Breaking News

Yearly Archives: 2021

ನೇತ್ರಾವತಿ ನದಿಗೆ ಸ್ನಾನಕ್ಕೆ ಇಳಿದ ಗದಗದ ಸಹೋದರರು ನೀರುಪಾಲು

ಮಂಗಳೂರು: ಇಲ್ಲಿನ ನೇತ್ರಾವತಿ ನದಿ ನೀರಿಗೆ ಸ್ನಾನಕ್ಕೆ ಇಳಿದ ಗದಗ ಮೂಲಕದ ಇಬ್ಬರು ಸಹೋದರರು ಸೋಮವಾರ ನೀರುಪಾಲಾಗಿ ಮೃತಪಟ್ಟಿದ್ದಾರೆ. ಉಪ್ಪಿನಂಗಡಿಯಲ್ಲಿ ತೋಟದ ಕಾರ್ಮಿಕರಾದ, ಮೂಲತಃ ಗದಗ ಜಿಲ್ಲೆಯ ಶಿರಹಟ್ಟಿ ತಾಲ್ಲೂಕಿನ ಸುಬ್ಬನಹಳ್ಳಿ ನಿವಾಸಿಯಾದ ಧರ್ಮ ಮತ್ತು ಮೀನಾಕ್ಷಿ ದಂಪತಿಯ ಮಕ್ಕಳಾದ ನಿಂಗರಾಜು (16) ಮತ್ತು ಸತೀಶ್ (14) ಮೃತರು. ‌ಬೆಳ್ತಂಗಡಿ ತಾಲ್ಲೂಕು ಮುಂಡಾಜೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಿಂಗರಾಜು ಹತ್ತನೇ ತರಗತಿಯಲ್ಲಿ, ಆತನ ಸಹೋದರ ಸತೀಶ್, ಪುತ್ತೂರು ಬಲ್ನಾಡು …

Read More »

ಬೈಕ್‍ಗೆ ಡಿಕ್ಕಿ ಹೊಡೆದ ಲಕ್ಷ್ಮಣ್ ಸವದಿ ಪುತ್ರನ ಕಾರ್- ಸವಾರ ,ಚಿಕಿತ್ಸೆ ಫಲಕಾರಿಯಾಗದೇ ಕೂಡ್ಲೆಪ್ಪ ಸಾವನ್ನಪ್ಪಿದ್ದಾರೆ

ಬಾಗಲಕೋಟೆ: ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಪುತ್ರ ಚಿದಾನಂದ್ ಕಾರ್ ಅಪಘಾತಕ್ಕೆ ಒಳಗಾಗಿದ್ದು, ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮ ಕ್ರಾಸ್ ಬಳಿಯ ಚಿತ್ರದುರ್ಗ-ಸೊಲ್ಹಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಕೊಡ್ಲೆಪ್ಪ ಬೋಳಿ ಮೃತ ಬೈಕ್ ಸವಾರ. ಕುಡ್ಲೆಪ್ಪ ಹೊಲದಿಂದ ಮನೆಗೆ ಹಿಂದಿರುಗುವಾಗ ಅಪಘಾತ ಸಂಭವಿಸಿದೆ. ಕಾರ್ ಡಿಕ್ಕಿಯಾಗುತ್ತಿದ್ದಂತೆ ಕೂಡ್ಲೆಪ್ಪ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಕೂಡ್ಲೆಪ್ಪ ಸಾವನ್ನಪ್ಪಿದ್ದಾರೆ.ಬೈಕ್‍ಗೆ ಕಾರ್ ಡಿಕ್ಕಿಯಾಗುತ್ತಿದ್ದಂತೆ ಡಿಸಿಎಂ ಪುತ್ರ ಚಿದಾನಂದ್ …

Read More »

ಮಹಾಲಿಂಗಪೂರ ಪುರಸಭೆ ಪ್ರಕರಣ:ಶಾಸಕ ಸಿದ್ದು ಸವದಿ- ತಹಶೀಲ್ದಾರ ಸಿಐಡಿಯಿಂದ ಪ್ರತ್ಯೇಕ ವಿಚಾರಣೆ

ಬನಹಟ್ಟಿ: ಕಳೆದ ವರ್ಷ ನ.9 ರಂದು ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪೂರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಆಯ್ಕೆ ಚುನಾವಣೆ ವೇಳೆ ಮಹಿಳಾ ಸದಸ್ಯೆಯರ ಎಳೆದಾಟದ ಗಲಾಟೆಗೆ ಸಂಬಂಧಿಸಿದಂತೆ ಡಿವೈಎಸ್ಪಿ ಎಸ್. ಸತ್ಯವತಿ ನೇತೃತ್ವದ ಸಿಐಡಿ ಅಧಿಕಾರಿಗಳ ತಂಡ ಬನಹಟ್ಟಿಯ ಲೋಕೋಪಯೋಗಿ ಇಲಾಖೆಯ ನಿರೀಕ್ಷಣಾ ಮಂದಿರದಲ್ಲಿ ಸೋಮವಾರ ರಾತ್ರಿವರೆಗೂ ತೇರದಾಳ ಶಾಸಕ ಸಿದ್ದು ಸವದಿ ಹಾಗು ಅಂದಿನ ರಬಕವಿ-ಬನಹಟ್ಟಿ ತಹಶೀಲ್ದಾರರಾಗಿದ್ದ ಪ್ರಶಾಂತ ಚನಗೊಂಡ ಅವರನ್ನು ಪ್ರತ್ಯೇಕವಾಗಿ ತೀವ್ರ ವಿಚಾರಣೆ …

Read More »

ಮಹಾರಾಷ್ಟ್ರದಲ್ಲಿ ಮತ್ತೆ ಬಿಜೆಪಿ ಮತ್ತು ಶಿವಸೇನೆ ಮೈತ್ರಿ? ಠಾಕ್ರೆ ಬಣದ ಷರತ್ತುಗಳೇನು?

ನವದೆಹಲಿ/ಮುಂಬೈ: ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಶಿವಸೇನೆ ಮತ್ತೂಮ್ಮೆ ಮೈತ್ರಿ ಮಾಡಿಕೊಳ್ಳುವ ವದಂತಿಗಳ ನಡುವೆಯೇ ಹೊಸ ಮಾಹಿತಿಯೊಂದು ಸೋಮವಾರ ಬಹಿರಂಗವಾಗಿದೆ. ಸದ್ಯ ಮಹಾರಾಷ್ಟ್ರದಲ್ಲಿ ಪ್ರತಿಪಕ್ಷ ನಾಯಕ, ಮಾಜಿ ಸಿಎಂ ದೇವೇಂದ್ರ ಫ‌ಡ್ನವಿಸ್‌ ಅವರನ್ನು ಕೇಂದ್ರ ಸಂಪುಟಕ್ಕೆ ಸಚಿವರನ್ನಾಗಿ ಮಾಡಬೇಕು. ಶಿವಸೇನೆ ಬಳಿಯೇ ಮುಖ್ಯಮಂತ್ರಿ ಹುದ್ದೆ ಇರಬೇಕು ಎಂಬ ಷರತ್ತನ್ನು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಬಿಜೆಪಿ ವರಿಷ್ಠರಿಗೆ ಹಾಕಿದ್ದರು. ಶೀಘ್ರದಲ್ಲಿಯೇ ಕೇಂದ್ರ ಸಚಿವ ಸಂಪುಟ ಪುನಾರಚನೆ ನಡೆಯಲಿದೆ ಎಂಬ ಚರ್ಚೆಗಳ ನಡುವೆಯೇ ಇಂಥ …

Read More »

ಸಂಭಾವ್ಯ ಮೂರನೇ ಅಲೆ ಸಮರ್ಥವಾಗಿ ಎದುರಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಗೋಕಾಕ ಹಾಗೂ ಮೂಡಲಗಿ ತಾಲೂಕಿನ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ಹಾಕಿಸಿ ಈ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸೋಮವಾರದಂದು ಇಲ್ಲಿನ ತಹಶೀಲ್ದಾರ ಕಛೇರಿಯಲ್ಲಿ ಮೂಡಲಗಿ ಹಾಗೂ ಗೋಕಾಕ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಲಸಿಕೆ ಅಭಿಯಾನವನ್ನು ಈಗಾಗಲೇ ನಡೆಸಲಾಗುತ್ತಿದ್ದು, ಆರೋಗ್ಯ ಇಲಾಖೆಯ ಜೊತೆಗೆ ಎಲ್ಲ ಇಲಾಖೆಗಳು ಕೈಜೋಡಿಸಿ …

Read More »

ಗೋಕಾಕ: ನಗರದ ಪ್ರವಾಸಿ ಮಂದಿರದಲ್ಲಿ ರೈತ ಸಂಘ ಹಾಗೂ ಹಸಿರು ಸೇನೆಯ (ಕೋಡಿಹಳ್ಳಿ ಬಣ) ಬೆಳಗಾವಿ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡ ರೈತ ಮುಖಂಡರು.

ಗೋಕಾಕ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ (ಕೋಡಿಹಳ್ಳಿ ಬಣ)ಬೆಳಗಾವಿ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆಯು ಸೋಮವಾರದಂದು ನಗರದ ಪ್ರವಾಸಿ ಮಂದಿರದಲ್ಲಿ ಜರುಗಿತು. ಜಿಲ್ಲಾಧ್ಯಕ್ಷ ಸತ್ತೆಪ್ಪ ಮಲ್ಲಾಪೂರೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜುಲೈ-21 ರಂದು ರಾಜ್ಯ ಮಟ್ಟದ ರೈತ ಹುತ್ಮಾತ ದಿನಾಚರಣೆಯನ್ನು ಯರಗಟ್ಟಿಯಲ್ಲಿ ನಡೆಸಲು ನಿರ್ಧರಿಸಲಾಯಿತ್ತಲ್ಲದೇ ಕೃಷಿ ಇಲಾಖೆ ನೀಡುತ್ತಿರುವ ಉಪಕರಣಗಳ ಸಹಾಯಧನವನ್ನು ರದ್ದು ಮಾಡಿದ್ದು ಅದನ್ನು ಪುನ: ಆರಂಭಿಸಬೇಕು. ನೀರಿನ ಪಂಪಸೆಟ್‍ಗಳನ್ನು ನಡೆಸಲು 3ಪೇಸ್ …

Read More »

ಬೆಂಗಳೂರು: ನಾಲ್ಕು ಪ್ರತ್ಯೇಕ ಪ್ರಕರಣಗಳಲ್ಲಿ ಅಪಾರ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಂಡ ಪೊಲೀಸರು

ಬೆಂಗಳೂರು: ರಾಜ್ಯಕ್ಕೆ ನೆರೆ ರಾಜ್ಯದಿಂದ ಗಾಂಜಾ ಘಾಟು ಎಗ್ಗಿಲ್ಲದೇ ಕಾಲಿಡುತ್ತಿದೆ. ಕಳೆದ ಮೂರು ವಾರದಿಂದ ಕಣ್ಣಿಟ್ಟಿದ್ದ ಖಾಕಿ ಪಡೆಯಿಂದ ಇಂದು ಭರ್ಜರಿ ಕಾರ್ಯಾಚರಣೆ ನಡೆಸಲಾಗಿದೆ. ಬೆಂಗಳೂರಿನ ಕೆಂಗೇರಿ ಗೇಟ್ ಎಸಿಪಿ ಸ್ಕ್ವಾಡ್‌ನಿಂದ ಈರ್ವರನ್ನು ಬಂಧಿಸಲಾಗಿದ್ದು, ಅವರಿಂದ 50 ಲಕ್ಷ ರೂ. ಮೌಲ್ಯದ 110 ಕೆಜಿ ಶುದ್ಧ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ನಾಗರಬಾವಿ ಬಿಡಿಎ ಕಾಂಪ್ಲೆಕ್ಸ್‌ ಬಳಿ ಕಾರು ತಡೆದು ಆರೋಪಿಗಳಾದ ಅಪ್ಪಣ್ಣ, ಸುಬ್ರಮಣಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಶಾಖಪಟ್ಟಣಂನ ಗುಡ್ಡಗಾಡು ಪ್ರದೇಶದಲ್ಲಿ …

Read More »

ಖಾಸಗಿ ಬಸ್ ಪ್ರಯಾಣ ದರ ಏರಿಕೆಗೆ ತಡೆ : ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ

ಮಂಗಳೂರು, ಜು.5: ದ.ಕ.ಜಿಲ್ಲೆಯ ಖಾಸಗಿ ಬಸ್ ಮಾಲಕರ ಸಂಘವು ಏರಿಕೆ ಮಾಡಿರುವ ಬಸ್ ಪ್ರಯಾಣ ದರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಸೋಮವಾರ ಬಸ್ ಮಾಲಕರ ಸಂಘದ ಪ್ರತಿನಿಧಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಲಾಕ್‌ ಡೌನ್ ಮುಂಚೆ ಚಾಲ್ತಿಯಲ್ಲಿದ್ದ ಪ್ರಯಾಣ ದರವನ್ನು ತೆಗೆದುಕೊಳ್ಳಬೇಕು ಎಂದು ಮಾಲಕರಿಗೆ ಸೂಚಿಸಲಾಗಿದೆ. ಪ್ರಯಾಣ ದರ ಏರಿಕೆಗೆ ಸಂಬಂಧಿಸಿ ಈ …

Read More »

ಬೆಳಗಾವಿ: ಮಾಸಿ, ಹರಿದು ಹೋದ ಕನ್ನಡ ಧ್ವಜ ಬದಲಿಸಿ ಎಂದು ಕರ್ನಾಟಕದಲ್ಲೇ ಪ್ರತಿಭಟನೆ ಮಾಡುವ ಸ್ಥಿತಿ!

ಬೆಳಗಾವಿ: ಬಣ್ಣ ಮಾಸಿ, ಹರಿದು ಹೋಗಿರುವ ಕನ್ನಡ ಧ್ವಜವನ್ನು ಬದಲಿಸಬೇಕೆಂದು ಬೆಳಗಾವಿ ಮಹಾನಗರ ಪಾಲಿಕೆ ಎದುರು ಕನ್ನಡಪರ ಸಂಘಟನೆಗಳು ಧರಣಿ ಕೈಗೊಂಡಿವೆ. ಮೂರು ತಿಂಗಳಿಂದ ಮನವಿ ಮಾಡುತ್ತಿದ್ದರೂ ಧ್ಚಜ ಬದಲಾವಣೆ ಮಾಡಿಲ್ಲ. ಉದ್ದೇಶಪೂರ್ವಕವಾಗಿ ಪಾಲಿಕೆ ಹೀಗೆ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಕನ್ನಡ ಧ್ವಜ ಹಾಗೂ ಹಗ್ಗ ತೆಗೆದುಕೊಂಡು ಬಂದಿರುವ ಕನ್ನಡಪರ ಹೋರಾಟಗಾರರು ಕೊರಳಿಗೆ ಹಗ್ಗ ಹಾಕಿಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಧ್ವಜಸ್ತಂಭದ ಸುತ್ತ ಬ್ಯಾರಿಕೇಡ್ ಅಳವಡಿಸಿ ಭದ್ರತೆಗಾಗಿ ಪೊಲೀಸರನ್ನು ನಿಯೋಜಿಸಲಾಗಿದೆ. …

Read More »

ಮೋದಿ ಎದುರು ಮೇಕೆದಾಟು ಬಗ್ಗೆ ಮಾತನಾಡುವ ಶಕ್ತಿ ಬಿಜೆಪಿಯವರಿಗೆ ಇಲ್ಲ : ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ

ರಾಮನಗರ : ಕೇಂದ್ರ – ರಾಜ್ಯ ವಿರುದ್ಧ ಕಾಂಗ್ರೆಸ್​ ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ನಡೆಸಿದ್ದಾರೆ. ರಾಮನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಡಿ‌.ಕೆ.ಸುರೇಶ್ ಮೇಕೆದಾಟು ಯೋಜನೆ ವಿಚಾರವಾಗಿ ಕೆಂಡಕಾರಿದ್ದಾರೆ. ರಾಜ್ಯದ ಯಾವ ಸಂಸದರಿಗೂ, ಸಚಿವರಿಗೂ ಪ್ರಧಾನಿ ಮೋದಿ ಎದುರು ಯೋಜನೆ ಬಗ್ಗೆ ಪ್ರಸ್ತಾಪ ಮಾಡುವ ಶಕ್ತಿಯಿಲ್ಲ. ನಿಷ್ಕ್ರಿಯರಾಗಿದ್ದಾರೆ. ಸುಪ್ರೀಂಕೋರ್ಟ್ ಹಾಗೂ ಹಸಿರು ಪೀಠ ಈಗಾಗಲೇ ಯೋಜನೆಗೆ ಅಸ್ತು ಎಂದಿದೆ. ಆದರೆ ಈ ಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆ …

Read More »