Home / 2021 (page 19)

Yearly Archives: 2021

ಹಿಂದೂ ಧಾರ್ಮಿಕ ಸ್ಥಳಗಳಲ್ಲಿ ಕ್ರೈಸ್ತರ ಹೊಸ ವರ್ಷ ಆಚರಣೆ ಮಾಡಬಾರದು.: ಪ್ರಮೋದ್​ ಮುತಾಲಿಕ್​

ಹುಬ್ಬಳ್ಳಿ: ಹಿಂದೂ ಧಾರ್ಮಿಕ ಸ್ಥಳಗಳಲ್ಲಿ ಕ್ರೈಸ್ತರ ಹೊಸ ವರ್ಷ ಆಚರಣೆ ಮಾಡಬಾರದು. ಒಂದು ವೇಳೆ ಮಾಡಿದ್ರೆ ಧರಣಿ ನಡೆಸಲಾಗುವುದು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್​ ಮುತಾಲಿಕ್​ ಎಚ್ಚರಿಸಿದ್ದಾರೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಮೋದ್​ ಮುತಾಲಿಕ್​, ಹಿಂದುಗಳಿಗೆ ಯುಗಾದಿಯಂದು ಹೊಸ ವರ್ಷ ಆರಂಭವಾಗುತ್ತದೆ. ಹಾಗಾಗಿ ಕ್ರೈಸ್ತರ ಹೊಸ ವರ್ಷಾಚರಣೆ ಮಾಡದಂತೆ ಧರ್ಮಸ್ಥಳ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಮತ್ತು ಆರ್ಟ್​ ಆಫ್​ ಲಿವಿಂಗ್​ನ ರವಿಶಂಕರ ಗುರೂಜಿ ಹಾಗೂ ಇಸ್ಕಾನ್​ನ ಮಧುದಾಸ ಪಂಡಿತ ಅವರಿಗೆ …

Read More »

ವಿಜಯಪುರ | ಗುಮ್ಮಟ ನಗರ ಅಭಿವೃದ್ಧಿಗೆ ಮುನ್ನುಡಿ: ಯತ್ನಾಳ

ವಿಜಯಪುರ: ಇಲ್ಲಿನ ಜಿಲ್ಲಾ ಪಂಚಾಯ್ತಿ ಹತ್ತಿರ ನಿರ್ಮಾಣಗೊಳ್ಳಲಿರುವ ನೂತನ ಜಿಲ್ಲಾಡಳಿತ ಭವನದ ಶಂಕುಸ್ಥಾಪನೆ ಹಾಗೂ ವಿವಿಧ ಇಲಾಖೆಯ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮವನ್ನು ನೆರವೇರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ವಿವಿಧ ಇಲಾಖೆಗಳ ಸಚಿವರು ಡಿ.25 ರಂದು ನಗರಕ್ಕೆ ಆಗಮಿಸುತ್ತಿದ್ದಾರೆ ಎಂದು ಶಾಸಕ ಬಸವನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ.   ಅಂದು ಬೆಳಿಗ್ಗೆ 10ಕ್ಕೆ ಮುಖ್ಯಮಂತ್ರಿಗಳು ಹಾಗೂ ಸಚಿವರು ಮಾಜಿ ಪ್ರಧಾನಿ ದಿ. ಅಟಲ್‍ಬಿಹಾರಿ ವಾಜಪೇಯಿ ಅವರ …

Read More »

ಮತಾಂತರ ನಿಷೇಧ ಕಾಯ್ದೆ ‘ಮಸೂದೆ’ ವಿಧಾನಸಭೆಯಲ್ಲಿ ಪಾಸ್‌ 

ಬೆಳಗಾವಿ: ಮತಾಂತರ ನಿಷೇಧ ಕಾಯ್ದೆ ಇಂದು ವಿಧಾನಸಭೆಯಲ್ಲಿ ಧ್ವನಿ ಮತದ ಮೂಲದ ಅಂಗೀಕಾರವಾಗಿದೆ. ಈ ನಡುವೆ ಕಳೆದ ಎರಡು ದಿನದಿಂದ ಸದನದಲ್ಲಿ ಪರ ಮತ್ತು ವಿರೋಧವಾಗಿ ಮಸೂದೆ ಪರ ಕಾವೇರಿದ ಮಾತಿನ ಚಕಮಕಿ ಕೂಡೆ ನಡೆಯಿತು. ಹಾಗಾದ್ರೇ ಮತಾಂತರ ನಿಷೇಧ ಕಾಯ್ದೆಯಲ್ಲಿ ಇರೋದು ಏನು ಅನ್ನುವುದನ್ನು ನೋಡುವುದಾದ್ರೆ ಅದರ ಬಗ್ಗೆ ಇಲ್ಲಿದೆ ಮಾಹಿತಿ ರಾಜ್ಯದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ಸಂರಕ್ಷಣೆಗಾಗಿ ಮತ್ತು ತಪ್ಪು ನಿರೂಪಣೆ, ಬಲವಂತ, ಅನುಚಿತ ಪ್ರಭಾವ, ಒತ್ತಾಯ, …

Read More »

ನೀವು ಈಗ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದ್ರೇ, ನಾವು 2023ಕ್ಕೆ ಅಧಿಕಾರಕ್ಕೆ ಬಂದು ರದ್ದು ಮಾಡ್ತೀವಿ: ವಿಧಾನಸಭೆಯಲ್ಲಿ ಸಿದ್ಧರಾಮಯ್ಯ ಗುಡುಗು

ಬೆಂಗಳೂರು: ಈಗ ಜಾರಿಗೆ ತರೋದಕ್ಕೆ ಹೊರಟಿರುವಂತ ಮತಾಂತರ ನಿಷೇಧ ಕಾಯ್ದೆಯ ( Karnataka Anti Conversion Bill ) ಕರಡು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಿದ್ಧಪಡಿಸಿರೋದಲ್ಲ. 2009ರಲ್ಲಿ ಯಡಿಯೂರಪ್ಪ ( Yediyurappa ) ಸಿಎಂ ಆಗಿದ್ದಂತ ಕಾಲದಲ್ಲಿ ಸಿದ್ಧಪಡಿಸಿರೋದಾಗಿದೆ. ಒಂದು ವೇಳೆ ಈಗ ನೀವು ಮತಾಂತರ ನಿಷೇಧ ಮಸೂದೆಯನ್ನು ಜಾರಿಗೊಳಿಸಿದ್ರೇ ಆದ್ರೇ.. 2023ಕ್ಕೆ ನಾವು ಅಧಿಕಾರಕ್ಕೆ ಬರುತ್ತೇವೆ. ಆಗ ಕಾಯ್ದೆಯನ್ನು ರದ್ದು ಪಡಿಸಲಾಗುತ್ತದೆ ಎಂಬುದಾಗಿ ಮಾಜಿ ಸಿಎಂ ಹಾಗೂ ವಿಪಕ್ಷ …

Read More »

100 ಹಾಸ್ಟೆಲ್‍ಗಳ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಕೆ

ಬೆಳಗಾವಿ, ಡಿ.23- ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಕಾರಣಕ್ಕೆ ಹೊಸದಾಗಿ 100 ಹಾಸ್ಟೇಲ್‍ಗಳ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸುತ್ತಿರುವುದಾಗಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಹೇಳಿದರು.   ವಿಧಾನ ಪರಿಷತ್ ನ ಶೂನ್ಯ ವೇಳೆಯಲ್ಲಿ ಸದಸ್ಯ ಚಿದಾನಂದಗೌಡ ಅವರು ಕೇಳಿದ ಪ್ರಶ್ನೆಗೆ, ಉತ್ತರಿಸಿದ ಸಚಿವರು, ಸಮಾಜ ಕಲ್ಯಾಣ ಇಲಾಖೆಯಲ್ಲಿ ಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳಿಗೂ ಪ್ರವೇಶ ನೀಡಲಾಗುತ್ತಿದೆ. ಹಿಂದುಳಿದ …

Read More »

ರುಕ್ಮಿಣಿ ನಗರ: ಕಾಮಗಾರಿ ಪರಿಶೀಲಿಸಿದ ಸಚಿವ ಸೋಮಣ್ಣ

ಬೆಳಗಾವಿ: ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ.ಸೋಮಣ್ಣ ಅವರು ಇಲ್ಲಿನ ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ರುಕ್ಮಿಣಿ ನಗರದಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಕೈಗೊಳ್ಳಲಾಗುತ್ತಿರುವ ವಿವಿಧ ಯೋಜನೆಗಳ ಕಾಮಗಾರಿಗಳನ್ನು ಗುರುವಾರ ಪರಿಶೀಲಿಸಿದರು. ಸಮುದಾಯ ಭವನ, ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಮಂಜೂರಾದ ಮನೆಗಳು ಹಾಗೂ ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿ ನಿರ್ಮಿಸಲಾಗಿರುವ ಮನೆಗಳನ್ನು ಪರಿಶೀಲಿಸಿದರು. ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಸ್ಥಳೀಯರಿಂದ ಮಾಹಿತಿ ಪಡೆದರು. ವಸತಿ ಗೃಹಗಳ ನಿರ್ಮಾಣ ಹಾಗೂ ವಿವಿಧ ಕಾಮಗಾರಿಗಳ …

Read More »

ಪಾಕಿಸ್ತಾನದಿಂದ 7 ಸಾವಿರ ನಾಗರಿಕರು ಭಾರತೀಯ ಪೌರತ್ವಕ್ಕಾಗಿ ಅರ್ಜಿ ಸಲ್ಲಿಕೆ ! – ಕೇಂದ್ರ ಸರಕಾರದ ಮಾಹಿತಿ

ನವ ದೆಹಲಿ : 2016 ರಿಂದ 2020 ನೆಯ ಇಸವಿಯ ನಡುವೆ 4 ಸಾವಿರದ 177 ವಿದೇಶಿಯರಿಗೆ ಭಾರತೀಯ ಪೌರತ್ವ ನೀಡಲಾಗಿದ್ದು, 10 ಸಾವಿರದ 635 ಅರ್ಜಿಗಳು ಬಾಕಿ ಇವೆ. ಬಾಕಿ ಉಳಿದಿರುವ ಅರ್ಜಿಗಳ ಪೈಕಿ ಅತಿ ಹೆಚ್ಚು ಅಂದರೆ 7 ಸಾವಿರದ 306 ಅರ್ಜಿಗಳು ಪಾಕಿಸ್ತಾನಿ ಪ್ರಜೆಗಳಿಂದ ಬಂದಿದ್ದರೆ, 1 ಸಾವಿರದ 152 ಅರ್ಜಿಗಳು ಅಫ್ಘಾನಿಸ್ತಾನದಿಂದ ಬಂದಿವೆ ಎಂದು ಕೇಂದ್ರ ಗೃಹರಾಜ್ಯಸಚಿವ ನಿತ್ಯಾನಂದ ರಾಯ ಇವರು ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.

Read More »

ಡಿಸೆಂಬರ್ 31ಕ್ಕೆ ಕರ್ನಾಟಕ ಬಂದ್ -ಕನ್ನಡ ಪರ ಸಂಘಟನೆಗಳು ಘೋಷಣೆ

ಬೆಳಗಾವಿ: ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಹಾಗೂ ಬೆಳಗಾವಿಯಲ್ಲಿ ಎಂಇಎಸ್​ ನಡೆಸುತ್ತಿರುವ ಪುಂಡಾಟವನ್ನ ಖಂಡಿಸಿ ಡಿಸೆಂಬರ್ 31 ರಂದು ಕರ್ನಾಟಕ ಬಂದ್ ಮಾಡಲಾಗುವುದು ಎಂದು ಕನ್ನಡಪರ ಸಂಘಟನೆಗಳು ಘೋಷಣೆ ಮಾಡಿವೆ. ನೈತಿಕ ಬೆಂಬಲ ಬೇಡ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ವಿವಿಧ ಕನ್ನಡಪರ ಸಂಘಟನೆಗಳು ಸಭೆ ನಡೆಸಿದ್ದವು. ಸಭೆ ಬಳಿಕ ವಾಟಾಳ್ ನಾಗರಾಜ್, ಸುದ್ದಿಗೋಷ್ಟಿ ನಡೆಸಿ ಬಂದ್​ ಮಾಡುವ ಬಗ್ಗೆ ಮಾಹಿತಿ ನೀಡಿದ್ದಾರೆ. ಕನ್ನಡಿಗರಿಗೆ ಅಪಮಾನ ಆಗಿದೆ. ಹಾಗಾಗಿ …

Read More »

ಡಿ.25 ರಿಂದ ಡಿ.27 ರವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಗ್ರಾಮ ಪಂಚಾಯಿತಿ ಸಾರ್ವತ್ರಿಕ ಹಾಗೂ ಉಪಚುನಾವಣೆಗಳ ಹಿನ್ನಲೆಯಲ್ಲಿ ಡಿ.25 ರಿಂದ ಡಿ.27 ರವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ. ಧಾರವಾಡ ಜಿಲ್ಲೆಯ ವಿವಿಧ ತಾಲೂಕುಗಳ 6 ಗ್ರಾಮಪಂಚಾಯಿತಿಗಳಲ್ಲಿ ಜರುಗುವ ಸಾರ್ವತ್ರಿಕ ಚುನಾವಣೆ ಹಾಗೂ 9 ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಜರುಗುವ ಉಪಚುನಾವಣೆಗೆ ಡಿಸೆಂಬರ್ 27 ರಂದು ಮತದಾನ ಜರುಗಲಿದೆ. ಆದ್ದರಿಂದ ಡಿ.25 ರ ಮದ್ಯರಾತ್ರಿ 11.59 ರಿಂದ ಡಿ. 27 ರ ಮದ್ಯರಾತ್ರಿ 11.59 ರವರೆಗೆ ಮತದಾನ ಜರುಗಲಿರುವ …

Read More »

ಕಬೀರ್ ಖಾನ್ ನಿರ್ದೇಶನದ ’83’ ಸಿನಿಮಾ ಡಿಸೆಂಬರ್ 24 ರಂದು ತೆರೆಗೆ ಅಪ್ಪಳಿಸಲು ಸಖಲ ಸಿದ್ಧತೆ

ಕಬೀರ್ ಖಾನ್ ನಿರ್ದೇಶನದ ’83’ ಸಿನಿಮಾ ಡಿಸೆಂಬರ್ 24 ರಂದು ತೆರೆಗೆ ಅಪ್ಪಳಿಸಲು ಸಖಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಎಲ್ಲರಿಗೂ ತಿಳಿದಿರುವಂತೆ ’83’ ಸಿನಿಮಾ 1983 ರಲ್ಲಿ ಭಾರತ ತಂಡ ವೆಸ್ಟ್​ ಇಂಡೀಸ್​ವಿರುದ್ಧ ವರ್ಲ್ಡ್​ ಕಪ್​ ಗೆದ್ದ ಕಥೆ. ’83’ ಸಿನಿಮಾದಲ್ಲಿ ನಟ ರಣವೀರ್ ಸಿಂಗ್ ಅವರು ಕಪಿಲ್ ದೇವ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ದೀಪಿಕಾ ಪಡುಕೋಣೆ ಒಂದು ಪಾತ್ರ ಮಾಡಿದ್ದು 83 ಸಿನಿಮಾಗೆ ಹಣ ಕೂಡ ಹಾಕಿದ್ದಾರೆ. ಈಗ …

Read More »