Breaking News

Yearly Archives: 2021

ಮುರುಗೇಶ್ ನಿರಾಣಿ ವಿರುದ್ಧ ಯತ್ನಾಳ್‌ ವಾಗ್ದಾಳಿ

ಬೆಳಗಾವಿ : ಕೆಲವರು ನಾನೇ ಜನವರಿ 14ರ ನಂತರ ಮುಖ್ಯಮಂತ್ರಿ ಆಗ್ತೇನಿ ಅಂತಾ ಹೇಳಿಕೊಂಡ ಓಡಾಡುತ್ತಿದ್ದಾರೆ. ಆ ರೀತಿ ಹೇಳಿಕೊಂಡು ಓಡಾಡುವವರ ಬಾಯಿಗೆ ಬೀಗ ಹಾಕಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ನಗರದಲ್ಲಿ ನಡೆದ ಪಂಚಮಸಾಲಿ ಸಮುದಾಯದ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವುದೇ ಒಂದು ಸಮುದಾಯವನ್ನ ಪಟ್ಟಿಗೆ ಸೇರಿಸಲು ಒಂದು ಪ್ರಕ್ರಿಯೆ ಇದೆ. ಆ ಪ್ರಕ್ರಿಯೆ ಮುಗಿಸಿ ಮಾರ್ಚ್ ಬಜೆಟ್‌ನೊಳಗೆ ಎಲ್ಲಾ ಸಮುದಾಯಗಳಿಗೆ ಕ್ಯಾಬಿನೆಟ್‌ನಲ್ಲಿ ನಿರ್ಣಯ …

Read More »

ಜಿಲ್ಲೆಗೆ ಇಂದು ಕೇಂದ್ರ ನೆರೆ ಅಧ್ಯಯನ ತಂಡ ಭೇಟಿ ನೀಡಿದ್ದು, ಹಾನಿ ಕುರಿತು ಪರಿಶೀಲನೆ

ಹುಬ್ಬಳ್ಳಿ(ಧಾರವಾಡ): ಜಿಲ್ಲೆಗೆ ಇಂದು ಕೇಂದ್ರ ನೆರೆ ಅಧ್ಯಯನ ತಂಡ ಭೇಟಿ ನೀಡಿದ್ದು, ಹಾನಿ ಕುರಿತು ಪರಿಶೀಲನೆ ನಡೆಸಲಿದೆಕಳೆದ ನವೆಂಬರ್​ ತಿಂಗಳಿನ‌ ಕೊನೆಯಲ್ಲಿ ಸುರಿದ ಮಳೆಗೆ ಸಾಕಷ್ಟು ಬೆಳೆ ಹಾನಿ ‌ಸಂಭವಿಸಿದೆ. ಹೀಗಾಗಿ, ಧಾರವಾಡ ಜಿಲ್ಲೆಗೆ ಇಂದು ಕೇಂದ್ರ ನೆರೆ ಅಧ್ಯಯನ ತಂಡ ಭೇಟಿ ನೀಡಿದೆ. ನವೆಂಬರ್‌ನಲ್ಲಿ ಮಳೆಯಿಂದ ಉಂಟಾದ ಹಾನಿ ಕುರಿತು ಪರಿಶೀಲಿಸಲಿದೆ. ಬೆಳೆ, ಮನೆ ಮತ್ತು ರಸ್ತೆ ಹಾನಿಯನ್ನು ವೀಕ್ಷಣೆ ಮಾಡಲಿದೆ‌. ಪರಿಶೀಲನೆಗೆೆಂದು ಹುಬ್ಬಳ್ಳಿ ಗ್ರಾಮೀಣ, ನವಲಗುಂದ, ಅಣ್ಣಿಗೇರಿ, ಕುಂದಗೋಳ ತಾಲೂಕುಗಳಿಗೆ ಭೇಟಿ …

Read More »

ಹುಬ್ಬಳ್ಳಿ-ಗುಂತಕಲ್‌ ನಡುವೆ ಡೆಮು ರೈಲು ಸಂಚಾರ

ಹುಬ್ಬಳ್ಳಿ : ನೈಋತ್ಯ ರೈಲ್ವೆಯು ರೈಲು ಸಂಖ್ಯೆ 073377/07338 ಎಸ್ಎಸ್ಎಸ್ ಹುಬ್ಬಳ್ಳಿ–ಗುಂತಕಲ್- ಎಸ್ಎಸ್ಎಸ್ ಹುಬ್ಬಳ್ಳಿ ವಿಶೇಷ ಪ್ಯಾಸೆಂಜರ್ ರೈಲು ಸೇವೆ ಆರಂಭವಾಗಿದೆ. ಹುಬ್ಬಳ್ಳಿ – ಗುಂತಕಲ್ ವಿಶೇಷ ಡೆಮು ಪ್ಯಾಸೆಂಜರ್‌ನ ಪ್ರಥಮ ರೈಲು ಹುಬ್ಬಳ್ಳಿಯಿಂದ ಹೊರಟಿತು ಡೆಮು ಎನ್ನುವುದು ಡೀಸೆಲ್ ಎಲೆಕ್ಟ್ರಿಕ್ ಮಲ್ಟಿಪಲ್ ಯೂನಿಟ್‌ನ ಸಂಕ್ಷಿಪ್ತ ರೂಪ. ಇದು ಆನ್ ಬೋರ್ಡ್ ಡೀಸೆಲ್ ಎಂಜಿನ್ನುಗಳಿಂದ ಸಂಚರಿಸಲ್ಪಡುವ ಬಹು ಘಟಕಗಳ ರೈಲು. ಈ ರೈಲಿನ ಒಂದು ಬಂಡಿಯಲ್ಲೇ ಎಂಜಿನ್ ಅನ್ನು ಅಳವಡಿಸಿರುವುದರಿಂದ ಡೆಮು …

Read More »

ಹಾ.. ಹಾ.. ಹೋ ಶಬ್ದಗಳಿದ್ದ ವಿಡಿಯೋಗಳಿಗೆ ಸ್ಟೇ ತಂದ 12 ಪತಿವ್ರತರು.. ಬಿಜೆಪಿ ಸುಮ್ಮನ್ಯಾಕಿದೆ?.. ಇಬ್ರಾಹಿಂ

ಬೆಳಗಾವಿ : ಮಾಜಿ ಸ್ಪೀಕರ್ ಅವರ ಆ ವಿವಾದಾತ್ಮಕ ಪದವನ್ನು ಕಡತದಿಂದ ತೆಗೆದು ಹಾಕಬೇಕಿತ್ತು ಎಂದು ಕಾಂಗ್ರೆಸ್​​ ನಾಯಕ ಸಿ ಎಂ ಇಬ್ರಾಹಿಂ ಹೇಳಿದರು. ಸುವರ್ಣ ಸೌಧದಲ್ಲಿ ಮಾತನಾಡಿದ ಅವರು, ಸ್ಪೀಕರ್ ಕಾಗೇರಿ ಆ ಸ್ಥಾನದಲ್ಲಿ ಕುಳಿತಾಗ ರಮೇಶ್ ಕುಮಾರ್ ಅವರ ಆ ಪದವನ್ನು ಕಡತದಿಂದ ತೆಗೆದು ಹಾಕಬೇಕಿತ್ತು. ಅದಕ್ಕೂ ಇದಕ್ಕೂ ಸಂಬಂಧವಿಲ್ಲ. ಇಬ್ಬರು ಒಂದೇ ಅರ್ಥದಲ್ಲಿ ಹೇಳಿದ್ದಾರೆ ಎಂದು ಸ್ಪೀಕರ್ ನಡೆಯ ಬಗ್ಗೆಯೂ ಆಕ್ಷೇಪ ವ್ಯಕ್ತಪಡಿಸಿದರು. ಸರ್ಕಾರಕ್ಕೆ ಯಾವ ಭಾಷೆಯಲ್ಲಿ ಹೇಳಬೇಕು …

Read More »

ಸಚಿವೆ ಶಶಿಕಲಾ ಜೊಲ್ಲೆ, ರಮೇಶ್ ಕುಮಾರ್ ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ

ಬೆಳಗಾವಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿಧಾನಸಭೆಯಲ್ಲಿ ನಿನ್ನೆ ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಸಚಿವೆ ಶಶಿಕಲಾ ಜೊಲ್ಲೆ, ರಮೇಶ್ ಕುಮಾರ್ ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಗುಡುಗಿದ್ದಾರೆ. ವಿಧಾನಸಭೆಯಲ್ಲಿ ನಿನ್ನೆ ಮಾತನಾಡಿದ್ದ ಮಜೈ ಸ್ಪೀಕರ್ ರಮೇಶ್ ಕುಮಾರ್, ಅತ್ಯಾಚಾರ ತಡೆಯಲು ಸಾಧ್ಯವಾಗದಿದ್ದರೆ ಮಲಗಿ ಆನಂದಿಸಿ ಎಂಬ ಮಾತಿದೆ ಎಂದು ಹೇಳಿ ನಕ್ಕಿದ್ದರು. ಮಾಜಿ ಸ್ಪೀಕರ್ ಅವರ ಈ ಹೇಳಿಕೆಗೆ ತೀವ್ರ ಖಂಡನೆ ವ್ಯಕ್ತವಾಗಿದೆ. ಬೆಳಗಾವಿಯಲ್ಲಿ ಮಾತನಾಡಿದ ಸಚಿವೆ ಶಶಿಕಲಾ …

Read More »

ಕ್ಷಮೆ ಕೋರಿದ ರಮೇಶ್ ಕುಮಾರ್ ಹೇಳಿದ್ದೇನು?

ಬೆಳಗಾವಿ: ಸದನದಲ್ಲಿ ಅಕ್ಷಮ್ಯ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿಧಾನಸಭೆಯಲ್ಲಿ ಕ್ಷಮೆಯಾಚಿಸಿದ್ದಾರೆ. ನಿನ್ನೆ ವಿಧಾನಸಭೆಯಲ್ಲಿ ಮಾತನಾಡಿದ್ದ ರಮೇಶ್ ಕುಮಾರ್, ’ಅತ್ಯಾಚಾರ ತಡೆಯಲಾಗದಿದ್ದರೆ ಮಲಗಿ ಆನಂದಿಸಿ’ ಎಂಬ ಒಂದು ಹೇಳಿಕೆಯಿದೆ ಎನ್ನುವ ಮೂಲಕ ವಿವಾದಕ್ಕೀಡಾಗಿದ್ದರು. ಮಾಜಿ ಸ್ಪೀಕರ್ ಹೇಳಿಕೆಗೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ರಮೇಶ್ ಕುಮಾರ್ ಬಹಿರಂಗ ಕ್ಷಮೆಯಾಚಿಸುವಂತೆ ಪಕ್ಷಾತೀತವಾಗಿ ಒತ್ತಾಯಗಳು ಕೇಳಿಬಂದಿದ್ದವು. ಇಂದು ವಿಧಾನಸಭಾ ಕಲಾಪ ಆರಂಭವಾಗುತ್ತಿದ್ದಂತೆ ಸದನದಲ್ಲಿ ಮಾತನಾಡಿದ ರಮೇಶ್ ಕುಮಾರ್, ನನ್ನ ಹೇಳಿಕೆಗೆ …

Read More »

ಮುಂದಿನ ವರ್ಷದಿಂದ ಅಂಗನವಾಡಿಯಲ್ಲಿ`ಎಲ್ ಕೆಜಿ, ಯುಕೆಜಿ’ ಆರಂಭ : ಸಚಿವ ಬಿ.ಸಿ. ನಾಗೇಶ್

ಬೆಳಗಾವಿ : ಮುಂದಿನ ಶೈಕ್ಷಣಿಕ ವರ್ಷದಿಂದ ಅಂಗನವಾಡಿಯಲ್ಲಿ ಎಲ್ ಕೆಜಿ, ಯುಕೆಜಿ ಪರಿಚಯಿಸಲು ಯೋಜನೆ ಮಾಡಿದ್ದೇವೆ ಇನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣದಲ್ಲಿ ಹಂತ ಹಂತವಾಗಿ ಎನ್ ಇಪಿ ಜಾರಿ ಮಾಡಲಾಗುತ್ತದೆ ಎಂಧು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.   ವಿಧಾನಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವ ಬಿ.ಸಿ.ನಾಗೇಶ್ ಅವರು, ಅಂಗನವಾಡಿಯಲ್ಲಿ ಎಲ್ ಕೆಜಿ, ಯುಕೆಜಿ ಪರಿಚಯಿಸಲು ಯೋಚನೆ ಮಾಡಿದ್ದೇವೆ.ಅಲ್ಲಿರುವ ಸಿಬ್ಬಂದಿಗೆ ತರಬೇತಿ ನೀಡಿ …

Read More »

ಇದ್ಯಾವ ಅಭಿವೃದ್ಧಿ, ಇದಾ ನಿಮ್ಮ ನೀತಿ’ ಎಂದು ರಾಜ್ಯ ಸರ್ಕಾರದ ವಿರುದ್ಧವೇ ಬಿಜೆಪಿ ಸದಸ್ಯ ಸಿದ್ದು ಸವದಿ ವಿಧಾನಸಭೆಯಲ್ಲಿ ಕಿಡಿ

ಬೆಳಗಾವಿ (ಸುವರ್ಣ ವಿಧಾನಸೌಧ): ‘ಇದ್ಯಾವ ಅಭಿವೃದ್ಧಿ, ಇದಾ ನಿಮ್ಮ ನೀತಿ’ ಎಂದು ರಾಜ್ಯ ಸರ್ಕಾರದ ವಿರುದ್ಧವೇ ಬಿಜೆಪಿ ಸದಸ್ಯ ಸಿದ್ದು ಸವದಿ ವಿಧಾನಸಭೆಯಲ್ಲಿ ಗುರುವಾರ ಹರಿಹಾಯ್ದರು. ಬನಹಟ್ಟಿಯ ಹಳೆಯಲ್ಲಮ್ಮ ದೇವಸ್ಥಾನಕ್ಕೆ ಮೂಲಸೌಕರ್ಯ ಒದಗಿಸುವ ಕಾಮಗಾರಿಗೆ ಸಂಬಂಧಿಸಿದಂತೆ ಪ್ರಶ್ನೋತ್ತರ ಅವಧಿಯಲ್ಲಿ ಸಿದ್ದು ಸವದಿ ಪ್ರಶ್ನೆ ಕೇಳಿದರು.’₹20 ಲಕ್ಷ ಮೊತ್ತದ ಕಾಮಗಾರಿ ಆರಂಭವಾಗಿ ಮೂರು ವರ್ಷವಾಗಿದ್ದು, ಕಾಮಗಾರಿ ಮುಗಿಸಲು ವಿಳಂಬ ಮಾಡಲಾಗುತ್ತಿದೆ. ಇದಾ ಅಭಿವೃದ್ಧಿ ನೀತಿ’ ಎಂದೂ ಪ್ರಶ್ನಿಸಿದರು. ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ …

Read More »

ಬಿಟ್ ಕಾಯಿನ್ ಹಗರಣದಲ್ಲಿ ಪೊಲೀಸರು ಅತ್ಯಂತ ಪಾರದರ್ಶಕವಾಗಿ ನಡೆದುಕೊಂಡಿದ್ದಾರೆ: ಗೃಹ ಸಚಿವ

: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿರುವ ಬಿಟ್ ಕಾಯಿನ್ ಹಗರಣದಲ್ಲಿ ಪೊಲೀಸರು ಅತ್ಯಂತ ಪಾರದರ್ಶಕವಾಗಿ ನಡೆದುಕೊಂಡಿದ್ದಾರೆ ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಅವರು ಪರಿಷತ್‌ನಲ್ಲಿ ತಿಳಿಸಿದರು. ಸದಸ್ಯ ಯು.ಬಿ.ವೆಂಕಟೇಶ ಅವರ ಚುಕ್ಕೆಗುರುತಿನ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ 11 ಬಿಟ್‌ಕಾಯಿನ್ ಪ್ರಕರಣಗಳು ದಾಖಲಾಗಿವೆ. ಈ ಹಗರಣದಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ನಿಯಮಾನುಸಾರ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು.

Read More »

sda&fda ಹುದ್ದೆಗೆ ಕರ್ನಾಟಕ ಲೋಕಸೇವಾ ಆಯೋಗದಿಂದ ಆಯ್ಕೆಗೊಂಡ ಅಭ್ಯರ್ಥಿಗಳ ಸಕ್ಷಮ ಪ್ರಾಧಿಕಾರದಿಂದ ದಾಖಲಾತಿ ಪರಿಶೀಲನೆ ಪ್ರಕ್ರಿಯೆ ನೆಡೆಸಿ ನೇಮಕಾತಿ

ಬೆಳಗಾವಿ: ಪ್ರಥಮ ಹಾಗೂ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗೆ ಕರ್ನಾಟಕ ಲೋಕಸೇವಾ ಆಯೋಗದಿಂದ ಆಯ್ಕೆಗೊಂಡ ಅಭ್ಯರ್ಥಿಗಳ ಸಕ್ಷಮ ಪ್ರಾಧಿಕಾರದಿಂದ ದಾಖಲಾತಿ ಪರಿಶೀಲನೆ ಪ್ರಕ್ರಿಯೆ ನೆಡೆಸಿ ನೇಮಕಾತಿ ಆದೇಶವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸದಸ್ಯ ಅ.ದೇವೆಗೌಡ ಅವರ ಪ್ರಶ್ನೆಗೆ ಮೇಲ್ಮನೆಯಲ್ಲಿ ಉತ್ತರಿಸಿದ ಅವರು 2017-18ರಲ್ಲಿ ಪ್ರಥಮ ದರ್ಜೆ ಸಹಾಯಕರು ಹಾಗೂ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಕೆ.ಪಿ.ಎಸ್.ಸಿ. ಅಂತಿಮ ಆಯ್ಕೆ ಪಟ್ಟಿಯನ್ನು ಸಕ್ಷಮ …

Read More »