ಶಿವಮೊಗ್ಗ : ಧಾರ್ಮಿಕ ಕ್ಷೇತ್ರದಲ್ಲಿ ಪ್ರಾಣಿ ಬಲಿ ನಿಷೇಧಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದರೂ ಅದನ್ನು ಉಲ್ಲಂಘಿಸಿ ಧಾರ್ಮಿಕ ಕ್ಷೇತ್ರದಲ್ಲಿ ಪ್ರಾಣಿ ಬಲಿ ನೀಡಲು ಬಂದ ಭಕ್ತರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆಯ ಕ್ಷೇತ್ರದಲ್ಲಿ ನಡೆದಿದೆ. ಹಣಗೆರೆಕಟ್ಟೆಯಲ್ಲಿರುವ ಶ್ರೀ ಚೌಡೇಶ್ವರಿ ಭೂತರಾಯ ಹಾಗೂ ಸೈಯದ್ ಸಾದತ್ ದರ್ಗಾ ಇರುವ ಧಾರ್ಮಿಕ ಕ್ಷೇತ್ರದಲ್ಲಿ ಆದೇಶ ಉಲ್ಲಂಘನೆಯಾಗಿದ್ದು ಈ ಹಿಂದೆ ಧಾರ್ಮಿಕ ಸಹಿಷ್ಣುತೆಯ ಕ್ಷೇತ್ರದಲ್ಲಿ ಕುರಿ …
Read More »Yearly Archives: 2021
ವಿದೇಶಿ ಏಜೆನ್ಸಿಗಳಿಗೆ ರಕ್ಷಣಾ ಮಾಹಿತಿ ನೀಡುತ್ತಿದ್ದ ಬೆಂಗಳೂರಿನ ಬಟ್ಟೆ ವ್ಯಾಪಾರಿಯ ಬಂಧನ
ಬೆಂಗಳೂರು: ನಗರದ ಸಿಸಿಬಿ ಪೊಲೀಸರು ಮತ್ತು ಮಿಲಿಟರಿ ಗುಪ್ತಚರ ವಿಭಾಗದ ಅಧಿಕಾರಿಗಳ ಜಂಟಿ ಕಾರ್ಯಾಚಾರಣೆಯಲ್ಲಿ ವಿದೇಶಿ ಏಜೆನ್ಸಿಗಳಿಗೆ ಭಾರತದ ರಕ್ಷಣಾ ಮಾಹಿತಿ ನೀಡುತ್ತಿದ್ದ ಯುವಕನ್ನು ಬಂಧಿಸಲಾಗಿದೆ. ರಾಜಸ್ಥಾನ ಮೂಲದ ಈತ ಬೆಂಗಳೂರಿನಲ್ಲಿ ಬಟ್ಟೆ ವ್ಯಾಪಾರಿಯಾಗಿದ್ದ ಎನ್ನಲಾಗಿದೆ. ಆರೋಪಿಯು ರಾಜಸ್ಥಾನದ ಬೆರ್ಮರ್ ಮೂಲದವನು. ಬೆಂಗಳೂರಿನ ಕಾಟನ್ ಪೇಟೆಯ ಜಾಲಿ ಮೊಹಲ್ಲಾದಲ್ಲಿ ಬಟ್ಟೆ ವ್ಯಾಪಾರಿಯಾಗಿದ್ದ. ಸೇನೆಯ ಕಮಾಂಡೋ ಸಮವಸ್ತ್ರ ಧರಿಸಿ ಬಾರ್ಮರ್ ನ ಮಿಲಿಟರಿ ಸ್ಟೇಶನ್ ಮಾಹಿತಿ, ಸೇನಾ ವಾಹನಗಳ ಓಡಾಟದ ಮಾಹಿತಿಯನ್ನು …
Read More »ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿರುವ 2021ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಯ ಫಲಿತಾಂಶ ಪ್ರಕಟ
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿರುವ 2021ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಯ ಫಲಿತಾಂಶ ಪ್ರಕಟವಾಗಿದೆ. ಆಗಸ್ಟ್ 28 ಮತ್ತು 29ರಂದು ಸಿಇಟಿ ಪರೀಕ್ಷೆಗಳು ನಡೆದಿತ್ತು. ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ಮಾಹಿತಿ ನೀಡಿದರು. ಮೈಸೂರಿನ ಪ್ರಮತಿ ಹಿಲ್ ವೀವ್ ಅಕಾಡೆಮಿಯ ಮೇಘನ್ ಎಚ್.ಕೆ. ಅವರು ಎಲ್ಲಾ ವಿಭಾಗದಲ್ಲೂ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಎಂಜಿನಿಯರಿಂಗ್, ಬಿ-ಫಾರ್ಮಾ, ಕೃಷಿ …
Read More »ದ್ವಿತೀಯ ಪಿಯು ಫಲಿತಾಂಶ: ಇಲಾಖೆ ಫಲಿತಾಂಶ ತಿರಸ್ಕರಿಸಿದ 36 ವಿದ್ಯಾರ್ಥಿಗಳು ಅನುತ್ತೀರ್ಣ!
ಬೆಂಗಳೂರು: ಕೋವಿಡ್ ಕಾರಣದಿಂದ ಈ ಬಾರಿ ದ್ವಿತೀಯ ಪಿಯುಸಿಯಲ್ಲಿ ಎಲ್ಲಾ ವಿದ್ಯಾರ್ಥಿಗಳನ್ನು ಹಿಂದಿನ ತರಗತಿಗಳ ಫಲಿತಾಂಶದಂತೆ ಉತ್ತೀರ್ಣ ಮಾಡಲಾಗಿತ್ತು. ಆದರೆ ಪಿಯು ಇಲಾಖೆ ನೀಡಿದ್ದ ಫಲಿತಾಂಶವನ್ನು ತಿರಸ್ಕರಿಸಿ, ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳ ಫಲಿತಾಂಶ ಇಂದು ಪ್ರಕಟವಾಗಿದೆ. ಪಿಯು ಇಲಾಖೆ ನೀಡಿದ್ದ ಫಲಿತಾಂಶವನ್ನು ತಿರಸ್ಕರಿಸಿ, 592 ಹೊಸ ಅಭ್ಯರ್ಥಿಗಳು (ಫ್ರೇಶರ್) ಪರೀಕ್ಷೆ ಬರೆದಿದ್ದರು. ಅದರಲ್ಲಿ 556 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, 36 ಮಂದಿ ಅನುತ್ತೀರ್ಣರಾಗಿದ್ದಾರೆ. ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಈ ಹಿಂದಿನ ಫಲಿತಾಂಶ ಪುನಃ …
Read More »ಕೇರವಾಡದಲ್ಲಿ ಆತ್ಮಹತ್ಯೆಗೆ ಶರಣಾದ 4 ಮಕ್ಕಳ ತಾಯಿ
ದಾಂಡೇಲಿ : ನಗರದ ಸಮೀಪದ ಆಲೂರು ಗ್ರಾಮ ಪಂಚಾಯ್ತು ವ್ಯಾಪ್ತಿಯಲ್ಲಿ ಬರುವ ಕೇರವಾಡದ ಅಂಗನವಾಡಿ ಕೇಂದ್ರದ ಹತ್ತಿರದಲ್ಲಿರುವ ಗುಡಿಸಲು ಮನೆಯೊಂದರಲ್ಲಿ ನಾಲ್ಕು ಮಕ್ಕಳ ತಾಯಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಸೋಮವಾರ ಬೆಳ್ಳಂಬೆಳಗ್ಗೆ ನಡೆದಿದೆ. ಕೇರವಾಡದ ಅಂಗನವಾಡಿ ಕೇಂದ್ರದ ಹತ್ತಿರದ ನಿವಾಸಿಯಾಗಿರುವ 35 ವರ್ಷ ವಯಸ್ಸಿನ ಲಲಿತಾ ಯಾನೆ ಅಶ್ವಿನಿ ಸಂಜು ಗಾವಡೆ ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದಾಳೆ. ಈಕೆ ಕುಡಿತದ ಚಟಕ್ಕೆ ಅಂಟಿಕೊಂಡಿದ್ದಳೆಂದು ಹೇಳಲಾಗುತ್ತಿದೆ. ಕುಡಿದ ಅಮಲಿನಲ್ಲೆ ನೇಣಿಗೆ ಶರಣಾಗಿದ್ದಾಳೆಂದು ಮೇಲ್ನೋಟಕ್ಕೆ …
Read More »ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಸೈಕಲ್ ಜಾಥಾ
ಸರ್ಕಾರದ ತೈಲ ಬೆಲೆ ಏರಿಕೆ ಖಂಡಿಸಿ, ಇಂದು ಕಾಂಗ್ರೆಸ್ ನಿಂದ ಬೃಹತ್ ಸೈಕಲ್ ಜಾಥಾ ನಡೆಸಲಾಯಿತು. ಮಾಜಿ ಸಿಎಂ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿಅನೇಕ ಕಾಂಗ್ರೆಸ್ ಮುಖಂಡರು ಸೈಕಲ್ ಏರಿ, ಕೇಂದ್ರ ಸರ್ಕಾರದ ತೈಲ ಬೆಲೆ ಏರಿಕೆ ವಿರುದ್ಧ ಪ್ರತಿಭಟಿಸಿದರು. ಇನ್ನು ಕೇಂದ್ರ ಸರಕಾರದ ನಿರಂತರ ಇಂಧನ ಬೆಲೆ ಹೆಚ್ಚಳ ಹಾಗೂ ತತ್ಪರಿಣಾಮಾಗಿ ದಿನಬಳಕೆ ವಸ್ತುಗಳ ದರ ಏರಿಕೆ ಖಂಡಿಸಿ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ …
Read More »ಬೆಂಗಳೂರಿನಲ್ಲಿ ಛತ್ತೀಸ್‍ಗಢದ ಬಿಜೆಪಿ ಮಾಜಿ MLA ನಿಧನ
ರಾಯ್‍ಪುರ್: ಛತ್ತೀಸ್‍ಗಢದ ಬಿಜೆಪಿ ಮಾಜಿ ಶಾಸಕ ಯುಧ್ವೀರ್ ಸಿಂಗ್ ಜುದೇವ್ ಸೋಮವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಯುಧ್ವೀರ್ ಸಿಂಗ್ ಜುದೇವ್(39) ಲಿವರ್ ಸಮಸ್ಯೆಯಿಂದ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಯುಧ್ವೀರ್ ಸಿಂಗ್ ಜುದೇವ್ ಛತ್ತೀಸ್‍ಗಢದ ಜಶ್‍ಪುರದ ಹಿಂದಿನ ರಾಜಮನೆಯನಕ್ಕೆ ಸೇರಿದವರಾಗಿದ್ದು, 2013ರಲ್ಲಿ ನಿಧನರಾದ ಬಿಜೆಪಿಯ ಪ್ರಭಾವಿ ನಾಯಕ ದಿಲೀಪ್ ಸಿಂಗ್ ಜುದೇವ್ ಅವರ ಕಿರಿಯ ಪುತ್ರರಾಗಿದ್ದಾರೆ. ಯುಧ್ವೀರ್ ಸಿಂಗ್‍ರವರು ಬಹಳ ದಿನಗಳಿಂದ ಲಿವರ್ ಸಂಬಂಧಿತ …
Read More »ಸಿದ್ದರಾಮಯ್ಯ ಅವರನ್ನು ನಾನೇ ಬಿಜೆಪಿಗೆ ಕರೆ ತರುತ್ತೇನೆ: ರಾಜೂ ಗೌಡ
ಬೆಂಗಳೂರು: ಸಿದ್ದರಾಮಯ್ಯ ಅವರನ್ನು ನಾನೇ ಬಿಜೆಪಿಗೆ ಕರೆ ತರುತ್ತೇನೆ ಎಂದು ಶಾಸಕ ರಾಜೂ ಗೌಡ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿನ್ನ ಬಿಎಸ್‍ವೈ ಅವರು ಕಾರ್ಯಕಾರಿಣಿ ಸಭೆಯಲ್ಲಿ ವಿರೋಧ ಪಕ್ಷದವರನ್ನು ಯಾರು ನಿರ್ಲಕ್ಷಿಸ ಬಾರದು. ಒಳ್ಳೆಯ ರೀತಿ ಕೆಲಸವನ್ನು ಮಾಡಬೇಕು. ಮೋದಿ, ಮೋದಿ ಎನ್ನಲು ಹೋಗಬೇಡಿ ನಿಮ್ಮ ಕೆಲಸವನ್ನು ಮಾಡಿ ಎಂದರು ಹೇಳಿದ್ದಾರೆ ಎಂದಿದ್ದಾರೆ. ನಾವೇಲ್ಲರು ಬಿಜೆಪಿಯಲ್ಲಿಯೇ ಇರುತ್ತೇವೆ. ಮತ್ತೆ ಬಿಜೆಪಿಯಿಂದಲೇ ಗೆದ್ದು ಮಂತ್ರಿಯಾಗುತ್ತೇವೆ. ಕಾಂಗ್ರೆಸ್‍ನಿಂದ ಕೆಲವು ಶಾಸಕರಿಗೆ …
Read More »ಕಾಫಿ, ಟೀ ಕುಡಿಯೋಕೆ ಇಲ್ಲಿಗೆ ಬರಬೇಕಾ: ಮಾತನಾಡಲು ಅವಕಾಶ ಕೋರಿದ ಶಿವಲಿಂಗೇಗೌಡ
ಬೆಂಗಳೂರು: ‘ನೀವು ಕೂತ್ಕೊ ಅಂದ್ರೆ ಕೈಮುಗಿದು ಕೂತು ಬಿಡ್ತೀನಿ. ನಮಗೂ ಮಾತಾಡೋಕೆ ಅವಕಾಶ ಕೊಡಿ. ನಾವೇನು ಕಾಫಿ-ಟೀ ಕುಡಿಯಲು ಇಲ್ಲಿಗೆ ಬರಬೇಕಾ’ ಎಂದು ಜೆಡಿಎಸ್ ಶಾಸಕ ಶಿವಲಿಂಗೇಗೌಡ ಸ್ಪೀಕರ್ ಸ್ಥಾನದಲ್ಲಿ ಕುಮಾರ್ ಬಂಗಾರಪ್ಪ ಅವರನ್ನು ಖಾರವಾಗಿ ಪ್ರಶ್ನಿಸಿದರು. ವಿಧಾನಸಭೆಯಲ್ಲಿ ಬೆಲೆ ಏರಿಕೆ ಬಗ್ಗೆ ನಡೆಯುತ್ತಿದದ ಚರ್ಚೆಗೆ ಉತ್ತರ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎದ್ದು ನಿಂತರು. ಈ ವೇಳೆ ಮಾತನಾಡಲು ನಿಂತ ಶಿವಲಿಂಗೇಗೌಡರಿಗೆ ಕುಳಿತುಕೊಳ್ಳುವಂತೆ ಕುಮಾರ್ ಬಂಗಾರಪ್ಪ ಸೂಚಿಸಿದರು. ಸ್ಪೀಕರ್ …
Read More »ಕಾಂಗ್ರೆಸ್‌ನ ಚುನಾವಣಾ ತಂತ್ರದ ಬಗ್ಗೆ ದಲಿತರು ಎಚ್ಚರದಿಂದಿರಬೇಕು: ಬಿಎಸ್ಪಿ ನಾಯಕಿ ಮಾಯಾವತಿ
ಲಕ್ನೊ: ಚರಣ್ ಜಿತ್ ಛನ್ನಿ(Charanjit Singh Channi) ಪಂಜಾಬಿನ ಮೊದಲ ದಲಿತ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಬಿಎಸ್ಪಿ ಅಧ್ಯಕ್ಷೆ ಮಾಯಾವತಿ (Mayawati) ಸೋಮವಾರ ಕಾಂಗ್ರೆಸ್ ನ “ಚುನಾವಣಾ ತಂತ್ರ” ದ ಬಗ್ಗೆ ದಲಿತರು ಎಚ್ಚರದಿಂದರಬೇಕು ಎಂದು ಹೇಳಿದ್ದಾರೆ. ಪಂಜಾಬ್ ವಿಧಾನಸಭಾ ಚುನಾವಣೆಗೆ ಎಸ್‌ಎಡಿ-ಬಿಜೆಪಿ ಮೈತ್ರಿಯಿಂದ ಕಾಂಗ್ರೆಸ್ ಗಲಿಬಿಲಿಗೊಂಡಿದೆ ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಹೇಳಿದ್ದಾರೆ. ಕಾಂಗ್ರೆಸ್‌ಗೆ ಇನ್ನೂ ದಲಿತರ ಮೇಲೆ ನಂಬಿಕೆ ಇಲ್ಲ. ದಲಿತರು ಕಾಂಗ್ರೆಸ್‌ನ …
Read More »