Breaking News
Home / 2021 (page 4)

Yearly Archives: 2021

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಧಾರವಾಡ ಜಿಲ್ಲಾ ವ್ಯಾಪ್ತಿಗೆ ಒಳಪಡುವ ಪೋಷಣ ಅಭಿಯಾನ ಯೋಜನೆಯಡಿಯಲ್ಲಿ ಜಿಲ್ಲಾ ಮಟ್ಟದಲ್ಲಿ ಯೋಜನಾ ಕಾರ್ಯಕ್ರಮ ಸಂಯೋಜಕರು-01 ಮತ್ತು ತಾಲ್ಲೂಕು ಮಟ್ಟದಲ್ಲಿ, ಹುಬ್ಬಳ್ಳಿ-ಧಾರವಾಡ ಶಹರ ಯೋಜನಾ ಕಾರ್ಯಕ್ರಮ ಸಂಯೋಜಕರು-01 ಹುದ್ದೆಗಳನ್ನು ಮತ್ತು ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯಡಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಸಂಯೋಜಕರು-01 ಹುದ್ದೆಯನ್ನು ನೇರಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.   ಸ್ಥಳೀಯರಿಗೆ ಹಾಗೂ ಸೇವಾ ಅನುಭವ …

Read More »

ಸಂಕ್ರಾಂತಿ ಬಳಿಕ ಪ್ರಧಾನಿ ದೊಡ್ಡ ಬದಲಾವಣೆ ಮಾಡಲಿದ್ದಾರೆ ನನಗೆ ಪಕ್ಷದಿಂದ ಸಿಹಿ ಸುದ್ದಿ :ಯತ್ನಾಳ್

ವಿಜಯಪುರ: ಸಂಕ್ರಾಂತಿಯ ನಂತರ ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆಯಾಗಲಿದ್ದು, ನನಗೆ ಪಕ್ಷದಿಂದ ಸಿಹಿ ಸುದ್ದಿ ಸಿಗಲಿದೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ವರಿಷ್ಠರು ಕ್ರಮ ಕೈಗೊಂಡಿದ್ದಾರೆ. ಸರ್ಕಾರ, ಪಕ್ಷ ಮತ್ತು ಸಚಿವ ಸಂಪುಟದಲ್ಲಿ ಮಹತ್ವದ ಬದಲಾವಣೆಯಾಗಲಿದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿನ ಬೆಳವಣಿಗೆಗಳ ಕುರಿತಂತೆ ಪ್ರಧಾನಿ ಮತ್ತು ಗುಪ್ತಚರ ಇಲಾಖೆ ಗಮನಿಸುತ್ತಿದ್ದು, ಕೆಲವು ಸಚಿವರು ಕಚೇರಿಗೆ ಹೋಗುತ್ತಿಲ್ಲ ಎಂಬುದನ್ನು ಕೂಡ …

Read More »

ಶಿಕ್ಷಕಿ ಜತೆ 10ನೇ ಕ್ಲಾಸ್‌ ಹುಡುಗನ ಲವ್ವಿ-ಡವ್ವಿ! ಓಡಿಹೋಗಿ ಮದ್ವೆ

ಚೆನ್ನೈ: ಗುರು-ಶಿಷ್ಯರದ್ದು ಪವಿತ್ರ ಸಂಬಂಧ ಎನ್ನುತ್ತಾರೆ. ಅದಕ್ಕಾಗಿಯೇ ಗುರುವನ್ನು ಬಹಳ ಎತ್ತರದ ಸ್ಥಾನದಲ್ಲಿ ಇಟ್ಟಿರುವ ಸಮಾಜ ನಮ್ಮದು. ಆದರೆ ಈ ಸಂಬಂಧಕ್ಕೆ ಕಳಂಕ ತರುವ ಘಟನೆಯೊಂದು ತಮಿಳುನಾಡಿನ ಅರಿಯಾಲೂರು ಜಿಲ್ಲೆಯಲ್ಲಿ ನಡೆದಿದೆ. ಪ್ರೇಮ ಕುರುಡು ಎನ್ನುವಂತೆ 10ನೇ ವಿದ್ಯಾರ್ಥಿಯೊಂದಿಗೆ ಅದೇ ಕ್ಲಾಸ್‌ನ ಟೀಚರ್‌ಗೆ ಲವ್‌ ಆಗಿರುವ ಅಚ್ಚರಿಯ ಘಟನೆ ಇದು. ಇಬ್ಬರಿಗೂ ಪರಸ್ಪರ ಪ್ರೀತಿಯುಂಟಾಗಿ ಮದುವೆಯೂ ಆಗಿ ಪೇಚಿಗೆ ಸಿಲುಕಿದ್ದಾರೆ. ಇಲ್ಲಿಯ ವಿಕ್ರಮಂಗಲಂ ಪ್ರೌಢಶಾಲೆಯಲ್ಲಿ ಶಿಕ್ಷಕಿ ಎರಡು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. …

Read More »

ರಜೆಗೆ ಬಂದಿದ್ದ ಭಾರತೀಯ ಸೇನೆಯ ಯೋಧ ಆತ್ಮಹತ್ಯೆ

ಮುದ್ದೇಬಿಹಾಳ: ರಜೆಗೆ ಬಂದಿದ್ದ ಭಾರತೀಯ ಸೇನೆಯ ಯೋಧಯೊಬ್ಬ ಜಮೀನಿನ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಸರೂರ ಗ್ರಾಮದಲ್ಲಿ ನಡೆದಿದೆ. ಹಣಮಂತ್ರಾಯ ಶಿವಪ್ಪ ಹೂಗಾರ (30) ಮೃತ ವ್ಯಕ್ತಿ.   ಸಂಜೆಯಾದರೂ ಮನೆಗೆ ಬರಲಿಲ್ಲ ಎಂದು ಕುಟುಂಬದ ಸದಸ್ಯರು ಹೊಲಕ್ಕೆ ನೋಡಲು ಹೋದಾಗ ಘಟನೆ ಬೆಳಕಿಗೆ ಬಂದಿದೆ. ಹಣಮಂತ್ರಾಯ ಭಾರತೀಯ ಸೇನೆಯಲ್ಲಿ ಜನರಲ್ ಡ್ಯೂಟಿ ಸೋಲ್ಜರ್ ಆಗಿ ಕಳೆದ 10-11 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಪ್ರಸ್ತುತ ರಾಜಸ್ತಾನದ ಗಡಿಭಾಗ …

Read More »

ಮುಂದಿನ ಸಿಎಂ ಮುರಗೇಶ್ ನಿರಾಣಿ ಆಗಲಿ, ಬಾಳೆಹಣ್ಣಿನ ಮೇಲೆ ಬರೆದು ರಥಕ್ಕೆ ತೂರಿದ ಬಿಜೆಪಿಯ ಯುವ ಮುಖಂಡ

ವಿಜಯಪುರ: ಮುಂದಿನ ಸಿಎಂ ಮುರಗೇಶ್ ನಿರಾಣಿ ಆಗಲಿ ಎಂದು ಅಭಿಮಾನಿ ಹರಕೆ ಸಲ್ಲಿಸಿದ ಘಟನೆ ನಡೆದಿದೆ. ಅಭಿಮಾನಿಗಳು ಭೀಮಾಶಂಕರ ಮಹಾರಾಜರ ರಥೋತ್ಸವದಲ್ಲಿ ಬಾಳೆ ಹಣ್ಣಿನ ಮೇಲೆ ಮುಂದಿನ ಸಿಎಂ ಮುರಗೇಶ್ ನಿರಾಣಿ ಎಂದು ಬರೆದು ದೇವರ ಮೇಲೆ ಬಾಳೆ ಹಣ್ಣು ಎಸೆದು ಬೇಡಿಕೆ ಇಟ್ಟಿದ್ದಾರೆ.ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಡಿಸೆಂಬರ್ 27ರಂದು ನಡೆದ ಭೀಮಾಶಂಕರ ಮಹಾರಾಜರ ರಥೋತ್ಸವದ ವೇಳೆ ಮುಂದಿನ ಸಿಎಂ ಮುರಗೇಶ್ ನಿರಾಣಿ ಎಂದು ಬಾಳೆ …

Read More »

ಆತ್ಮರಕ್ಷಣೆಗಾಗಿ ಸಂಜಯನಗರ ಠಾಣೆ ಇನ್ಸ್‌ಪೆಕ್ಟರ್ ಬಾಲರಾಜ್‌ ಫೈರಿಂಗ್‌ ಮಾಡಿ ಆರೋಪಿ ದಿವಾಕರ್ನ ಅರೆಸ್ಟ್

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಖಾಕಿ ಗನ್ ಸದ್ದು ಮಾಡಿದೆ. ಆರೋಪಿ ಕಾಲಿಗೆ ಗುಂಡು ಹಾರಿಸಿ ಅರೆಸ್ಟ್‌ ಮಾಡಿರುವ ಘಟನೆ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ದಿವಾಕರ್ನನ್ನು ಬಂಧಿಸಲು ತೆರಳಿದ್ದಾಗ ಚಾಕುವಿನಿಂದ ಇರಿದು ಹಲ್ಲೆಗೆ ಯತ್ನಿಸಿದ್ದ. ಹೀಗಾಗಿ ಆತ್ಮರಕ್ಷಣೆಗಾಗಿ ಸಂಜಯನಗರ ಠಾಣೆ ಇನ್ಸ್‌ಪೆಕ್ಟರ್ ಬಾಲರಾಜ್‌ ಫೈರಿಂಗ್‌ ಮಾಡಿ ಆರೋಪಿ ದಿವಾಕರ್ನನ್ನು ಅರೆಸ್ಟ್ ಮಾಡಿದ್ದಾರೆ. ಘಟನೆಯಲ್ಲಿ ಕಾನ್ಸ್‌ಟೇಬಲ್ ಪ್ರದೀಪ್ ಎಂಬಾತನಿಗೆ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಆರೋಪಿ ದಿವಾಕರ್, ಮನೆಗಳಿಗೆ …

Read More »

ಎಂಇಎಸ್ ಬ್ಯಾನ್ ಗೆ ಜನವರಿ 20ರವರೆಗೆ ಸರ್ಕಾರಕ್ಕೆ ಡೆಡ್ ಲೈನ್ ನೀಡಿದ ವಾಟಾಳ್​

ಬೆಂಗಳೂರು:ಎಂಇಎಸ್​ ರಾಜಕೀಯ ಪಕ್ಷ ಕನ್ನಡದ್ರೋಹಿಯಾಗಿದ್ದು, ಅದನ್ನು ಬ್ಯಾನ್​ ಮಾಡಬೇಕು ಎಂಬ ಏಕಂಶ ಬೇಡಿಕೆ ಮುಂದಿಟ್ಟುಕೊಂಡು ವರ್ಷಾಂತ್ಯ ಇಂದು ಕನ್ನಡ ಹೋರಾಟಗಾರ ವಾಟಾಳ್​ ನಾಗರಾಜ್ ಬಂದ್​​ಗೆ ಕರೆನೀಡಿದ್ದರು. ಆದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದಿಯಾಗಿ ಸರ್ವರೂ ಒಕ್ಕೊರಲಿಂದ ತಮ್ಮ ತಮ್ಮ ಹಿತಾಸಕ್ತಿಗಳಿಗೆ ಅನುಗುಣವಾಗಿ ಬಂದ್​ ಬೇಡ ಎಂದು ಮನವಿ ಮಾಡಿಕೊಂಡಿದ್ದರು. ಅದಕ್ಕೆ ಸ್ಪಂದಿಸಿರುವ ವಾಟಾಳ್ ಇಂದು ಬಂದ್​ ಆಚರಿಸುತ್ತಿಲ್ಲ. ಬದಲಿಗೆ ಇಂದಿನ ಕರ್ನಾಟಕ ಬಂದ್ ಮುಂದೂಡಿಕೆ ಹಿನ್ನೆಲೆ ವಾಟಾಳ್ & ಟೀಂ …

Read More »

2021 ಚಂದನ್ ವನಕ್ಕೆ ಕರಾಳ ವರ್ಷ ..!

ಕನ್ನಡದ ಖ್ಯಾತ ನಟರು ಸೇರಿದಂತೆ ಹಲವಾರು ತಾರೆಯರು, ನಿರ್ದೇಶರು ಹಾಗೂ ನಿರ್ಮಾಪಕರು 2021ರಲ್ಲಿ ಮರೆಯಾಗಿ ಹೋಗಿದ್ದಾರೆ. ಇವರ ಸಾವು 2021 ಕನ್ನಡ ಚಿತ್ರರಂಗಕ್ಕೆ ದುರಂತ ವರ್ಷ ಅಂದ್ರೆ ತಪ್ಪಿಲ್ಲ. 3/ 14 ಕೋಟಿ ನಿರ್ಮಾಪಕ ಅಂತಾ ಕರೆಸಿಕೊಂಡಿದ್ದ ರಾಮು ಅವರ ನಿಧನ ಕನ್ನಡ ಚಿತ್ರರಂಗಕ್ಕೆ ದೊಡ್ಡ ಪೆಟ್ಟು. ಸಿಂಹದ ಮರಿ, ಲಾಕಪ್ ಡೆತ್, ಸರ್ಕಲ್ ಇನ್ಸ್‌ಪೆಕ್ಟರ್, ಚಾಮುಂಡಿ, ಬಾವ ಬಾಮೈದ ಹೀಗೆ 35ಕ್ಕೂ ಹೆಚ್ಚು ಸಿನಿಮಾಗಳನ್ನ ನಿರ್ಮಾಣ ಮಾಡಿ ಹಾಗೂ ವಿತರಣೆಯನ್ನ …

Read More »

ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರು ಹತ್ತು ವರ್ಷಗಳ ಕಾಲ ಕೇವಲ ಮೂಗಿಗೆ ತುಪ್ಪ ಸವರುವ(ಹಚ್ಚುವ) ಕೆಲಸ ಮಾಡಿದ್ದಾರೆ: ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಆ

ಶಿವಮೊಗ್ಗ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರು ಹತ್ತು ವರ್ಷಗಳ ಕಾಲ ಕೇವಲ ಮೂಗಿಗೆ ತುಪ್ಪ ಸವರುವ(ಹಚ್ಚುವ) ಕೆಲಸ ಮಾಡಿದ್ದಾರೆ ಎಂದು ಕೂಡಲಸಂಗಮ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಆರೋಪಿಸಿದರು. ನಗರದಲ್ಲಿಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಮೀಸಲಾತಿಗಾಗಿ ನಮ್ಮ ಹೋರಾಟ ಒಂದು ವರ್ಷ ಪೂರೈಸಿದೆ. ಈ ಒಂದು ವರ್ಷದ ಅವಧಿಯಲ್ಲಿ ಸರ್ಕಾರವು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದೆ. ಮುಖ್ಯಮಂತ್ರಿ ಬಸವರಾಜ …

Read More »

ನಾಳೆ ಕರ್ನಾಟಕ ಬಂದ್​ ಇಲ್ಲ: ಸಿಎಂ ಸಂಧಾನ ಸಭೆ ಸಕ್ಸಸ್​

ಬೆಂಗಳೂರು: ನಾಳೆ ಕರ್ನಾಟಕ ಬಂದ್​ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದು, ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಂಘಟನೆಗಳ ಜೊತೆ ಮಾತುಕತೆ ನಡೆಸಿ ಬಂದ್​ ವಾಪಸ್​ ತೆಗೆದುಕೊಳ್ಳುವಂತೆ ಮಾಡಿದ್ದಾರೆ.ಸಿಎಂ ಬಸವರಾಜ ಬೊಮ್ಮಾಯಿ ನಡೆಸಿದ ಸಂಧಾನ ಸಕ್ಸಸ್ ಆಗಿದೆ. ಇನ್ನು ನನ್ನ ಮನವಿ ಒಪ್ಪಿ ಸಂಧಾನ ವಾಪಸ್ ಪಡೆದಿದ್ದಾರೆ. ಬಂದ್ ವಾಪಸ್ ಪಡೆದ ಹೋರಾಟಗಾರರಿಗೆ ಧನ್ಯವಾದಗಳು ಎಂದು ಸಿಎಂ ತಿಳಿಸಿದ್ದಾರೆ.

Read More »