ಬೆಂಗಳೂರು: ಪ್ರಿಯಕರನ ಜೊತೆಗೆ ಸೇರಿ ಗಂಡನಿಗೆ ಸುಪಾರಿ ನೀಡಿ ಪತ್ನಿಯೇ ಕೊಲೆ ಮಾಡಿಸಲು ಯತ್ನಸಿದ ಘಟನೆ ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ನಡೆದಿದೆ. ಪ್ರಕರಣದಲ್ಲಿ ಪೊಲೀಸರ ಸಮಯ ಪ್ರಜ್ಞೆಯಿಂದ ಮುಗ್ಧ ವ್ಯಕ್ತಿಯೊಬ್ಬರ ಜೀವ ಉಳಿದಂತಾಗಿದೆ. ಬೆಂಗಳೂರಿನ ಮಾದನಾಯಕನಹಳ್ಳಿ ನಿವಾಸಿಯಾಗಿರುವ ರೂಪ ಮತ್ತು ಗಿರೀಶ್ ಮದುವೆ ಆರು ವರ್ಷಗಳ ಹಿಂದೆ ನಡೆದಿತ್ತು. ಕೆಲ ದಿನಗಳ ಕಾಲ ಮನೆಯಲ್ಲೇ ಇದ್ದ ಪತ್ನಿ ರೂಪ ಇತ್ತೀಚೆಗೆ ಕೆಲಸಕ್ಕೆ ಸೇರಿಕೊಂಡಿದ್ದಳು. ಕೆಲಸಕ್ಕೆ ಸೇರಿದ ನಂತರ ರೂಪಾಗೆ ಕುಮಾರ್ ಜೈನ್ …
Read More »Yearly Archives: 2021
ಬೆಂಗಳೂರಿಗರೇ ಗಮನಿಸಿ; ನಮ್ಮ ಮೆಟ್ರೋ ಸಂಚಾರದ ಅವಧಿ ವಿಸ್ತರಣೆ
ಬೆಂಗಳೂರು: ಮೆಟ್ರೋ ರೈಲು ಸಂಚಾರದ ಅವಧಿ ರಾತ್ರಿ 9ರವರೆಗೆ ವಿಸ್ತರಿಸಲಾಗಿದೆ. ಈ ಮೊದಲು ಬೆಳಗ್ಗೆ 7ರಿಂದ ರಾತ್ರಿ 8ರವರೆಗೆ ನಮ್ಮ ಮೆಟ್ರೋ ಸಂಚರಿಸುತ್ತಿತ್ತು. ಆದರೆ ಈಗ ರಾತ್ರಿ 9ರವರೆಗೆ ಮೆಟ್ರೋ ಸಂಚಾರ ಸೇವೆಯನ್ನು ಒದಗಿಸವಂತೆ ಅವಧಿ ವಿಸ್ತರಿಸಿ ಬಿಎಂಆರ್ಸಿಎಲ್ ಆದೇಶಿಸಿದೆ. ಈ ಮೂಲಕ ಬೆಂಗಳೂರು ಮಹಾನಗರದ ಮೆಟ್ರೋ (Bengaluru Namma metro) ಪ್ರಯಾಣಿಕರ ಸಂಚಾರಕ್ಕೆ ಇನ್ನಷ್ಟು ಸೌಲಭ್ಯ ಒದಗಿಸಿದೆ. ಇತ್ತೀಚಿಗಷ್ಟೇ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕರಾಗಿ …
Read More »ಸಿಎಂ ಬದಲಾದರೆ ಪಕ್ಷಕ್ಕೆ ದೊಡ್ಡ ಹೊಡೆತ ಬೀಳುತ್ತದೆ: ರಂಭಾಪುರಿ ಶ್ರೀ
ರಾಯಚೂರು: ರಾಜಕೀಯದಲ್ಲಿ ಸಂಘರ್ಷ ಇರುವುದು ಸಹಜ, ಯಾರು ಏನೇ ಹೇಳಲಿ ನಮಗೆ ಆತ್ಮವಿಶ್ವಾಸವಿದೆ. ಇರುವಂತ ಅವಧಿವರೆಗೆ ಯಡಿಯೂರಪ್ಪನವರೇ ಸಿಎಂ ಆಗಿ ಇರುತ್ತಾರೆ. ಆಕಸ್ಮಿಕವಾಗಿ ಸಿಎಂ ಬದಲಾವಣೆ ಮಾಡಿದ್ರೆ ಬಿಜೆಪಿ ಪಕ್ಷದ ಮೇಲೆ ಬಹುದೊಡ್ಡ ಹೊಡೆತ ಬೀಳುವುದು ಅಂತ ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಡಾ.ವೀರಸೋಮೇಶ್ವರ ಭಾಗವತ್ಪಾದರು ಹೇಳಿದ್ದಾರೆ. ರಾಯಚೂರಿನಲ್ಲಿ ಮಾತನಾಡಿ ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಶ್ರೀಗಳು ತಮ್ಮ ಸ್ಪಷ್ಟನೆ ನೀಡಿದರು. ಯಡಿಯೂರಪ್ಪ ಇಳಿ ವಯಸ್ಸಿನಲ್ಲಿಯೂ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. …
Read More »ಗೊಂದಲದಲ್ಲಿರುವ ಬಿಜೆಪಿ ಸರ್ಕಾರ ಬಹಳ ದಿನ ಉಳಿಯುವುದಿಲ್ಲ: ಎನ್.ಎಸ್.ಬೋಸರಾಜು
ರಾಯಚೂರು: ಬಿಜೆಪಿ ಪಕ್ಷದಲ್ಲಿ ಕಳೆದ ಒಂದು ವರ್ಷದಿಂದ ಬಹಳ ಗೊಂದಲಗಳಿವೆ. ಪಕ್ಷದ ಗೊಂದಲಗಳಿಂದ ಸರ್ಕಾರ ಅಭಿವೃದ್ಧಿ ಕೆಲಸಗಳನ್ನೂ ಮಾಡುತ್ತಿಲ್ಲ. ಗೊಂದಲದಲ್ಲಿರುವ ಪಕ್ಷದ ಸರ್ಕಾರ ಬಹಳ ದಿನ ಉಳಿಯುವುದಿಲ್ಲ ಅಂತ ವಿಧಾನ ಪರಿಷತ್ ಮಾಜಿ ಸದಸ್ಯ ಎನ್.ಎಸ್.ಬೋಸರಾಜು ಹೇಳಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಅವರು, ಆಡಳಿತ ಚುಕ್ಕಾಣಿ ಹಿಡಿದ ಪಕ್ಷ ಸ್ಥಿರ ಸರ್ಕಾರ ಕೊಡಬೇಕು. ಬಿಜೆಪಿ ರಾಜ್ಯಾಧ್ಯಕ್ಷರ ಮಾತುಗಳನ್ನ ನೋಡಿದರೆ ಪಕ್ಷದಲ್ಲಿ ಸರಿಯಿಲ್ಲ ಅನ್ನೋದು ಸ್ಪಷ್ಟವಾಗಿ ಕಾಣುತ್ತಿದೆ. ರಾಜ್ಯದ ಜನ ಸಂಕಷ್ಟದಲ್ಲಿದ್ದಾರೆ. ಪಕ್ಷದ …
Read More »ಇಂದ್ರಜಿತ್‍ಗೆ ಬೆದರಿಕೆ ಕರೆ – ದರ್ಶನ್ ಹಿಂಬಾಲಕರ ವಿರುದ್ಧ ದೂರು
ಬೆಂಗಳೂರು: ಸ್ಯಾಂಡಲ್‍ವುಡ್ ನಟ ದರ್ಶನ್ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್ ನಡುವಿನ ವಾಕ್ಸಮರದ ನಡುವೆ ಇದೀಗ ಇಂದ್ರಜಿತ್ ಗೆ ಬೆದರಿಕೆ ಕರೆಗಳು ಬರಲು ಆರಂಭಿಸಿವೆ. ಈ ಸಂಬಂಧ ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಇಂದ್ರಜಿತ್, ಕಳೆದ 24 ಗಂಟೆಗಳಿಂದ ಫೋನ್ ಕರೆಗಳು ನಿರಂತರವಾಗಿ ಬರುತ್ತಿವೆ. ಈ ಮೂಲಕ ದರ್ಶನ್ ಹಿಂಬಾಲಕರು ದುರ್ವರ್ತನೆ ತೋರುತ್ತಿದ್ದಾರೆ. 30 ರಿಂದ 35 ಜನರಿಂದ ರಾತ್ರಿ ಹಗಲು ಫೋನ್ ಮಾಡ್ತಿದ್ದಾರೆ ಎಂದು ದೂರಿದ್ದಾರೆ. ಬೆದರಿಕೆ ಕರೆಗಳು …
Read More »ಕುಟುಂಬದಲ್ಲಿ ಆದ ಗೊಂದಲ ಬಗೆಹರಿದಿದೆ: ಮೇಘಾ ಶೆಟ್ಟಿ
ಬೆಂಗಳೂರು: ಸ್ಯಾಂಡಲ್‍ವುಡ್‍ನ ಕಿರುತೆರೆ ನಟಿ ಮೇಘಾ ಶೆಟ್ಟಿ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಜೊತೆ ಜೊತೆಯಲಿ ಧಾರಾವಾಹಿಯಿಂದ ಹೊರ ಬಂದಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಈಗ ಮೇಘಾ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ ನಾನು ಧಾರಾವಾಹಿಯಲ್ಲಿ ನಟಿಸುತ್ತಿಲ್ಲ ಎನ್ನುವ ಸುದ್ದಿ ನಾಲ್ಕೈದು ದಿನಗಳಿಂದ ಹರಿದಾಡಿತ್ತು. ಕುಟುಂಬ ಎಂದಾಗ ಗೊಂದಲ ಸಹಜವಾಗಿರುತ್ತದೆ. ಈಗ ಗೊಂದಲ ಬಗೆಹರಿದಿದೆ. ಜೊತೆ ಜೊತೆಯಲಿ ಧಾರಾವಾಹಿ ಮುಗಿಯುವ ತನಕ ಅನು ಸಿರಿಮನೆ ಪಾತ್ರವನ್ನು ನಾನೇ ಮಾಡುತ್ತೇನೆ. ಈ ಗೊಂದಲದಿಂದ ವೀಕ್ಷಕರಲ್ಲಿ …
Read More »ಎಣ್ಣೆ ಬೇಕು ಎಣ್ಣೆ, ಬಾರ್ ಬಂದ್ ಮಾಡ್ಬೇಡಿ: ಬಿಜೆಪಿ ಮುಖಂಡನ ಪ್ರತಿಭಟನೆ
ಬೆಳಗಾವಿ/ಚಿಕ್ಕೋಡಿ: ಎಣ್ಣೆ ಬೇಕು ಎಣ್ಣೆ ಎಂದು ಬಿಜೆಪಿ ಮುಖಂಡ ಹಾಗೂ ಗ್ರಾಮ ಪಂಚಾಯತಿ ಸದಸ್ಯ ಚಿಕ್ಕೋಡಿಯಲ್ಲಿ ಪ್ರತಿಭಟನೆ ಮಾಡಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಬರಗಿ ಗ್ರಾಮದಲ್ಲಿ ಬಾರ್ ಬಂದ್ ಮಾಡದಂತೆ ಮದ್ಯ ಪ್ರಿಯರ ಜೊತೆಗೆ ಗ್ರಾಮ ಪಂಚಾಯತಿ ಸದಸ್ಯ ಪ್ರತಿಭಟನೆ ನಡೆಸಿದ್ದಾರೆ. ಬಾರ್ ಎದುರೇ ಗುಂಪು ಕಟ್ಟಿಕೊಂಡು ಎಣ್ಣೆ ಬೇಕು ಎಣ್ಣೆ ಎಂದು ಪ್ರೊಟೆಸ್ಟ್ ಮಾಡಿದ್ದಾರೆ. ಸಂಬರಗಿ ಗ್ರಾಮ ಪಂಚಾಯತ ಸದಸ್ಯ ಅಶೋಕ್ ಭಾನುದಾಸೆ ಮಾನೆ ಹಾಗೂ ಕೆಲವು …
Read More »ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಬುದ್ಧರು, ಜೊತೆಗೆ ಉತ್ತಮ ವಾಗ್ಮಿಗಳಾಗಿದ್ದಾರೆ”: ಉಮೇಶ್ ಕತ್ತಿ
ಚಿಕ್ಕೋಡಿ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಬುದ್ಧರು, ಜೊತೆಗೆ ಉತ್ತಮ ವಾಗ್ಮಿಗಳಾಗಿದ್ದಾರೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರನ್ನು ಆಹಾರ ಹಾಗೂ ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಅವರು ಚಿಕ್ಕೋಡಿಯಲ್ಲಿ ಹಾಡಿಹೊಗಳಿದ್ದಾರೆ. ಇಂದು ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಗಳಿಗೆ ಸಚಿವ ಉಮೇಶ್ ಕತ್ತಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಅವರು, ಶಿಕ್ಷಣ ಸಚಿವರು ಜವಾಬ್ದಾರಿಯುತ ಮಂತ್ರಿಯಾಗಿದ್ದಾರೆ. ಉತ್ತಮ ರೀತಿಯಿಂದ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ …
Read More »ವಿಜಯೇಂದ್ರರಿಗೆ ಆಪ್ತರಿರೋರು ಸಿಸಿಬಿಯಲ್ಲಿದ್ದಾರೆ: ಯತ್ನಾಳ್
ವಿಜಯಪುರ: ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಗೆ ಆಪ್ತರಾಗಿರುವವರು ಸಿಸಿಬಿಯಲ್ಲಿದ್ದಾರೆ ಎಂದು ಹೇಳುವ ಮೂಲಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕಾಲೆಳೆದಿದ್ದಾರೆ, ಸಿಸಿಬಿಯವರು ಏನ್ ಮಾಡ್ತಿದ್ದಾರೆ? ಸಿಸಿಬಿ ಕೆಲಸವಿರದ ತನಿಖೆಗಳನ್ನೆಲ್ಲ ಮಾಡ್ತಾರೆ. ಡ್ರಗ್ಸ್ ಕೇಸ್, ಯುವರಾಜ್ ಕೇಸ್ ಅರ್ಧಕ್ಕೆ ಬಿಟ್ರು. ಸಿಸಿಬಿಯಲ್ಲಿರೋ ಹಿರಿಯ ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸಲಿ. ವಿಜಯೇಂದ್ರರಿಗೆ ಆಪ್ತರಿರೋರು ಸಿಸಿಬಿಯಲ್ಲಿದ್ದಾರೆ, ಕಣ್ಣು ತೆರೆದು ನೋಡಲಿ ಎಂದು ಹೇಳಿದ್ದಾರೆ. ಇದೇ ವೇಳೆ ಕಟೀಲ್ …
Read More »ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿ ಅವೈಜ್ಞಾನಿಕ: ಸತೀಶ ಜಾರಕಿಹೊಳಿ
ಬೆಳಗಾವಿ: ಮುಖ್ಯಮಂತ್ರಿ ಹುದ್ದೆಯಿಂದ ಒಬ್ಬರು ಕೆಳಗಿಳಿಯುತ್ತಾರೆ; ಮತ್ತೊಬ್ಬರು ಆ ಹುದ್ದೆಗೇರುತ್ತಾರೆ. ಆದರೆ, ಕೆಳಗಿಳಿಯುವವರಿಂದ ಯಾವ ವಾಣಿ (ಸಂದೇಶ) ಹೊರಬರುತ್ತದೆ ಎಂದು ಕಾಯುತ್ತಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದ ಕಾಂಗ್ರೆಸ್ ಭವನದಲ್ಲಿ ಪತ್ರಕರ್ತರೊಂದಿಗೆ ಸೋಮವಾರ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆಯಿಂದ ಕಾಂಗ್ರೆಸ್‌ಗೆ ಯಾವ ಲಾಭವೂ ಇಲ್ಲ; ನಷ್ಟವೂ ಇಲ್ಲ. ಮುಖ್ಯಮಂತ್ರಿ ಬದಲಾದರೂ ಸರ್ಕಾರ ಅವರದ್ದೇ ಇರುತ್ತದೆ. ನಾವು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇವೆ ಎಂದರು. ಮಧ್ಯಂತರ ಚುನಾವಣೆ ಬಂದರೂ …
Read More »