ಬೆಂಗಳೂರು : ರಾಷ್ಟ್ರ, ರಾಷ್ಟ್ರೀಯತೆ, ಆರ್‍ಎಸ್‍ಎಸ್ ಇವೆಲ್ಲಾ ಒಂದೇ. ಆರ್‍ಎಸ್‍ಎಸ್ ಅಂದ್ರೆ ರಾಷ್ಟ್ರೀಯತೆ. ರಾಷ್ಟ್ರೀಯ ಶಿಕ್ಷಣ ಪಾಲಿಸಿ, ಆರ್‍ಎಸ್‍ಎಸ್ ಇದ್ರೂ ತಪ್ಪಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿ ವಿಚಾರ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕೆಂದು ಒತ್ತಾಯಿಸಿ ಇಂದು ಅಧಿವೇಶದಲ್ಲಿ ಕಾಂಗ್ರೆಸ್ ಶಾಸಕರು ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು. ಈ ವೇಳೆ ಬಿಜೆಪಿ-ಕಾಂಗ್ರೆಸ್ ಶಾಸಕರ ಮಧ್ಯೆ ವಾಗ್ಯುದ್ಧ ನಡೆಯಿತು.. ಕಾಂಗ್ರೆಸ್ …
Read More »Yearly Archives: 2021
ಅಸ್ಪೃಶ್ಯತೆ ನಿವಾರಣೆಗೆ ಪಣತೊಟ್ಟ ಕೊಪ್ಪಳ ಪೊಲೀಸರು; ಹಳ್ಳಿ ಹಳ್ಳಿಗೂ ತೆರಳಿ ಜನರಿಂದ ಪ್ರತಿಜ್ಞೆ
ಕೊಪ್ಪಳ: ದೇಶಕ್ಕೆ ಸ್ವಾತಂತ್ರ್ಯ ಬಂದು ಇಷ್ಟು ವರ್ಷ ಕಳೆದರೂ ಇನ್ನೂ ಅಸ್ಪೃಶ್ಯತೆ ಜೀವಂತವಾಗಿ ಉಸಿರಾಡುತ್ತಿದೆ. ಇದಕ್ಕೆ ಉದಾಹರಣೆಯೇ ಇತ್ತೀಚೆಗೆ ಹುಟ್ಟುಹಬ್ಬದ ಸಂಭ್ರಮದಲ್ಲಿ ದೇವರ ದರ್ಶನಕ್ಕಾಗಿ ಹನುಮಂತ ದೇವರ ದೇವಸ್ಥಾನಕ್ಕೆ ಪ್ರವೇಶ ಮಾಡಿದ ದಲಿತ ಬಾಲಕನಿಗೆ ದಂಡ ವಿಧಿಸಿದ್ದಾರೆ. ಹೀಗಿರುವಾಗಲೇ ಅಸ್ಪೃಶ್ಯತೆ ನಿವಾರಣೆಗಾಗಿ ಕೊಪ್ಪಳ ಪೊಲೀಸರು ಪಣತೊಟ್ಟಿದ್ದಾರೆ. ಹೌದು, ಇನ್ನೂ ಕೊಪ್ಪಳದಲ್ಲಿ ಜೀವಂತವಾಗಿರುವ ಅಸ್ಪೃಶ್ಯತೆ ನಿವಾರಣೆಗೆ ಪೊಲೀಸರು ಮುಂದಾಗಿದ್ದಾರೆ. ಹೀಗಾಗಿಯೇ ಜಿಲ್ಲೆಯ ಹಳ್ಳಿ ಹಳ್ಳಿಗೂ ತೆರಳಿ ಅಸ್ಪೃಶ್ಯತೆ ನಿವಾರಣೆಗೆ ಪ್ರತಿಜ್ಞೆ ಮಾಡಿಸುತ್ತಿದ್ದಾರೆ. …
Read More »ಮದ್ಯ ಪ್ರಿಯರಿಗೆ ಗುಡ್ನ್ಯೂಸ್; ಅ.3ರಿಂದ ಪಬ್, ಕ್ಲಬ್ ಆರಂಭ
ಬೆಂಗಳೂರು: ಮಾರಕ ಕೊರೋನಾದಿಂದ ಹೇರಲಾಗಿದ್ದ ಲಾಕ್ಡೌನ್ ಸಡಿಲಗೊಳಿಸಿ ಸಿಎಂ ಬಸವರಾಜ್ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ. ಈಗ ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ ಅಕ್ಟೋಬರ್ 3ನೇ ತಾರೀಕಿನಿಂದಲೇ ಕ್ಲಬ್, ಪಬ್ ತೆರೆಯಲು ಅನುಮತಿ ನೀಡಿರುವುದಾಗಿ ತಿಳಿಸಿದ್ದಾರೆ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತಾಡಿದ ಬಸವರಾಜ್ ಬೊಮ್ಮಾಯಿ, ರಾಜ್ಯದಲ್ಲಿ ಸರಾಸರಿ 0.66 ಕೋವಿಡ್ ಪ್ರಮಾಣ ಇದೆ. ಸದ್ಯ ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗಿದೆ. ಆದ್ದರಿಂದ ಪಾಸಿಟಿವಿ ರೇಟ್ ಶೇ.1 ಕ್ಕಿಂತ …
Read More »ರೋಹಿಣಿ ಕೋರ್ಟ್ ಆವರಣದಲ್ಲಿ ಎದುರಾಳಿ ಗ್ಯಾಂಗ್‌ನಿಂದ 2 ಗ್ಯಾಂಗ್‌ಸ್ಟರ್ ಗೋಗಿ ಗುಂಡಿನ ದಾಳಿ
ಹೊಸದಿಲ್ಲಿ: ದೆಹಲಿಯ ರೋಹಿಣಿ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ದುಷ್ಕರ್ಮಿಗಳಿಂದ ಗುಂಡು ಹಾರಿಸಿದ ಗ್ಯಾಂಗ್‌ಸ್ಟರ್ ಜಿತೇಂದರ್ ಮನ್ ‘ಗೋಗಿ’ ಮೃತಪಟ್ಟಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.”ದರೋಡೆಕೋರ ಜಿತೇಂದರ್ ಮನ್ ‘ಗೋಗಿ’ ಅವರನ್ನು ಪೊಲೀಸರು ವಿಚಾರಣೆಗೆ ದೆಹಲಿಯ ರೋಹಿಣಿ ನ್ಯಾಯಾಲಯಕ್ಕೆ ಕರೆತಂದಾಗ ಅವರ ಮೇಲೆ ಗುಂಡು ಹಾರಿಸಿದರು. ಪ್ರತೀಕಾರವಾಗಿ ಮೂವರು ದಾಳಿಕೋರರು ಹತರಾದರು” ಎಂದು ಡಿಸಿಪಿ ರೋಹಿಣಿ ಹೇಳಿದರು. ನ್ಯಾಯಾಲಯದ ಆವರಣದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮೂವರು ಗಾಯಗೊಂಡಿದ್ದಾರೆ.ನ್ಯಾಯಾಲಯದ ಆವರಣದಲ್ಲಿ ಭದ್ರತಾ ಲೋಪವನ್ನು …
Read More »ಅಪ್ರಾಪ್ತ ಬಾಲಕಿ ಮೇಲೆ 8 ತಿಂಗಳಿಂದ ಕಾಮುಕರು ಅಟ್ಟಹಾಸ 26 ಜರನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಇಬ್ಬರು ಅಪ್ರಾಪ್ತರು
ಮುಂಬೈ: ಅಪ್ರಾಪ್ತ ಬಾಲಕಿ ಮೇಲೆ 8 ತಿಂಗಳಿಂದ ಕಾಮುಕರು ಅಟ್ಟಹಾಸ ಮೆರೆದು ನೀಚ ಕೃತ್ಯವೆಸಗಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ಬೆಳಕಿಗೆ ಬಂದಿದೆ. 8 ತಿಂಗಳಿಂದ 15 ವರ್ಷದ ಬಾಲಕಿ ಮೇಲೆ 33 ಜನರಿಂದ ಅತ್ಯಾಚಾರ ನಡೆಸಲಾಗಿದೆ ಎನ್ನಲಾಗಿದ್ದು, ಬಾಲಕಿ ಕೊಟ್ಟಿರುವ ದೂರಿನ ಆಧಾರದ ಮೇಲೆ 26 ಜರನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಇಬ್ಬರು ಅಪ್ರಾಪ್ತರು ಎಂದು ತಿಳಿದುಬಂದಿದೆ. ಬಾಲಕಿ, ಕಿರಾತಕರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಪರಿಚಯವಾಗಿದ್ದು, ಪರಿಚಯ ಸ್ನೇಹವಾಗಿ ಸಲುಗೆಯಿಂದ ಜಾಲತಾಣಗಳಲ್ಲಿ ಖಾಸಗಿ …
Read More »‘ತಾತನಾದೆ ಎಂದು ಹೇಳಲು ಅತೀವ ಸಂತಸವಾಗ್ತಿದೆ’ -ಹೆಚ್ಡಿಕೆ ಹರ್ಷ
ಬೆಂಗಳೂರು: ಮಾಜಿ ಸಿಎಂ ಹೆಚ್ಡಿ ಕುಮಾರ ಸ್ವಾಮಿ ಅವರ ಕುಟುಂಬಕ್ಕೆ ಹೊಸ ಸದಸ್ಯನ ಆಗಮನವಾಗಿದ್ದು, ನಿಖಿಲ್ ಕುಮಾರಸ್ವಾಮಿ ಅವರ ಪತ್ನಿ ರೇವತಿ ಅವರು ಇಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಕುರಿತು ತಮ್ಮ ಸಂತಸವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿರುವ ಕುಮಾರಸ್ವಾಮಿ ಅವರು, ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಹೆಚ್ಡಿಕೆ, ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ. ನಮ್ಮ …
Read More »ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪಗೆ ‘ಅತ್ಯುತ್ತಮ ಶಾಸಕ’ ಪ್ರಶಸ್ತಿ
ಬೆಂಗಳೂರು: ಲೋಕಸಭೆ ಮಾದರಿಯಲ್ಲಿ ರಾಜ್ಯ ವಿಧಾನ ಮಂಡಲದಲ್ಲೂ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಮೊದಲ ಬಾರಿಗೆ ಪ್ರದಾನ ಮಾಡಲಾಗಿದ್ದು, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಕುರಿತು ಮಾತನಾಡಿದ ಸ್ಪೀಕರ್ ಕಾಗೇರಿ ಅವರು, ಹಲವು ರಾಜ್ಯಗಳಲ್ಲಿ ಉತ್ತಮ ಶಾಸಕ ಪ್ರಶಸ್ತಿ ಕೊಡುವ ಸಂಪ್ರದಾಯವಿದೆ. ಅತ್ಯುತ್ತಮ ಶಾಸಕ ಪ್ರಶಸ್ತಿ ಆಯ್ಕೆಗೆ ಸಮಿತಿಯನ್ನು ರಚನೆ ಮಾಡಲಾಗಿದ್ದು, ಸ್ಪೀಕರ್ ನೇತೃತ್ವದ ಸಮಿತಿಯಲ್ಲಿ ಸಿಎಂ ಬೊಮ್ಮಾಯಿ, ಸಿದ್ದರಾಮಯ್ಯ, ಮಾಧುಸ್ವಾಮಿ, ದೇಶಪಾಂಡೆ …
Read More »ಪೆಟ್ರೋಲ್, ಡೀಸೆಲ್ಗೆ ನೀರು ಬೆರಕೆ! ಬಂಕ್ ಮಾಲೀಕರ ವಿರುದ್ಧ ಆಕ್ರೋಶ
ಬಾಗಲಕೋಟೆ: ಒಂದು ಕಡೆ ಪೆಟ್ರೋಲ್ ಡಿಸೆಲ್ ಬೆಲೆ ಗಗನಕ್ಕೆ ಏರಿದೆ. ಇಂಧನದ ಖರ್ಚು ವೆಚ್ಚದ ಭರಾಟೆಯಲ್ಲಿ ಗ್ರಾಹಕರು ಸಿಲುಕಿದ್ದಾರೆ. ಮತ್ತೊಂದೆಡೆ ಬಾಗಲಕೋಟೆ ತಾಲೂಕಿನ ಭಗವತಿ ಗ್ರಾಮದ ಪೆಟ್ರೋಲ್ ಬಂಕ್ ಒಂದರಲ್ಲಿ ಪೆಟ್ರೋಲ್ ಡೀಸೆಲ್ನಲ್ಲಿ ನೀರು ಬೆರಕೆ ಮಾಡಲಾಗಿದೆ. ಈ ಬಗ್ಗೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೆಟ್ರೋಲ್ ಬಂಕ್ ಎದುರು ಜಮಾಯಿಸಿದ ಬೈಕ್ ಹಾಗೂ ಇತರ ವಾಹನ ಸವಾರರು ಬಂಕ್ ಮಾಲೀಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೆಟ್ರೋಲ್ ಹಾಗೂ ಡಿಸೇಲ್ ನಲ್ಲಿ …
Read More »ನರೇಂದ್ರ ಗಿರಿ ಅಸಹಜ ಸಾವು ಕೇಸ್; FIR ದಾಖಲಿಸಿ ತನಿಖೆ ಆರಂಭಿಸಿದ ಸಿಬಿಐ
ನವದೆಹಲಿ: ದೇಶದಾದ್ಯಂತ ಬಾರಿ ಚರ್ಚೆಗೆ ಗ್ರಾಸವಾಗಿದ್ದ ಅಖಿಲ ಭಾರತೀಯ ಅಖಾಡ ಪರಿಷದ್ ಅಧ್ಯಕ್ಷ ನರೇಂದ್ರಗಿರಿ ಅಸಹಜ ಸಾವಿನ ತನಿಖೆಯನ್ನ ಇಂದಿನಿಂದ ಸಿಬಿಐ ಅಧಿಕೃತವಾಗಿ ವಹಿಸಿಕೊಂಡಿದೆ. ತನಿಖೆ ಹಿನ್ನೆಲೆಯಲ್ಲಿ 6 ಅಧಿಕಾರಿಗಳ ನೇತೃತ್ವದ ತಂಡ ಪ್ರಯಾಗ್ರಾಜ್ ನಗರಕ್ಕೆ ಆಗಮಿಸಿದ್ದು, ಪ್ರಕರಣ ಸಂಬಂಧ ಎಫ್ಐಆರ್ ದಾಖಲಿಸಿಕೊಂಡಿದೆ. ಕಳೆದ ಸೋಮವಾರ ಬಘಮಬರಿ ಗದ್ದಿ ಮಠದಲ್ಲಿರುವ ರೂಮಿನಲ್ಲಿ ನರೇಂದ್ರ ಗಿರಿಯ ಶವ ಪತ್ತೆಯಾಗಿತ್ತು. ನರೇಂದ್ರ ಗಿರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದ್ದು, ಡೆತ್ನೋಟ್ ಕೂಡ ಸಿಕ್ಕಿದೆ. ಇನ್ನು …
Read More »ಸೆ.27ರ ಭಾರತ್ ಬಂದ್‍ಗೆ ಪಾಪ್ಯುಲರ್ ಫ್ರಂಟ್‍ನಿಂದ ಸಂಪೂರ್ಣ ಬೆಂಬಲ
ಬೆಂಗಳೂರು: ಒಕ್ಕೂಟ ಸರ್ಕಾರವು ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿರುವ ಸೆ.27ರ ಭಾರತ್ ಬಂದ್‍ಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಪೂರ್ಣ ಬೆಂಬಲ ಘೋಷಿಸುತ್ತದೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ತಿಳಿಸಿದ್ದಾರೆ. ಒಕ್ಕೂಟ ಸರ್ಕಾರವು ವಿವಾದಿತ ಕೃಷಿ ಕಾನೂನು ಜಾರಿಗೆ ತಂದು ಒಂದು ವರ್ಷವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿವೆ. ರೈತ ವಿರೋಧಿಕಾಯ್ದೆಗಳನ್ನು ಹಿಂಪಡೆಯಬೇಕೆಂದು …
Read More »