ಕಲಬುರಗಿ: ಭೂಕಂಪನದ ಆತಂಕದ ಹಿನ್ನೆಲೆಯಲ್ಲಿ ಗ್ರಾಮಸ್ಥರಿಗೆ ಧೈರ್ಯ ತುಂಬಲು ಹಾಗೂ ಆಹವಾಲು ಆಲಿಸಿ ಜನತೆಯನ್ನು ಉದ್ದೇಶಿಸಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡುತ್ತಿರುವಾಗಲೇ ಭೂಕಂಪನವಾಗಿದೆ. ಕಳೆದ ಕೆಲವು ದಿನಗಳಿಂದ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವಾರ ಗ್ರಾಮ ಹಾಗೂ ಸುತ್ತ ಮುತ್ತ ಗ್ರಾಮ ಭೂಕಂಪನವಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಆತಂಕ ನಿರ್ಮಾಣದ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ಗಡಿಕೇಶ್ವಾರ ಗ್ರಾಮಕ್ಕೆ ಸಿದ್ದರಾಮಯ್ಯ ತೆರಳಿದ್ದು, ಜನರ ಅಹವಾಲು ಅಲಿಸಿ ಮಾತನಾಡುವಾಗಲೇ ಸಿದ್ದರಾಮಯ್ಯ ಅವರಿಗೆ ಭೂಕಂಪನದ ಅನುಭವ …
Read More »Yearly Archives: 2021
ಉಪಚುನಾವಣೆ ಹಿನ್ನೆಲೆ : ಕಾಂಗ್ರೆಸ್ ಕಾರ್ಯಕರ್ತನಿಂದ ಬಿಜೆಪಿ ಯುವ ಕಾರ್ಯಕರ್ತರನ ಮೇಲೆ ಹಲ್ಲೆ
ಸಿಂದಗಿ: ಉಪಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತ ತನ್ನ ಸಹಚರನೊಂದಿಗೆ ಬಿಜೆಪಿ ಯುವ ಕಾರ್ಯಕರ್ತರನ ಮೇಲೆ ಹಲ್ಲೆ ಮಾಡಿದ ಘಟನೆ ತಾಲೂಕಿನ ರಾಂಪುರ ಪಿ.ಎ. ಗ್ರಾಮದ ಪೆಟ್ರೋಲ್ ಪಂಪ್ ಬಳಿ ಮಂಗಳವಾರ ನಡೆದಿದೆ. ತಾಲೂಕಿನ ನಾಗರಹಳ್ಳಿ ಗ್ರಾಮದ ಬಿಜೆಪಿ ಕಾರ್ಯಕರ್ತ ಪ್ರಮೋದ ಬಾಗೇವಾಡಿ ಅವರ ಮೇಲೆ ಬಬಲೇಶ್ವರ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಬಾರದು ಎಂದು ಅವರು …
Read More »ಜಮ್ಮು & ಕಾಶ್ಮೀರದಲ್ಲಿ ಭದ್ರತಾಪಡೆಯ ಕಾರ್ಯಾಚರಣೆ : ಐವರು ಉಗ್ರರ ಹತ್ಯೆ
ನವದೆಹಲಿ: ನಿನ್ನೆ (ಮಂಗಳವಾರ) ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಲಷ್ಕರ್-ಎ-ತೊಯ್ಬಾ ಮತ್ತು ರೆಸಿಸ್ಟೆನ್ಸ್ ಫ್ರಂಟ್ ನೊಂದಿಗೆ ಸಂಪರ್ಕ ಹೊಂದಿದ ಐವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಶೋಪಿಯಾನ್ ಜಿಲ್ಲೆಯ ತಲ್ರಾನ್ ಗ್ರಾಮದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಇದರ ಬೆನ್ನಲ್ಲೇ ಭದ್ರತಾ ಪಡೆಯಿಂದ ಎನ್‌ಕೌಂಟರ್ ನಡೆದಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಪೊಲೀಸರು-ಸೇನೆಯ ಜಂಟಿ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದ್ದು, ಎನ್ ಕೌಂಟರ್ ನಡೆದಿದೆ. ಇನ್ನೊಂದು ಕಡೆ ದೆಹಲಿ …
Read More »ಇಂಜಿನಿಯರಿಂಗ್ ಪದವಿಯಲ್ಲಿ ಕನ್ನಡ ಅಳವಡಿಕೆ 4 ಕಾಲೇಜುಗಳಿಗೆ ಅನುಮತಿ : ಸಿಎಂ
ಬೆಂಗಳೂರು: ಇಂಜಿಯರಿಂಗ್ ಕಾಲೇಜುಗಳಲ್ಲಿ 4 ವರ್ಷದ ಬಿಎಸ್ಸಿ ಆನರ್ಸ್ ಆರಂಭಿಸಲು ಅನುಮತಿ ಪತ್ರ ನೀಡಲಾಗಿದೆ. ನೂತನ ಶಿಕ್ಷಣ ಪದ್ಧತಿ (NEP) ಅನುಸಾರ ಇಂಜಿನಿಯರಿಂಗ್ ಶಿಕ್ಷಣ ಅನುಷ್ಠಾನ ಮಾಡಲಾಗುವುದು ಎಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿಂಗ್ ಶಿಕ್ಷಣಕ್ಕೆ ಒಪ್ಪಿಗೆ ನೀಡಲಾಗಿದೆ. ಈ ಸಂಬಂಧ ನಾಲ್ಕು ಕಾಲೇಜುಗಳಿಗೆ ಅನುಮತಿ ಪತ್ರವನ್ನು ನೀಡಲಾಗಿದೆ. ಕನ್ನಡ ಭಾಷೆಯಲ್ಲಿ ಇಂಜಿನಿಯರಿಂಗ್ ಸಿಲಬಸ್ ಬಿಡುಗಡೆ ಮಾಡಿರುವುದು ಹೊಸ …
Read More »100 ಲಕ್ಷ ಕೋಟಿ ರೂ. ಮೊತ್ತದ ‘ಪಿಎಂ ಗತಿ ಶಕ್ತಿ ಯೋಜನೆ’ಗೆ ಇಂದು ಚಾಲನೆ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಗತಿ ಶಕ್ತಿ ಯೋಜನೆಯನ್ನು (PM Gati Shakti Yojana) ಜಾರಿಗೆ ತರಲು ಮುಂದಾಗಿದ್ದು, ಇಂದು ಈ ಯೋಜನೆಗೆ ಚಾಲನೆ ನೀಡಲಿದ್ದಾರೆ. ಈ ಯೋಜನೆ ಬರೋಬ್ಬರಿ ₹100 ಲಕ್ಷ ಕೋಟಿ ಮೊತ್ತದ್ದಾಗಿದೆ. ಇನ್ನು ಈ ಯೋಜನೆಯಿಂದ ದೇಶದಲ್ಲಿ ಉದ್ಯೋಗಾವಕಾಶ ಸುಧಾರಿಸಲಿವೆ. ಗತಿ ಶಕ್ತಿ ಯೋಜನೆಯು ದೇಶದ ಮಾಸ್ಟರ್ ಪ್ಲಾನ್ ಮತ್ತು ಮೂಲಸೌಕರ್ಯಕ್ಕೆ ಅಡಿಪಾಯ ಹಾಕುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. 100 ಲಕ್ಷ ಕೋಟಿ ರೂಪಾಯಿ ಮೊತ್ತದ ಈ …
Read More »BIG ENCOUNTER ಕಣಿವೆ ನಾಡಿನಲ್ಲಿ 5 ಭಯೋತ್ಪಾದಕರು ಉಡೀಸ್
ನವದೆಹಲಿ: ಲಷ್ಕರ್-ಎ-ತೊಯ್ಬಾ -ರೆಸಿಸ್ಟೆನ್ಸ್ ಫ್ರಂಟ್ ನೊಂದಿಗೆ ಸಂಪರ್ಕ ಹೊಂದಿದ ಒಟ್ಟು ಐದು ಭಯೋತ್ಪಾದಕರು ನಿನ್ನೆ ಜಮ್ಮು & ಕಾಶ್ಮೀರದ ಶೋಪಿಯಾನ್‌ನಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಹತ್ಯೆಗೀಡಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ತಲ್ರಾನ್ ಗ್ರಾಮದಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ಬೆನ್ನಲ್ಲೆ ಉಗ್ರರ ಎನ್‌ಕೌಂಟರ್ ನಡೆದಿದೆ. ಇನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಪೊಲೀಸರು ಮತ್ತು ಸೇನೆಯ ಜಂಟಿ ಶೋಧ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮತ್ತೊಂದು …
Read More »ಉತ್ತರ ಕನ್ನಡ: ಗ್ಯಾಸ್ ಟ್ಯಾಂಕರ್ ಸ್ಫೋಟ; ಸುತ್ತಮುತ್ತ 300-400 ಮೀಟರ್ ವ್ಯಾಪಿಸಿರುವ ಬೆಂಕಿ
ಉತ್ತರ ಕನ್ನಡ: ಇಂದು (ಅಕ್ಟೋಬರ್ 13) ಬೆಳಿಗ್ಗೆ 5.30ರ ಸುಮಾರಿಗೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಇಡಗುಂದಿ ಬಳಿ ಗ್ಯಾಸ್ ಟ್ಯಾಂಕರ್ ಸ್ಫೋಟಗೊಂಡಿದೆ. ಸ್ಪೋಟದಿಂದಾಗಿ ಸುತ್ತಮುತ್ತ 300 ರಿಂದ 400 ಮೀಟರ್ ಬೆಂಕಿ ವ್ಯಾಪಿಸಿದೆ. ಸಾಕಷ್ಟು ದೂರ ವ್ಯಾಪ್ತಿಯಲ್ಲಿ ಹಬ್ಬಿಕೊಂಡಿದ್ದ ಬೆಂಕಿಯನ್ನು ನಂದಿಸಲು ಅಗ್ನಿಶಾಮಕದಳದ ಸಿಬ್ಬಂದಿಗಳು ಹರಸಾಹಸ ಪಡಬೇಕಾಯಿತು. ಸದ್ಯ 300 ರಿಂದ 400 ಮೀಟರ್ ದೂರಗಳಷ್ಟು ಸ್ಪೋಟದಿಂದ ಏನಾಗಿದೆ ಎನ್ನುವ ಮಾಹಿತಿ ದೊರೆಯದೆ ಅಧಿಕಾರಿಗಳು ಕಂಗಾಲಾಗಿದ್ದಾರೆ.
Read More »ಕರಾಳ ದಿನಾಚರಣೆಗೆ ಅನುಮತಿ ಬೇಡ, ಅದ್ಧೂರಿ ರಾಜ್ಯೋತ್ಸವಕ್ಕೆ ಕನ್ನಡಪರ ಸಂಘಟನೆಗಳ ಅಗ್ರಹ:
ರಾಜ್ಯೋತ್ಸವ ಸಂದರ್ಭದಲ್ಲಿ ಎಂ.ಇ.ಎಸ್. ಕರಾಳ ದಿನಾಚರಣೆಗೆ ಜಿಲ್ಲಾಡಳಿತ ಅವಕಾಶ ನೀಡಬಾರದು ಎಂದು ಕನ್ನಡಪರ ಸಂಘಟನೆಗಳ ಮುಖಂಡರೊಬ್ಬರು ಮನವಿ ಮಾಡಿಕೊಂಡರು. ಅನಂತ ಬ್ಯಾಕೂಡ್ ಮಾತನಾಡಿ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಸಮಾರಂಭ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಆಯೋಜಿಸಬೇಕು. ಬೆಳಗಾವಿ ಕನ್ನಡ ರಾಜ್ಯೋತ್ಸವಕ್ಕೆ ಸರಕಾರ ವಿಶೇಷ ಅನುದಾನ ಒದಗಿಸಬೇಕು ಎಂದು ಒತ್ತಾಯಿಸಿದರು. ರಾಣಿ ಚೆನ್ನಮ್ಮ ಪುತ್ಥಳಿಗೆ ಹೆಲಿಕಾಪ್ಟರ್ ಮೂಲಕ ಪುಷ್ಪಾರ್ಚನೆ ಮಾಡಬೇಕು. ಪಾಲಿಕೆಯ ಪ್ರತಿ ವಾರ್ಡಿನಲ್ಲಿ ನವೆಂಬರ್ ಅಂತ್ಯದವರೆಗೆ ಕಾರ್ಯಕ್ರಮ ಏರ್ಪಡಿಸಬೇಕು ಎಂದು …
Read More »ನಗರಾಭಿವೃದ್ಧಿ ಪ್ರಾಧಿಕಾರದ ಸಭೆ ನಡೆದಿಲ್ಲ. ಪದೇ ಪದೇ ಸಭೆ ಮುಂದಕ್ಕೆ ಹೋಗುತ್ತಿರುವುದಕ್ಕೆ ಬಿಜೆಪಿಯ ಇಬ್ಬರು ಶಾಸಕರೇ ಕಾರಣ
ಬೆಳಗಾವಿ: ಬಿಜೆಪಿಯ ಇಬ್ಬರು ಶಾಸಕರ ಅಸಹಕಾರದಿಂದ ನಗರದ ಅಭಿವೃದ್ಧಿ ಕುಂಠಿತವಾಗುತ್ತಿದೆ. ಈ ಬಗ್ಗೆ ಶಾಸಕರೇ ಸ್ಪಷ್ಟೀಕರಣ ನೀಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಒಂದು ವರ್ಷದಿಂದ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಸಭೆ ನಡೆದಿಲ್ಲ. ಪದೇ ಪದೇ ಸಭೆ ಮುಂದಕ್ಕೆ ಹೋಗುತ್ತಿರುವುದಕ್ಕೆ ಬಿಜೆಪಿಯ ಇಬ್ಬರು ಶಾಸಕರೇ ಕಾರಣ ಎಂದು ಆರೋಪಿಸಿದರು. ಸ್ಥಳೀಯ ಇಬ್ಬರು ಶಾಸಕರು ಬುಡಾ ಅಧ್ಯಕ್ಷರಿಗೆ ಸಹಕಾರ ನೀಡುತ್ತಿಲ್ಲ. …
Read More »ಮಂಗಳೂರು: ಸಂಚಾರ ಪೊಲೀಸರಿಗೆ ಬಾಡಿ ಕ್ಯಾಮರಾ ಅಳವಡಿಕೆ
ಮಂಗಳೂರು, ಅ.11: ಸಾರ್ವಜನಿಕರ ಮೇಲೆ ಪೊಲೀಸರು ಹರಿ ಹಾಯ್ದು ಹೋಗುವುದು ಅಥವಾ ಪೊಲೀಸರ ಜೊತೆ ಸಾರ್ವಜನಿಕರು ಒರಟಾಗಿ ವರ್ತಿಸುವುದನ್ನು ತಪ್ಪಿಸುವ ಸಲುವಾಗಿ ಮಂಗಳೂರು ನಗರ ಸಂಚಾರ ಪೊಲೀಸರು ‘ಬಾಡಿ ಕ್ಯಾಮರಾ’ ಅಳವಡಿಕೆ ಪ್ರಕ್ರಿಯೆ ಆರಂಭಿಸಿದ್ದಾರೆ. ಅಹಿತಕರ ಘಟನೆಗಳ ಸಂದರ್ಭ ಸತ್ಯಾಸತ್ಯತೆಯನ್ನು ಅರಿಯಲು ಇದು ಸಹಕಾರಿ ಎಂದು ಹೇಳಲಾಗುತ್ತಿದೆ. ವಾಹನಗಳ ತಪಾಸಣೆಯ ವೇಳೆ ಪೊಲೀಸರು ಮತ್ತು ಸಾರ್ವ ಜನಿಕರ ಮಧ್ಯೆ ಮಾತಿನ ಚಕಮಕಿ ನಡೆಯುವುದು ಸಾಮಾನ್ಯವಾಗಿದೆ. ಆವಾಗ ‘ಬಾಡಿ ಕ್ಯಾಮರಾ’ ಸೂಕ್ತ …
Read More »