Home / 2021 (page 21)

Yearly Archives: 2021

ಎಂಇಎಸ್ ಕಾರ್ಯಕರ್ತರ ಉದ್ಧಟತನದ ಮಧ್ಯೆ ಶಿವಸೇನೆ ನಾಯಕರಿಂದ ಕರ್ನಾಟಕ ಸರ್ಕಾರಕ್ಕೆ ಸವಾಲು..!

ಬೆಳಗಾವಿ ಭಾಗದಲ್ಲಿ ಎಂಇಎಸ್ ಪುಂಡರ ಕೃತ್ಯ ಮಿತಿ ಮೀರುತ್ತಿರುವ ಮಧ್ಯೆ ರಾಜ್ಯದಲ್ಲಿ ಎಂಇಎಸ್ ಬ್ಯಾನ್ ಮಾಡಬೇಕೆಂಬ ಕೂಗು ಮುನ್ನೆಲೆಗೆ ಬಂದಿದೆ. ಇದರ ನಡುವೆಯೇ ಶಿವಸೇನೆ ನಾಯಕ ಸಂಜಯ್ ರಾವತ್ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ. ಕರ್ನಾಟಕದಲ್ಲಿ ಧೈರ್ಯವಿದ್ದರೆ ಎಂಇಎಸ್ ನ್ನು ನಿಷೇಧಿಸಲಿ ಎಂದು ಅವರು ಬೊಮ್ಮಯಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.   ಶಿವಾಜಿ ಹೆಸರಿನಲ್ಲಿ ಮತ ಕೇಳುವ ಬಿಜೆಪಿ, ಬೆಂಗಳೂರಿನಲ್ಲಿ ಶಿವಾಜಿ ಮೂರ್ತಿಗೆ ಮಸಿ ಬಳಿದರೂ …

Read More »

ಯುವ ನಾಯಕಿ ಪ್ರಿಯಂಕಾ ಜಾರಕಿಹೊಳಿ ನೇತೃತ್ವದಲ್ಲಿ ಕಾಂಗ್ರೆಸ್ ಮಹಿಳಾ ಮೋರ್ಚಾ ಪ್ರತಿಭಟನೆ

    ಬೆಳಗಾವಿ: ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಜನ ವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಮಹಿಳಾ ಮೋರ್ಚಾ ಕಾರ್ಯಕರ್ತರು ಯುವ ನಾಯಕಿ ಪ್ರಿಯಂಕಾ ಜಾರಕಿಹೊಳಿಯವರ ನೇತೃತ್ವದಲ್ಲಿ ನಗರದ ಕಾಂಗ್ರೆಸ್ ಭವನದಿಂದ ಸುವರ್ಣ ಸೌಧದ ವರಿಗೆ ಟ್ರ್ಯಾಕ್ಟರ್ ಮೂಲಕ ಸಾಗಿ ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು.   ಈ ಸಂದರ್ಭದಲ್ಲಿ ಯುವ ನಾಯಕಿ ಪ್ರಿಯಂಕಾ ಜಾರಕಿಹೊಳಿ ಮಾತನಾಡಿ, ಇವತ್ತು ಕೇಂದ್ರ ಸರ್ಕಾರ ಸಿಲಿಂಡರ್, ಅಡುಗೆ ಏಣ್ಣೆ ಸೇರಿದಂತೆ ವಿವಿಧ …

Read More »

ವಡೇರಹಟ್ಟಿಯ ಇಂದ್ರವೇಣಿ ಹಳ್ಳಕ್ಕೆ ಹರಿಯುತ್ತಿರುವ ತ್ಯಾಜ್ಯ ಮಿಶ್ರಿತ ರಾಸಾಯನಿಕ ನೀರು ವಿರೋಧಿಸಿ

ವಡೇರಹಟ್ಟಿಯ ಇಂದ್ರವೇಣಿ ಹಳ್ಳಕ್ಕೆ ಹರಿಯುತ್ತಿರುವ ತ್ ಮೂಡಲಗಿ : ತಾಲೂಕಿನ ವಡೇರಹಟ್ಟಿಯ ಇಂದ್ರವೇಣಿ ಹಳ್ಳಕ್ಕೆ ಬೆಲ್ಲದ ಬಾಗೇವಾಡಿಯ ವಿಶ್ವರಾಜ ಶುಗರ್ಸ್‍ನಿಂದ ತ್ಯಾಜ್ಯ ಮಿಶ್ರಿತ ರಾಸಾಯನಿಕ ನೀರು ಬಿಡುವುದನ್ನು ವಿರೋಧಿಸಿ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಿದ್ದಾರೆ. ಮಂಗಳವಾರದಂದು ವಡೇರಹಟ್ಟಿ ಗ್ರಾಮದ ಸುಮಾರು ಇನ್ನೂರಕ್ಕೂ ಹೆಚ್ಚು ಜನರು ಇಂದು ತಹಶೀಲ್ದಾರ ಕಛೇರಿಗೆ ಆಗಮಿಸಿ ಕಾರ್ಖಾನೆಯ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಆಹಾರ ಮತ್ತು ನಾಗರೀಕ ಸರಬರಾಜು …

Read More »

ಜನವರಿ 15ರ ನಂತರ ಕೋವಿಡ್ ಮೂರನೇ ಅಲೆಗೆ ಎಲ್ಲರೂ ಸಿದ್ಧರಾಗಿ: ಸಚಿವ ಡಾ.ಕೆ.ಸುಧಾಕರ್ ಮುನ್ಸೂಚನೆ

ಜನವರಿ 15ರ ನಂತರ ಕೋವಿಡ್ ಮೂರನೇ ಅಲೆಗೆ ಎಲ್ಲರೂ ಸಿದ್ಧರಾಗಿ ಎಂದು ವೈದ್ಯರು, ವೈದ್ಯಕೀಯ ಸಿಬ್ಬಂದಿಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಮುನ್ಸೂಚನೆ ನೀಡಿದ್ದಾರೆ. ಬೆಳಗಾವಿಯ ಕೆಎಲ್‍ಇ ಕ್ಯಾಂಪಸ್‍ನಲ್ಲಿರುವ ಜೆ.ಎನ್. ವೈದ್ಯಕೀಯ ಕಾಲೇಜಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಆರೋಗ್ಯ ಇಲಾಖೆಯ ಸಮಸ್ಯೆ ಕುರಿತು ಪರಿಶೀಲನಾ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಆರೋಗ್ಯ ಕ್ಷೇತ್ರದ ವಿವಿಧ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಂಡರು. ಆಶಾ ಕಾರ್ಯಕರ್ತೆಯರಿಗೆ ಸರಿಯಾದ ಸಂಬಳ, ಆಂಬ್ಯುಲೆನ್ಸ್ …

Read More »

ಗೋಕಾಕ ಕಾಂಗ್ರೆಸ್ ಪಕ್ಷದ ತವರು ಮನೆ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೇವೆ.

ಕಾಂಗ್ರೆಸ ಪಕ್ಷದಲ್ಲಿ ವ್ಯಕ್ತಿಗಳು ಬರ್ತಾರೆ ವ್ಯಕ್ತಿಗಳು ಹೋಗ್ತಾರೆ. ಕಾಂಗ್ರೆಸ ಪಕ್ಷದಲ್ಲಿ ವ್ಯಕ್ತಿಗಳು ಅಲ್ಲ ಪಕ್ಷ ದೊಡ್ಡದು. ಗೋಕಾಕ ಕಾಂಗ್ರೆಸ್ ಪಕ್ಷದ ತವರು ಮನೆ ಎನ್ನುವ ಮೂಲಕ ಪರೋಕ್ಷವಾಗಿ ಮಾಜಿ ಸಚಿವ ರಮೇಶ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟಾಂಗ್ ಕೊಟ್ಟರು. ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಅಧಿಕೃತವಾಗಿ ಜೆಡಿಎಸ್ ಮುಖಂಡ ಅಶೋಕ ಪೂಜಾರಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು ಅಶೋಕ ಪೂಜಾರಿ ಕುಟುಂಬ ಒಟ್ಟು ಆರು …

Read More »

ಮೌಲಾನಾ ಆಜಾದ್ ಮಾದರಿ ವಸತಿ ಶಾಲೆಗಳ ಶಿಕ್ಷಕರ ನೇಮಕಕ್ಕೆ ಕ್ರಮ : ಸಿಎಂ ಬೊಮ್ಮಾಯಿ

ಬೆಳಗಾವಿ : ಅಲ್ಪಸಂಖ್ಯಾತರ ಶಿಕ್ಷಣಕ್ಕೆ ಸರ್ಕಾರ ಒತ್ತು ನೀಡಿದೆ. 200 ಮೌಲಾನಾ ಆಜಾದ್ ಮಾದರಿ ಶಾಲೆಗಳನ್ನು ಪ್ರಾರಂಭಿಸಿ ನಿರ್ವಹಿಸಲಾಗುತ್ತಿದೆ. ಈ ಶಾಲೆಗೆಳಲ್ಲಿ ಶಿಕ್ಷಕರ ನೇಮಕಕ್ಕೆ ಕ್ರಮವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.   ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಅವರ ಪ್ರಶ್ನೆಗೆ ಉತ್ತರಿಸಿ,ಮಾತನಾಡಿದರು. ಶಾಲೆಗಳಿಂದ ಹೊರಗುಳಿದ ಅಲ್ಪಸಂಖ್ಯಾತರ ಮಕ್ಕಳನ್ನು ಮರಳಿ ಶಾಲೆಗೆ ತರಲು ಈಗಾಗಲೇ ಮುಚ್ಚಲ್ಪಟ್ಟ ಸರ್ಕಾರಿ ಉರ್ದು ಶಾಲೆಗಳ ಜಾಗದಲ್ಲಿ 200 ಮೌಲಾನಾ …

Read More »

ಎಸ್.ಟಿ.ಗೆ ಕಾಡುಗೊಲ್ಲರ ಸೇರ್ಪಡೆ : ಕೇಂದ್ರಕ್ಕೆ ಶೀಘ್ರ ಸ್ಪಷ್ಟನೆ : ಸಚಿವ ಜೆ.ಸಿ.ಮಾಧುಸ್ವಾಮಿ

ಬೆಳಗಾವಿ : ಹಿಂದುಳಿದ ಬುಡಕಟ್ಟಿಗೆ ಸೇರಿರುವ ಅನಕ್ಷರತೆ, ಪಶುಪಾಲನೆ ವೃತ್ತಿನಿರತರಾಗಿರುವ ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಠ ಪಂಗಡ (ಎಸ್.ಟಿ)ಕ್ಕೆ ಸೇರಿಸಲು ಕೇಂದ್ರ ಸರ್ಕಾರ ಕೆಲವು ಸ್ಪಷ್ಟನೆಗಳನ್ನು ಕೇಳಿ ಪತ್ರ ಬರೆದಿದೆ.ಕುಲಶಾಸ್ತ್ರೀಯ ಅಧ್ಯಯನ ಮಾಡಿರುವ ತಜ್ಞರ ಮೂಲಕ ಮಾಹಿತಿ ಪಡೆದು ಕೇಂದ್ರಕ್ಕೆ ಶೀಘ್ರ ಸ್ಪಷ್ಟನೆಗಳನ್ನು ಕಳುಹಿಸಲಾಗುವುದು.ಕಾಡುಗೊಲ್ಲರ ಹಿತರಕ್ಷಣೆ ಹಾಗೂ ಪೂರ್ಣ ಪ್ರಮಾಣದ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸರ್ಕಾರ ಕಂಕಣಬದ್ಧವಾಗಿದೆ ಎಂದು ಕಾನೂನು,ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ …

Read More »

ಫೆಬ್ರವರಿ ಅಪಾಯ: ಭಾರತದಲ್ಲಿ ದಿನಕ್ಕೆ 1.5 ಲಕ್ಷ ಜನರಿಗೆ ಓಮಿಕ್ರಾನ್ ಸೋಂಕು!?

ನವದೆಹಲಿ, ಡಿಸೆಂಬರ್ 21: ಭಾರತದಲ್ಲಿ ಕೊರೊನಾವೈರಸ್ ಹೊಸ ರೂಪಾಂತರ ಓಮಿಕ್ರಾನ್ ಭೀತಿ ಹೆಚ್ಚುತ್ತಿದೆ. 2022ರ ಫೆಬ್ರವರಿ ತಿಂಗಳ ಹೊತ್ತಿಗೆ ದೇಶದಲ್ಲಿ ಅತಿಹೆಚ್ಚು ಓಮಿಕ್ರಾನ್ ಪ್ರಕರಣಗಳು ವರದಿಯಾಗುವ ಅಪಾಯವಿದೆ ಎಂದು ಸಾಂಕ್ರಾಮಿಕ ರೋಗಶಾಸ್ತ್ರಜ್ಞರು ಎಚ್ಚರಿಕೆ ನೀಡಿದ್ದಾರೆ ಕೊವಿಡ್-19 ಮೂರನೇ ಅಲೆಯು ಮುಂಬರುವ ವರ್ಷದ ಫೆಬ್ರವರಿ ತಿಂಗಳಿನಲ್ಲಿ ಹೆಚ್ಚಾಗುವ ಸಾಧ್ಯತೆ ಇದ್ದು, ಅಲ್ಲಿಂದ ಮುಂದಿನ ಒಂದೇ ತಿಂಗಳಿನಲ್ಲಿ ಸೋಂಕಿನ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.?ಕಾನ್ಪುರ ಐಐಟಿಯ ಮಣೀಂದ್ರ ಅಗರವಾಲ್ ಮತ್ತು …

Read More »

ಕೆಲ ಪುಂಡರ ಕೃತ್ಯದಿಂದ ಕರ್ನಾಟಕ, ಮಹಾರಾಷ್ಟ್ರದಲ್ಲಿ ಶಾಂತಿ ಕದಡುವ ಕೆಲಸಗಳು ನಡೆಯುತ್ತಿವೆ.

ಬೆಂಗಳೂರು: ‘ಕರ್ನಾಟಕದಲ್ಲಿರುವ ಮರಾಠರು ಅಪ್ಪಟ ಕನ್ನಡಿಗರಾಗಿ, ಶಾಂತಿ ಸೌಹಾರ್ದದಿಂದ ಬದುಕುತ್ತಿದ್ದೇವೆ. ಕೆಲ ಪುಂಡರ ಕೃತ್ಯದಿಂದ ಕರ್ನಾಟಕ, ಮಹಾರಾಷ್ಟ್ರದಲ್ಲಿ ಶಾಂತಿ ಕದಡುವ ಕೆಲಸಗಳು ನಡೆಯುತ್ತಿವೆ. ಇವುಗಳನ್ನು ನಿಲ್ಲಿಸಲು ಕ್ರಮಕೈಗೊಳ್ಳಬೇಕು’ ಎಂದು ಒತ್ತಾಯಿಸಿ ಕರ್ನಾಟಕ ಕ್ಷತ್ರಿಯ ಮರಾಠ ಮಹಾ ಒಕ್ಕೂಟವು ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಪತ್ರ ಬರೆದಿದೆ.   ‘ಕರ್ನಾಟಕದಲ್ಲಿ ನೆಲೆಸಿರುವ ಮರಾಠರು ಅಪ್ಪಟ ಕನ್ನಡಿಗರು. ವಲಸೆ ಬಂದವರಲ್ಲ. ಕೆಲ ಕಿಡಿಗೇಡಿಗಳು ಭಾಷೆಯನ್ನು ಮುಂದಿಟ್ಟುಕೊಂಡು ಎರಡೂ ರಾಜ್ಯಗಳ ನಡುವೆ ದ್ವೇಷದ ಬೀಜ ಬಿತ್ತಿ, …

Read More »

ಅಕ್ರಮ-ಸಕ್ರಮ : ರಾಜ್ಯ ಸರ್ಕಾರದಿಂದ ಭರ್ಜರಿ ಸಿಹಿಸುದ್ದಿ

ಬೆಳಗಾವಿ : ಸರ್ಕಾರಿ ಜಮೀನಿನಲ್ಲಿ ಮನೆ ಕಟ್ಟಿಕೊಂಡವರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅಕ್ರಮ-ಸಕ್ರಮ ಯೋಜನೆ ಜಾರಿಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿರುವ ಹಿನ್ನೆಲೆಯಲ್ಲಿ ಆಗಿರುವ ಸಮಸ್ಯೆ ಬಗೆಹರಿಸಿ ಅಕ್ರಮ ಸಕ್ರಮ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಹೇಳಿದ್ದಾರೆ. ಈಶ್ವರಪ್ಪ ನೇತೃತ್ವದಲ್ಲಿ ಸಚಿವ ಸಂಪುಟ ಉಪಸಮಿತಿ 2 ಸಭೆ ನಡೆಸಿದ್ದು, ಮುಂದಿನ ಸಭೆಯಲ್ಲಿ ಚರ್ಚಿಸಿ ಅಕ್ರಮ ಸಕ್ರಮ ಯೋಜನೆ ಜಾರಿಗೆ ಕುರಿತಂತೆ ಶಿಫಾರಸು …

Read More »