ಬೆಂಗಳೂರು: ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಭವಿಷ್ಯ ನಿಜವಾಗಿದೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮತ್ತು ಮುಂದಿನ ಮುಖ್ಯಮಂತ್ರಿ ಬಗ್ಗೆ ಅವರು ನೀಡಿದ್ದ ಹೇಳಿಕೆ ನಿಜವಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ಬಗ್ಗೆ ಮೊದಲೇ ಸುಳಿವು ನೀಡಿ, ಉತ್ತರ ಕರ್ನಾಟಕದ ಲಿಂಗಾಯತ ನಾಯಕರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಯತ್ನಾಳ್ ಹೇಳಿದ್ದರು. ಅವರ ಭವಿಷ್ಯ ನಿಜವಾಗಿದೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಉತ್ತರ ಕರ್ನಾಟಕದ ಲಿಂಗಾಯಿತ ಸಮುದಾಯದ ಬಸವರಾಜ ಬೊಮ್ಮಾಯಿ …
Read More »Yearly Archives: 2021
ನೂತನ ಸಿಎಂ ಬೊಮ್ಮಾಯಿ ಅವರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ
ಗೋಕಾಕ : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ ಅವರಿಗೆ ಕೆಎಂಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಬೊಮ್ಮಾಯಿ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸರ್ವಾನುಮತದಿಂದ ಆಯ್ಕೆಯಾಗಿರುವುದರಿಂದ ಸರ್ಕಾರ ಮತ್ತು ಭಾರತೀಯ ಜನತಾ ಪಾರ್ಟಿಯ ಸಂಘಟನೆ ಹೆಚ್ಚು ಬಲಶಾಲಿಯಾಗಲಿದೆ. ಕ್ರಿಯಾಶೀಲ ವ್ಯಕ್ತಿತ್ವದ ಸ್ನೇಹಜೀವಿಯಾಗಿರುವ ಬೊಮ್ಮಾಯಿ ಅವರಿಂದ ರಾಜ್ಯ ಮತ್ತಷ್ಟು ಅಭಿವೃದ್ಧಿ ಕಾಣಲಿದೆ. ಇವರ ಆಯ್ಕೆಯಿಂದ ನಮ್ಮ ಉತ್ತರ ಕರ್ನಾಟಕಕ್ಕೂ ಹೆಚ್ಚಿನ …
Read More »ಬಸವರಾಜ ಬೊಮ್ಮಾಯಿ ನಾಳೆಯೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ
ಬೆಂಗಳೂರು – ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗಿದೆ. ಶಾಸಕಾಂಗ ಸಭೆಯಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬೊಮ್ಮಾಯಿ ಹೆಸರನ್ನು ಸೂಚಿಸಿದರು. ಗೋವಿಂದ ಕಾರಜೋಳ ಅನುಮೋದಿಸಿದರು. ಬಸವರಾಜ ಬೊಮ್ಮಾಯಿ ನಾಳೆಯೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.
Read More »ತುಂಗಭದ್ರಾ ಜಲಾಶಯದ ಎಲ್ಲಾ ಗೇಟ್ ಓಪನ್ -ವಿದ್ಯುತ್ ದೀಪಗಳಿಂದ ಕಂಗೊಳಿಸ್ತಿದೆ ಡ್ಯಾಂ
ವಿಜಯನಗರ: ಕಲ್ಯಾಣ ಕರ್ನಾಟಕದ ಜೀವನಾಡಿ ಎಂದೇ ಖ್ಯಾತಿ ಪಡೆದ ತುಂಗಭದ್ರಾ ಜಲಾಶಯ ವಿದ್ಯುತ್ ದೀಪಗಳಿಂದ ಕಂಗೊಳಿಸ್ತಿದೆ. ಈಗಾಗಲೇ ತುಂಗಭದ್ರಾ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದ್ದು. ಡ್ಯಾಂನ 33 ಕ್ರಸ್ಟ್ ಗೇಟ್ ಮೂಲಕ ನದಿಗೆ ನೀರನ್ನು ಹರಿಸಲಾಗ್ತಿದೆ. ಗೇಟ್ ಗಳಿಗೆ ವಿವಿಧ ಬಣ್ಣಗಳ ವಿದ್ಯುತ್ ದೀಪಗಳನ್ನ ಅಳವಡಿಕೆ ಮಾಡಿ, ನೀರಿಗೆ ಬಣ್ಣ ಬಳಿದಂತೆ ಭಾಸವಾಗುತ್ತಿದೆ. ಇನ್ನು ತುಂಗಭದ್ರಾ ಜಲಾಶಯದ ಪಾರ್ಕ್ಗೂ ಜೀವ ಕಳೆ ಬಂದಿದೆ. ಕತ್ತಲಾಗುತ್ತಿಂದೆ ಜಲಾಶಯದ ಸೌಂದರ್ಯ ಜನರನ್ನ …
Read More »ಬಿಎಸ್ ವೈ ಬಲಗೈ ಬಂಟ ಬಸವರಾಜ ಬೊಮ್ಮಾಯಿ..ಕರ್ನಾಟಕದ ನೂತನ ಮುಖ್ಯಮಂತ್ರಿ..
ಬೆಂಗಳೂರು – ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ ಎಂದು ಗೊತ್ತಾಗಿದೆ. ಅಧಿಕೃತವಾಗಿ ಘೋಷಣೆ ಇನ್ನೂ ಆಗಬೇಕಿದೆ. ಬೆಂಗಳೂರಿನ ಕ್ಯಾಪಿಟಲ್ ಹೊಟೆಲ್ ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಪಕ್ಷದ ವೀಕ್ಷಕರ ಉಪಸ್ಥಿತಿಯಲ್ಲಿ ಈ ಘೋಷಣೆಯಾಗಿದೆ. ಬಿ.ಎಸ್.ಯಡಿಯೂರಪ್ಪ ರಾಜಿನಾಮೆಯಿಂದಾಗಿ ತೆರವಾಗಿರುವ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮಾಹಿತಿ ಬಂದಿದೆ. ಬಸವರಾಜ ಬೊಮ್ಮಾಯಿ ಯಡಿಯೂರಪ್ಪ ಸಂಪುಟದಲ್ಲಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದರು. ಬಸವರಾಜ …
Read More »ಇಂದೇ ಹೊಸ ಸಿಎಂ ಆಯ್ಕೆ; ಸಂಜೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನ
ಬೆಂಗಳೂರು(ಜು.27): ಬಿಎಸ್ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿನ್ನೆಲೆ, ಇಂದು ಹೊಸ ಸಿಎಂ ಆಯ್ಕೆ ನಡೆಯಲಿದೆ ಎಂದು ತಿಳಿದು ಬಂದಿದೆ. ಹೀಗಾಗಿ ವೀಕ್ಷಕರಾಗಿ ಕೇಂದ್ರದಿಂದ ಧರ್ಮೇಂದ್ರ ಪ್ರಧಾನ್, ಕಿಶನ್ ರೆಡ್ಡಿ, ಅರುಣ್ ಸಿಂಗ್ ಇಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಇಂದು ಸಂಜೆ 7.30ಕ್ಕೆ ನಗರದ ಕ್ಯಾಪಿಟಲ್ ಹೋಟೆಲ್ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ತ್ರಿಮೂರ್ತಿಗಳು ಶಾಸಕಾಂಗ ಪಕ್ಷದ ಸಭೆಯ ನೇತೃತ್ವ ವಹಿಸಲಿದ್ದಾರೆ. ಬಹುತೇಕ ಇಂದೇ ಹೊಸ ಸಿಎಂ …
Read More »ಹಬ್ಬದ ಕೂಳಿಗೆ ಆಸೆ ಬಿದ್ದು ವರ್ಷದ ಕೂಳು ಕಳೆದುಕೊಂಡ್ರಾ ಬಾಂಬೆ ಟೀಮ್!
ಬೆಂಗಳೂರು, ಜು. 27: ಅಧಿಕಾರದ ಆಸೆಗೆ ಬಿದ್ದು ಮಾತೃ ಪಕ್ಷಕ್ಕೆ ಮಣ್ಣೆರಚಿ ಬಿಜೆಪಿ ಸರ್ಕಾರವನ್ನು ಸ್ಥಾಪಿಸಿದ್ದ ಬಾಂಬೆ ಗ್ಯಾಂಗ್ ವಿಚಲಿತಕ್ಕೆ ಒಳಗಾಗಿದೆ. ಪ್ರಭಾವಿ ಖಾತೆಗಳನ್ನು ಕರುಣಿಸಿದ್ದ ಬಿ.ಎಸ್. ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷಕ್ಕೆ ಬದುಕನ್ನೇ ಮುಡಿಪಿಟ್ಟ ಬಿಎಸ್‌ವೈ ಅವರಿಂದಲೇ ರಾಜೀನಾಮೆ ಪಡೆದ ಬಿಜೆಪಿ ಪಕ್ಷ ಪಕ್ಷಾಂತರಿಗಳಿಗೆ ಮುಂದಿನ ದಿನಗಳಲ್ಲಿ ಎಷ್ಟು ಮರ್ಯಾದೆ ಕೊಡಬಹುದು ಎಂಬ ಪ್ರಶ್ನೆ ಎದುರಾಗಿದೆ. ಹಬ್ಬದ ಕೂಳಿಗೆ ಆಸೆ ಬಿದ್ದು ವರ್ಷದ ಕೂಳು …
Read More »ಸಂಸದೀಯ ಮಂಡಳಿಯಲ್ಲೇ ಸಿಎಂ ಹೆಸರು ಫೈನಲ್, ನೆಪ ಮಾತ್ರಕ್ಕೆ ಶಾಸಕಾಂಗ ಸಭೆ
ಬೆಂಗಳೂರು, ಜು.27- ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಕಗ್ಗಂಟ್ಟಾಗಿರುವುದರಿಂದ ದೆಹಲಿ ವರಿಷ್ಠರೇ ಪಕ್ಷದ ಸಂಸದೀಯ ಮಂಡಳಿಯಲ್ಲೇ ಒಬ್ಬರನ್ನು ಆಯ್ಕೆ ಮಾಡುವುದು ಖಚಿತವಾಗಿದೆ. ಸಿಎಂ ಸ್ಥಾನ ಅಲಂಕರಿಸಲು ಸುಮಾರು ಒಂದು ಡಜನ್‍ಗೂ ಅಧಿಕ ಆಕಾಂಕ್ಷಿಗಳು ಇರುವುದರಿಂದ ಸಂಸದೀಯ ಮಂಡಳಿಯಲ್ಲೇ ಹೆಸರು ಅಂತಿಮಗೊಳಿಸಿ ನೆಪಮಾತ್ರಕ್ಕೆ ಶಾಸಕಾಂಗ ಸಭೆ ನಡೆಯಲಿದೆ. ವರಿಷ್ಠರ ಸೂಚನೆಯನ್ನು ವಿಧಿಯಿಲ್ಲದೆ ಎಲ್ಲರೂ ಒಪ್ಪಿಕೊಳ್ಳಬೇಕಾಗುತ್ತದೆ. ಶಾಸಕರ ಅಭಿಪ್ರಾಯದಂತೆ ಶಾಸಕಾಂಗ ಪಕ್ಷದ ನಾಯಕನ್ನು ಆಯ್ಕೆ ಮಾಡಲು ಹೋದರೆ ನೂರೆಂಟು ತಾಪತ್ರಯಗಳು ಎದುರಾಗಬಹುದೆಂಬ ಹಿನ್ನೆಲೆಯಲ್ಲಿ ವರಿಷ್ಠರೇ …
Read More »ಮತ್ತೆ ಹೋರಾಟಕ್ಕೆ ಸಜ್ಜಾದ ಸಾರಿಗೆ ನೌಕರರು, ಫ್ರೀಡಂ ಪಾರ್ಕ್‍ನಲ್ಲಿ ಧರಣಿ
ಬೆಂಗಳೂರು, ಜು.27- ರಾಜ್ಯದ 4 ಸಾರಿಗೆ ನಿಗಮಗಳು ಮತ್ತೆ ಹೋರಾಟಕ್ಕೆ ಮುಂದಾಗಿದ್ದು, ಜುಲೈ 29 ರಂದು ನಗರದ ಫ್ರೀಡಂ ಪಾರ್ಕ್‍ನಲ್ಲಿ ನಡೆಸಲಿವೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ ಅಧ್ಯಕ್ಷ ಹೆಚ್.ಡಿ.ರೇವಪ್ಪ, ಕಳೆದ ಏಪ್ರಿಲ್‍ನಲ್ಲಿ ಸಾರಿಗೆ ನೌಕರರ ಮುಷ್ಕರ ನಿರತರ ಬೇಡಿಕೆಗಳನ್ನು ಸರ್ಕಾರ ಈಡೇರಿಸಲಿಲ್ಲ, ಮುಷ್ಕರದಲ್ಲಿ ಪಾಲ್ಗೊಂಡಿದ್ದ ಕಾರ್ಮಿಕರನ್ನು ತೀವ್ರವಾದ ಶಿಕ್ಷೆಗೆ ಗುರಿಪಡಿಸಲಾಗಿದೆ. 4 ಸಾರಿಗೆ ನಿಗಮಗಳಲ್ಲಿ ಸಾವಿರಾರು ಕಾರ್ಮಿಕರನ್ನು ವಜಾ, ವರ್ಗಾವಣೆ , …
Read More »ಕೊಪ್ಪಳದಲ್ಲಿ ಕೊರೊನಾ ಮೂರನೇ ಅಲೆಯ ಮುನ್ಸೂಚನೆ; ಆರು ಮಕ್ಕಳಲ್ಲಿ ಕೊರೊನಾ ಸೋಂಕು ಧೃಡ
ಕೊಪ್ಪಳ: ಕೊರೊನಾ ಮೂರನೇ ಅಲೆಯ ಭೀತಿ ಹೆಚ್ಚುತ್ತಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಎಲ್ಲೆಡೆ ಕಟ್ಟುನಿಟ್ಟಾದ ಕ್ರಮಗಳನ್ನು ಮತ್ತೆ ಜಾರಿಗೊಳಿಸಬೇಕಾದ ಅನಿವಾರ್ಯತೆ ಕಾಣಿಸುತ್ತಿದೆ. ಅನ್ಲಾಕ್ ನಂತರ ಜನ ಸಂಪೂರ್ಣ ಮೈಮರೆತು ಮೋಜು ಮಸ್ತಿಯಲ್ಲಿ ತೊಡಗಿರುವುದರಿಂದ ಮೂರನೇ ಅಲೆ ಕಟ್ಟಿಟ್ಟ ಬುತ್ತಿ ಎನ್ನುವಂತಾಗಿದೆ. ಹೀಗಿರುವಾಗಲೇ ಕೊಪ್ಪಳದಲ್ಲಿ ಆರು ಮಕ್ಕಳಿಗೆ ಕೊರೊನಾ ಸೋಂಕು ಧೃಡಪಟ್ಟಿದ್ದು, ಮತ್ತಷ್ಟು ಆತಂಕಕ್ಕೆ ಗುರಿ ಮಾಡಿದೆ. ಕೊಪ್ಪಳದ ಅಮೂಲ್ಯ ದತ್ತು ಕೇಂದ್ರದಲ್ಲಿನ ಆರು ಮಕ್ಕಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ದತ್ತು ಕೇಂದ್ರದ …
Read More »