ಬೆಂಗಳೂರು: ಕೋವಿಡ್ 19 ಸೋಂಕಿಗೆ ಸಿಲುಕಿ ಸಾವನ್ನಪ್ಪಿದ ಇಬ್ಬರು ಪತ್ರಕರ್ತರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ರೂ.ಗಳನ್ನು ಮಂಜೂರು ಮಾಡಲಾಗಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಕೋವಿಡ್ ನಿಂದ ಮೃತಪಟ್ಟ ಪತ್ರಕರ್ತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಮುಖ್ಯ ಮಂತ್ರಿಯವರಿಗೆ ಮನವಿ ಸಲ್ಲಿಸಿತ್ತು. ಇದೀಗ ಮನವಿ ಸ್ಪಂದಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪರಿಹಾರವನ್ನು ಮಂಜೂರು ಮಾಡಿದ್ದಾರೆ. ಕಲಬುರ್ಗಿ ಜಿಲ್ಲೆಯ ಸಂಯುಕ್ತ ಕರ್ನಾಟಕ ಪತ್ರಿಕೆಯ ಹಿರಿಯ ಪತ್ರಕರ್ತ ಜಯತೀರ್ಥ ಕಾಗಲಕರ ಮತ್ತು ಕೊಡಗು …
Read More »Yearly Archives: 2021
ಗ್ರಾಮೀಣ ಪ್ರದೇಶದ ಜನತೆಗೆ ರಾಜ್ಯ ಸರ್ಕಾರದಿಂದ ಭರ್ಜರಿ ‘ಗುಡ್ ನ್ಯೂಸ್’
ಗ್ರಾಮೀಣ ಪ್ರದೇಶದ ಜನತೆಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಕೇಂದ್ರಗಳನ್ನು ಆರಂಭಿಸಲು ತೀರ್ಮಾನಿಸಲಾಗಿದ್ದು, ಈ ಕುರಿತು ಈಗಾಗಲೇ ಆದೇಶ ಹೊರಬಿದ್ದಿದೆ. ಆಧಾರ್ ಇಂದು ಬಹುತೇಕ ಎಲ್ಲ ಸೇವೆಗಳಿಗೆ ಅನಿವಾರ್ಯವಾಗಿದ್ದು, ಕೊರೊನಾ ಲಸಿಕೆ ಪಡೆಯಲು ಸಹ ಆಧಾರ್ ಸಂಖ್ಯೆ ಬೇಕಾಗುತ್ತದೆ. ಆದರೆ ಗ್ರಾಮಾಂತರ ಪ್ರದೇಶದಲ್ಲಿ ಕೆಲವರು ಇನ್ನೂ ಸಹ ಆಧಾರ್ ನೋಂದಣಿ ಮಾಡದ ಕಾರಣ ಅನಾನುಕೂಲವಾಗಿದೆ. ಆಧಾರ್ ನೋಂದಣಿ ಮಾಡಿಸಲು ಅಥವಾ …
Read More »ಬೀದರ್, ಕಲಬುರ್ಗಿಯಲ್ಲಿ ಮಳೆ; ಕಬ್ಬಿಗೆ ಹಾನಿ
ಕಲಬುರ್ಗಿ: ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಬುಧವಾರ ತಡರಾತ್ರಿ ಉತ್ತಮ ಮಳೆಯಾಗಿದ್ದು, ಮಳೆಯ ರಭಸಕ್ಕೆ ಹಲವು ಕಡೆ ಕಬ್ಬಿನ ಬೆಳೆಗೆ ಹಾನಿಯಾಗಿದೆ. ಬೀದರ್ ತಾಲ್ಲೂಕಿನ ಶ್ರೀಕಟನಳ್ಳಿ ಗ್ರಾಮದಲ್ಲಿ ಮಳೆಯ ಅಬ್ಬರಕ್ಕೆ ಹೊಲದಲ್ಲಿನ ಕಬ್ಬು ನೆಲಕ್ಕೆ ಉರುಳಿದೆ. ಭಾಲ್ಕಿ ಹಾಗೂ ಔರಾದ್ ತಾಲ್ಲೂಕಿನಲ್ಲಿ ಸಾಧಾರಣ ಮಳೆಯಾಗಿದೆ. ಜಿಲ್ಲೆಯಲ್ಲಿ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣ ಇತ್ತು. ಸಂಜೆ ಗ್ರಾಮೀಣ ಪ್ರದೇಶದಲ್ಲೇ ಹೆಚ್ಚು ಮಳೆಯಾಯಿತು. ಕಲಬುರ್ಗಿ ನಗರ ಸೇರಿದಂತೆ ಜಿಲ್ಲೆಯ ಚಿಂಚೋಳಿ, ಆಳಂದ, ಕಮಲಾಪುರ …
Read More »ಬಾಗಲಕೋಟೆಯಲ್ಲಿ ಭಾರೀ ಮಳೆ.. ರಾತ್ರಿಯೆಲ್ಲಾ ನಿದ್ದೆಯಿಲ್ಲದೇ ಕಳೆದ ಜನ
ಬಾಗಲಕೋಟೆ: ಜಿಲ್ಲೆಯ ಬದಾಮಿ ತಾಲ್ಲೂಕಿನ ವಿವಿಧ ಕಡೆ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆ ನೀರು ಕುಳಗೇರಿ ಕ್ರಾಸ್ನಲ್ಲಿರುವ ನಾಲ್ಕೈದು ಮನೆಗಳಿಗೆ ನುಗ್ಗಿದೆ. ಅಸ್ಲಮ್ ದಾಸ್ಯಾಳ ಎಂಬುವವರ ಮನೆ ಸೇರಿದಂತೆ ಐದು ಮನೆಗಳಿಗೆ ಮಳೆ ನೀರು ನುಗ್ಗಿದ್ದರಿಂದ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪಾತ್ರೆ-ಪಗಡೆ, ಮನೆಯಲ್ಲಿರುವ ವಿವಿಧ ವಸ್ತುಗಳು ಜಲಾವೃತಗೊಂಡಿದ್ದವು. ಹೀಗಾಗಿ ಬುಟ್ಟಿ, ಬಕೆಟ್ ನಿಂದ ನಿವಾಸಿಗಳು ನೀರನ್ನು ರಾತ್ರಿಯಿಂದ ಬೆಳಗ್ಗೆವರೆಗೂ ಹೊರ ಹಾಕಿದ ಪ್ರಸಂಗ ಕೂಡ ನಡೆದಿದೆ. ಮಳೆ ಬಂದಾಗೆಲ್ಲಾ …
Read More »ಇಂದು ಕೊರೊನಾ ಗುಣಮುಖರಾದವರ ಸಂಖ್ಯೆಯಲ್ಲಿ ಹೆಚ್ಚಳ
ಬೆಂಗಳೂರು: ರಾಜ್ಯದಲ್ಲಿ ಈವರೆಗೆ ಕೊರೊನಾ ಸೋಂಕಿತರಾದ 28.64 ಲಕ್ಷ ಮಂದಿಯಲ್ಲಿ 27.90 ಲಕ್ಷ ಮಂದಿ ಚೇತರಿಸಿಕೊಂಡಿದ್ದಾರೆ. ಹೊಸದಾಗಿ 2,530 ಮಂದಿ ಕೋವಿಡ್ ಪೀಡಿತರಾಗಿರುವುದು ಹಾಗೂ ಸೋಂಕಿತರಲ್ಲಿ 3,344 ಮಂದಿ ಗುಣಮುಖರಾಗಿರುವುದು ಗುರುವಾರ ದೃಢಪಟ್ಟಿದೆ. ಒಂದು ದಿನದ ಅವಧಿಯಲ್ಲಿ 1.57 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದ್ದು, ಶೇ 1.60ರಷ್ಟು ಸೋಂಕು ದೃಢ ಪ್ರಮಾಣ ವರದಿಯಾಗಿದೆ. ಬೆಂಗಳೂರಿನಲ್ಲಿ 514 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು 500ರ ಗಡಿಯೊಳಗೆ ವರದಿಯಾಗಿವೆ. …
Read More »ಜಲಾಶಯ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆದರೆ ಕ್ರಮ ಕೈಗೊಳ್ಳಬೇಕು: ಎಂ.ಬಿ.ಪಾಟೀಲ್
ಬೆಂಗಳೂರು: ಯಾವುದೇ ಆಣೆಕಟ್ಟು ಸುತ್ತಮುತ್ತ ಸುರಕ್ಷಿತ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಯಬಾರದು. ಕೆಆರ್ ಎಸ್ ಪುರಾತನ ಜಲಾಶಯ. ಜಲಾಶಯದ ಸುರಕ್ಷಿತ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೆ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾದ ಬಳಿಕ ಸುದ್ದಗಾರರೊಂದಿಗೆ ಅವರು ಮಾತನಾಡಿದರು. ಅಂಬರೀಶ್ ಕಾಲದಲ್ಲೇ ಅಕ್ರಮ ಗಣಿಗಾರಿಕೆ ನಡೆಯುತ್ತಿತ್ತು ಎಂಬ ಜೆಡಿಎಸ್ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅಂಬರೀಶ್ ನನ್ನ …
Read More »ಅಮಾಯಕರಿಂದ ಹಣ ವಸೂಲಿ ಮಾಡುತ್ತಿದ್ದ ಪೊಲೀಸ್ ಠಾಣೆ ಮೇಲೆ ಎಸಿಬಿ ಅಧಿಕಾರಿಗಳ ದಾಳಿ
ಬೆಳಗಾವಿ: ಅಮಾಯಕರಿಂದ ಹಣ ವಸೂಲಿ ಮಾಡುತ್ತಿದ್ದ ಪೊಲೀಸ್ ಠಾಣೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಪಿಎಸ್ ಐ ಹಾಗೂ ಇಬ್ಬರು ಪಿಸಿಗಳನ್ನು ಬಂಧಿಸಿರುವ ಘಟನೆ ಸದಲಗಾ ಠಾಣೆಯಲ್ಲಿ ನಡೆದಿದೆ. ಚಿಕ್ಕೋಡಿ ತಾಲೂಕಿನ ಸದಲಗಾ ಠಾಣೆಯಲ್ಲಿ ಪೊಲೀಸರು ಅಮಾಯಕರ ಬಳಿ ಹಣ ವಸೂಲಿ ಮಾಡುತ್ತಿದ್ದರು. ಅನಧಿಕೃತ ಪಾನ್ ಮಸಾಲಾ ಕಾರ್ಖಾನೆ ನಡೆಸುತ್ತಿದ್ದೀರಿ ಎಂದು ಹೆದರಿಸಿ ಕಾರ್ಖಾನೆ ಮಾಲೀಕ ರಾಜು ಪಾಶ್ಚಾಪುರೆ ಬಳಿ 50 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಇದರಿಂದ ನೊಂದ …
Read More »ಯೋಗೇಶಗೌಡ ಹತ್ಯೆ: ಸಿಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್
ನವದೆಹಲಿ: ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೇಶಗೌಡ ಹತ್ಯೆ ಪ್ರಕರಣದ ಸಿಬಿಐ ತನಿಖೆಗೆ ಅನುಮತಿ ನೀಡಿ ಹೊರಡಿಸಲಾದ ಆದೇಶದ ಸಿಂಧುತ್ವ ಪ್ರಶ್ನಿಸಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗುರುವಾರ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ. ಪ್ರಕರಣ ಕುರಿತು ಎರಡನೇ ಎಫ್‌ಐಆರ್ ದಾಖಲಿಸಿರುವ ಸಿಬಿಐ ಕ್ರಮವನ್ನು ಪ್ರಶ್ನಿಸಿ ಚಂದ್ರಶೇಖರ ಇಂಡಿ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದು, ಎರಡೂ ಅರ್ಜಿಗಳಿಗೆ ಸಂಬಂಧಿಸಿದಂತೆ ಜುಲೈ 24ರೊಳಗೆ ಪ್ರತಿಕ್ರಿಯೆ ನೀಡಬೇಕು …
Read More »ಬೆಂಬಲ ಬೆಲೆ ಬಾಕಿ ಹಣ ಬಿಡುಗಡೆ
ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ ಯೋಜನೆ ಯಡಿ ರೈತರಿಂದ ಆಹಾರ ಧಾನ್ಯ ಖರೀದಿಸಿದ ಬಾಕಿ ಇರುವ 721 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಗುರುವಾರ ನಡೆದ ಸಂಪುಟ ಉಪ ಸಮಿತಿ ತೀರ್ಮಾನಿಸಿದ್ದು, 2-3 ದಿನಗಳಲ್ಲಿ ರೈತರ ಖಾತೆಗಳಿಗೆ ಜಮೆಯಾಗಲಿದೆ ಎಂದು ಸಮಿತಿ ಅಧ್ಯಕ್ಷರೂ ಆಗಿರುವ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. ಸಭೆಯ ಅನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ನಾಲ್ಕೈದು ತಿಂಗಳ ಹಿಂದೆಯೇ ರಾಗಿ, ಭತ್ತ, ಗೋಧಿಯನ್ನು ಕನಿಷ್ಠ ಬೆಂಬಲ …
Read More »ಎಪಿಎಂಸಿಗಳಿಗೆ ₹ 1 ಲಕ್ಷ ಕೋಟಿ ವರೆಗೆ ಆರ್ಥಿಕ ನೆರವು: ತೋಮರ್
ನವದೆಹಲಿ: ನಿಯಂತ್ರಿತ ಮಾರುಕಟ್ಟೆಗಳ ಸಾಮರ್ಥ್ಯ ವೃದ್ಧಿ ಮತ್ತು ರೈತರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸುವುದಕ್ಕಾಗಿ ಕೃಷಿ ಮೂಲಸೌಕರ್ಯ ನಿಧಿಯಿಂದ (ಎಐಎಫ್) ₹ 1 ಲಕ್ಷ ಕೋಟಿ ವರೆಗೆ ಆರ್ಥಿಕ ನೆರವು ನೀಡಲಾಗುವುದು. ಕೃಷಿ ಉತ್ಪಾದನಾ ಮಾರುಕಟ್ಟೆ ಸಮಿತಿ (ಎಪಿಎಂಸಿ) ಮಾರುಕಟ್ಟೆಗಳು ನೆರವು ಪಡೆಯಲು ಅರ್ಹವಾಗಲಿವೆ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರದ ಯೋಜನೆಗೆ ಅನುಮೋದನೆ …
Read More »