Breaking News

Yearly Archives: 2021

ಬೆಳಗಾವಿ ಸೇರಿ ರಾಜ್ಯದ 3 ಮಹಾನಗರ ಪಾಲಿಕೆಗೆ ಇಂದು ಚುನಾವಣೆ, ಬೆಳಗ್ಗೆ 7 ರಿಂದ ಸಂಜೆ 6 ರವರೆಗೆ ಮತದಾನ

ಬೆಂಗಳೂರು: ರಾಜ್ಯದ ಮೂರು ಮಹಾನಗರ ಪಾಲಿಕೆಗಳಿಗೆ ಇಂದು ಚುನಾವಣೆ ನಡೆಯಲಿದೆ. ಬೆಳಗಾವಿ, ಕಲಬುರ್ಗಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗಳಿಗೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿ ಮತದಾನ ನಡೆಯಲಿದ್ದು, ಸೆಪ್ಟಂಬರ್ 6 ರಂದು ಚುನಾವಣೆಯ ಫಲಿತಾಂಶ ಪ್ರಕಟಿಸಲಾಗುವುದು. ಬೆಳಗಾವಿ ಮಹಾನಗರಪಾಲಿಕೆಯ 58 ವಾರ್ಡ್ ಗಳಿಗೆ ಚುನಾವಣೆ ನಡೆಯಲಿದ್ದು 385 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 4,28,364 ಮತದಾರರು ಮತ ಚಲಾವಣೆ ಮಾಡಲಿದ್ದು, 415 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 162 …

Read More »

SSLC ಪಾಸಾದವರಿಗೆ ಗುಡ್ ನ್ಯೂಸ್: ಡಿಪ್ಲೊಮಾ ಪ್ರವೇಶಕ್ಕೆ ಸೆ. 20 ರವರೆಗೆ ಕಾಲಾವಕಾಶ

2021-22ನೇ ಸಾಲಿನ ಡಿಪ್ಲೊಮಾ ಪ್ರಥಮ ಸೆಮಿಸ್ಟರ್ ಪ್ರವೇಶಕ್ಕೆ ಮೊದಲು ಬಂದವರಿಗೆ ಆದ್ಯತೆ ನೀಡಲಾಗುತ್ತಿದ್ದು, ಈ ತಿಂಗಳ 20 ರವರೆಗೆ ಪ್ರವೇಶಾವಕಾಶ ವಿಸ್ತರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಅವರು, ರಾಜ್ಯದ 62 ಸರ್ಕಾರಿ, 34 ಅನುದಾನಿತ ಪಾಲಿಟೆಕ್ನಿಕ್ʼಗಳಲ್ಲಿ ಪ್ರವೇಶಾವಕಾಶವನ್ನು ಸೆ. 20 ರ ಸಂಜೆ ಕಚೇರಿ ಅವಧಿವರೆಗೂ ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು ಈ ಅವಕಾಶ ಪಡೆದುಕೊಂಡು ದಾಖಲಾಗಬೇಕು ಎಂದು ತಿಳಿಸಿದ್ದಾರೆ. ಪ್ರವೇಶಾವಧಿಯನ್ನು …

Read More »

4000 ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ

ದಾವಣಗೆರೆ: 4000 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಗೃಹಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರ ಸರ್ಕಾರಕ್ಕೆ ಮೊದಲು ರಾಜ್ಯದಲ್ಲಿ 33,000 ಪೊಲೀಸ್ ಹುದ್ದೆಗಳು ಖಾಲಿ ಉಳಿದಿದ್ದವು. ಹೊದ್ದೆ ಕೊರತೆ ನೀಗಿಸುವ ಜೊತೆಗೆ ಇದರೊಂದಿಗೆ ಇನ್ನೂ 4000 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ. ಹೆಚ್ಚುತ್ತಿರುವ ಸೈಬರ್ ಕ್ರೈಂ ಸೇರಿ ಅಪರಾಧ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಅತ್ಯಾಧುನಿಕ ತಂತ್ರಜ್ಞಾನ, ಉಪಕರಣಗಳನ್ನು ಒದಗಿಸಿ …

Read More »

ಬೆಲೆ ಏರಿಕೆ ತಡೆಗಟ್ಟುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ : ಎಸ್.ಜಿ.ನಂಜಯ್ಯನಮಠ

ಬಾಗಲಕೋಟೆ : ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಜನ ಸಾಮಾನ್ಯರು ಜೀವನ ನಿರ್ವಹಣೆ ಮಾಡುವುದು ಕಷ್ಟಕರವಾಗಿದೆ. ಇಂತಹ ಕಠಿಣ ಸಂದರ್ಭದಲ್ಲಿ ದಿನದಿಂದ ದಿನಕ್ಕೆ ಅಡುಗೆ ಅನೀಲ, ಇಂಧನ, ದಿನ ಬಳಕೆ ವಸ್ತುಗಳ ಬಳಕೆ ದುಪ್ಪಟ್ಟಾಗುತ್ತಿದೆ. ಬೆಲೆ ಏರಿಕೆ ತಡೆಗಟ್ಟುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ ಆಕ್ರೋಶ ವ್ಯಕ್ತಪಡಿಸಿದರು.

Read More »

ಸೆ.5, 6ರಂದು ರಾಜ್ಯದ ಹಲವೆಡೆ ಹೈಅಲರ್ಟ್‌

ಬೆಂಗಳೂರು: ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಸೆ.5 ಮತ್ತು 6ರಂದು ಗುಡುಗು ಸಹಿತ ವ್ಯಾಪಕ ಮಳೆ ನಿರೀಕ್ಷಿಸಲಾಗಿದ್ದು, ಹಲವು ಜಿಲ್ಲೆಗಳಿಗೆ ಹೈಅಲರ್ಟ್‌ ಘೋಷಿಸಲಾಗಿದೆ. ಸೆ.5 ಮತ್ತು 6ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ವಿಜಯಪುರ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಬಾಗಲಕೋಟೆ, ಕೊಪ್ಪಳ, ರಾಯಚೂರು, ಯಾದಗಿರಿ …

Read More »

ಕೋವಿಡ್ ಲಸಿಕೆ: ರಾಜ್ಯದ 9 ಜಿಲ್ಲೆಗಳಲ್ಲಿ ಶೇ 50ಕ್ಕಿಂತ ಕಡಿಮೆ ಸಾಧನೆ

ಬೆಂಗಳೂರು: ಕೋವಿಡ್ ಲಸಿಕೆ ವಿತರಣೆಯಲ್ಲಿ ರಾಜ್ಯದ 9 ಜಿಲ್ಲೆಗಳು ಹಿಂದೆ ಬಿದ್ದಿದ್ದು, ಲಸಿಕಾ ಅಭಿಯಾನ ಪ್ರಾರಂಭವಾಗಿ ಏಳೂವರೆ ತಿಂಗಳು ಕಳೆದರೂ ಶೇ 50ರಷ್ಟ ಗುರಿ ಸಾಧನೆ ಸಾಕಾರವಾಗಿಲ್ಲ. ಕಳೆದ ಜ.16ರಿಂದ ರಾಜ್ಯದಲ್ಲಿ ಲಸಿಕಾ ಅಭಿಯಾನ ಪ್ರಾರಂಭವಾಗಿದೆ. ಸಂಭಾವ್ಯ ಕೋವಿಡ್ ಮೂರನೇ ಅಲೆಯ ಮುನ್ನೆಚ್ಚರಿಕಾ ಕ್ರಮವಾಗಿ ಎರಡು ವಾರಗಳಿಂದ ಲಸಿಕೆ ವಿತರಣೆಗೆ ವೇಗ ನೀಡಲಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ ಪ್ರತಿ ಬುಧವಾರ 15 ಲಕ್ಷ ಹಾಗೂ ಉಳಿದ ದಿನ 6 ಲಕ್ಷ ಡೋಸ್‌ಗಳನ್ನು ವಿತರಿಸುವ ಗುರಿಯನ್ನು …

Read More »

ರಾಹುಲ್‌ ಪ್ರಕಾರ ಜಿಡಿಪಿ ಎಂದರೆ ಗಾಂಧಿ, ದಿಗ್ವಿಜಯ್‌, ಪಿ. ಚಿದಂಬರಂ’: ನರೋತ್ತಮ್ ವ್ಯಂಗ್ಯ

ಭೋಪಾಲ್‌, ಸೆಪ್ಟೆಂಬರ್‌ 02: ಜಿಡಿಪಿಯ ಬಗ್ಗೆ ಹೇಳಿಕೆ ನೀಡಿದ್ದ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿಯ ವಿರುದ್ದ ವಾಗ್ದಾಳಿ ನಡೆಸಿರುವ ಮಧ್ಯ ಪ್ರದೇಶ ಗೃಹ ಸಚಿವ ನರೋತ್ತಮ ಮಿಶ್ರಾ ಜಿಡಿಪಿಯ ಬಗ್ಗೆ ಹೊಸ ವಿವರಣೆ ನೀಡಿದ್ದಾರೆ. ಜಿಡಿಪಿ ಮತ್ತು ಇಂಧನ ದರ ಏರಿಕೆಯಾದ ವಿಚಾರದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಹಿನ್ನೆಲೆ ಮಧ್ಯಪ್ರದೇಶ ಗೃಹಸಚಿವ ನರೋತ್ತಮ್ ಮಿಶ್ರಾ ಕಿಡಿ ಕಾರಿದ್ದಾರೆ. ಅಡುಗೆ ಅನಿಲ, ಪೆಟ್ರೋಲ್ …

Read More »

ನಮ್ಮದು ಮಾತನಾಡುವ ಸರ್ಕಾರವಲ್ಲ, ಕಾರ್ಯ ಮಾಡಿ ತೋರಿಸುವ ಸರ್ಕಾರ : ಸಿಎಂ ಬೊಮ್ಮಾಯಿ

ದಾವಣಗೆರೆ : ರೈತ ಮಕ್ಕಳಿಗೆ ಶಿಷ್ಯವೇತನ, ವಿವಿಧ ಸಾಮಾಜಿಕ ಭದ್ರತಾ ಮಾಸಾಶನ ಹೆಚ್ಚಳ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ನಮ್ಮದು ಮಾತನಾಡುವ ಸರ್ಕಾರವಲ್ಲ, ಕಾರ್ಯ ಮಾಡಿ ತೋರಿಸುವ ಸರ್ಕಾರ ಎಂದು ತೋರಿಸಿಕೊಟ್ಟಿದ್ದೇವೆ ಎಮದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದ ಜಿ.ಎಂ.ಐ.ಟಿ. ಕಾಲೇಜು ಆವರಣದಲ್ಲಿ ಇಂದು (ಗುರುವಾರ, ಸೆಪ್ಟೆಂಬರ್ 2) ಕೇಂದ್ರ ಗೃಹ ಸಚಿವ ಅಮಿತ್ ಶಾ ಉಪಸ್ಥಿತಿಯಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದ ಅವರು, …

Read More »

ರಾಜ್ಯ ಸರ್ಕಾರದಿಂದ ರೈತರ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ : ಸೆ.5 ರಂದು `ರೈತ ವಿದ್ಯಾನಿಧಿ’ ಯೋಜನೆಗೆ ಚಾಲನೆ

ಬೆಂಗಳೂರು : ರಾಜ್ಯ ಸರ್ಕಾರವು ರೈತರ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶಿಕ್ಷಕರ ದಿನಾಚರಣೆಯ ಸೆಪ್ಟೆಂಬರ್ 5 ರಂದು ರೈತ ವಿದ್ಯಾನಿಧಿ ಯೋಜನೆಗೆ ಚಾಲನೆ ಸಿಗಲಿದೆ.   ರಾಜ್ಯದ ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ಹಾಗೂ ಉನ್ನತ ಶಿಕ್ಷಣಕ್ಕೆ ಒತ್ತುಕೊಡುವ ನಿಟ್ಟಿನಲ್ಲಿ ಎಸ್‌ಎಸ್‌ಎಲ್ ಸಿ ಪೂರ್ಣಗೊಳಿಸಿದ ರೈತರ ಮಕ್ಕಳಿಗೆ ವಾರ್ಷಿಕ ಶಿಷ್ಯವೇತನ ಲಭ್ಯವಾಗಲಿದೆ.   ಪಿಯುಸಿ, ಐಟಿಐ, ಡಿಪ್ಲೋಮಾ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ 2,500 ರೂ. ಹಾಗೂ …

Read More »

ಗೋಕಾಕ ನಗರದ ಸಾರ್ವಜನಿಕಕರಿಗೆ ನಗರಸಭೆಯಿಂದ ಸೂಚನೆ?

ಗೋಕಾಕ ನಾಗರಿಕರಲ್ಲಿ ಈ ಮೂಲಕ ತಿಳಿಸುವುದೇನೆಂದರೆ   ಗೋಕಾಕ ನಗರಕ್ಕೆ ನೀರು ಪೂರೈಕೆ ಮಾಡುವ ನಗರದ ನದಿಯ ದಡದಲ್ಲಿರುವ ಜಾಕವೆಲ್ ನಲ್ಲಿರುವ 200 ಎಚ್.ಪಿ ಪಂಪಸೆಟ್ ಮೋಟಾರ್ ರಿಪೇರಿ ಇದ್ದ ಕಾರಣ ಗೋಕಾಕ ನಗರದಲ್ಲಿ  ಶುಕ್ರವಾರ ದಿ.3-9-2021ಮತ್ತು ಶನಿವಾರ ದಿ.4-9-2021 ರಂದು ನೀರು ಸರಬುರಾಜಿನಲ್ಲಿ ವ್ಯತ್ಯಯವಾಗಲಿದೆ ಕಾರಣ ಸಾರ್ವಜನಿಕರು ಸಹಕರಿಸಲು   ನಗರಸಭೆಯ ಅಧ್ಯಕ್ಷರಾದ ಶ್ರೀ ಜಯಾನಂದ ಹುಣಶ್ಯಾಳಿ,ಪೌರಾಯುಕ್ತರಾದ ಶ್ರೀ ಶಿವಾನಂದ ಹಿರೇಮಠ   ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ …

Read More »