ನಿಖಿಲ್ ಕುಮಾರಸ್ವಾಮಿ ಅಭಿನಯದ ಬಹುನಿರೀಕ್ಷೆಯ ‘ರೈಡರ್’ ಚಿತ್ರದ ಕೊನೆಯ ಹಂತದ ಚಿತ್ರೀಕರಣವನ್ನು ಇಂದಿನಿಂದ ಪ್ರಾರಂಭ ಮಾಡಲಾಗಿದೆ ತೆಲುಗು ನಿರ್ದೇಶಕ ವಿಜಯ್ ಕುಮಾರ್ ಕೊಂಡ ನಿರ್ದೇಶಿಸುತ್ತಿರುವ ಈ ಸಿನಿಮಾ ಈಗಾಗಲೇ ಟೀಸರ್ ಮೂಲಕ ಸಾಕಷ್ಟು ಸದ್ದು ಮಾಡಿದೆ. ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದಾರೆ. ಕನ್ನಡ ಹಾಗೂ ತೆಲುಗಿನಲ್ಲಿ ಈ ಚಿತ್ರ ಬಿಡುಗಡೆಯಾಗುತ್ತಿದ್ದು, ಕಶ್ಮೀರಾ ಪರದೇಶಿ ಈ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ರೊಮ್ಯಾಂಟಿಕ್ ಆಕ್ಷನ್ ಎಂಟರ್ ಟೇನರ್ …
Read More »Yearly Archives: 2021
ಯಡಿಯೂರಪ್ಪನವರ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಜೆ.ಪಿ ನಡ್ಡಾ
ಬೆಂಗಳೂರು/ಗೋವಾ: ಕರ್ನಾಟಕ ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಸರ್ಕಾರ ಉತ್ತಮ ಕೆಲಸಗಳನ್ನು ಮಾಡುತ್ತಿದೆ. ರಾಜ್ಯದ ಬಿಜೆಪಿಯಲ್ಲಿ ಯಾವುದೇ ಬಿಕ್ಕಟ್ಟು ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ. ಗೋವಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ನಡ್ಡಾ, ಯಡಿಯೂರಪ್ಪನವರ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಯಡ್ಡಿಯವರ ಬೆನ್ನು ತಟ್ಟಿದ್ದಾರೆ. ಜುಲೈ 25 ಕ್ಕೆ ಯಡಿಯೂರಪ್ಪನವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಅಲ್ಲದೇ ಬೆಳಗಾವಿಯಲ್ಲಿ ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪನವರೇ ಇಂದು ಸಂಜೆ ಹೈಕಮಾಂಡ್‌ನಿಂದ …
Read More »ಹೈಕಮಾಂಡ್ ಸೂಚನೆ ಎಲ್ಲರೂ ಪಾಲಿಸಬೇಕು; ಬಿ.ಎಸ್.ವೈ.ಗೆ ಪರೋಕ್ಷ ಟಾಂಗ್ ನೀಡಿದ ಸಿ.ಟಿ. ರವಿ
ಪಣಜಿ: ಸಿಎಂ ಯಡಿಯೂರಪ್ಪ ಬದಲಾವಣೆ ಮಾಡಬಾರದು ಎಂದು ಹಲವು ಮಠಾಧೀಶರು ಒತ್ತಾಯಿಸುತ್ತಿರುವ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ನೀಡಿರುವ ಹೇಳಿಕೆ ಅಚ್ಚರಿಗೆ ಕಾರಣವಾಗಿದ್ದು, ಹೈಕಮಾಂಡ್ ಸೂಚನೆಯನ್ನು ಎಲ್ಲರೂ ಪಾಲಿಸಬೇಕು ಎಂದು ಹೇಳುವ ಮೂಲಕ ಪರೋಕ್ಷವಾಗಿ ಬಿ.ಎಸ್.ವೈ.ಗೆ ರಾಜೀನಾಮೆ ಕುರಿತು ಸಲಹೆ ನೀಡಿದ್ದಾರೆ. ಗೋವಾದಲ್ಲಿ ಮಾತನಾಡಿದ ಸಿ.ಟಿ. ರವಿ, ಸಿಎಂ ಯಡಿಯೂರಪ್ಪ ಜನಪ್ರಿಯ ನಾಯಕ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಬಿ.ಎಸ್.ವೈ.ಗೆ ಪಕ್ಷ ಎಲ್ಲವನ್ನೂ ನೀಡಿದೆ. ವಿಪಕ್ಷ ನಾಯಕನಾಗಿ, …
Read More »ನೊಂದ ಕುಟುಂಬಗಳಿಗೆ ಆಸರೆಯಾಗೋಣ: ರಾಹುಲ್ ಜಾರಕಿಹೊಳಿ ನಿರ್ಗತಿಕರ ಸಾತ್ವಾಂನ ಹೇಳಿದ ಯುವ ನಾಯಕ ರಾಹುಲ್
ಗೋಕಾಕ: ರಣ ಭೀಕರ ಮಳೆಗೆ ಘಟಪ್ರಭಾ ನದಿಯ ತೀರದ ಗ್ರಾಮಗಳು ಪ್ರವಾಹಕ್ಕೆ ತುತ್ತಾಗಿದ್ದು, ಪ್ರವಾಹ ಪೀಡಿತ ಗ್ರಾಮಗಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಭೇಟಿ ನೀಡಿ, ರವಿವಾರ ಪರಿಸ್ಥಿತಿ ಅವಲೋಕಿಸಿದರು. ಅರಭಾವಿ ವಿಧಾನ ಸಭಾ ಮತ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಅಡಿಬಟ್ಟಿ, ಚಿಗದೊಳ್ಳಿ, ಜಾಕ್ವೆಲ್ ಗೌಡನ್ ಕ್ರಾಸ್ ಮೆಳವಂಕಿ, ಕಲಾರ್ಕೊಪ್ಪ, ಹಡಗಿನಾಳ, ತಳಕಟ್ನಾಳ , ಉದಗಟ್ಟಿ ಗ್ರಾಮದ ಗಂಜಿ ಕೇಂದ್ರಗಳಲ್ಲಿರುವ ನಿರ್ಗತಿಕರನ್ನು ಭೇಟಿ ಮಾಡಿ, …
Read More »ಸ್ಮರಣೀಯವಾಗಲಿದೆ ಜೋಗ ಜಲಪಾತ ವೀಕ್ಷಣೆ: ಯಡಿಯೂರಪ್ಪ
ಸಾಗರ: ಜೋಗ ಜಲಪಾತ ಪ್ರದೇಶದಲ್ಲಿ ₹ 180 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಂದಾಗಿ ಭವಿಷ್ಯದಲ್ಲಿ ನೋಡುಗರ ಪಾಲಿಗೆ ಜೋಗ ಜಲಪಾತ ವೀಕ್ಷಣೆ ಸ್ಮರಣೀಯವಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ವರ್ಚುಯಲ್ ಮೂಲಕ ಶನಿವಾರ ಚಾಲನೆ ನೀಡಿ, ತಾಲ್ಲೂಕಿನ ಇರುವಕ್ಕಿ ಗ್ರಾಮದಲ್ಲಿ ಸ್ಥಾಪನೆಗೊಂಡಿರುವ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜೋಗ ಜಲಪಾತವನ್ನು ಸರ್ವಋತು ಜಲಪಾತವನ್ನಾಗಿ ರೂಪಿಸುವ ದೃಷ್ಟಿಯಿಂದ …
Read More »ಸಿಎಂ ಬಿಎಸ್ವೈ ಕಡೆಯಿಂದ ಕೊಡಲಾದ ಲಕೋಟೆಯಲ್ಲೇನಿತ್ತು?; ಸ್ವಾಮೀಜಿಯೊಬ್ಬರಿಂದ ಸ್ಪಷ್ಟನೆ ಹೊರಬಿತ್ತು..
ಬೆಂಗಳೂರು: ಕಳೆದೆರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಸ್ವಾಮೀಜಿಗಳನೇಕರು ಭೇಟಿಯಾಗಿ, ಬೆಂಬಲ ಸೂಚಿಸಿದ್ದ ಸಂದರ್ಭದ ದೃಶ್ಯಾವಳಿಯೊಂದು ಬಹಳಷ್ಟು ಕಡೆ ಹರಿದಾಡಿತ್ತು. ಸಿಎಂ ಭೇಟಿ ವೇಳೆ ಎಲ್ಲ ಸ್ವಾಮೀಜಿಗಳಿಗೂ ಒಂದು ಲಕೋಟೆ ಕೊಡಲಾಗಿದ್ದು, ಆ ಬಗ್ಗೆ ಹಲವರು ಹಲವಾರು ರೀತಿಯಲ್ಲಿ ಪ್ರತಿಕ್ರಿಯಿಸಿದ್ದರಿಂದ ಆ ವಿಡಿಯೋ ಸಾಕಷ್ಟು ಹಂಚಿಕೆ ಆಗಿತ್ತು. ಇದೀಗ ಆ ಕುರಿತು ಸ್ವಾಮೀಜಿಯೊಬ್ಬರು ಮಾತನಾಡಿದ್ದಾರೆ. ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಮಠಾಧೀಶರ ಸಮ್ಮೇಳನದಲ್ಲಿ ದಿಂಗಾಲೇಶ್ವರ …
Read More »ಸಿಎಂ ಹುದ್ದೆ ಖಾಲಿ ಇಲ್ಲ : ಸಚಿವ ಜಗದೀಶ ಶೆಟ್ಟರ
ಹುಬ್ಬಳ್ಳಿ: ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೈಕಮಾಂಡ್ ನಿಂದ ಯಾವುದೇ ಸೂಚನೆ ಬಂದಿಲ್ಲ. ಸಿಎಂ ಹುದ್ದೆ ಖಾಲಿ ಇಲ್ಲ. ಸದ್ಯ ಈ ವಿಷಯ ಅಪ್ರಸ್ತುತ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಹೇಳಿದರು. ನಗರದಲ್ಲಿಂದು (ಜು.25) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಬಗ್ಗೆ ಪಕ್ಷದ ವರಿಷ್ಠರು ಯಾವ ನಿರ್ಧಾರ ಏನೆಂಬುದು ನಮಗೆ ಗೊತ್ತಿಲ್ಲ ಮತ್ತು ಈ ಬಗ್ಗೆ ಯಡಿಯೂರಪ್ಪ ಅವರಿಗೂ ಅವರಿಂದ ಸೂಚನೆ ಬಂದಂತಿಲ್ಲ. ಅವರ ಸೂಚನೆಯಂತೆ ನಡೆದುಕೊಳ್ಳುವೆ …
Read More »ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸನ್ನದ್ಧ: ಸಚಿವ ಬಸವರಾಜ ಬೊಮ್ಮಾಯಿ
ಹಾವೇರಿ: ‘ಮನೆ ಕಳೆದು ಕೊಂಡವರಿಗೆ ತಕ್ಷಣ ₹10 ಸಾವಿರ ಪರಿಹಾರ ಪಾವತಿ ನೀಡಬೇಕು. ಅತಿವೃಷ್ಟಿ ಮತ್ತು ನೆರೆಯಿಂದ ಹಾನಿಯ ಕುರಿತು ಸಮೀಕ್ಷೆ ನಡೆಸಲಾಗುವುದು ಹಾಗೂ ತೊಂದರೆಗೊಳದವರಿಗೆ ಪರ್ಯಾಯ ವ್ಯವಸ್ಥೆಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಪ್ರವಾಹ ಹಾಗೂ ಅತಿವೃಷ್ಟಿ ಪರಿಶೀಲನೆಗಾಗಿ ಶನಿವಾರ ಶಿಗ್ಗಾವಿ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ದೊಡ್ಡ ಪ್ರಮಾಣದ ಮಳೆ ಕಾರಣ ಜಿಲ್ಲೆಯ …
Read More »ಪ್ರವಾಹ ಸಂತ್ರಸ್ತರಿಗೆ ಪರ್ಯಾಯ ವ್ಯವಸ್ಥೆಗೆ ಕ್ರಮ: ಸಿಎಂ ಯಡಿಯೂರಪ್ಪ ಭರವಸೆ
ಬೆಳಗಾವಿ: ಕಳೆದು ಒಂದು ವಾರದಿಂದ ಸುರಿಯುತ್ತಿರುವ ಮಳೆಯ ಪರಿಣಾಮ ಪ್ರವಾಹದಿಂದ ಬಾಧಿತಗೊಂಡಿರುವ ಹಿರಣ್ಯಕೇಶಿ ನದಿಪಾತ್ರದ ವಿವಿಧ ಸ್ಥಳಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರವಿವಾರ ಭೇಟಿ ನೀಡಿ ಪರಿಶೀಲಿಸಿದರು. ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣಕ್ಕೆ ಭೇಟಿ ನೀಡಿದ ಅವರು, ಪ್ರವಾಹದಿಂದ ಬಾಧಿತರಾಗಿರುವ ಕೆಲವು ಸ್ಥಳಗಳನ್ನು ಪರಿಶೀಲಿಸಿದರು. ನೆರೆಯ ಮಹಾರಾಷ್ಟ್ರ ರಾಜ್ಯ ಹಾಗೂ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ವ್ಯಾಪಕ ಮಳೆಯಾದ ಪರಿಣಾಮ ಹಿರಣ್ಯಕೇಶಿ, ಕೃಷ್ಣಾ, ವೇದಗಂಗಾ, ಘಟಪ್ರಭಾ, ಮಲಪ್ರಭಾ ಸೇರಿದಂತೆ …
Read More »ಬೆಂಗಳೂರು; ಹಳಿ ದಾಟುವ ವೇಳೆ ರೈಲಿಗೆ ಸಿಲುಕಿ ಇಬ್ಬರ ದುರ್ಮರಣ
ಬೆಂಗಳೂರು: ಹಳಿ ದಾಟುವ ವೇಳೆ ರೈಲಿಗೆ ಸಿಲುಕಿ ಇಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಭದ್ರಪ್ಪ ಲೇಔಟ್ನಲ್ಲಿ ಸಂಭವಿಸಿದೆ. ಓರ್ವ ಪುರುಷ(30) ಮತ್ತು ಓರ್ವ ಮಹಿಳೆ(40) ಮೃತ ಪಟ್ಟಿದ್ದಾರೆ. ರೈಲು ಬರುವುದು ಗಮನಿಸದೆ ಹಳಿ ದಾಟಲು ಯತ್ನಿಸಿದ್ದು ರೈಲಿಗೆ ಸಿಕ್ಕಿ ಇಬ್ಬರು ಮೃತಪಟ್ಟಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ. ಬೈಯಪ್ಪನ ಹಳ್ಳಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯ ಭದ್ರಪ್ಪ ಲೇಔಟ್ನಲ್ಲಿ ಘಟನೆ ನಡೆದಿದೆ. ಸದ್ಯ ಎರಡು ಮೃತದೇಹಗಳನ್ನು ಬೋರಿಂಗ್ ಆಸ್ಪತ್ರೆಗೆ ರವಾನಿಸಲಾಗಿದ್ದು ಪೊಲೀಸರು …
Read More »