ಬೆಂಗಳೂರು: ಕೊರೊನಾದಿಂದ ರದ್ದಾಗಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಜುಲೈ 20 ರಂದು ಪ್ರಕಟವಾಗಲಿದೆ. ಈಗಾಗಲೇ ಫಲಿತಾಂಶ ಪ್ರಕಟ ಮಾಡಲು ಪಿಯುಸಿ ಬೋರ್ಡ್ ಸಿದ್ಧತೆ ಮಾಡಿಕೊಂಡಿದೆ. ಜುಲೈ 20ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಅಂತ ಪಬ್ಲಿಕ್ ಟಿವಿಗೆ ಪಿಯುಸಿ ಬೋರ್ಡ್ ನಿರ್ದೇಶಕಿ ಸ್ನೇಹಲ್ ಮಾಹಿತಿ ನೀಡಿದ್ದಾರೆ. ಜುಲೈ 20 ರಂದು ಇಲಾಖೆಯ ವೆಬ್ ಸೈಟ್ ನಲ್ಲಿ ಪಿಯುಸಿ ಫಲಿತಾಂಶ ಪ್ರಕಟವಾಗಲಿದ್ದು, ಗ್ರೇಡ್ ಬದಲಿಗೆ ಅಂಕಗಳನ್ನೇ ನೀಡಲು ಪಿಯುಸಿ ಬೋರ್ಡ್ …
Read More »Yearly Archives: 2021
ಗಾಂಜಾ ಮಾರಾಟ ಮಾಡುತ್ತಿದ್ದ 6ಮಂದಿ ಬಂಧನ
ಶಿವಮೊಗ್ಗ : ಗಾಂಜಾ ಮಾರಾಟ ಮಾಡುತ್ತಿದ್ದ 6 ಮಂದಿಯನ್ನು ಭದ್ರಾವತಿ ಪೊಲೀಸರು ಬಂಧಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಬಂಧಿತರನ್ನು ದಕ್ಷಿಣಾಮೂರ್ತಿ (37), ಸುದೀಪ್ ಕುಮಾರ್ (30), ಡ್ಯಾನಿಯಲ್ (25) ಕಿರಣ (23), ಪವನ್ ಕುಮಾರ್ (25), ನವೀನ್ (26) ಬಂಧಿತ ಆರೋಪಿಗಳು. ಗಾಂಜಾ ಮಾರಾಟ ಮಾಡುತ್ತಿದ್ದ ಇವರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಜಿಲ್ಲೆಯ ಭದ್ರಾವತಿ ಹಳೆನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಗಾಂಜಾ ಮಾರಾಟ ಮಾಡುತ್ತಿದ್ದ 6 ಮಂದಿಯನ್ನು ಬಂಧಿಸಿದ್ದಾರೆ. …
Read More »ಮೇಕೆದಾಟು: ಪರ್ಯಾಯ ಭೂಮಿ ಹಂಚಿಕೆಗೆ ಪ್ರಸ್ತಾವ
ರಾಮನಗರ: ಬಹು ನಿರೀಕ್ಷಿತ ಮೇಕೆದಾಟು ಅಣೆಕಟ್ಟೆ ನಿರ್ಮಾಣದಿಂದ ಸಾವಿರಾರು ಹೆಕ್ಟೇರ್‌ನಷ್ಟು ಅರಣ್ಯ ಪ್ರದೇಶ ಮುಳುಗಡೆ ಆಗಲಿದ್ದು, ಅದಕ್ಕೆ ಪ್ರತಿಯಾಗಿ ಅಷ್ಟೇ ಪ್ರಮಾಣದ ಅರಣ್ಯ ಬೆಳೆಸಲು ಸಿದ್ಧತೆ ನಡೆದಿದೆ. ಇದಕ್ಕಾಗಿ ಸದ್ಯದಲ್ಲೇ ರಾಮನಗರ ಜಿಲ್ಲಾಡಳಿತದಿಂದ ಅರಣ್ಯ ಇಲಾಖೆಗೆ ಭೂಮಿ ಹಸ್ತಾಂತರವೂ ಆಗಲಿದೆ. ಜಿಲ್ಲೆಯಲ್ಲಿರುವ ಸಂಗಮ-ಮೇಕೆದಾಟು ಪ್ರದೇಶದಲ್ಲಿ ಕಾವೇರಿ ನದಿಗೆ ₹ 9 ಸಾವಿರ ಕೋಟಿ ವೆಚ್ಚದಲ್ಲಿ ಅಣೆಕಟ್ಟೆ ನಿರ್ಮಿಸಲು ರಾಜ್ಯ ಸರ್ಕಾರ ಉದ್ದೇಶಿಸಿದೆ. ಜಲಾಶಯಕ್ಕಾಗಿ ಸುಮಾರು 4,996 ಹೆಕ್ಟೇರ್ ಪ್ರದೇಶವು ಮುಳುಗಡೆ …
Read More »ಮುಖಕ್ಕೆ ಧರಿಸಬೇಕಿದ್ದ ಮಾಸ್ಕನ್ನು ಸಚಿವರು ಎಲ್ಲಿ ಹಾಕಿಕೊಂಡಿದ್ದಾರೆ ನೋಡಿ- ಜಾಲತಾಣದಲ್ಲಿ ಟ್ರೋಲ್
ಡೆಹ್ರಾಡೂನ್: ಉತ್ತರಾಖಂಡದ ಸಚಿವ ಸ್ವಾಮಿ ಯತೀಶ್ವರಾನಂದ ಇದೀಗ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗಿದ್ದಾರೆ. ಇದಕ್ಕೆ ಕಾರಣ ಅವರು ಧರಿಸಿರುವ ಮಾಸ್ಕ್. ಮಾಸ್ಕ್ ಅನ್ನು ಮುಖಕ್ಕೆ ಹಾಕಿಕೊಳ್ಳದೇ ಸಭೆಯೊಂದರಲ್ಲಿ ಅದನ್ನು ಕಾಲಿನ ಬೆರಳಿಗೆ ಸಿಕ್ಕಿಸಿಕೊಂಡು ಕುಳಿತಿದ್ದು ಜಾಲತಾಣದಲ್ಲಿ ಫೋಟೋ ವೈರಲ್ ಆಗಿದೆ. ಸೋಫಾ ಮೇಲೆ ಕಾಲಿನ ಮೇಲೆ ಕಾಲು ಹಾಕಿ ಕುಳಿತಿರುವ ಸಚಿವರು ತಮ್ಮ ಕಾಲಿನ ಬೆರಳಿನಲ್ಲಿ ಮಾಸ್ಕ್ ಸಿಕ್ಕಿಸಿಕೊಂಡಿದ್ದಾರೆ. ಸಚಿವರೇ ಈ ರೀತಿ ಕರೊನಾ ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂದು …
Read More »ಶಾಸಕರು, ಮಾಜಿ ಶಾಸಕರು ಸೇರಿ 24 ಮಂದಿಗೆ ಬೆಂಗಳೂರು ಸಿಬಿಐ ಕೋರ್ಟ್‌ನಿಂದ ಸಮನ್ಸ್ ಜಾರಿ
ಮಂಡ್ಯ: ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ(Mandya Urban Development Authority) ಹಗರಣ ಪ್ರಕರಣಕ್ಕೆ ಸಂಬಂಧಿಸಿ ಶಾಸಕರು, ಮಾಜಿ ಶಾಸಕರು, ಮಾಜಿ ಅಧ್ಯಕ್ಷರಿಗೆ ಬೆಂಗಳೂರಿನ ಸಿಬಿಐ ವಿಶೇಷ ಕೋರ್ಟ್‌ನಿಂದ(CBI Court) ಸಮನ್ಸ್ ಜಾರಿ ಮಾಡಲಾಗಿದೆ. 2009ರಲ್ಲಿ ನಡೆದಿದ್ದ 107 ಸೈಟ್ ಅಕ್ರಮ ಹಂಚಿಕೆ ಕೇಸ್ ದಾಖಲಿಸಿಕೊಂಡು ಸಿಬಿಐನಿಂದ ಚಾರ್ಜ್‌ಶೀಟ್ ಸಲ್ಲಿಸಲಾಗಿತ್ತು. 24 ಜನರ ವಿರುದ್ಧ ಸಿಬಿಐನಿಂದ ದೋಷಾರೋಪ ಪಟ್ಟಿ ಸಿದ್ಧವಾಗಿತ್ತು. ಸದ್ಯ ಸಿಬಿಐ ಚಾರ್ಜ್‌ಶೀಟ್ ಆಧಾರದ ಮೇಲೆ ಸಮನ್ಸ್ ಜಾರಿ ಮಾಡಲಾಗಿದೆ. …
Read More »ಶಿಕ್ಷಣ ಸಚಿವ ಸುರೇಶ್ ಕುಮಾರ್ ಗಮನಿಸಿ: ಎಸ್ಎಸ್ಎಲ್ಸಿ ಹಾಲ್ ಟಿಕೆಟ್ಗಾಗಿ ಶಾಲೆ ಎದುರು ವಿದ್ಯಾರ್ಥಿ, ಕುಟುಂಬದವರಿಂದ ಧರಣಿ
ಬಾಗಲಕೋಟೆ: ಇನ್ನೇನು ಜುಲೈ 19 ಎದುರಿಗೆ ಇದೆ. ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗುವ ದಿನ. ಅದರೆ ದುರ್ದೈವ ಅಂದ್ರೆ ಇನ್ನೂ ಅನೇಕ ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ಕೈಗೆ ಸೇರಿಲ್ಲ. ಇದಕ್ಕೆ ಶಾಲಾ ಆಡಳಿತ ಮಂಡಳಿಗಳ ದಿವ್ಯ ನಿರ್ಲಕ್ಷ್ಯ ಕಾರಣವಾಗಿದೆ. ಜೊತೆಗೆ ಅದೇಕೋ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಹ ಈ ನತದೃಷ್ಟ ವಿದ್ಯಾರ್ಥಿಗಳ ಸಂಕಷ್ಟಕ್ಕೆ ಸ್ಪಂದಿಸದೆ ಮೌನಕ್ಕೆ ಶರಣಾಗಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ ಎಸ್ಎಸ್ಎಲ್ಸಿ ಹಾಲ್ ಟಿಕೆಟ್ಗಾಗಿ ವಿದ್ಯಾರ್ಥಿ …
Read More »ಮಳೆರಾಯನ ಅಬ್ಬರ- ಕೃಷ್ಣಾ ನದಿ ನೀರಿನಲ್ಲಿ ಏರಿಕೆ, ಸೇತುವೆ ಜಲಾವೃತ
ಚಿಕ್ಕೋಡಿ: ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಮತ್ತೆ ಮಳೆರಾಯನ ಅಬ್ಬರ ಆರಂಭವಾಗಿದೆ. ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣದಲ್ಲಿ ಏರಿಕೆಯಾಗಿ ಸೇತುವೆಗಳು ಜಲಾವೃತವಾಗಿದೆ. ಕಳೆದ ಎರಡು ದಿನಗಳಿಂದ ಮಹಾರಾಷ್ಟ್ರದ ಕೊಂಕಣ ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆ ಕೃಷ್ಣಾ ನದಿಯಲ್ಲಿ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾದ ಪರಿಣಾಮ ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ಬಳಿ ಕೃಷ್ಣಾ ನದಿಯ ಕಲ್ಲೋಳ – ಯಡೂರ ಸಂಪರ್ಕ ಸೇತುವೆ ಜಲಾವೃತಗೊಂಡಿದೆ. ಸದ್ಯ 56 ಸಾವಿರ ಕ್ಯೂಸೇಕ್ ನಷ್ಟು …
Read More »ಸಿಡಿ ಪ್ರಕರಣ ಎಸ್ಐಟಿ ತನಿಖಾ ವರದಿ ರೆಡಿ
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ರಚಿಸಲಾಗಿದ್ದ ಎಸ್ ಐಟಿ ರಚನೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಪಿಐಎಲ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ ಆರೋಪಿ ಮನವಿ ಮೇರೆಗೆ ಎಸ್ ಐಟಿ ರಚನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ವಿಚಾರಣೆಗೂ ಮುನ್ನ ತನಿಖಾ ವರದಿ ಪರಿಶೀಲಿಸುವ ಅಗತ್ಯವಿದೆ. ಎಲ್ಲಾ ಎಫ್ ಐಆರ್ ಗಳ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ …
Read More »ಪೊಲೀಸರ ಎಷ್ಟೇ ಎಚ್ಚರಿಕೆ ನೀಡಿದ್ರು ಬಗ್ಗದ ರೌಡಿಗಳು: 10ಕ್ಕೂ ಹೆಚ್ಚು ಕಾರುಗಳು ಧ್ವಂಸ
ಬೆಂಗಳೂರು :ಪೊಲೀಸರು ಎಷ್ಟೇ ಎಚ್ಚರಿಕೆ ನೀಡಿದ್ರು ಕೂಡ ರಾಜಧಾನಿ ಬೆಂಗಳೂರಿನಲ್ಲಿ ರೌಡಿಗಳ ಅಟ್ಟಹಾಸ ಮಾತ್ರ ನಿಲ್ಲುತ್ತಿಲ್ಲ.. ಕುರುಬರಹಳ್ಳಿಯ ಪೈಪ್ ಲೈನ್ ರಸ್ತೆಯಲ್ಲಿ ಪುಂಡರು ಮತ್ತೆ ಬಾಲಬಿಚ್ಚಿದ್ದಾರೆ. ಅಪಾರ್ಟ್ ಮೆಂಟ್ ಎದುರು ನಿಲ್ಲಿಸಿದ್ದ 10ಕ್ಕೂ ಹೆಚ್ಚು ಕಾರುಗಳು ಗಾಜುಗಳನ್ನು ಕಿಡಿಗೇಡಿಗಳು ಪುಡಿಪುಡಿ ಮಾಡಿದ್ದಾರೆ. ತಡರಾತ್ರಿ 1.30ರ ಸುಮಾರಿಗೆ ಬಂದ ಮೂವರು ಕಿಡಿಗೇಡಿಗಳಿಂದ ಕೃತ್ಯ ನಡೆದಿದೆ. ಸ್ಥಳಕ್ಕೆ ಆಗಮಿಸಿದ ಬಸವೇಶ್ವರ ನಗರ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು, ಓರ್ವ ಆರೋಪಿಯನ್ನ ಬಂಧಿಸಿದ್ದಾರೆ.. …
Read More »ಚಾಲೆಂಜಿಂಗ್ ಸ್ಟಾರ್ ವಿರುದ್ಧ ಗಂಭೀರ ಆರೋಪ: ಇಂದ್ರಜಿತ್ ನಿವಾಸಕ್ಕೆ ಭದ್ರತೆ
ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಗಂಭೀರ ಆರೋಪ ಮಾಡಿರುವ ನಿರ್ದೇಶಕ ಇಂದ್ರಜಿತ್ ಲಂಕೇಶ್ ನಿವಾಸಕ್ಕೆ ಪೊಲೀಸ್ ಭದ್ರತೆ ಹಾಕಲಾಗಿದೆ. ನಟ ದರ್ಶನ್ ನಿರ್ಮಾಪಕ, ಆಪ್ತ ಸಂದೇಶ್ ನಾಗರಾಜ್ ಅವರ ದಿ ಪ್ರಿನ್ಸ್ ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದರು ಅಂತ ಇಂದ್ರಜಿತ್ ಗಂಭೀರ ಆರೋಪ ಮಾಡಿದ್ದಾರೆ. ಹಾಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಇಂದ್ರಜಿತ್ ಅವರ ಕೋರಮಂಗಲದ ನಿವಾಸದ ಸುತ್ತಮುತ್ತ ಪೊಲೀಸ್ ಭದ್ರತೆ ನೀಡಲಾಗಿದೆ. ನಟ ದರ್ಶನ್ ಹೆಸರಿನಲ್ಲಿ 25 ಕೋಟಿ ರೂ. …
Read More »