ಬೆಂಗಳೂರು: ನಗರದಲ್ಲಿ ಇತ್ತೀಚೆಗೆ ಸಾಲು ಸಾಲು ಅಪಘಾತಗಳು ಸಂಭವಿಸಿದ್ದು, ಸಾವು-ನೋವುಗಳಾಗಿವೆ. ಇದರಿಂದ ಎಚ್ಚೆತ್ತ ಟ್ರಾಫಿಕ್ ಪೊಲೀಸರು ಟಫ್ ರೂಲ್ಸ್‌ಗೆ ಮುಂದಾಗಿದ್ದು, ಸ್ಟ್ರಿಕ್ಟ್ ಆಗಿ ತಪಾಸಣೆ ನಡೆಸುತ್ತಿದ್ದಾರೆ. ಒಂದೂವರೆ ವರ್ಷದ ಬಳಿಕ ಮತ್ತೆ ಪೊಲೀಸರು, ಕುಡಿದು ವಾಹನ ಚಲಾಯಿಸುವವರ ಪರೀಕ್ಷೆ ಆರಂಭಿಸಿದ್ದಾರೆ. ವಾರದಲ್ಲಿ ಮೂರು ದಿನ ಡ್ರಂಕ್ ಅಂಡ್ ಡ್ರೈವ್ ಚೆಕ್ ಮಾಡುವಂತೆ ಆದೇಶಿಸಲಾಗಿದೆ. ವೀಕೆಂಡ್‌ನಲ್ಲಿ ಕುಡಿದು ವಾಹನ ಚಾಲನೆ ಮಾಡುವವರಿಗೆ ಖಡಕ್ ಎಚ್ಚರಿಕೆ ನೀಡಲಾಗಿದೆ. ಕುಡಿದು ಕಾರಲ್ಲಿ ಮೋಜು-ಮಸ್ತಿ ಮಾಡಿಕೊಂಡು …
Read More »Yearly Archives: 2021
ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ, ಸಂದರ್ಭ ಬಂದರೆ ದೇವೇಗೌಡರನ್ನ ಕೇಳೋದ್ರಲ್ಲಿ ತಪ್ಪಿಲ್ಲ: ರಾಮುಲು
ಚಿತ್ರದುರ್ಗ: 2023 ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಬಾರದು ಎಂಬ ಸ್ಪಷ್ಟತೆ ಇದೆ. ಹಾಗಾಗಿ ಒಂದೊಮ್ಮೆ ಅಂತಹ ಸಂದರ್ಭ ಬಂದರೆ ದೇವೇಗೌಡರನ್ನು ಕೇಳುವುದರಲ್ಲಿ ತಪ್ಪಿಲ್ಲ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. 2023ಕ್ಕೆ ಎರಡೂ ಪಕ್ಷಗಳು ಜೆಡಿಎಸ್ ಮನೆ ಬಾಗಿಲಿಗೆ ಬರಲಿವೆ ಎಂಬ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಹೇಳಿಕೆಗೆ ಚಿತ್ರದುರ್ಗದಲ್ಲಿ ಪ್ರತಿಕ್ರಿಯಿಸಿದ ಶ್ರೀರಾಮುಲು, ಅಂತಹ ಸಂದರ್ಭ ಬಂದರೆ ದೇವೇಗೌಡರನ್ನು ಕೇಳಿದರೆ ತಪ್ಪಿಲ್ಲ. ಈ ಬಗ್ಗೆ ಮುಂದಿನ ದಿನಗಳಲ್ಲಿ …
Read More »ಯಡಿಯೂರಪ್ಪ ರಾಜ್ಯ ಪ್ರವಾಸಕ್ಕೆ ಗ್ರೀನ್ ಸಿಗ್ನಲ್ ನೀಡುವ ಪ್ರಶ್ನೆಯೇ ಇಲ್ಲ; ಅರುಣ್ ಸಿಂಗ್
ದಾವಣಗೆರೆ: ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಪಕ್ಷದ ವತಿಯಿಂದ ರಾಜ್ಯ ಪ್ರವಾಸ ಆರಂಭಿಸಲು ಗ್ರೀನ್ ಸಿಗ್ನಲ್ ನೀಡುವ ಪ್ರಶ್ನೆಯೇ ಇಲ್ಲ. ಯಡಿಯೂರಪ್ಪ ಬಿಜೆಪಿಯ ಹಿರಿಯ ನಾಯಕರು. ಅವರು ಪ್ರವಾಸ ಮಾಡಬಹುದು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ನಾಯಕ ಅರುಣ್ ಸಿಂಗ್ ಅವರು ದಾವಣಗೆರೆಯಲ್ಲಿ ನಡೆಯುತ್ತಿರುವ ಪಕ್ಷದ ಕಾರ್ಯಕಾರಿಯಲ್ಲಿ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಈಗಾಗಲೇ ಬಗ್ಗೆ ಹಲವಾರ ಸಲ ಹೇಳಿರುವೆ. ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ನೇತ್ರತ್ವದಲ್ಲಿ ಒಳ್ಳೆಯ ಕೆಲ್ಸ …
Read More »ಗಾಂಧೀಜಿಯನ್ನೇ ಬಿಟ್ಟಿಲ್ಲ, ಇನ್ನು ನೀವ್ಯಾವ ಲೆಕ್ಕ? ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ವಿವಾದಾತ್ಮಕ ಹೇಳಿಕೆ
ಮಂಗಳೂರು: ಹಿಂದೂಗಳ ಮೇಲೆ ನಡೆದ ದಾಳಿ ಖಂಡಿಸಿ ಗಾಂಧೀಜಿಯನ್ನೇ ಹತ್ಯೆ ಮಾಡಿದ್ದೇವೆ. ಇನ್ನು ನೀವು ಯಾವ ಲೆಕ್ಕ? ಎಂದು ಮಂಗಳೂರಿನಲ್ಲಿ ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅಲ್ಲದೇ ದೇವಸ್ಥಾನ ಕೆಡವಿದ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿ ಎಚ್ಚರಿಕೆ ನೀಡಿದ್ದಾರೆ. ನಾವು ಗಾಂಧೀಜಿಯನ್ನೇ ಬಿಟ್ಟಿಲ್ಲ ಸ್ವಾಮಿ, ಹಿಂದೂಗಳ ಮೇಲೆ ನಡೆದ ದಾಳಿ ಖಂಡಿಸಿ ಗಾಂಧೀಜಿಯನ್ನೇ ಹತ್ಯೆ ಮಾಡಿದ್ದೇವೆ. ಹೀಗಿರುವಾಗ ನಿಮ್ಮ ವಿಚಾರದಲ್ಲಿ ಅಲೋಚನೆ ಮಾಡಕ್ಕೆ ಅಗಲ್ಲ ಅಂತೀರಾ? …
Read More »ನಿಯಮ ಉಲ್ಲಂಘಿಸಿ ಪಂಚಾಯಿತಿ ಕಟ್ಟಡ ನಿರ್ಮಾಣ ಕಾಮಗಾರಿ
ಹೊಸಪೇಟೆ (ವಿಜಯನಗರ): ಸರ್ಕಾರದ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ತಾಲ್ಲೂಕಿನ ಬೈಲುವದ್ದಿಗೇರಿ ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಿಸಲಾಗುತ್ತಿದೆ ಎಂದು ಪಂಚಾಯಿತಿ ಸದಸ್ಯರು, ಗ್ರಾಮದ ಮುಖಂಡರು ಆರೋಪಿಸಿದರು. ಗ್ರಾಮ ಪಂಚಾಯಿತಿ ಸದಸ್ಯರಾದ ಪುಷ್ಪಾವತಿ ದೇವರಮನೆ, ವಿ, ಶಾಂತಾ, ಭುವನೇಶ್ವರಿ, ಶಿವರಾಜ ವೆಂಕೋಬಪ್ಪ, ಮುಖಂಡರಾದ ಕೋರಿ ಫಕೀರಪ್ಪ, ಮೂಕಪ್ಪ, ಎನ್. ನಾರಾಯಣಪ್ಪ ಶನಿವಾರ ನಗರದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಆರೋಪ ಮಾಡಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯಾವುದೇ ಹೊಸ ಕಾಮಗಾರಿ ಕೈಗೆತ್ತಿಗೊಳ್ಳಬೇಕಾದರೆ ತಾಲ್ಲೂಕು ಪಂಚಾಯಿತಿ …
Read More »ಬೈಲಹೊಂಗಲ : ಗ್ರಾಮ ಪಂಚಾಯತ್ ಸದಸ್ಯನಿಗೆ ಕಪಾಳ ಮೋಕ್ಷ ಮಾಡಿದ ಪಿಡಿಓ
ಬೈಲಹೊಂಗಲ : ಗ್ರಾ.ಪಂ ಸದಸ್ಯನೋರ್ವನಿಗೆ ಪಿಡಿಓ ಓರ್ವನು ಕ್ಷುಲ್ಲಕ ಕಾರಣಕ್ಕೆ ಕಪಾಳ ಮೋಕ್ಷ ಮಾಡಿ ಘಟನೆ ತಾಲೂಕಿನ ನಾಗನೂರ ಗ್ರಾಮ ಪಂಚಾಯ್ತಿಯಲ್ಲಿ ನಡೆದಿದೆ. ನಾಗನೂರ ಗ್ರಾಮ ಪಂಚಾಯತಿ ಸದಸ್ಯ ಬಸವರಾಜ ಉಣಕಲ್ಲ ಎಂಬವರಿಗೆ ನಾಗನೂರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅವಿನಾಶ ಅಂಗರಗಟ್ಟಿ ಅವರು ಕಪಾಳಮೋಕ್ಷ ಮಾಡಿದ್ದಾರೆ. ಘಟನೆ ವಿವರ : ನಾಗನೂರು ಗ್ರಾಮದ ಓರ್ವ ವ್ಯಕ್ತಿಯ ಆಸ್ತಿಗೆ ಸಂಬಂಧಪಟ್ಟ ದಾಖಲೆಗಳ ಬಗ್ಗೆ ಪಿಡಿಓ ಅವರನ್ನು ಸದಸ್ಯ ಬಸವರಾಜ ಉಣಕಲ್ಲ …
Read More »ಸಾಮಾಜಿಕ ಜಾಲತಾಣಗಳಲ್ಲಿ ಯುವತಿಯರ ಹೆಸರಲ್ಲಿ ನಕಲಿ ಖಾತೆ ತೆರೆದು ವಂಚನೆ: ಖದೀಮರ ಬಂಧನ
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಯುವತಿಯರ ಹೆಸರಲ್ಲಿ ನಕಲಿ ಖಾತೆ ತೆರೆದು, ವಂಚಿಸುತ್ತಿದ್ದ ಮೂವರನ್ನು ಸಿಐಡಿ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಹರಿಯಾಣದ ಮುಜಾಹಿದ್, ಇಕ್ಬಾಲ್ ಮತ್ತು ಆಸಿಫ್ ಬಂಧಿತರಾಗಿದ್ದು, ಉಳಿದವರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಜಾಲತಾಣಗಳಲ್ಲಿ ಪುರುಷರನ್ನು ಪರಿಚಯ ಮಾಡಿಕೊಂಡು ಅವರ ಜತೆ ಸಲುಗೆಯಿಂದ ಮಾತಾಡಿ, ಅವರ ಬೆತ್ತಲೆ ವಿಡಿಯೋವನ್ನು ಸೆರೆಹಿಡಿದು ಈ ಗ್ಯಾಂಗ್ ಬ್ಲ್ಯಾಕ್ ಮೇಲ್ ಮಾಡುತ್ತಿತ್ತು ಎಂದು ತಿಳಿದುಬಂದಿದೆ. ಸೈಬರ್ ಖದೀಮರು ಸಾಮಾಜಿಕ ಜಾಲತಾಣಗಳಲ್ಲಿ ಯುವತಿಯರ ಸೋಗಿನಲ್ಲಿ …
Read More »ಎಸಿಬಿ ಅಧಿಕಾರಿಗಳು ಇನ್ಸ್ಪೆಕ್ಟರ್ ರಾಘವೇಂದ್ರ ಹಾಗೂ ಮಧ್ಯವರ್ತಿ ರಾಘವೇಂದ್ರನನ್ನು ಟ್ರ್ಯಾಪ್ ಮಾಡಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಬೆಂಗಳೂರು: 2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಚಿಕ್ಕಜಾಲ ಠಾಣೆಯ ಇನ್ಸ್ಪೆಕ್ಟರ್ (Inspector) ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಬೆಂಗಳೂರಿನ ಚಿಕ್ಕಜಾಲ ಠಾಣೆ ಇನ್ಸ್ಪೆಕ್ಟರ್ ರಾಘವೇಂದ್ರ ಎಂಬುವವರು ಜಮೀನು ತಕರಾರು ಸಂಬಂಧ 10 ಲಕ್ಷ ರೂ. ಹಣ ನೀಡುವಂತೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಎರಡು ಬಾರಿ ತಲಾ ನಾಲ್ಕು ಲಕ್ಷ ಪಡೆದಿದ್ದರು. ಈಗಾಗಲೇ ಒಟ್ಟು 8 ಲಕ್ಷ ರೂ. ಲಂಚವನ್ನು ಇನ್ಸ್ಪೆಕ್ಟರ್ ರಾಘವೇಂದ್ರ ಪಡೆದಿದ್ದಾರೆ. 3ನೇ ಬಾರಿ ಕೊನೆಯ ಕಂತಾಗಿ …
Read More »ನಕಲಿ ಪೊಲೀಸ್ ಹಾವಳಿ: ಕೈಯಲ್ಲಿ ದೊಣ್ಣೆ ಹಿಡಿದು ಪ್ರತಿಭಟನೆಗೆ ನಿಂತ ವಿದ್ಯಾರ್ಥಿಗಳು
ಧಾರವಾಡ: ಪೊಲೀಸರ ಹೆಸರಿನಲ್ಲಿ ಅಪರಿಚಿತ ವ್ಯಕ್ತಿಗಳು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿ ಎಸ್ಕೇಪ್ ಆದ ಘಟನೆ ನಗರದ ವಿವೇಕಾನಂದ ವೃತ್ತದ ಬಳಿ ನಡೆದಿದೆ. ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿ ಓಡಿ ಹೋಗಿರೋ ಅಪರಿಚಿತ ವ್ಯಕ್ತಿಗಳ ವಿರುದ್ಧ ಪಿಜಿ ವಿದ್ಯಾರ್ಥಿಗಳ ಆಕ್ರೋಶ ವ್ಯಕ್ತಪಡಿಸಿದ್ದು ಕೈಯಲ್ಲಿ ದೊಣ್ಣೆ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರ ಜೊತೆ ವಿದ್ಯಾರ್ಥಿಗಳು ಹಾಗೂ ಸ್ಥಳಿಯರ ನಡುವೆ ಮಾತಿನ …
Read More »ಹಸುಗೂಸಿನ ತಾಯನ್ನು ಕಸಿದ ಕರೊನಾ: 5 ತಿಂಗಳ ಬಾಣಂತಿ ಸಾವು
ಶಿವಮೊಗ್ಗ: ಕರೊನಾ ಸೋಂಕಿಗೆ ಒಳಗಾಗಿದ್ದ ಐದು ತಿಂಗಳ ಬಾಣಂತಿಯೊಬ್ಬರು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹಸುಗೂಸಿನಿಂದ ದೂರವಾಗಿದ್ದು ಬರೋಬ್ಬರಿ ಮೂರು ತಿಂಗಳು ಜೀವಕ್ಕಾಗಿ ಹೋರಾಡಿದ ಭದ್ರಾವತಿ ತಾಲೂಕಿನ ದಿಗ್ಗೇನಹಳ್ಳಿಯ ಸುಪ್ರಿಯಾ(35) ಮೃತರು. ಸುಪ್ರಿಯಾ ಅವರಿಗೆ ಕರೊನಾ ಸೋಂಕು ದೃಢಪಟ್ಟಿದ್ದ ಕಾರಣಕ್ಕೆ ಜೂನ್ 19 ರಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಸತತ ಮೂರು ತಿಂಗಳು ಆಸ್ಪತ್ರೆಯಲ್ಲೇ ಇಟ್ಟುಕೊಂಡು ಚಿಕಿತ್ಸೆ ನೀಡಲಾಗಿತ್ತು. ಕೆಲ ದಿನಗಳ ಹಿಂದೆ ಸೋಂಕು ಉಲ್ಬಣಗೊಂಡಾಗ ಅವರನ್ನು ಐಸಿಯುಗೆ …
Read More »