ಗಂಗಾವತಿ : ಗಂಗಾವತಿ, ಕನಕಗಿರಿ, ಕಾರಟಗಿ ತಾಲೂಕಿನ ನಗರ ಮತ್ತು ಗ್ರಾಮೀಣ ಭಾಗದ ನ್ಯಾಯಬೆಲೆ ಅಂಗಡಿಗಳಲ್ಲಿ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಅಕ್ಕಿ ವಿತರಣೆ ಲೆಕ್ಕದಲ್ಲಿ ವ್ಯತ್ಯಾಸ ಕಂಡುಬಂದಿದ್ದರಿಂದ ಸಹಾಯಕ ಆಯುಕ್ತ ನಾರಾಯಣರೆಡ್ಡಿ ಕನಕರೆಡ್ಡಿ ನೇತೃತ್ವದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಪಂಜಾಬ್ ಎಫ್ಸಿಐ ಗೋಡೌನ್ ಸೇರಿದಂತೆ ಅಕ್ಕಿ ವಿತರಣೆ ಮಾಡುವ ಸ್ಥಳಗಳ ಮೇಲೆ ದಾಳಿ ಮಾಡಿ ಲೆಕ್ಕ ಪರಿಶೋಧನೆ ನಡೆಸಿದ ಪ್ರಕರಣ ಗಂಗಾವತಿ ನಗರದಲ್ಲಿ ಮಂಗಳವಾರ ಜರುಗಿದೆ. ತಾಲೂಕಿನ ವಿವಿಧ ನ್ಯಾಯಬೆಲೆ ಅಂಗಡಿಗಳಿಗೆ …
Read More »Yearly Archives: 2021
ಸ್ಯಾಂಡಲ್‌ವುಡ್‌ನ ಬೇಡಿಕೆಯ ಡೈಲಾಗ್ ರೈಟರ್ ಗುರು ಕಶ್ಯಪ್ ನಿಧನ
ಸ್ಯಾಂಡಲ್‌ವುಡ್‌ನ ಬಹುಬೇಡಿಕೆಯ ಡೈಲಾಗ್ ರೈಟರ್ ಗುರು ಕಶ್ಯಪ್ ಹೃದಯಾಘಾತದಿಂದ ನಿಧನ ಹೊಂದಿದರು. ಹಲವು ಸಿನಿಮಾಗಳಿಗೆ ಸಂಭಾಷಣೆ ಬರೆದಿದ್ದ ಗುರು ಕಶ್ಯಪ್ ಸೋಮವಾರ (ಸೆಪ್ಟಂಬರ್ 13) ರಾತ್ರಿ ನಿಧನರಾದರು. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯದಲ್ಲೇ ಗುರು ಕಶ್ಯಪ್ ಕೊನೆಯುಸಿರು ಎಳೆದರು ಎನ್ನುವ ಮಾಹಿತಿ ತಿಳಿದುಬಂದಿದೆ. ಅವರಿಗೆ 45 ವರ್ಷ ವಯಸ್ಸಾಗಿತ್ತು. ಗುರು ಕಶ್ಯಪ್ ನಿಧನಕ್ಕೆ ಕನ್ನಡ ಚಿತ್ರರಂಗದ ಹಲವರು ಕಂಬನಿ ಮಿಡಿಯುತ್ತಿದ್ದಾರೆ. ಗಣೇಶ್ ಅಭಿನಯದ ‘ಸುಂದರಾಂಗ ಜಾಣ’, ರಮೇಶ್ ಅರವಿಂದ್ ನಟನೆಯ …
Read More »ಕರುನಾಡಿನ ಲಾಂಛನದಲ್ಲಿ ಕನ್ನಡವೇಕಿಲ್ಲ? ಸತ್ಯಮೇವ ಜಯತೆ ಹಿಂದಿಯಲ್ಲೇ ಇದೆ ಯಾಕೆ?
ದಾವಣಗೆರೆ: ಕರುನಾಡಿನಲ್ಲಿ ಕನ್ನಡವೇ ಆಡಳಿತ ಭಾಷೆ, ಎಲ್ಲ ವ್ಯವಹಾರಗಳು ಕನ್ನಡದಲ್ಲೇ ನಡೆಯಬೇಕು ಎಂಬುದು ಸರಕಾರದ ನಿಯಮ. ಆದರೆ ಕರುನಾಡಿನ ಲಾಂಛನದಲ್ಲೇ ಕನ್ನಡ ಮರೆಯಾಗಿರುವುದು ವಿಪರ್ಯಾಸ! ಇದು ವಿಚಿತ್ರವೆನಿಸಿದರೂ ಸತ್ಯ. ಆರು ದಶಕಗಳಿಂದ ನಮ್ಮ ಲಾಂಛನದಲ್ಲಿರುವ “ಸತ್ಯಮೇವ ಜಯತೇ’ ಹಿಂದಿಯಲ್ಲೇ ಇದೆ. ಕನ್ನಡ ಇಗೆ ಬದಲಾಯಿಸಿಲ್ಲ. ಹಿಂದಿ ಲಿಪಿಯಲ್ಲಿ “ಸತ್ಯಮೇವ ಜಯತೇ’ ಎಂದು ಬರೆದಿರುವ ಲಾಂಛನವನ್ನೇ ಇಂದು ಎಲ್ಲೆಡೆ ಬಳಕೆ ಮಾಡಲಾಗುತ್ತಿದೆ. ನೆರೆಯ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣಗಳ ಲಾಂಛನಗಳಲ್ಲಿ ಆಯಾ ರಾಜ್ಯ …
Read More »ಬೆಳಗಾವಿಯ ಹೃದಯ ಭಾಗ ಪಾಂಗೂಳ ಗಲ್ಲಿಯಲ್ಲಿರುವ ಸುಮಾರು 150 ವರ್ಷಗಳ ಇತಿಹಾಸ ಹೊಂದಿರುವ ಪ್ರಸಿದ್ಧ ಅಶ್ವತ್ಥಾಮ ದೇವಾಲಯ ತೆರವಿಗೆ ಮುಂದಾಗಿರುವುದಾಗಿ ಜಿಲ್ಲಾಡಳಿತ
ಬೆಳಗಾವಿ: ದೇವಾಲಯಗಳ ತೆರವು ಕಾರ್ಯಾಚರಣೆಗೆ ಈಗಗಲೇ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ಇದೀಗ ಕುಂದಾನಗರಿ ಬೆಳಗಾವಿಯಲ್ಲಿಯೂ ಜಿಲ್ಲಾಡಳಿತ ಹಲವು ದೇವಾಲಯಗಳ ತೆರವಿಗೆ ಸಿದ್ಧತೆ ಮಾಡಿಕೊಂಡಿದೆ. ಸುಪ್ರೀಂ ಕೋರ್ಟ್ ಆದೇಶದ ನೆಪದಲ್ಲಿ ಪುರಾತನ ಹಿಂದೂ ದೇವಾಲಯಗಳನ್ನು ತೆರವುಗೊಳಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಬೆಳಗಾವಿಯ ಹೃದಯ ಭಾಗ ಪಾಂಗೂಳ ಗಲ್ಲಿಯಲ್ಲಿರುವ ಸುಮಾರು 150 ವರ್ಷಗಳ ಇತಿಹಾಸ ಹೊಂದಿರುವ ಪ್ರಸಿದ್ಧ ಅಶ್ವತ್ಥಾಮ ದೇವಾಲಯ ತೆರವಿಗೆ ಮುಂದಾಗಿರುವುದಾಗಿ ಜಿಲ್ಲಾಡಳಿತ ನೋಟೀಸ್ ಜಾರಿ ಮಾಡಿದೆ. ಈ ಸಾರ್ವಜನಿಕರು ಆಕ್ರೋಶ …
Read More »ಸಾವಿನಲ್ಲೂ ನಾಲ್ವರ ಪ್ರಾಣ ಉಳಿಸಿ ಸಾರ್ಥಕತೆ ಮೆರೆದ ಹಾವೇರಿ ಯುವತಿ
ಹಾವೇರಿ: 20 ವರ್ಷದ ಯುವತಿಯೊಬ್ಬಳು ಹಲವರ ಬದುಕಿಗೆ ಬೆಳಕಾಗುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಆ ಮಹಾನ್ ತಾಯಿ ಹೆಸರು ಕವನ ಮಳ್ಳಯ್ಯ ಹಿರೇಮಠ. ರಟ್ಟಿಹಳ್ಳಿ ತಾಲೂಕಿನ ಹಳ್ಳೂರು ಗ್ರಾಮದ ಕವನ ಶಿಕಾರಿಪುರದ ಗಾಮೆಂಟ್ಸ್ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಸೆ.9ರಂದು ಹೊನ್ನಾಳಿ ತಾಲೂಕು ಸೊರಟೂರು ಗ್ರಾಮದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಕವನ ಗಂಭೀರ ಗಾಯಗೊಂಡಿದ್ದರು. ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಕವನರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಲೆಗೆ ತೀವ್ರ …
Read More »ಟಿಪ್ಪುಸುಲ್ತಾನ್ ರಸ್ತೆ ಕಾಮಗಾರಿ ಪೂರ್ಣಗೊಳಿಸಿ: ಜಿಲ್ಲಾಡಳಿತಕ್ಕೆ ಮನವಿ
ರಾಯಚೂರು: ನಗರದ ಟಿಪ್ಪುಸುಲ್ತಾನ್ ರಸ್ತೆ ನಿರ್ಮಾಣ ಕಾಮಗಾರಿ ಶೀಘ್ರವೇ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿ ವಾರ್ಡ್ ಸಂಖ್ಯೆ 7 ಹಾಗೂ 8ರ ನಿವಾಸಿಗಳು ಟಿಪ್ಪುಸುಲ್ತಾನ್ ಉದ್ಯಾನದಲ್ಲಿ ಕೈಗೆ ಕಪ್ಪು ಪಟ್ಟಿ ಧರಿಸಿ ಸೋಮವಾರ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತಕ್ಕೆ ಸೋಮವಾರ ಮನವಿ ಸಲ್ಲಿಸಿದರು. ಟಿಪ್ಪುಸುಲ್ತಾನ್ ರಸ್ತೆಯು ನಗರದ ನುಖ್ಯ ರಸ್ತೆಯಾಗಿದ್ದು, ವಿಸ್ತರಣೆ ಕಾರ್ಯ ಆರಂಭಿಸಿ ಒಂದು ವರ್ಷ ಗತಿಸಿದರೂ ಈವರೆಗೆ ಪೂರ್ಣಗೊಂಡಿಲ್ಲ. ಇದರಿಂದ ಅಂದ್ರೂನ್ ಕಿಲ್ಲಾ ಹಾಗೂ ಸ್ಥಳೀಯ ನಿವಾಸಿಗಳಿಗೆ ತೀವ್ರ ಸಮಸ್ಯೆಯಾಗಿದೆ. …
Read More »ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಕಾಮಗಾರಿ: ಈ ವಾಹನಗಳ ಸಂಚಾರಕ್ಕೆ ನಿರ್ಬಂಧ
ಬೆಂಗಳೂರು, ಸೆಪ್ಟೆಂಬರ್ 14: ಬೆಂಗಳೂರು-ಮೈಸೂರು ನಡುವಿನ ದಶಪಥ ಹೆದ್ದಾರಿ ಕಾಮಗಾರಿ ಶುರುವಾಗಲಿದ್ದು, ದ್ವಿಚಕ್ರ ವಾಹನ, ಆಟೋ ಹಾಗೂ ಟ್ರ್ಯಾಕ್ಟರ್‌ಗಳ ಓಡಾಟವನ್ನು ನಿಷೇಧಿಸಲಾಗಿದೆ. ಯೋಜನೆಗಾಗಿ ಒಟ್ಟು 8,172 ಕೋಟಿ ರೂ. ವ್ಯಯಿಸುತ್ತಿದ್ದು, 2022ರ ಅಕ್ಟೋಬರ್‌ನಲ್ಲಿ ಕಾಮಗಾರಿ ಪೂರ್ಣಗೊಳಿಸುವ ಭರವಸೆಯನ್ನು ನೀಡಲಾಗಿದೆ. ಈ ಕಾಮಗಾರಿ ಮುಗಿದಲ್ಲಿ ಬೆಂಗಳೂರು-ಮೈಸೂರು ನಡುವಿನ ಪ್ರಯಾಣ ಈಗಿರುವ 3 ಗಂಟೆಗೆ ಬದಲಾಗಿ 90 ನಿಮಿಷಕ್ಕೆ ಇಳಿಯಲಿದೆ. 2019ರಿಂದ ಕಂಪನಿಯು ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಂಡಿದೆ. ದಶಪಥಗಳ ಹೆದ್ದಾರಿ ವಿಸ್ತರಣೆ …
Read More »ಮಂಗಳೂರಿನ ವ್ಯಕ್ತಿಯೊಬ್ಬರಿಗೆ ನಿಫಾ ಸೋಂಕಿನ ಲಕ್ಷಣ
ಮಂಗಳೂರು : ಕೇರಳದ ಕೋಯಿಕ್ಕೊಡ್‌ನಲ್ಲಿ ನಿಫಾ ಸೋಂಕಿಗೆ 13 ವರ್ಷದ ಬಾಲಕ ಮೃತಪಟ್ಟ ವಾರದ ಬಳಿಕ ಇದೀಗ ಮಂಗಳೂರಿನ ವ್ಯಕ್ತಿಯೊಬ್ಬರಿಗೆ ಸೋಂಕಿನ ಲಕ್ಷಣಗಳು ಕಾಣಿಸಿವೆ. ಲ್ಯಾಬ್ ಟೆಕ್ನಿಶಿಯನ್ ಆಗಿ ಕೆಲಸ ಮಾಡುವ ವ್ಯಕ್ತಿಯೊಬ್ಬರಿಗೆ ನಿಫಾ ಸೋಂಕಿನ ಲಕ್ಷಣಗಳು ಕಾಣಿಸಿದೆ ಎಂದು ಆರೋಗ್ಯ ಆಯುಕ್ತ ಕೆ.ವಿ. ತ್ರಿಲೋಕ್ ಚಂದ್ರ ಮಾಹಿತಿ ನೀಡಿದ್ದಾರೆ. ಸೋಂಕಿತರ ಸ್ಯಾಂಪಲ್‌ನ್ನು ಪುಣೆಯಲ್ಲಿರುವ ನ್ಯಾಷನಲ್ ಇನ್ಸ್‌ಟಿಟ್ಯೂಟ್ ಆಫ್ ವೈರಾಲಜಿ ಕೇಂದ್ರಕ್ಕೆ ಕಳುಹಿಸಲಾಗಿದೆ. ನಾವು ಜಾಗರೂಕರಾಗಿರಬೇಕು. ಆದರೆ ಭಯಪಡುವ ಅವಶ್ಯ …
Read More »ಹಿಂದಿ ಹೇರಿಕೆ ಸಲ್ಲದು ಎಂದ ನಟ ಧನಂಜಯ್-ನಿರ್ದೇಶಕ ಸಿಂಪಲ್ ಸುನಿ..!
ರಾಜ್ಯದಲ್ಲಿ ಹಿಂದಿ ಹೇರಿಕೆ (Hindi Imposition) ವಿಚಾರವಾಗಿ ಸಾಕಷ್ಟು ಸಲ ಚರ್ಚೆ ಹಾಗೂ ಪ್ರತಿಭಟನೆಗಳು ನಡೆಯುತ್ತಲೇ ಇವೆ. ಇನ್ನೂ ಸಹ ಇದಕ್ಕೆ ಪರಿಹಾರ ಸಿಕ್ಕಿಲ್ಲ. ಈಗ ಮತ್ತೊಮ್ಮೆ ಹಿಂದಿ ಹೇರಿಕೆ ವಿಷಯ ಚರ್ಚೆಗೆ ಬಂದಿದೆ. ಸೆ.14ರಂದು ದೇಶದ ಹಲವೆಡೆ ಹಿಂದಿ ದಿವಸ್ (Hindi Diwas) ಅನ್ನು ಆಚರಣೆ ಮಾಡಲಾಗುತ್ತದೆ. ಉತ್ತರ ಭಾರತದಲ್ಲಿ ಹಿಂದಿ ದಿವಸ್ ಆಚರಣೆ ತುಂಬಾ ಜೋರಾಗಿ ನಡೆಯುತ್ತದೆ. ಆದರೆ ದಕ್ಷಿಣ ಭಾರತದಲ್ಲಿ ಈ ದಿನದ ಆಚರಣೇಗೆ ತೀವ್ರ …
Read More »ನಮ್ಮ ನೆಲದಲ್ಲಿ ನಮ್ಮ ಕನ್ನಡ ಭಾಷೆಯೇ ಮೊದಲು. ಹಿಂದಿ ದಿವಸ ಆಚರಣೆ ಅಸಮರ್ಪಕ’ : ಹೆಚ್. ಡಿ. ಕುಮಾರಸ್ವಾಮಿ :
ಬೆಂಗಳೂರು : ಇಂದು ದೇಶಾದ್ಯಂತ ಹಿಂದಿ ದಿವಸ್ ಆಚರಣೆ ಮಾಡಲಾಗುತ್ತಿದ್ದು, ‘ನಮ್ಮ ನೆಲದಲ್ಲಿ ನಮ್ಮ ಕನ್ನಡ ಭಾಷೆಯೇ ಮೊದಲು. ಹಿಂದಿ ದಿವಸ ಆಚರಣೆ ಅಸಮರ್ಪಕ ಎಂದು ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, “ಭಾರತ ಒಕ್ಕೂಟರಾಷ್ಟ್ರ. ಬಹುಸಂಸ್ಕೃತಿ, ಬಹುಭಾಷೆ, ಬಹುಜನರ ಆಗರ. ಅನೇಕ ಭಾಷೆಗಳ ತೊಟ್ಟಿಲು. ಆದರೆ ಒಂದೇ ಭಾಷೆಯನ್ನು ವೈಭವೀಕರಿಸುವ, ಹೇರುವ ಹುಂಬ ಪ್ರಯತ್ನವೇಕೆ ? ಎಂದು ಪ್ರಶ್ನಿಸಿದ್ದಾರೆ. ಹಿಂದಿ …
Read More »