ಬಸವರಾಜ ಬೊಮ್ಮಾಯಿ ಸರ್ಕಾರವು ಮತಾಂತರ ವಿರೋಧಿ ಕಾಯ್ದೆಗೆ ಹೆಚ್ಚು ಕಠಿಣವಾದ ನಿಬಂಧನೆಗಳನ್ನು ಪರಿಚಯಿಸಲು ಯೋಜಿಸುತ್ತಿರುವುದರಿಂದ ಅಧಿವೇಶನದಲ್ಲಿ ಪ್ರಕ್ಷುಬ್ಧವಾದ ವಾತಾವರಣ ಸೃಷ್ಠಿ ಸಾಧ್ಯತೆ ಇದೆ.ಇದು ಈಗಾಗಲೇ ಅಲ್ಪಸಂಖ್ಯಾತ ಗುಂಪುಗಳಿಂದ ಪ್ರತಿಭಟನೆಯನ್ನು ಎದುರಿಸುತ್ತಿದೆ.ವಿಪಕ್ಷಗಳು ಬಿಟ್‌ಕಾಯಿನ್ ಹಗರಣದ ಆರೋಪ,ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ವಿಳಂಬದ ಬಗ್ಗೆ, ಕಿಕ್‌ಬ್ಯಾಕ್ ಬಗ್ಗೆ ಪ್ರಧಾನ ಮಂತ್ರಿ ಕಚೇರಿಗೆ (ಪಿಎಂಒ) ಗುತ್ತಿಗೆದಾರರ ದೂರುಗಳ ಕುರಿತು ಸರ್ಕಾರವನ್ನು ಟೀಕಿಸಲು ನೋಡುತ್ತಿವೆ. ವಿವಾದಾತ್ಮಕ ಕೃಷಿ ಕಾನೂನುಗಳನ್ನು ಕೇಂದ್ರವು ರದ್ದುಗೊಳಿಸಿದ ನಂತರ ಅವುಗಳನ್ನು …
Read More »Yearly Archives: 2021
ಎಪಿಎಂಸಿಗಳನ್ನು ಯಾವ ಕಾರಣಕ್ಕೂ ಮುಚ್ಚುವುದಿಲ್ಲ: ಸಚಿವ ಎಸ್.ಟಿ.ಸೋಮಶೇಖರ್
ಎಪಿಎಂಸಿ ಒಳಗೆ ಮಾರಾಟ ಮಾಡಬೇಕು ಎಂಬ ಉದ್ದೇಶದಿಂದ ಕರ್ನಾಟಕದಲ್ಲಿ ಎಪಿಎಂಸಿ ಕಾಯ್ದೆಯನ್ನು ಜಾರಿಗೆ ತರಲಾಗಿತ್ತು. ಆದರೆ ಇದೀಗ ಕರ್ನಾಟಕದಲ್ಲಿ ಎಲ್ಲಿ ಬೇಕಾದ್ರು ರೈತರು ತಮ್ಮ ಬೆಳೆಗಳನ್ನು ಮಾರಾಟ ಮಾಡಬಹುದು ಎಂಬ ಉದ್ದೇಶದಿಂದ ಎಪಿಎಂಸಿ ತಿದ್ದುಪಡಿ ಕಾಯ್ದೆ ಜಾರಿಗೆ ತರಲಾಗುತ್ತಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸಮರ್ಥಿಸಿಕೊಂಡರು. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಎಸ್.ಟಿ.ಸೋಮಶೇಖರ್ ಅವರು ಎಪಿಎಂಸಿ ಹೊರಗೆ ಮಾರಾಟ ಮಾಡಿದ್ರೆ ದಂಡ ವಿಧಿಸಲಾಗುತ್ತಿತ್ತು, ಅದೇ …
Read More »ಚಳಿಗಾಲದ ಅಧಿವೇಶನಕ್ಕೆ ಕುಂದಾನಗರಿ ಬೆಳಗಾವಿ ಸಜ್ಜಾಗಿದೆ.
ನಾಳೆಯಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮಾಹಿತಿ ನೀಡಿದ್ದಾರೆ. ಚಳಿಗಾಲದ ಅಧಿವೇಶನಕ್ಕೆ ಕುಂದಾನಗರಿ ಬೆಳಗಾವಿ ಸಜ್ಜಾಗಿದೆ. ನಾಳೆಯಿಂದ ಬೆಳಗಾವಿ ಸುವರ್ಣ ಸೌಧದಲ್ಲಿ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಂದು ಸಿದ್ಧತೆಗಳನ್ನು ಪರಿಶೀಲನೆ ನಡೆಸಿದರು. ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿದ ಸ್ಪೀಕರ್ ಕಾಗೇರಿ ಅವರು ನಾಳೆ ಬೆಳಗ್ಗೆ 10.30ಕ್ಕೆ ಕಾರ್ಯಕಲಾಪಗಳ …
Read More »ಹುಬ್ಬಳ್ಳಿಯಿಂದ ಕಾರ್ ಮೂಲಕ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ
ಹುಬ್ಬಳ್ಳಿಯಿಂದ ಕಾರ್ ಮೂಲಕ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಲ್ಲಿಂದ ನೇರವಾಗಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ಇದೇ ವೇಳೆ ನಾಳೆಯಿಂದ ಬೆಳಗಾವಿಯಲ್ಲಿ ಅಧಿವೇಶನ ಆರಂಭವಾಗುತ್ತಿದೆ. ಅಧಿವೇಶನ ವೇಳೆ ಸುವರ್ಣಸೌಧಕ್ಕೆ ರೈತರು ಮುತ್ತಿಗೆ ಹಾಕುತ್ತಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಯಿಸಿದ ಸಿಎಂ ಬೊಮ್ಮಾಯಿ ಅವರು ಪ್ರತಿ ಭಾರಿ ಅಧಿವೇಶನ ನಡೆದಾಗ ರೈತರು ತಮ್ಮ ಸಮಸ್ಯೆ ಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ಮಾಡುತ್ತಾರೆ ಅವರ ಅಹವಾಲು ಏನೇ …
Read More »ಭಾನುವಾರ ಸಂಜೆ ಬೆಳಗಾವಿಗೆ ಆಗಮಿಸಿದ ಸಿದ್ದರಾಮಯ್ಯ
ಬೆಳಗಾವಿ – ವಿಧಾನಸಭೆ ಅಧಿವೇಶನದಲ್ಲಿ ಪಾಲ್ಗೊಳ್ಳಲು ಭಾನುವಾರ ಸಂಜೆ ಬೆಳಗಾವಿಗೆ ಆಗಮಿಸಿದ ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಮಾನ ನಿಲ್ದಾಣದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಮಾಜಿ ಸಚಿವ ಎ.ಬಿ.ಪಾಟೀಲ, ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ ಮೊದಲಾದವರು ಸ್ವಾಗತಿಸಿದರು. ಬೆಳಗಾವಿ ಅಧಿವೇಶನದಲ್ಲಿ ಸರಕಾರದ ನೀತಿ ವಿರುದ್ಧ ಕಾಂಗ್ರೆಸ್ ಹೋರಾಟ ಮಾಡಲಿದೆ ಎಂದು ಸಿದ್ದರಾಮಯ್ಯ ತಿಳಿಸಿದರು. ಪ್ರವಾಹ, ಉತ್ತರ ಕರ್ನಾಟಕದ ಸಮಸ್ಯೆಗಳು, ಮತಾಂತರ, ಮನೆಗಳನ್ನು ಕೊಡದಿರುವುದು, ಶೇ.40ರಷ್ಟು ಲಂಚ ಮೊದಲಾದವುಗಳ …
Read More »ರಮೇಶ್ ಜಾರಕಿಹೊಳಿ ಏನು ಹೇಳಿದ್ದಾರೆ ಎಂಬುವುದು ಯಾರಿಗೂ ಅರ್ಥವಾಗಿಲ್ಲ
ಬೆಳಗಾವಿ:: ಮುಂದಿನ ಚುನಾವಣೆ ಗೋಕಾಕನ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾಡೋಣ ಎಂಬ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಟಾಂಗ್ ನೀಡಿದ್ದಾರೆ. ನಗರದ ಕಾಂಗ್ರೆಸ್ ಭವನದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ರಮೇಶ್ ಜಾರಕಿಹೊಳಿ ಏನು ಹೇಳಿದ್ದಾರೆ ಎಂಬುವುದು ಯಾರಿಗೂ ಅರ್ಥವಾಗಿಲ್ಲ. ನಾವು ಯಾವುದೇ ಚುನಾವಣೆಯನ್ನು ಕೇಂದ್ರಿಕೃತ ಮಾಡಿಲ್ಲ, ಸ್ವತಂತ್ರವಾಗಿಯೇ ಮಾಡಿದ್ದೇವೆ. ಅವರು ಮಾತ್ರ ಅಧಿಕಾರವನ್ನು ಕೈಯಲ್ಲಿಯೇ ಹಿಡಿದುಕೊಂಡಿರುತ್ತಾರೆ ಎಂದು ತಿವಿದಿದ್ದಾರೆ. ಇನ್ನೂ ವಿಧಾನಪರಿಷತ್ ಫಲಿತಾಂಶಕ್ಕೆ ಸಂಬಂಧಿಸಿದಂತೆ …
Read More »ರಾಮ ರಾಮ ಅಂತಾರೆ ರಾಮನೇನು ಇವರಪ್ಪನ ಮನೆಯ ಸ್ವತ್ತಲ್ಲ : ಮಾಜಿ ಸಚಿವ ಹೆಚ್.ಆಂಜನೇಯ
ಬಾಗಲಕೋಟೆ : ಮತಾಂತರ ಅದು ವ್ಯಕ್ತಿಯ ಅಭಿವ್ಯಕ್ತಿತ್ವ ಸ್ವಾತಂತ್ರ್ಯವಾಗಿದೆ ಎಂದು ಮಾಜಿ ಸಚಿವ ಹೆಚ್.ಆಂಜನೇಯ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾನೀಗ ಹಿಂದೂ ಧರ್ಮದಲ್ಲಿ ಇದ್ದೇನೆ. ರಾಮ ರಾಮ ಅಂತಾರೆ ರಾಮನೇನು ಇವರಪ್ಪನ ಮನೆಯ ಸ್ವತ್ತಲ್ಲ. ರಾಮನಿಗೆ ಅತಿ ಹತ್ತಿರದವನು ಆಂಜನೇಯ, ಆಂಜನೇಯ ಇಲ್ಲದೆ ರಾಮನಿಲ್ಲ. ರಾಮನಿಲ್ಲದ ಆಂಜನೇಯ ಇಲ್ಲ ಎಂದು ಟಾಂಗ್ ನೀಡಿದರು. ನನ್ನ ಹೆಸರು ನಮ್ಮವ್ವ ಆಂಜನೇಯ ಅಂತ್ಹೇಳಿ ಇಟ್ಟಿದ್ದಾಳೆ. ನಾನು ಹಿಂದೂಧರ್ಮದಲ್ಲಿ ಇದ್ದೇನೆ, ಕಾಂಗ್ರೆಸ್‌ನಲ್ಲಿ ಇದ್ದೇನೆ. ಕೆಲವರು …
Read More »ಎಷ್ಟೋ ಜನ ಮುಸ್ಲಿಮರು ಲಿಂಗಾಯತರಾದರು. ಆಗ ನಾವೇನಾದರೂ ಮಾತನಾಡಿದ್ವಾ? ಸಿ.ಎಂ.ಇಬ್ರಾಹಿಂ
ಎಷ್ಟೋ ಜನ ಮುಸ್ಲಿಮರು ಲಿಂಗಾಯತರಾದರು. ಆಗ ನಾವೇನಾದರೂ ಮಾತನಾಡಿದ್ವಾ ಎಂದು ಪ್ರಶ್ನಿಸುವ ಮೂಲಕ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಮತಾಂತರ ನಿಷೇಧ ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಿ.ಎಂ.ಇಬ್ರಾಹಿA ಮತಾಂತರವನ್ನು ಯಾರೂ ಬಲವಂತವಾಗಿ ಮಾಡಬಾರದು. ಸ್ವಯಿಚ್ಚೆಯಿಂದ ಬೇಕಾದರೆ ಮತಾಂತರವಾಗಲಿ. ಎಷ್ಟೋ ಜನ ಮುಸ್ಲಿಮರು ಲಿಂಗಾಯತರಾದರು. ಆಗ ನಾವೇನಾದರೂ ಮಾತಾಡಿದ್ದೇವಾ..? ರಿಜ್ವಿ ಹಿಂದೂ ಆದ, ನಾವು ಏನಾದರೂ ಹೇಳಿದ್ವಾ..? ಮತಾಂತರ ಅವರವರ ಇಚ್ಛೆ. ಅದಕ್ಕಾಗಿ …
Read More »ಬಸ್ ಪಲ್ಟಿಯಾಗಿ 30 ಪ್ರಯಾಣಿಕರು ಗಂಭೀರವಾಗಿ ಗಾಯ
ಬೆಂಗಳೂರು: ಬಸ್ ಪಲ್ಟಿಯಾಗಿ 30 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರಿನ ದೇವದುರ್ಗ ಕೊತ್ತದೊಡ್ದಿ ಗ್ರಾಮದಲ್ಲಿ ನಡೆದಿದೆ. ಎದುರಿನಿಂದ ಬರುತ್ತಿದ್ದ ಬೈಕ್ ಡಿಕ್ಕಿಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ 30 ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆ ಬಸ್ ಚಾಲಕ ಹಾಗೂ ನಿರ್ವಾಹಕ ಬಸ್ ನಿಂದ ಪರಾರಿಯಾಗಿದ್ದಾರೆ. ಅಪಘಾತದಲ್ಲಿ 30 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ದೇವದುರ್ಗ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ.
Read More »ಹಾವು ಕಚ್ಚಿ ಸ್ವಾಮೀಜಿ ಸಾವು
ಚಾಮರಾಜನಗರ – ಇಲ್ಲಿಯ ಗೋಪಾಲಪುರದ ಕೋಲೇಶ್ವರ ಮಠದ ಗುರುಮಲ್ಲ ಸ್ವಾಮೀಜಿ ನಿಧನರಾಗಿದ್ದಾರೆ. ಅವರಿಗೆ 44 ವರ್ಷ ವಯಸ್ಸಾಗಿತ್ತು. ಶನಿವಾರ ಕಾರ್ಮಿಕರ ಕೆಲಸದ ಮೆಲುಸ್ತುವಾರಿ ನೋಡಲು ಹೋದ ಸಂದರ್ಭದಲ್ಲಿ ಸ್ವಾಮೀಜಿಗೆ ಹಾವು ಕಚ್ಚಿತ್ತು. ತಕ್ಷಣ ಗುಂಡ್ಲುಪೇಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಚಾಮರಾಜ ನಗರಕ್ಕೆ ಕಳಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಾವಿಗೀಡಾದರು. ಭಾನುವಾರ ಅವರ ಅಂತ್ಯಕ್ರಿಯೆ ನಡೆಯಲಿದೆ.
Read More »