ಸೇಡಂ: ತಾಲ್ಲೂಕಿನ ಮಲ್ಲಾಬಾದ್ ಮಾರ್ಗದಿಂದ ಬೊಂದೆಂಪಲ್ಲಿ ಗ್ರಾಮಕ್ಕೆ ಬಸ್ ಒದಗಿಸುವಂತೆ ಮುಧೋಳ ಬಸ್ ನಿಲ್ದಾಣದಲ್ಲಿ ಮಂಗಳವಾರ ಶಾಲಾ ವಿದ್ಯಾರ್ಥಿನಿಯರು ಸುರಿಯುತ್ತಿರುವ ಮಳೆಯಲ್ಲಿಯೇ ಬಸ್ ತಡೆದು ಪ್ರತಿಭಟನೆ ನಡೆಸಿದರು. ಶಾಲಾ-ಕಾಲೇಜು ಆರಂಭವಾಗಿ ಅನೇಕ ದಿನಗಳಾಗುತ್ತಾ ಬಂದಿವೆ. ಈವರೆಗೂ ಬಸ್ ಆರಂಭವಾಗಿಲ್ಲ. ಬಸ್ ಓಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾತನಾಡಿದ್ದೇವೆ. ಆದರೆ ಯಾವುದೇ ರೀತಿಯಲ್ಲಿ ಪ್ರಯೋಜನವಾಗಿಲ್ಲ. ಶಾಲಾ-ಕಾಲೇಜುಗಳು ನಿತ್ಯವು ನಡೆಯುತ್ತಿವೆ. ಖಾಸಗಿ ವಾಹನಗಳಿಗೆ ಹಣ ಕೊಟ್ಟು ಬರಲು ಸಾಧ್ಯವಾಗುತ್ತಿಲ್ಲ. ನಮ್ಮಂತಹ ಮಧ್ಯಮ ವರ್ಗದವರು ಶಾಲೆಗೆ …
Read More »Yearly Archives: 2021
ಮನೆ ನಿರ್ಮಾಣಕ್ಕೆ ಆಗ್ರಹಿಸಿ ಮಳೆಯನ್ನೂ ಲೆಕ್ಕಿಸದೇ ಡಿಸಿ ಕಛೇರಿ ಎದುರು ಮಹಿಳೆಯರ ಪ್ರತಿಭಟನೆ
ವಿಜಯಪುರ : ಮನೆ ನಿರ್ಮಾಣಕ್ಕೆ ಆಗ್ರಹಿಸಿ ಕೊಲ್ಹಾರ ಪಟ್ಟಣದ ಕೊಳಚೆ ಪ್ರದೇಶದ ಮಹಿಳೆಯರು ಮಳೆಯನ್ನೂ ಲೆಕ್ಕಿಸದೇ ಪ್ರತಿಭಟನೆ ಆರಂಭಿಸಿದ್ದಾರೆ. ಬುಧವಾರ ನಗರದಲ್ಲಿನ ಜಿಲ್ಲಾಧಿಕಾರಿ ಕಛೇರಿಗೆ ಆಗಮಿಸಿದ 50-60 ಜನರಿದ್ದ ಕೊಲ್ಹಾರ ಸ್ಲಂ ನಿವಾಸಿ ಮಹಿಳೆಯರು ಭಾರೀ ಮಳೆಯಲ್ಲೂ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಕೋಲ್ಹಾರ ಪಟ್ಟಣದಲ್ಲಿ ಕಳೆದ 25 ವರ್ಷಗಳಿಂದ ಸುಮಾರು 300 ಕುಟುಂಬಗಳು ವಾಸವಾಗಿರುವ ತಮನ್ನು ಸ್ಥಳ ಖಾಲಿ ಮಾಡುವಂತೆ ಪಟ್ಟಣ ಪಂಚಾಯತ ಅಧಿಕಾರಿಗಳು ಸೂಚಿಸಿದ್ದನ್ನು ವಿರೋಧಿಸಿ …
Read More »ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 26,964 ಕೋವಿಡ್ ಪ್ರಕರಣ ಪತ್ತೆ : 34,167 ಮಂದಿ ಗುಣಮುಖ
ನವ ದೆಹಲಿ : ಭಾರತದಲ್ಲಿ ಕಳೆದ ಇಪ್ಪತ್ತನಾಲ್ಕು ಗಂಟೆಗಳಲ್ಲಿ 26,964 ಹೊಸ ಪ್ರಕರಣಗಳು ಪತ್ತೆಯಾಗಿದ್ದು 383 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ (ಸೆಪ್ಟೆಂಬರ್ 22) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ. ಕಳೆದ 24ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ 383 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ಕೋವಿಡ್ ನಿಂದ ಒಟ್ಟು 4,45,768 ಮಂದಿ ಸಾವನ್ನಪ್ಪಿದ್ದಾರೆ. ಭಾರತದಲ್ಲಿ ಇದೆ ಅವಧಿಯಲ್ಲಿ 34,167 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಇದರೊಂದಿಗೆ ಒಟ್ಟು 3,27,83,741 …
Read More »ಹೆದ್ದಾರಿಯಲ್ಲಿ ರಾಶಿ ರಾಶಿ ಕಾಂಡೋಮ್ ಪತ್ತೆಗೆ ‘ಬಿಗ್ ಟ್ವಿಸ್ಟ್’..! ಸುರಂಗದಲ್ಲಿ ಹೈಟೆಕ್ ವೇಶ್ಯಾವಾಟಿಕೆ
ತುಮಕೂರು : ಇಲ್ಲಿನ ರಿಂಗ್ ರಸ್ತೆಯ ಲಾಡ್ಜ್ವೊಂದರ ಮೇಲೆ ಮೈಸೂರಿನ ಒಡನಾಡಿ ಸಂಸ್ಥೆ ಹಾಗೂ ಪೊಲೀಸರು ದಾಳಿ ನಡೆಸಿದ್ದು, ವೇಶ್ಯಾವಾಟಿಕೆ ನಡೆಸಲು ಕಳ್ಳಮಾರ್ಗವಾಗಿದ್ದ ಸುರಂಗವೊಂದನ್ನು ಪತ್ತೆಹಚ್ಚಿದ್ದಾರೆ. ಈ ಸುರಂಗದಲ್ಲಿ ಅಡಗಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಸುರಂಗದೊಳಗೆ ಇಬ್ಬರು ಮಹಿಳೆ ಹಾಗೂ ಓರ್ವ ದಲ್ಲಾಳಿಯಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಅಡಗಿಕೊಂಡಿದ್ದರು ಎಂದು ತಿಳಿದುಬಂದಿದೆ. ಇತ್ತೀಚೆಗೆ ಈ ಲಾಡ್ಜ್ ಸಮೀಪವಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಶಿ ರಾಶಿ ಕಾಂಡೋಮ್‌ಗಳು ಪತ್ತೆ ಆಗಿದ್ದವು. ವಿಷಯ ತಿಳಿದು …
Read More »ಅಕ್ರಮವಾಗಿ ನಿರ್ಮಿಸಿರುವಂತ ಮಸೀದಿಗಳ ತೆರವಿಗೆ ಹೈಕೋರ್ಟ್ ಆದೇಶ
ಬೆಂಗಳೂರು: ಅಕ್ರಮವಾಗಿ ನಿರ್ಮಿಸಿರುವಂತ ಮಸೀದಿಗಳ ತೆರವಿಗೆ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಕುರಿತಂತೆ ಇಂದು ಹೈಕೋರ್ಟ್ ಗೆ ಸಲ್ಲಿಕೆಯಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ನ್ಯಾಯಪೀಠವು, ನಗರದ ಹೆಚ್ ಬಿ ಆರ್ ಲೇಔಟ್ ನಲ್ಲಿ ಮಸೀದಿ ನಿರ್ಮಾಣಕ್ಕೆ ಬಿಬಿಎಂಪಿಯಿಂದ ಅನುಮತಿ ಪಡೆಯದೇ ಇದ್ದರ ಕುರಿತಂತೆ ವಿಚಾರಣೆ ನಡೆಸಿತು. ಈ ಸಂದರ್ಭದಲ್ಲಿ ಬಿಬಿಎಂಪಿಯಿಂದ ನಿರ್ಮಾಣಕ್ಕೆ ಅನುಮತಿ, ನಕ್ಷೆ ಕೂಡ ಪಡೆಯದೇ ನಿರ್ಮಿಸುತ್ತಿದ್ದಂತ ನಿರ್ಮಾಣ ಹಂತದ ಮಸೀದಿ ತೆರವಿಗೆ ಕೋರ್ಟ್ ಬಿಬಿಎಂಪಿಗೆ ನಿರ್ದೇಶಿಸಿದೆ. ಅಂದಹಾಗೇ …
Read More »ಕನ್ನಡ ಸಿನಿಮಾ ಮಾಡಲು ರಶ್ಮಿಕಾಗೆ ಟೈಮ್ ಇಲ್ವಂತೆ!
ಕನ್ನಡ ಚಿತ್ರರಂಗದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿಯಾದ ನಟಿ ರಶ್ಮಿಕಾ ಮಂದಣ್ಣ ಈಗ ಕನ್ನಡಕ್ಕಿಂತ ಪರಭಾಷೆಯಲ್ಲೇ ಹೆಚ್ಚು ಬಿಝಿಯಾಗಿರುವ ನಟಿ. ಸದ್ಯ ತೆಲುಗಿನಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ನಟಿಸುತ್ತಿರುವ ರಶ್ಮಿಕಾ ಮಂದಣ್ಣ, ಇದರ ನಡುವೆಯೇ ಬಾಲಿವುಡ್‌ಗೂ ಅಡಿಯಿಟ್ಟಿದ್ದಾರೆ. ಇನ್ನು ತೆಲುಗು, ತಮಿಳು, ಹಿಂದಿ ಹೀಗೆ ಬೇರೆ ಬೇರೆ ಭಾಷೆಗಳಲ್ಲಿ ರಶ್ಮಿಕಾ ಅಭಿನಯಿಸುತ್ತಿರುವ ಸಿನಿಮಾಗಳು ಒಂದರ ಹಿಂದೊಂದು ಅನೌನ್ಸ್ ಆಗುತ್ತಿದ್ದರೂ, ಕನ್ನಡದಲ್ಲಿ ಮಾತ್ರ ರಶ್ಮಿಕಾ ಅಭಿನಯಿಸಲಿರುವ ಸಿನಿಮಾಗಳ ಬಗ್ಗೆ ಯಾವುದೇ …
Read More »ಭವಾನಿಪುರ ಉಪ ಚುನಾವಣೆ : ದೀದಿ ಗೆಲ್ಲೋದು ಖಚಿತ ಎಂದ ಕುಮಾರಸ್ವಾಮಿ
ಬೆಂಗಳೂರು : ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಸಮೀಪಿಸಿದ್ದು, ಇದೇ ಸೆಪ್ಟಂಬರ್ 30ರಂದು ಚುನುವಾಣೆ ನಿಗದಿಯಾಗಿದೆ. ಮತದಾನ ಅಕ್ಟೋಬರ್ 3ರರವರೆಗೆ ನಡೆಯಲಿದೆ. ಮಮತಾ ಬ್ಯಾನರ್ಜಿ ಸ್ಪರ್ಧೆ ನಡೆಸಿದ್ದು, ತಾವು ಮುಖ್ಯಮಂತ್ರಿಯಾಗಿ ಉಳಿಯಲು ಈ ಚುನಾವಣೆಯನ್ನು ಗೆಲ್ಲಲೇ ಬೇಕಾದ ಅನಿವಾರ್ಯತೆ ಎದುರಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಮಾಜಿ ಸಿಎಂ ಕುಮಾರಸ್ವಾಮಿ, ಇಡೀ ಭಾರತದ ಗಮನ ಸೆಳೆದಿರುವ ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪ …
Read More »ದೀಪಿಕಾ ಪಡುಕೋಣೆ vs ಪಿವಿ ಸಿಂಧು : ಬ್ಯಾಡ್ಮಿಂಟನ್ ಆಡಿದ ತಾರೆಯರು
ಪಿ ವಿ ಸಿಂಧು ಎದುರು ದೀಪಿಕಾ ಪಡುಕೋಣೆ ಬ್ಯಾಡ್ಮಿಂಟನ್ ಆಡುವ ಮೂಲಕ ಗಮನ ಸೆಳೆದಿದ್ದಾರೆ. ಪಿವಿ ಸಿಂಧು ಎರಡು ಬಾರಿ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿರುವ ಆಟಗಾರ್ತಿ. ಇವರ ಜೊತೆ ನಟಿ ದೀಪಿಕಾ ಬ್ಯಾಡ್ಮಿಂಟನ್ ಆಡಿರುವುದು ವಿಶೇಷವಾಗಿದೆ. ಇನ್ನು ಸಿಂಧು ಜೊತೆ ಆಟವಾಡಿರುವ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ದೀಪಿಕಾ ಪಡುಕೋಣೆ ಶೇರ್ ಮಾಡಿಕೊಂಡಿದ್ದಾರೆ. ಇದು ನನ್ನ ನಿತ್ಯ ಜೀವನ.. ಕ್ಯಾಲೊರಿಯನ್ನು ಬರ್ನ್ ಮಾಡಲು ಸಿಂಧು ಜೊತೆ ಬ್ಯಾಡ್ಮಿಂಟನ್ ಆಟವಾಡಿದೆ …
Read More »ಕೊಪ್ಪಳ: ದಲಿತ ಬಾಲಕ ದೇವಸ್ಥಾನ ಪ್ರವೇಶ ಮಾಡಿದ ಎಂದು ದಂಡ ಹಾಕಿದ್ದ ಐವರ ಬಂಧನ
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಾಲಚಂದ್ರ ದೂರು ಆಧರಿಸಿ ಕನಕಪ್ಪ ಪೂಜಾರಿ, ಹನುಮಗೌಡ, ಗವಿ ಸಿದ್ದಪ್ಪ ಮ್ಯಾಗೇರಿ, ವಿರುಪಾಕ್ಷಗೌಡ ಮ್ಯಾಗೇರಿ, ಹಾಗೂ ಶರಣಗೌಡ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ಕೊಪ್ಪಳ: ಮಿಯಾಪೂರದಲ್ಲಿ ದಲಿತ ಬಾಲಕ ದೇವಸ್ಥಾನ ಪ್ರವೇಶಿದ್ದಕ್ಕೆ ದಂಡ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ಐವರನ್ನು ಕುಷ್ಟಗಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಐವರ ವಿಚಾರಣೆ ನಡೆಯುತ್ತಿದೆ. ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಾಲಚಂದ್ರ ದೂರು …
Read More »ಗ್ರಾಪಂ ಕಚೇರಿಯಲ್ಲಿ ಪ್ರಧಾನಿ ಮೋದಿ ಫೋಟೋ ಹಾಕಿದ್ದಕ್ಕೆ ಭುಗಿಲೆದ್ದ ವಿವಾದ: ನೊರನಕ್ಕಿ ಗ್ರಾಮದಲ್ಲಿ ಉದ್ವಿಗ್ನ
ಹಾಸನ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಭಾವಚಿತ್ರ ಅಳವಡಿಕೆಗೆ ಸಂಬಂಧಿಸಿದಂತೆ ಚನ್ನರಾಯಪಟ್ಟಣ ತಾಲೂಕು ನೊರನಕ್ಕಿ ಗ್ರಾಮ ಪಂಚಾಯಿತಿಯಲ್ಲಿ ವಿವಾದ ಏರ್ಪಟ್ಟಿದ್ದು, ದೂರು- ಪ್ರತಿ ದೂರು ದಾಖಲಾಗಿದೆ. ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ. ಗ್ರಾಪಂ ಕಚೇರಿಯಲ್ಲಿ ಸೆ.17ರಂದು ನರೇಂದ್ರ ಮೋದಿ ಅವರ ಜನ್ಮ ದಿನಾಚರಣೆ ನಿಮಿತ್ತ ಫೋಟೋ ಹಾಕಲಾಗಿದೆ. ಇದಕ್ಕೆ ಜೆಡಿಎಸ್ ಬೆಂಬಲಿತ ಸದಸ್ಯರು ಹಾಗೂ ಅಧಿಕಾರಿ ವರ್ಗ ವಿರೋಧ ವ್ಯಕ್ತಪಡಿಸಿದೆ. ಮತ್ತೊಂದು ಕಡೆ ಬಿಜೆಪಿ …
Read More »