ಸ್ ಕಾಲೇಜಿನ ಉಪನ್ಯಾಸಕರೊಬ್ಬರು ತರಗತಿ ಮುಗಿಸಿಕೊಂಡು ವಾಪಸ್ ಮನೆಗೆ ಹೋಗುವ ಮಾರ್ಗಮಧ್ಯೆ ದುರಂತ ಅಂತ್ಯಕಂಡಿದ್ದು, ಸಾವಿನ ಸುತ್ತ ಅನುಮಾನ ಹುತ್ತ ಬೆಳೆದಿದೆ. ತಾಳಿಕೋಟಿಯ ಕಾಶೀನಾಥ ಪುರಾಣಿಕಮಠ(27) ಮೃತರು. ಇವರು ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟ ಎಕ್ಸ್ಪರ್ಟ್ ಪಿಯು ಸೈನ್ಸ್ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಎಂದಿನಂತೆ ನಿನ್ನೆ(ಶುಕ್ರವಾರ) ಕಾಲೇಜಿಗೆ ಹೋಗಿದ್ದರು. ವಾಪಸ್ ಮನೆಗೆ ಬೈಕ್ನಲ್ಲಿ ಬರುವಾಗ ಮಾರ್ಗಮಧ್ಯೆ ಮಲಗಲದಿನ್ನಿ ಗ್ರಾಮದ ಬಳಿ ಮೃತಪಟ್ಟಿದ್ದಾರೆ. ಮೇಲ್ನೋಟಕ್ಕೆ ಬೈಕ್ ಅಪಘಾತವಾದಂತೆ …
Read More »ಸಂತೋಷ್ ಜಾರಕಿಹೊಳಿ ಅವರಿಂದ 49ನೆಯ ವಾರದ ಅನ್ನ ಸಂತರ್ಪಣೆ ಕಾರ್ಯಕ್ರಮ
ಗೋಕಾಕ: ಗೋಕಾಕ ತಾಲೂಕಿನ ಚಿಕ್ಕ ನಂದಿ ಗ್ರಾಮದ ಶ್ರೀ ಸಿದ್ದಾರೂಢ ಮಠದಲ್ಲಿ ಇಂದು ಪ್ರತಿ ಶನಿವಾರ ದಂತೆ ಈ ಶನಿವಾರ ಕೂಡ ಅನ್ನ ಸಂತರ್ಪಣೆ ನಡೆಯಿತು. ಇಂದು ಚಿಕ್ಕನಂದಿ ಗ್ರಾಮದ ಜನತೆಗೆ ಸಾಹುಕಾರ ಹಾಗೂ ಅವರ್ ಅಭಿಮಾನ ಬಳಗದ ವತಿಯಿಂದ ಈ ಒಂದು ಕಾರ್ಯಕ್ರಮ ನಡೆಯಿತು ಚಿಕ್ಕ ಮಕ್ಕಳು ಸೇರಿದಂತೆ ಗುರು ಹಿರಿಯರು ಕೂಡ ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿ ಅನ್ನ ಸಂತರ್ಪಣೆಯ ಲಾಭ ಪಡೆದರು ಸುಮಾರು 49 …
Read More »ಬಿಜೆಪಿ ಸರ್ಕಾರ 120 ಸ್ಪೀಡ್‍ನಲ್ಲಿ ಇದೆ, 18 ತಿಂಗಳ ಆಡಳಿತದಲ್ಲಿ ಮತ್ತಷ್ಟು ಸ್ಪೀಡ್ ಕಡಿಮೆ ಮಾಡುತ್ತೇವೆ.:ಸತೀಶ ಜಾರಕಿಹೊಳಿ
ಸವದತ್ತಿ ಶಾಸಕರು ಮತ್ತು ಬಿಜೆಪಿ ಸರ್ಕಾರ 120 ಸ್ಪೀಡ್‍ನಲ್ಲಿ ಇದೆ. ಹೀಗಾಗಿ ಕೋವಿಡ್, ಪ್ರವಾಹ ಏನು ಕಾಣುತ್ತಿಲ್ಲ. ಈಗಾಗಲೇ ಗಾಡಿ ಸ್ಪೀಡ್ ಅನ್ನು 60ಕ್ಕೆ ತಂದಿದ್ದೇವೆ. ಇನ್ನೂ 18 ತಿಂಗಳ ಆಡಳಿತದಲ್ಲಿ ಮತ್ತಷ್ಟು ಸ್ಪೀಡ್ ಕಡಿಮೆ ಮಾಡುತ್ತೇವೆ. ಆ ಲೆಕ್ಕಾಚಾರದಲ್ಲಿ ನಾವಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಲೇವಡಿ ಮಾಡಿದರು. ಮುನವಳ್ಳಿ ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಶುಕ್ರವಾರ ನಡೆದ ಪ್ರಚಾರ ಸಭೆಯಲ್ಲಿ ಭಾಗಿಯಾಗಿ ಶಾಸಕ ಸತೀಶ …
Read More »ಜಾತ್ರೆ ಮಾಡೋದಿದ್ರೆ ಬೆಳಗಾವಿಯಲ್ಲಿ ಅಧಿವೇಶನ ಕರೆಯಬೇಡಿ: ಬಸನಗೌಡ ಪಾಟೀಲ್ ಯತ್ನಾಳ್
ಉತ್ತರಕರ್ನಾಟಕದ ಬಗ್ಗೆ ಮೊದಲೇ ಚರ್ಚಿಸುವದಿದ್ರೆ ಬೆಳಗಾವಿಯ ಸುವರ್ಣಸೌಧದಲ್ಲಿ ಅಧಿವೇಶನ ಕರೆಯಿರಿ. ಸುಮ್ಮನೆ ಜಾತ್ರೆ ಮಾಡಲು ಅಧಿವೇಶನ ಕರೆಯುವ ಅವಶ್ಯಕತೆ ಇಲ್ಲ ಎಂದು ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಅಧಿವೇಶನ ಬಳಿಕ ಬೆಳಗಾವಿಯ ಸುವರ್ಣಸೌಧದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್ ಅವರು ಅಧಿವೇಶನದ ಪ್ರಾರಂಭದಲ್ಲಿಯೇ ಉತ್ತರಕರ್ನಾಟಕದ ಅಭಿವೃದ್ಧಿ ಬಗ್ಗೆ ಚರ್ಚಿಸಬೇಕಾಗಿತ್ತು. ಎಲ್ಲ ಸಚಿವರು ಇರುತ್ತಿದ್ದರು. ಮುಖ್ಯಮಂತ್ರಿಗಳು ಉತ್ತರ ಕೊಡಬಹುದಿತ್ತು. ಉದ್ದೇಶಪೂರ್ವಕವಾಗಿ …
Read More »ಮಹಿಳೆಯಿಂದ ವಂಚನೆ: ಠಾಣೆ ಮೆಟ್ಟಿಲೇರಿದ ಸ್ಯಾಂಡಲ್ ವುಡ್ ನಟ, ನಿರ್ದೇಶಕ
ಬೆಂಗಳೂರು: ಮನೆ ಮಾರಾಟ ಪ್ರಕರಣದಲ್ಲಿ ವಂಚನೆಗೊಳಗಾದ ಸ್ಯಾಂಡಲ್ ನಿರ್ದೇಶಕ ಹಾಗೂ ನಟ ನಾಗಶೇಖರ್ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕೊಟ್ಟ ಹಣ ಇಲ್ಲದೇ, ಮನೆ ಕೂಡ ಇಲ್ಲದೇ 50 ಲಕ್ಷ ರೂಪಾಯಿ ವಂಚನೆಯಾಗಿದೆ ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬೆಂಗಳೂರಿನ ಆರ್.ಆರ್. ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಮೀನಾ ಮತ್ತು ರಾಜಕುಮಾರ್ ಎಂಬುವರು ವಂಚನೆ ಮಾಡಿರುವುದಾಗಿ ಆರೋಪಿಸಲಾಗಿದೆ. ಆರ್.ಆರ್. ನಗರದ ಜಯಣ್ಣ ಲೇಔಟ್ ನಲ್ಲಿ ಮನೆ ಖರೀದಿಗೆ ಒಪ್ಪಂದ …
Read More »ರಾಜ್ಯದ ಜನತೆಗೆ ಮತ್ತೊಂದು ಸಿಹಿಸುದ್ದಿ : 93 ಲಕ್ಷ ಮನೆಗಳಿಗೆ ನಳ ಸಂಪರ್ಕ
ಬೆಳಗಾವಿ : ಜಲಜೀವನ ಮಿಶನ್ ಯೋಜನೆ (Jaljeevan Mission Yojana) ಅಡಿ ರಾಜ್ಯದಲ್ಲಿ 2023-24ರೊಳಗೆ 93ಲಕ್ಷ ಮನೆಗಳಿಗೆ ನಳ ಸಂಪರ್ಕ ಕಲ್ಪಿಸುವ ಗುರಿ ಹಾಕಿಕೊಳ್ಳಲಾಗಿದ್ದು,ನಿತ್ಯವೂ 10 ಸಾವಿರ ಮನೆಗಳಿಗೆ ನಳ ಸಂಪರ್ಕ ಒದಗಿಸಲಾಗುತ್ತಿದ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಸದಸ್ಯ ಎನ್.ರವಿಕುಮಾರ ಅವರ ಚುಕ್ಕೆಗುರುತಿನ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಜಲಜೀವ ಮಿಶನ್ ಯೋಜನೆ ಅಡಿ ಇದುವರೆಗೆ 17.40ಲಕ್ಷ ಮನೆಗಳಿಗೆ ನಳಸಂಪರ್ಕ ಕಲ್ಪಿಸಲಾಗಿದೆ ಎಂದರು. …
Read More »SSLC ಪಾಸಾದ `SC-ST’ ವಿದ್ಯಾರ್ಥಿಗಳಿಗೆ 15 ಸಾವಿರ ರೂ. ಪ್ರೋತ್ಸಾಹಧನ
ಕೊಪ್ಪಳ : ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಎಸ್ಸಿ & ಎಸ್ಟಿ ವಿದ್ಯಾರ್ಥಿಗಳಿಗೆ ಈಗಾಗಲೇ ಪ್ರೋತ್ಸಾಹಧನ ಮಂಜೂರಿಸಲಾಗಿದ್ದು, ಪ್ರೋತ್ಸಾಧನ ಜಮೆಯಾಗದ ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿ, ಇಲಾಖೆಗೆ ಮಾಹಿತಿ ಸಲ್ಲಿಸುವಂತೆ ಇಲಾಖೆ ಉಪನಿರ್ದೇಶಕರಾದ ನವೀನ ಸಿಂತ್ರೆ ತಿಳಿಸಿದ್ದಾರೆ. 2021-22ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಶೇ. 60 ರಿಂದ 74.99 ರಷ್ಟು ಅಂಕ …
Read More »5 ವರ್ಷ ಮೇಲ್ಪಟ್ಟ ಎಲ್ಲ ವಾಹನಗಳನ್ನು ಗುಜರಿಗೆ ಹಾಕಬೇಕಿಲ್ಲ ಆದರೆ,..?
15 ವರ್ಷ ಮೇಲ್ಪಟ್ಟ ಎಲ್ಲ ವಾಹನಗಳನ್ನು ಗುಜರಿಗೆ ಹಾಕಬೇಕಿಲ್ಲ. ಆದರೆ, ವಾಹನಗಳ ಗುಜರಿ ನೀತಿಯನ್ವಯ 15 ವರ್ಷ ಮೇಲ್ಪಟ್ಟ ವಾಹನ ಚಾಲನೆಗೆ ಪ್ರತಿವರ್ಷ ಎಫ್.ಸಿ. ಕಡ್ಡಾಯವಾಗಿದ್ದು, ಹಳೆ ವಾಹನಗಳಿಗೆ ಹಸಿರು ತೆರಿಗೆಯ ಹೊರಬೀಳಲಿದೆ. ಪ್ರತಿವರ್ಷವೂ ಹಸಿರು ತೆರಿಗೆಯನ್ನು ಪಾವತಿಸಬೇಕಿದೆ. ವಾಹನಗಳ ಗುಜರಿ ನೀತಿಯ ಪ್ರಕಾರ, 15 ವರ್ಷ ಮೇಲ್ಪಟ್ಟ ಮತ್ತು ಬಳಕೆಗೆ ಯೋಗ್ಯವಲ್ಲದ ವಾಹನಗಳನ್ನು ಸ್ವಯಂ ಪ್ರೇರಿತವಾಗಿ ಗುಜರಿಗೆ ಹಾಕಲು ಅವಕಾಶ ನೀಡಲಾಗಿದ್ದು, ವಾಹನಗಳ ಫಿಟ್ ನೆಸ್ ಪರೀಕ್ಷೆಗೆ …
Read More »