ಯಲ್ಲಾಪುರ: ಗಂಡನನ್ನು ಕೊಲೆ ಮಾಡಿ, ನಂತರ ಆತ ಕಾಣೆಯಾಗಿದ್ದಾಗಿ ಪೊಲೀಸರಿಗೆ ದೂರು ನೀಡಿದ್ದ ಆರೋಪಿ ಮಹಿಳೆ ಹಾಗೂ ಕುಟುಂಬದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ತಾಲ್ಲೂಕಿನ ಬಳಗಾರಿನ ಅತ್ತಗಾರಿನ, ಪ್ರಸ್ತುತ ಚಿಕ್ಕಮಾವಳ್ಳಿಯಲ್ಲಿರುವ ಶ್ವೇತಾ ರಾಜೇಶ ನಾಯ್ಕ (29), ಅವರ ತಂದೆ ದೀಪಕ್ ಬುದ್ದಾ ಮರಾಠಿ (53), ತಮ್ಮ ಗಂಗಾಧರ ಮರಾಠಿ (26) ಹಾಗೂ ತಾಯಿ ಯಮುನಾ ಮರಾಠಿ (50) ಬಂಧಿತರು. ರಾಜೇಶ ನಾರಾಯಣ ನಾಯ್ಕ (29) ಕೊಲೆಯಾದವರು. ಪತ್ನಿ ಶ್ವೇತಾ, ತನ್ನ …
Read More »Yearly Archives: 2021
ದೇವರ ದರ್ಶನ ಮುಗಿಸಿ ವಾಪಾಸ್ ಆಗುತ್ತಿದ್ದ ಟಾಟಾ ಏಸ್ ಲಾರಿಗೆ ಡಿಕ್ಕಿ : ಸ್ಥಳದಲ್ಲೇ ಇಬ್ಬರ ಸಾವು, ಹಲವರು ಗಂಭೀರ
ಹಾಸನ : ಆದಿಚುಂಚನಗಿರಿಗೆ ತೆರಳಿ, ದೇವರ ದರ್ಶನ ಮುಗಿಸಿಕೊಂಡು ವಾಪಾಸ್ ಆಗುತ್ತಿದ್ದಂತ ಸಂದರ್ಭದಲ್ಲಿ, ಬೆಳ್ಳೂರು ಕ್ರಾಸ್ ಬಳಿ ಟಾಟಾ ಏಸ್ ಲಾರಿ ನಡುವೆ ಡಿಕ್ಕಿಯಾಗಿ, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಲ್ಲದೇ ಚಾಲಕ ಸೇರಿದಂತೆ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಂಡ್ಯದ ಕೆ ಆರ್ ಪೇಟೆ ತಾಲೂಕಿನ ಅಗ್ರಹಾರ ಬಾಚನಹಳ್ಳಿಯ ಜಯರಾಮೇಗೌಡ ಮತ್ತು ಅವರ ಕುಟುಂಬಸ್ಥರು ಆದಿಚುಂಚನಗಿರಿಗೆ ದೇವರ ದರ್ಶನಕ್ಕೆ ತೆರಳಿದ್ದರು. ದೇವರ ದರ್ಶನ ಮುಗಿಸಿಕೊಂಡು ವಾಪಾಸ್ ಆಗುತ್ತಿದ್ದಂತ ಸಂದರ್ಭದಲ್ಲಿ ಟಾಟಾ …
Read More »ಕಾರ್ಯಕರ್ತನಿಗೆ ಹೊಡೆದ ಡಿಕೆಶಿ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆಶಿವಕುಮಾರ್ ಅವರಿಗೆ ರೌಡಿ ಕೊತ್ವಾಲನೊಂದಿಗಿದ್ದ ಗತಕಾಲದ ನೆನಪು ಕಾಡಿತೇ..? ಒಂದು ರಾಷ್ಟ್ರೀಯ ಪಕ್ಷದ ರಾಜ್ಯ ಅಧ್ಯಕ್ಷನಾಗಿದ್ದುಕೊಂಡು ಸಾರ್ವಜನಿಕವಾಗಿ ಒಬ್ಬ ವ್ಯಕ್ತಿಯ ಮೇಲೆ ಹಲ್ಲೆ ಮಾಡಿರುವುದು ಅಕ್ಷಮ್ಯ ಎಂದು ರಾಜ್ಯ ಬಿಜಪಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದೆ. ಡಿ.ಕೆ ಶಿವಕುಮಾರ್ ಮಾದೇಗೌಡರ ಆರೋಗ್ಯ ವಿಚಾರಿಸಲು ಮಂಡ್ಯ ಜಿಲ್ಲೆಯ ಕೆ.ಎಂ.ದೊಡ್ಡಿಗೆ ತೆರಳಿದ್ದರು, ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಹೆಗಲ ಮೇಲೆ ಕೈ ಹಾಕಿ ಫೋಟೋ ತೆಗೆದುಕೊಳ್ಳಲು …
Read More »ಪದೇ ಪದೇ ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಯತ್ನಾಳ್, ಈಗ ಅಮಿತ್ ಶಾ ಎದುರು ದಾಖಲೆಗಳನ್ನು ಇಟ್ಟು ದೂರು ನೀಡಲಿದ್ದಾರೆ ?
ನವ ದೆಹಲಿ (ಜುಲೈ. 10): ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಿ ಪಕ್ಷದ ಎಲ್ಲಾ ಆಂತರಿಕ ಸಮಸ್ಯೆಗಳನ್ನು ಬಗೆಹರಿಸಿ ಹಿಂತಿರುಗಿದ ನಂತರವೂ, ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಾಯಕತ್ವವನ್ನು ಬದಲಿಸಬೇಕು ಎಂದು ಪ್ರಯತ್ನಿಸುತ್ತಿರುವ ರಾಜ್ಯ ಬಿಜೆಪಿಯ ಒಂದು ಬಣದ ಗುಂಪಿನ ಪ್ರಯತ್ನ ಇನ್ನೂ ನಿಂತಿಲ್ಲ. ಮೊದಲಿಗೆ ಭಾರೀ ಸದ್ದಿನೊಂದಿಗೆ ನಡೆಯುತ್ತಿದ್ದ ಕಸರತ್ತು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಬಂದು ಹೋದ ಮೇಲೆ ಸದ್ದಿಲ್ಲದೆ …
Read More »ಡಿಕೆಶಿಯವರೇ, ನೀವು ರಾಜಕಾರಣಿಯೋ- ರೌಡಿಯೋ : ಬಿಜೆಪಿ ಕಿಡಿ
ಬೆಂಗಳೂರು (ಜುಲೈ 10); ರಾಜ್ಯ ಪ್ರಾದೇಶಿಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇತ್ತೀಚೆಗೆ ಸಾರ್ವಜನಿಕವಾಗಿ ಕಾಂಗ್ರೆಸ್ ಕಾರ್ಯಕರ್ತನ ಕಪಾಳಕ್ಕೆ ಬಾರಿಸುವ ಮೂಲಕ ಸುದ್ದಿಯಾಗಿದ್ದರು. ಡಿ.ಕೆ. ಶಿವಕುಮಾರ್ ಕಾರ್ಯಕರ್ತನ ಕಪಾಳಕ್ಕೆ ಬಾರಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ಅಲ್ಲದೆ, ಈ ವಿಡಿಯೋವನ್ನು ರಾಷ್ಟ್ರೀಯ ಮಾಧ್ಯಮಗಳೂ ಪ್ರಸಾರ ಮಾಡುವ ಮೂಲಕ ಕೆಪಿಸಿಸಿ ಅಧ್ಯಕ್ಷರ ವರ್ತನೆಯನ್ನು ಕಟುವಾಗಿ ವಿಮರ್ಶೆ ಮಾಡಿತ್ತು. ಕರ್ನಾಟಕ ಬಿಜೆಪಿ ಘಟಕ ಸಹ ಡಿಕೆ ಶಿವಕುಮಾರ್ ಅವರ ಈ …
Read More »ಬೆಂಗಳೂರಲ್ಲಿ ಶೇ. 70ರಷ್ಟು ಸೋಂಕಿತರಿಗೆ ರೂಪಾಂತರಿ ವೈರಸ್, ಅಲರ್ಟ್ ಆದ ಬಿಬಿಎಂಪಿ
ಬೆಂಗಳೂರು: ನಗರದಲ್ಲಿ ದಿನೇ ದಿನೇ ರೂಪಾಂತರಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗ್ತಿದೆ. ಲ್ಯಾಬ್ಗೆ ಕಳುಹಿಸಿದ ಬಹುತೇಕ ಸ್ಯಾಂಪಲ್‌ಗಳೆಲ್ಲವೂ ರೂಪಾಂತರಿ ವೈರಸ್ ಅಂತ ದೃಢಪಟ್ಟಿದೆ. ನಗರದ ಶೇಕಡಾ 70ರಷ್ಟು ಸೋಂಕಿತರಿಗೆ ರೂಪಂತರಿ ವೈರಸ್ ತಗುಲಿರೋದು ಬೆಳಕಿಗೆ ಬಂದಿದೆ. ಈ ಹಿನ್ನೆಲೆ ಸಾಂಕ್ರಾಮಿಕ ನಿಯಂತ್ರಣಕ್ಕೆ ಬೆಂಗಳೂರು ಮಹಾನಗರ ಪಾಲಿಕೆ ಫುಲ್ ಆಯಕ್ಟೀವ್ ಆಗಿದ್ದು, ಜಿನೋಮಿಕ್ ಸೀಕ್ವೆನ್ಸಿಂಗ್ ಟೆಸ್ಟ್ ಹೆಚ್ಚಳ ಮಾಡಲು ನಿರ್ಧರಿಸಿದೆ. ಈ ಹಿಂದೆ ಪಾಸಿಟಿವ್ ಬಂದ ಶೇಕಡಾ 5ರಷ್ಟು ಸ್ಯಾಂಪಲ್ಸ್ ಮಾತ್ರ …
Read More »ಶಿಕ್ಷಣ ಹಕ್ಕು ಕಾಯ್ದೆಯಡಿ ಮೊದಲ ಸುತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ
ಕಳೆದ ವರ್ಷದ ಆರಂಭದಲ್ಲಿ ದೇಶದಲ್ಲಿ ಕಾಣಿಸಿಕೊಂಡ ಕೊರೊನಾ ಮಹಾಮಾರಿ ಶೈಕ್ಷಣಿಕ ವ್ಯವಸ್ಥೆಯನ್ನೇ ಅಲ್ಲೋಲ ಕಲ್ಲೋಲ ಮಾಡಿದೆ. ವಿದ್ಯಾರ್ಥಿಗಳಿಗೆ ಆನ್ ಲೈನ್ ಮೂಲಕ ಶಿಕ್ಷಣ ನೀಡಲಾಗುತ್ತಿದ್ದು, ಇದರ ಮಧ್ಯೆಯೂ ಈ ಹಿಂದಿನಂತೆ ಪ್ರವೇಶ ಪ್ರಕ್ರಿಯೆಗಳನ್ನು ನಡೆಸಲಾಗುತ್ತಿದೆ. ಶಿಕ್ಷಣ ಹಕ್ಕು ಕಾಯ್ದೆ ಅಡಿ ಈಗಾಗಲೇ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಮೊದಲ ಸುತ್ತಿನ ಲಾಟರಿ ಪ್ರಕ್ರಿಯೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಈ ವಿದ್ಯಾರ್ಥಿಗಳ ಶಾಲಾ ದಾಖಲಾತಿ ಅವಧಿಯನ್ನು ಜುಲೈ 16ರ …
Read More »ಬೆಳಗಾವಿ: “ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಮುಗಿದು ಹೋದ ಅಧ್ಯಾಯ” ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಬೆಳಗಾವಿ: “ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಮುಗಿದು ಹೋದ ಅಧ್ಯಾಯ” ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ಈ ಹಿಂದೆ ಶಾಸಕ ಸ್ಥಾನಕ್ಕೆ ರಾಜೀನಾಮೆ ವಿಚಾರ ಮಾಡಿದ್ದು ನಿಜ. ಆದರೆ ನನ್ನ ಹಿತೈಷಿಗಳು, ಸ್ವಾಮೀಜಿಗಳು ರಾಜೀನಾಮೆ ನೀಡದಂತೆ ಸಲಹೆ ನೀಡಿದ ಹಿನ್ನೆಲೆ ರಾಜೀನಾಮೆ ವಿಚಾರ ಕೈಬಿಟ್ಟಿದ್ದೇನೆ” ಎಂದರು. ಬಾಲಚಂದ್ರ ಜಾರಕಿಹೊಳಿ, ರಮೇಶ ಜಾರಕಿಹೊಳಿ ಜಂಟಿ ಸುದ್ದಿಗೋಷ್ಠಿ …
Read More »ಆಗಸ್ಟ್ 2ನೇ ವಾರ ಶಾಲೆ? ವಿಕೇಂದ್ರೀಕೃತ ವ್ಯವಸ್ಥೆಯಲ್ಲಿ ಆರಂಭಕ್ಕೆ ಸಿದ್ಧತೆ
ಬೆಂಗಳೂರು : ಮಕ್ಕಳ ನಿರಂತರ ಕಲಿಕೆ ಮುಂದುವರಿಯಲು ಗ್ರಾಮ ಮಟ್ಟದ ಪರಿಸ್ಥಿತಿಗೆ ಅನುಗುಣವಾಗಿ ಶಾಲೆಗಳಲ್ಲಿ ಭೌತಿಕ ತರಗತಿ ಆರಂಭಿಸಲು ಸಿದ್ಧತೆ ನಡೆಸಲಾಗುತ್ತಿದ್ದು, ಆಗಸ್ಟ್ ಎರಡನೇ ವಾರದ ಅನಂತರ ತರಗತಿಗಳು ಪ್ರಾರಂಭವಾಗುವ ಸಾಧ್ಯತೆಯಿದೆ. ರಾಜ್ಯಾದ್ಯಂತ ವಿದ್ಯಾರ್ಥಿಗಳ ದಾಖಲಾತಿ ನಡೆಯುತ್ತಿದೆ. ಸರಕಾರಿ ಶಾಲಾ ಮಕ್ಕಳಿಗೆ ದೂರದರ್ಶನದ ಸಂವೇದ ಪಾಠ ಮತ್ತು ಖಾಸಗಿ ಶಾಲಾ ಮಕ್ಕಳಿಗೆ ಆನ್‌ಲೈನ್ ತರಗತಿ ನಡೆಯುತ್ತಿದೆ. ಈ ಮಧ್ಯೆ ಗ್ರಾಮ ಮಟ್ಟದ ಪರಿಸ್ಥಿತಿಗೆ ಅನುಗುಣವಾಗಿ ಯಾವ ರೀತಿ ಶಾಲೆ ಆರಂಭಿಸಲು …
Read More »ಬೈಕ್ ಅಪಘಾತ : ಸ್ಥಳದಲ್ಲಿಯೇ ಇಬ್ಬರ ಸಾವು.
ಚಿಕ್ಕೋಡಿ : ಬೈಕ್ ಸವಾರರಿಬ್ಬರು ರಸ್ತೆ ಅಪಘಾತದಲ್ಲಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ನಾಗರಮುನ್ನೊಳ್ಳಿ ಟೋಲ್ ಗೆಟ್ ಹತ್ತಿರ ನಡೆದಿದೆ. ಮೃತರನ್ನು ಸಿದ್ದಾರ್ಥ ಅಶೋಕ ಖೇಮಲಾಪೊರೆ(24) ಮತ್ತು ಪ್ರಮೋದ ಕರೇಪ್ಪ ನಾಯ್ಕ(24) ಅಂತಾ ತಿಳಿದು ಬಂದಿದೆ. ನಿಪ್ಪಾಣಿ ಸಮೀಪದ ಸ್ತವನಿಧಿಗೆ ದೇವರಿಗೆಂದು ಹೋಗಿ ವಾಪಸ್ಸು ತಮ್ಮೂರಾದ ಬೆಲ್ಲದ-ಬಾಗೇವಾಡಿಗೆ ಬರುವಾಗ ನಾಗರಮುನ್ನೊಳ್ಳಿ ಟೋಲ್ ಗೇಟ್ ಹತ್ತಿರ ಮಳೆಯಾದ ಕಾರಣ …
Read More »