ಕೊಪ್ಪಳ: ಜಿಲ್ಲೆಯಲ್ಲಿ ಪುಟ್ಟ ಪುಟ್ಟ ಮಕ್ಕಳಿಗೆ ವೈರಲ್ ಇನ್ಫೆಕ್ಷನ್ ಸಮಸ್ಯೆ ಕಾಡುತ್ತಿದ್ದು ಕೆಮ್ಮು, ಕಫಾ, ಜ್ವರದಿಂದ ಮಕ್ಕಳು ನಿತ್ರಾಣರಾಗಿದ್ದಾರೆ. ಅದ್ರಲ್ಲೂ ಗ್ರಾಮೀಣ ಭಾಗದ ಮಕ್ಕಳಲ್ಲಿ ವೈರಲ್ ಇನ್ಫೆಕ್ಷನ್ ಕಾಡುತ್ತಿದ್ದು ಪೋಷಕರು ಆತಂಕಗೊಂಡಿದ್ದಾರೆ. ಆಸ್ಪತ್ರೆಗಳು ಫುಲ್ ಆಗಿದ್ದು ಮಕ್ಕಳಿಗೆ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳ ಮುಂದೆ ಪೋಷಕರು ಕ್ಯೂ ನಿಂತ ದೃಶ್ಯಗಳು ಕಂಡುಬಂದಿವೆ. ದೂರದ ಊರುಗಳಿಂದ ಆಸ್ಪತ್ರೆಗಳ ಬಳಿಗೆ ಪೋಷಕರು ಮಕ್ಕಳನ್ನು ಚಿಕಿತ್ಸೆಗಾಗಿ ಕರೆತಂದಿದ್ದಾರೆ. ಇನ್ನು ಇತ್ತೀಚೆಗೆ ಬಳ್ಳಾರಿ ಮತ್ತು ಗದಗ ಜಿಲ್ಲೆಗಳಲ್ಲೂ …
Read More »Yearly Archives: 2021
ಮನುಷ್ಯನ ಮಾತುಗಳೇ ಆತನ ಸಂಸ್ಕೃತಿಯನ್ನು ತೋರಿಸುತ್ತದೆ : ಶಾಸಕ ಪರಣ್ಣ ಮುನವಳ್ಳಿ
ಗಂಗಾವತಿ : ಪ್ರತಿಯೊಬ್ಬ ಮನುಷ್ಯನ ಮಾತುಗಳು ಆತನ ನಡೆ ನುಡಿ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಶಾಸಕ ಪರಣ್ಣ ಮುನವಳ್ಳಿ ಹೇಳಿದರು. ಅವರು ಜೂನಿಯರ್ ಕಾಲೇಜಿನ ನೂತನ ಕೊಠಡಿಗಳ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತ ವ್ಯಕ್ತಿ ಇದೀಗ ಎಚ್ಚರಗೊಂಡು ತಮ್ಮ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಪತ್ರಕರ್ತರ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ವಿಧಾನಸಭೆ ಚುನಾವಣೆ ಇನ್ನೂ 20 ತಿಂಗಳಿದೆ. ಕ್ಷೇತ್ರದ ಜನರು ಯಾರಿಗೆ ಬುದ್ಧಿ …
Read More »ಮದ್ಯ ಕುಡಿಸಿ ಮಹಿಳಾ ಟೆಕ್ಕಿ ಮೇಲೆ ನೈಜೀರಿಯಾ ಪ್ರಜೆಗಳಿಂದ ಅತ್ಯಾಚಾರ – ಇಬ್ಬರ ಬಂಧನ
ಬೆಂಗಳೂರು, ಸೆ 04 : ಮಹಿಳಾ ಟೆಕ್ಕಿಗೆ ಮದ್ಯ ಕುಡಿಸಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನೈಜೀರಿಯಾ ಪ್ರಜೆಗಳಿಬ್ಬರು ಬಂಧಿಸಲಾಗಿದೆ. ಮಹಿಳಾ ಟೆಕ್ಕಿ ಈ ಬಗ್ಗೆ ಬಾಣಸವಾಡಿ ಠಾಣೆಯ ಪೊಲೀಸರಿಗೆ ದೂರು ನೀಡಿದ್ದು, ನೈಜೀರಿಯಾ ಪ್ರಜೆಗಳಾದ ಬಾಣಸವಾಡಿ ನಿವಾಸಿ ಟೋನಿ (35) ಹಾಗೂ ಉಬಾಕಾ (36) ಇವರಿಬ್ಬರನ್ನು ಬಂಧಿಸಲಾಗಿದೆ ಎಂದು ಡಿಸಿಪಿ ಡಾ. ಎಸ್.ಡಿ. ಶರಣಪ್ಪ ಮಾಹಿತಿ ನೀಡಿದ್ದಾರೆ. ಸಂತ್ರಸ್ತ ಯುವತಿ ಮೂಲತಃ ಕಲ್ಬುರ್ಗಿ ಜಿಲ್ಲೆಯವಳಾಗಿದ್ದು, ನಗರದ ಪ್ರತಿಷ್ಠಿತ ಕಂಪನಿಯಲ್ಲಿ ಸಾಫ್ಟ್‌ವೇರ್ …
Read More »ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸಾರಿಗೆ ನೌಕರರಿಗೆ ಗುಡ್ ನ್ಯೂಸ್
ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ನೌಕರರ ಅಂತರ ನಿಗಮ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಯಲಿದೆ. ಸೆಪ್ಟೆಂಬರ್ 4 ರಿಂದ 13 ರವರೆಗೆ ಅಂತರ ನಿಗಮ ವರ್ಗಾವಣೆ ಅರ್ಹರಾದ ಸಾರಿಗೆ ಸಂಸ್ಥೆಗಳ ನೌಕರರು ಕೌನ್ಸೆಲಿಂಗ್ ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ksrtc.org/counselling ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಕೌನ್ಸೆಲಿಂಗ್ ಗಾಗಿ ನೌಕರರು ಸೆಪ್ಟೆಂಬರ್ 13 ರ ಸಂಜೆ 5.30 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಕೌನ್ಸೆಲಿಂಗ್ ನಲ್ಲಿ ಭಾಗವಹಿಸಿದ್ದರೆ …
Read More »ಬೆಳಗಾವಿ: ಜಿಐಟಿಯಲ್ಲಿ ಪುಸ್ತಕ ಬಿಡುಗಡೆ
ಬೆಳಗಾವಿ: ಇಲ್ಲಿನ ಕೆಎಲ್‌ಎಸ್ ಗೋಗಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ‘ಕೆಒಎಚ್‌ಎ-ಎಲ್‌ಐಎಸ್‌ಎ: ವರ್ಕಿಂಗ್ ಯೂಸರ್ ಮ್ಯಾನುಯಲ್’ ಎಂಬ ಪುಸ್ತಕವನ್ನು ಅಧ್ಯಕ್ಷ ಎಂ.ಆರ್. ಕುಲಕರ್ಣಿ, ಕರ್ನಾಟಕ ಕಾನೂನು ಸಂಸ್ಥೆಯ ಉಪಾಧ್ಯಕ್ಷ ಆರ್.ಬಿ. ಭಂಡಾರೆ, ಜಿಐಟಿ ಆಡಳಿತ ಮಂಡಳಿ ಸದಸ್ಯ ಎಸ್.ವಿ. ಗಣಾಚಾರಿ ಮತ್ತು ಪ್ರಾಂಶುಪಾಲ ಡಾ.ಜಯಂತ ಕೆ. ಕಿತ್ತೂರ ಈಚೆಗೆ ಬಿಡುಗಡೆ ಮಾಡಿದರು. ಪುಸ್ತಕವನ್ನು ಬೆಂಗಳೂರಿನ ಎಲ್‌ಐಎಸ್ ಅಕಾಡೆಮಿಯ ಅಧ್ಯಕ್ಷ ಡಾ.ಪಿ.ವಿ. ಕೊಣ್ಣೂರ ಅವರ ಮುನ್ನುಡಿ ಟಿಪ್ಪಣಿಯೊಂದಿಗೆ ಪ್ರಕಟಿಸಲಾಗಿದೆ. ರವಿ ಒಡೆಯರ, ಬಸವರಾಜ ಎಸ್. ಕುಂಬಾರ ಮತ್ತು …
Read More »ಕಿತ್ತೂರು ಶಾಸಕನನ್ನ ಮಹಾರಾಜನಂತೆ ಮೆರೆಸಿದ ಪೊಲೀಸ್ ಅಧಿಕಾರಿಗಳು
ಬೆಳಗಾವಿ: ಜಿಲ್ಲೆಯ ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ ಅವರ ಹುಟ್ಟುಹಬ್ಬದ ಹಿನ್ನೆಲೆ ಪೊಲೀಸರು ದಂಪತಿಗೆ ಹೂಮಳೆ ಸುರಿಸಿ ಮಹಾರಾಜನಂತೆ ಮೆರೆಸಿದ ಘಟನೆ ನಡೆದಿದೆ. ಇಂದು ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ ಹುಟ್ಟು ಹಬ್ಬವಿತ್ತು.. ಈ ಹಿನ್ನೆಲೆ ಅವರ ನಿವಾಸಕ್ಕೆ ತೆರಳಿದ ಪೊಲೀಸ್ ಅಧಿಕಾರಿಗಳು ದಂಪತಿಯನ್ನ ಕೂರಿಸಿ ಹೂಮಳೆಗರೆದಿದ್ದಾರೆ. ಬೈಲಹೊಂಗಲ ಡಿಎಸ್ಪಿ, ಸಿಪಿಐ, ನೇಸರಗಿ ಪಿ.ಎಸ್.ಐ ಹಾಗೂ ಎ.ಎಸ್.ಐ ಭಾಗಿಯಾಗಿದ್ದಾರೆ. ಶಾಸಕ ಮಹಾಂತೇಶ ದೊಡ್ಡಗೌರ್ ಅವರ ಅಂಧಾ ದರ್ಭಾರ್ಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. …
Read More »1 ರಿಂದ 5ನೇ ತರಗತಿ ಆರಂಭ- ಚರ್ಚೆ ನಡೆದಿಲ್ಲ: ಮುಖ್ಯಮಂತ್ರಿ
ಬೆಂಗಳೂರು: ಸದ್ಯ 6, 7 ಮತ್ತು 8ನೇ ತರಗತಿ ಆರಂಭಿಸಲು ತೀರ್ಮಾನಿಸಿದ್ದೇವೆ. ಪರಿಸ್ಥಿತಿ ಅವಲೋಕಿಸಿ 1 ರಿಂದ 5ನೇ ತರಗತಿ ಆರಂಭಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಈ ಬಗ್ಗೆ ಸದ್ಯ ಯಾವುದೇ ಚರ್ಚೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ರ‍್ಯಾಲಿ, ಚುನಾವಣೆ, ಸಭೆ ಸಮಾರಂಭಗಳಲ್ಲಿ ಹೆಚ್ಚು ಜನ ಸೇರುವ ಸಂಬಂಧ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಹೇಳಿದರು. ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸಿದ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಗೆ ರಾಷ್ಟ್ರೀಯ ವಿಪತ್ತು ಪರಿಹಾರ …
Read More »ಪೊಲೀಸ್ ನೌಕರಿಯನ್ನು ನೇರ ನೇಮಕಾತಿ ಮೂಲಕ ಕೊಡಿಸುವುದಾಗಿ ನಂಬಿಸಿದ ಆರೋಪಿ
ಕಾರವಾರ: ಉತ್ತರ ಕನ್ನಡವೂ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಯುವಕರಿಗೆ ಪೊಲೀಸ್ ನೌಕರಿಯನ್ನು ನೇರ ನೇಮಕಾತಿ ಮೂಲಕ ಕೊಡಿಸುವುದಾಗಿ ನಂಬಿಸಿ ಆರೋಪಿಯೋರ್ವ ವಂಚಿಸುತ್ತಿದ್ದು ಈತನ ಪತ್ತೆಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಎಸ್‌ಪಿ ಶಿವಪ್ರಕಾಶ ದೇವರಾಜು ಮಾಹಿತಿ ನೀಡಿದ್ದಾರೆ. ಕಾರವಾರದ ಎಸ್ಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಹಾವೇರಿ ಜಿಲ್ಲೆಯ ಬ್ಯಾಡಗಿಯ ಸಂತೋಷ ತಿಪ್ಪಣ್ಣ ಗುದಗಿ ಎಂಬಾತ ಆರೋಪಿಯಾಗಿದ್ದಾನೆ ಎಂದು ಮಾಹಿತಿ ನೀಡಿದ್ದಾರೆ. ಇತ್ತೀಚೆಗೆ ಮುಂಡಗೋಡ ಪಟ್ಟಣದ ಗುರುರಾಯ ರಾಯ್ಕರ ಎನ್ನುವವರು …
Read More »ಸವದತ್ತಿ: ಅನ್ನದಾನ ಮಹಾದಾನ ಹೇಳಿಕೆ ಯೊಂದಿಗೆ ಇವತ್ತಿನ ವಿಷಯ
ಸವದತ್ತಿ: ಅನ್ನದಾನ ಮಹಾದಾನ ಹೇಳಿಕೆ ಯೊಂದಿಗೆ ಇವತ್ತಿನ ವಿಷಯ ಮತ್ತೆ ಇವತ್ತು ಶನಿವಾರ ಬಂತು ನಮ್ಮ ತಂಡ ಅನ್ನ ಸಂತರ್ಪಣೆ ಮಾಡಲು ಇವತ್ತು ಸಜ್ಜಾಗಿದ್ದು ಇಂದು ಸವದತ್ತಿ ತಾಲೂಕಿನ ಕಡಬಿ ಗ್ರಾಮದಲ್ಲಿ ನಮ್ಮ ತಂಡ ಇಂದಿನ ಕಾರ್ಯಕ್ರಮ ರೂಪಿಸಿದೆ ಹೌದು ಇಂದು ಸವದತ್ತಿ ತಾಲೂಕಿನ ಕಡಬಿ ಗ್ರಾಮದ ಸಿದ್ದಾರೂಢ ಮಠದಲ್ಲಿ ಇಂದಿನ ಅನ್ನ ಸಂತರ್ಪಣೆ ಮಾಡಲು ಶ್ರೀ ಸಂತೋಷ್ ಜಾರಕಿಹೊಳಿ ಅವರ ಆದೇಶದ ಮೇರೆಗೆ ಅಲ್ಲಿ ಎಲ್ಲ ತಂಡ …
Read More »ಅಚ್ಚರಿ ಬೆಳವಣಿಗೆ -ಸಿದ್ದರಾಮಯ್ಯರ ಭೇಟಿಯಾದ ಶಿಕ್ಷಣ ಸಚಿವ ಬಿಸಿ ನಾಗೇಶ್
ಬೆಂಗಳೂರು: ಮಹತ್ವದ ಬೆಳವಣಿಗೆ ಒಂದರಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರನ್ನ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭೇಟಿ ಮಾಡಿದ್ದಾರೆ. ಶಿಕ್ಷಣ ಸಚಿವರ ಈ ಭೇಟಿ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಭೇಟಿ ಮಾಡಿದ ಬಿಸಿ ನಾಗೇಶ್, ಸಿದ್ದರಾಮಯ್ಯರ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಕೆಲವು ಹೊತ್ತುಗಳ ಕಾಲ ಇತ್ತೀಚೆಗಿನ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಬಿ.ಸಿ.ನಾಗೇಶ್, ಇದೊಂದು ಸೌಜನ್ಯದ ಭೇಟಿ ಅಂತಾ ತಿಳಿಸಿದ್ದಾರೆ.
Read More »