ಕಲಬುರಗಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಎದುರಿಗೆ ಬಿಜೆಪಿ ಮಹಿಳಾ ಕಾರ್ಯಕರ್ತೆಯೊಬ್ಬರು ಕಣ್ಣೀರು ಹಾಕಿದ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪಕ್ಷದಲ್ಲಿ ಸೂಕ್ತ ಸ್ಥಾನ ಕೊಡದಿದ್ದಕ್ಕೆ ಸಾವಿತ್ರಿ ಕುಳಗೇರಿ ಶೋಭಾ ಕರಂದ್ಲಾಜೆ ಮುಂದೆ ಕಣ್ಣೀರು ಇಟ್ಟಿದ್ದಾರೆ. ಸಾವಿತ್ರಿ ಕುಳಗೇರಿ ಬಿಜೆಪಿ ರಾಜ್ಯ ಮಹಿಳಾ ಕಾರ್ಯಕಾರಣಿ ಸದಸ್ಯೆಯಾಗಿದ್ದಾರೆ. 25 ವರ್ಷಗಳಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತೆಯಾಗಿ ಪಕ್ಷಕ್ಕೆ ಕೆಲಸ ಮಾಡಿದ್ದೇನೆ. ಈ ಬಾರಿ ನಡೆದ ಪಾಲಿಕೆ ಚುನಾವಣೆಯಲ್ಲಿ ವಾರ್ಡ್ ಸಂಖ್ಯೆ …
Read More »Yearly Archives: 2021
ಬೆಚ್ಚಿಬಿದ್ದ ರಾಯಚೂರು; ಕಣ್ಣಿಗೆ ಖಾರದಪುಡಿ ಎರಚಿ ಯುವಕನ ಬರ್ಬರ ಹತ್ಯೆ
ರಾಯಚೂರು: ಕಣ್ಣಿಗೆ ಖಾರದಪುಡಿ ಎರಚಿ ಯುವಕನೋರ್ವನನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿ ಪಟ್ಟಣದಲ್ಲಿ ನಡೆದಿದೆ. ಹಾಡಹಗಲೇ ಪಟ್ಟಣದ ನಡುಬೀದಿಯಲ್ಲಿ ಈ ಕೊಲೆ ನಡೆದಿದೆ. ಹಟ್ಟಿ ಚಿನ್ನದ ಗಣಿಯ ಹೊಸ ಬಸ್ ನಿಲ್ದಾಣದ ಹತ್ತಿರ ಬರ್ಬರ ಹತ್ಯೆ ನಡೆದಿದ್ದು ಸಾವನ್ನಪ್ಪಿದವನನ್ನ ದಿಲ್ಬರ್ (30) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಸಿಪಿಐ ಮಹಾಂತೇಶ್ ಸಜ್ಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »ಬಿಕಿನಿ ತೊಟ್ಟು, ಮಾಸ್ಕ್ ಹಾಕಿ ಏರ್ಪೋರ್ಟ್ಗೆ ಬಂದ ಮಹಿಳೆ; ..
ಮಹಿಳೆಯೊಬ್ಬರು ಕೇವಲ ಬಿಕಿನಿ ತೊಟ್ಟು ಏರ್ಪೋರ್ಟ್ಗೆ ಬಂದಿರುವ ಘಟನೆ ಅಮೆರಿಕಾದಲ್ಲಿ ನಡೆದಿದೆ. ಅಮೆರಿಕಾದ ಮಿಯಾಮಿ ವಿಮಾನ ನಿಲ್ದಾಣಕ್ಕೆ ಬಿಕಿನಿ ತೊಟ್ಟ ಮಹಿಳೆ ಬಂದಿದ್ದು, ಎಲ್ಲರ ಗಮನ ಸೆಳೆದಿದ್ದಾರೆ. ಗ್ರೀನ್ ಬಿಕಿನಿ ತೊಟ್ಟು ಏರ್ಪೋರ್ಟ್ಗೆ ಬಂದಿದ್ದ ಮಹಿಳೆ ಮಾಸ್ಕ್ ಹಾಕುವುದು ಮಾತ್ರ ಮರೆತಿರಲಿಲ್ಲ. ಕೈಯಲ್ಲಿ ಬ್ಯಾಗ್ ಹಿಡಿದು ಬಂದಿದ್ದ ಇವರು ಎಲ್ಲಿಗೆ ಹೊರಟಿದ್ದರು ಎಂಬ ಏರ್ಪೋರ್ಟ್ ಸಿಬ್ಬಂದಿ ಯಾವುದೇ ಮಾಹಿತಿ ನೀಡಿಲ್ಲ. ಏರ್ಪೋರ್ಟ್ನಲ್ಲಿ ನಡೆದುಕೊಂಡು ಬರುತ್ತಿರುವ ಬಿಕಿನಿ ತೊಟ್ಟ ಮಹಿಳೆಯ ವಿಡಿಯೋ …
Read More »ಪ್ರತಿ ಮನೆಗೂ ಶುದ್ಧ ನೀರು ಪ್ರಧಾನಿ ಆಶಯ :,ದುರ್ಯೋಧನ ಐಹೊಳೆ
ಚಿಕ್ಕೋಡಿ: ‘ಜನರ ಆರೋಗ್ಯದ ಹಿತದೃಷ್ಟಿಯಿಂದ ರಾಯಬಾಗ ಕ್ಷೇತ್ರದ ಜನರಿಗೆ ಶುದ್ಧ ಕುಡಿಯುವ ನೀರಿನ ಯೋಜನೆ ಅನುಷ್ಠಾನ ಮಾಡಲಾಗಿದೆ. ಪ್ರತಿ ಮನೆಗೂ ಶುದ್ಧ ನೀರು ದೊರೆಯಬೇಕು ಎನ್ನುವುದು ಪ್ರಧಾನಿ ನರೇಂದ್ರ ಮೋದಿ ಅವರ ಆಶಯವಾಗಿದೆ’ ಎಂದು ಶಾಸಕ ದುರ್ಯೋಧನ ಐಹೊಳೆ ಹೇಳಿದರು. ರಾಯಬಾಗ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ತಾಲ್ಲೂಕಿನ ಬಂಬಲವಾಡ, ಕುಂಗಟೋಳ್ಳಿ, ಕರೋಶಿ ಗ್ರಾಮದಲ್ಲಿ ಜಲಜೀವನ ಅಭಿಯಾನದಲ್ಲಿ ₹ 4 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಕುಡಿಯುವ ನೀರಿನ ಯೋಜನೆಗೆ ಶನಿವಾರ ಚಾಲನೆ …
Read More »ಜಿಪಂ, ತಾಪಂ ಚುನಾವಣೆ; ಸರ್ಕಾರದ ಮಹತ್ವದ ನಿರ್ಧಾರ
ಬೆಂಗಳೂರು: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಮರು ವರ್ಗೀಕರಣಕ್ಕೆ ಪ್ರತ್ಯೇಕ ಆಯೋಗ ರಚಿಸಲು ಸರ್ಕಾರ ತೀರ್ಮಾನಿಸಿದೆ. ಚುನಾವಣೆ ಆಯೋಗದ ವಿಂಗಡಣೆಗೆ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ ಸರ್ಕಾರ ಹೊಸ ಹೆಜ್ಜೆ ಇಟ್ಟಿದ್ದು, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ವಿಂಗಡಣೆಗೆ ಪ್ರತ್ಯೇಕ ಆಯೋಗ ರಚನೆ ಮಾಡಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ರಾಜ್ಯ ಚುನಾವಣಾ ಆಯೋಗದಿಂದ ಹಿಂದೆಯೇ ಜಿಲ್ಲಾ …
Read More »ಪಕ್ಷದ ಅಭ್ಯರ್ಥಿಗಳ ಆಯ್ಕೆಗೆ ಅರ್ಜಿ ಆಹ್ವಾನ: ಡಿ.ಕೆ.ಶಿವಕುಮಾರ್
ಬೆಂಗಳೂರು: ‘ವಿಧಾನ ಪರಿಷತ್ ಸೇರಿದಂತೆ ಮುಂಬರುವ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಆಯ್ಕೆಗೆ ಅರ್ಜಿ ಆಹ್ವಾನಿಸಿದ್ದು, 10 ದಿನ ಕಾಲಾವಕಾಶ ನೀಡಲಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು. ಚುನಾವಣೆಗೆ ಪೂರ್ವತಯಾರಿ ಮತ್ತು ಪಕ್ಷ ಸಂಘಟನೆ ಕುರಿತು ಪಕ್ಷದ ಜಿಲ್ಲಾ ಘಟಕಗಳ ನಾಯಕರ ಜೊತೆ ಶನಿವಾರ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ‘ಈಗಾಗಲೇ ಪದವೀಧರ ಕ್ಷೇತ್ರದ ಅಭ್ಯರ್ಥಿಗೆ ಅರ್ಜಿ ಕರೆಯಲಾಗಿದೆ. ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಅಭ್ಯರ್ಥಿಗಳ ಆಯ್ಕೆಗೆ ಶೀಘ್ರದಲ್ಲೇ …
Read More »ಮೈಸೂರು ಅರಮನೆಯಲ್ಲಿ ಫೋಟೋ ತೆಗೆಯಲು ಅವಕಾಶ: ಮಾಧುಸ್ವಾಮಿ
ಬೆಂಗಳೂರು: ಮೈಸೂರು ಅರಮನೆ ವ್ಯಾಪ್ತಿಯಲ್ಲಿ ಫ್ಲ್ಯಾಶ್ ಬಳಸದೆ ಫೋಟೊ ತೆಗೆಯಲು ಅವಕಾಶ ಇದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ. ಈ ಕುರಿತು ಸಚಿವ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2016ರಲ್ಲಿ ಭಾರೀ ಸುದ್ದಿಯಾಗಿದ್ದ ಮೈಸೂರು ಅರಮನೆ ಒಳಾಂಗಣ ಮತ್ತು ಹೊರಾಂಗಣದಲ್ಲಿ ಚಿತ್ರೀಕರಣ ಪ್ರಕರಣವನ್ನು ಸಂಪುಟ ಸಭೆ ಕೈಬಿಟ್ಟಿದೆ. ಚಿತ್ರೀಕರಣಕ್ಕೆ ಅನುಮತಿ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮೈಸೂರು ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್. ಸುಬ್ರಹ್ಮಣ್ಯ ವಿರುದ್ಧ ಉಪ …
Read More »ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ : ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆ ದಾಖಲು
ವಿಜಯಪುರ : ಶನಿವಾರ ತಡರಾತ್ರಿ ವಿಜಯ ಜಿಲ್ಲೆ ಸೇರಿದಂತೆ ನೆರೆಯ ಜಿಲ್ಲೆಗಳಲ್ಲಿ ಭೂಮಿ ನಡುಗಿದ ಅನುಭವ ಆಗಿದ್ದು, ರಿಕ್ಟರ್ ಮಾಪಕದಲ್ಲಿ ದಾಖಲಾದ ಲಘು ತೀವ್ರತೆ ಭೂಕಂಪ ಎಂಬುದನ್ನು ಜಿಲ್ಲಾಡಳಿತ ದೃಢೀಕರಿಸಿದೆ. ಭೂಕಂಪನ ಅಗಿದ್ದು ರಿಕ್ಟರ್ ಮಾಪಕದಲ್ಲಿ ದಾಖಲು 3.9 ತೀವ್ರತೆಯ ಭೂಕಂಪನ ಆಗಿದೆ.ಮಹಾರಾಷ್ಟ್ರದ ಕೊಲ್ಹಾಪುರ ಭೂಕಂಪನದ ಕೇಂದ್ರ ಬಿಂಧುವಾಗಿತ್ತು. ಕೆ.ಎಸ್.ಎನ್. ಡಿ.ಎಂ.ಸಿ. ಮೂಲಕ ಮಾಹಿತಿ ಸಂಗ್ರಹಿಸಿದೆ ಎಂದು ಜಿಲ್ಲಾಧಿಕಾರಿ ಸುನಿಲಕುಮಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ವಿಜಯಪುರ ಜಿಲ್ಲೆಯ ಬಹುತೇಕ ಎಲ್ಲ …
Read More »O.Y.C.ರ್ಯಾಲಿ ಸುಮಾರು 300 ಜನರ ವಿರುದ್ಧ ಪ್ರಕರಣ, ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ: ಲತೀಫ್ ಖಾನ್ ಪಠಾಣ್
ಬೆಳಗಾವಿ – ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಪ್ರಚಾರಕ್ಕಾಗಿ ಎಂಐಎಂಐಎಂ ಪಕ್ಷದ ಅಧ್ಯಕ್ಷ ಅಸಾವುದ್ದೀನ್ ಒವೈಸಿ ಪ್ರಚಾರದ ಸಂದರ್ಭದಲ್ಲಿ ಕೊರೋನಾ ನಿಯಮಗಳನ್ನು ಪಾಲಿಸಿಲ್ಲ ಎನ್ನುವ ಕಾರಣದಿಂದ ಸುಮಾರು 300 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಲತೀಫ್ ಖಾನ್ ಪಠಾಣ್, ಝೋಯಾ ಡೋಣಿ, ಮುಸ್ತಾಕ್ ಅಹ್ಮದ್ ಶಫಿ ತಹಸಿಲ್ದಾರ್ ಸೇರಿದಂತೆ 300 ಜನರ ಮೇಲೆ ಪ್ರಕರಣ ದಾಖಲಾಗಿತ್ತು. ಕೊರೋನಾ ನಿಯಮ ಉಲ್ಲಂಘಿಸಲಾಗಿದೆ ಮತ್ತು ಚುನಾವಣೆ ಆಯೋಗ ವಿಧಿಸಿದ ಷರತ್ತುಗಳನ್ನು ಪಾಲಿಸಲಾಗಿಲ್ಲ ಎನ್ನುವ …
Read More »ಶಾ ಹೇಳಿಕೆಯಿಂದ ಬಿಜೆಪಿಯಲ್ಲಿ ಅತೃಪ್ತಿಯ ಹೊಗೆ: ಬಿಎಸ್‌ವೈ-ಶೆಟ್ಟರ್ ಚರ್ಚೆ
ಬೆಂಗಳೂರು: ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ವಿಧಾನಸಭೆ ಚುನಾವಣೆ ಎದುರಿಸಲಿದ್ದು, ಅವರ ನೇತೃತ್ವದಲ್ಲೇ ಬಿಜೆಪಿ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಬಿಜೆಪಿಯಲ್ಲಿ ಅತೃಪ್ತಿಯ ಹೊಗೆ ಎಬ್ಬಿಸಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಬಿಜೆಪಿಯ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರನ್ನು ಶನಿವಾರ ಭೇಟಿಯಾದ ಮತ್ತೊಬ್ಬ ನಾಯಕ ಜಗದೀಶ ಶೆಟ್ಟರ್ ಅವರು, ಸುಮಾರು ಅರ್ಧತಾಸಿಗೂ ಹೆಚ್ಚಿನ ಹೊತ್ತು ಸಮಾಲೋಚನೆ ನಡೆಸಿದ್ದಾರೆ. ಹೊರಗಿನಿಂದ ಬಂದವರಿಗೆ ಏಕಾಏಕಿ …
Read More »