Breaking News

Yearly Archives: 2021

ಊರಿಗೆ ತಂಗಿಯ ಶವ ತರುತ್ತಿದ್ದ ಅಣ್ಣನ ಪ್ರಾಣವನ್ನೂ ಮಾರ್ಗಮಧ್ಯೆ ಹೊತ್ತೊಯ್ದ ಜವರಾಯ!

ಚಿತ್ರದುರ್ಗ: ಅಪಘಾತಕ್ಕೀಡಾಗಿ ಮೃತಪಟ್ಟ ತಂಗಿಯ ಶವವನ್ನ ಬೆಂಗಳೂರಿನ ಆಸ್ಪತ್ರೆಯಿಂದ ಊರಿಗೆ ತರುತ್ತಿದ್ದ ಅಣ್ಣನೂ ಮಾರ್ಗಮಧ್ಯೆ ದುರಂತ ಅಂತ್ಯ ಕಂಡಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಹಾವೇರಿ ಜಿಲ್ಲೆಯ ಹಿರೇಕೆರೂರಿನ ರಾಮು ಮುದ್ದಿಗೌಡರ್(56) ಮತ್ತು ಇವರ ಸಹೋದರಿ ರೇಣುಕಾ ಮೃತರು. ಮೂರು ದಿನದ ಹಿಂದೆ ರೇಣುಕಾಗೆ ಅಪಘಾತವಾಗಿ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದಿತ್ತು. ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರಾಮು ಕರೆದೊಯ್ದಿದ್ದರು. ಚಿಕಿತ್ಸೆ ಫಲಿಸದೆ ರೇಣುಕಾ ಗುರುವಾರ ಮೃತಪಟ್ಟಿದ್ದರು. ಮೃತದೇಹವನ್ನು ಆಂಬುಲೆನ್ಸ್​ನಲ್ಲಿ …

Read More »

ಬಿಜೆಪಿ ಸರ್ಕಾರದಲ್ಲಿ ಲಂಚ ಇಲ್ಲದೇ ಏನು ಆಗುವುದಿಲ್ಲ: ಸಿದ್ದರಾಮಯ್ಯ

ದಾವಣಗೆರೆ: ರಾಜ್ಯದ 20 -25 ಪರ್ಸೆಂಟ್ ಬಿಜೆಪಿ ಸರ್ಕಾರದಲ್ಲಿ ಲಂಚ ಇಲ್ಲದೇ ಯಾವ ಕೆಲಸವೂ ಆಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, “ವಿಜಯೇಂದ್ರ ಡಿ ಪ್ಯಾಕ್ಟರ್ ಸಿಎಂ. ಯಡಿಯೂರಪ್ಪ ಡಿ ಜೀರೋ ಸಿಎಂ. ಸರ್ಕಾರದಲ್ಲಿ ಲಂಚ ನಡೆಯುತ್ತಿರುವುದು ಸತ್ಯ. ಯಡಿಯೂರಪ್ಪನವರ ಮಗ ಹಾಗು ಅಳಿಯ ಬ್ಯಾಂಕ್ ಮುಖಾಂತರ ಲಂಚ ತೆಗೆದು ಕೊಳ್ಳುತ್ತಿದ್ದಾರೆ. ಯಡಿಯೂರಪ್ಪನವರ ಇಡೀ ಕುಟುಂಬ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿದ್ದಾರೆ. …

Read More »

ಮಂಗಳೂರು ವಿಮಾನ ನಿಲ್ದಾಣದಲ್ಲಿ ₹20 ಲಕ್ಷ ಮೌಲ್ಯದ ಅಕ್ರಮ ಚಿನ್ನ ಪತ್ತೆ

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈನಿಂದ‌ ಬಂದ ವ್ಯಕ್ತಿಯಿಂದ ಸುಮಾರು ₹20.89 ಲಕ್ಷ ಮೌಲ್ಯ ಅಕ್ರಮ ಚಿನ್ನ ಪತ್ತೆಯಾಗಿದ್ದು, ಅದನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕಾಸರಗೋಡು ಮೂಲದ ಪ್ರಯಾಣಿಕ ದುಬೈನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ಮೂಲಕ ವಿಮಾನ‌ ನಿಲ್ದಾಣಕ್ಕೆ ಬಂದಿದ್ದಾನೆ. ತಪಾಸಣೆ ವೇಳೆ ಈತ 430 ಗ್ರಾಂ ತೂಕದ ಚಿನ್ನವನ್ನು ಪೌಡರ್ ಅನ್ನು ಗುದನಾಳದಲ್ಲಿಟ್ಟು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ಆರೋಪಿಯನ್ನು ಕಸ್ಟಮ್ಸ್‌ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. …

Read More »

ಕರ್ನಾಟಕ ನಂಬರ್ 1 ಕೈಗಾರಿಕಾ ಸ್ನೇಹಿ ರಾಜ್ಯವಾಗುತ್ತೆ: ಜಗದೀಶ್ ಶೆಟ್ಟರ್

ಬೆಂಗಳೂರು: ಕೊರೊನಾ ಸಂಕಷ್ಟ ಕಾಲದಲ್ಲೂ ಕರ್ನಾಟಕ ರಾಜ್ಯ ಅತೀ ಹೆಚ್ಚು ಬಂಡವಾಳ ಹೂಡಿಕೆಯ ಪ್ರಸ್ತಾಪಗಳನ್ನು ಹಾಗೂ ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. ಮುಖ್ಯಮಂತ್ರಿ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರ ಹೊರತಂದಿರುವ ಕ್ರಾಂತಿಕಾರಿ ಕಾನೂನುಗಳು ಹಾಗೂ ನೀತಿಗಳಿಂದ ಕರ್ನಾಟಕ ರಾಜ್ಯ ದೇಶದಲ್ಲಿ ನಂ.1 ಕೈಗಾರಿಕಾ ಸ್ನೇಹಿ ರಾಜ್ಯವಾಗುವತ್ತಾ ದಾಪುಗಾಲು ಇಡುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ಬೆಂಗಳೂರು ನಗರದಲ್ಲಿ ಲಘು …

Read More »

ಕಿತ್ತೂರು ತಾಲೂಕಿನ ವೈದ್ಯರಿಗೆ Thermos ವಿತರಿಸಿ ವೈದ್ಯರ ಸೇವೆಯನ್ನು ಗುಣಗಾನ ಮಾಡಿದ ಪೆಂಡಾಲ್ ಗುತ್ತಿಗೆದಾರ ಪಕ್ಕಿರಪ್ಪ ಮುರಗೋಡ..!!

ಕಿತ್ತೂರು ತಾಲೂಕಿನ ವೈದ್ಯರಿಗೆ Thermos ವಿತರಿಸಿ ವೈದ್ಯರ ಸೇವೆಯನ್ನು ಗುಣಗಾನ ಮಾಡಿದ ಪೆಂಡಾಲ್ ಗುತ್ತಿಗೆದಾರ ಪಕ್ಕಿರಪ್ಪ ಮುರಗೋಡ..!! ಕಿತ್ತೂರು :ಗುರುವಾರ ದಂದು ಕಿತ್ತೂರು ಪಟ್ಟಣದಲ್ಲಿರುವ ಕಲ್ಮಠ ಸಭಾಭವನದಲ್ಲಿ ವೈದ್ಯರ ದಿನಾಚರಣೆ ನಿಮಿತ್ಯ ಸತ್ಕಾರ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.ರಾಜಗುರು ಸಂಸ್ಥಾನ ಕಲ್ಮಠದ ಶ್ರೀಗಳ ದಿವ್ಯ ಸಾನಿದ್ಯದಲ್ಲಿ ಆಯೋಜಿಸಿದ್ದ ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕಿತ್ತೂರು ಕ್ಷೇತ್ರದ ಶಾಸಕ ಮಹಾಂತೇಶ ದೊಡ್ಡಗೌಡರ ಹಾಗೂ ತಾಲೂಕಿನ ಗಣ್ಯ ವ್ಯಕ್ತಿಗಳು ಮತ್ತು ಪೆಂಡಾಲ್ ಗುತ್ತಿಗೆದಾರರು ಆದ ಪಕ್ಕಿರಪ್ಪ …

Read More »

ಪಿಗ್ಗಿ ಬ್ಯಾಂಕ್‌ನ ಹಣವನ್ನು ಬಡವರ ಚಿಕಿತ್ಸೆಗೆ ನೀಡಿದ ಪುತ್ತೂರಿನ ಬಾಲೆ

ಮಂಗಳೂರು, ಜುಲೈ 2: ಬಡವರ ಚಿಕಿತ್ಸೆಯ ಖರ್ಚಿಗೆ ತನ್ನ ಪಿಗ್ಗಿ ಬ್ಯಾಂಕ್‌ನ ಹಣವನ್ನು ಆಸ್ಪತ್ರೆಗೆ ನೀಡಿ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಪುಟ್ಟ ಬಾಲೆ ಮಾದರಿಯಾಗಿದ್ದಾಳೆ. ಪುತ್ತೂರಿನ ವಿವೇಕಾನಂದ ಶಾಲೆಯ ಮೂರನೇ ತರಗತಿ ವಿದ್ಯಾರ್ಥಿನಿ ದಿಶಾ, ತನ್ನ ಪಿಗ್ಗಿ ಬ್ಯಾಂಕ್‌ನಲ್ಲಿ ತಾನು ಜತನದಿಂದ ಕಾಪಾಡಿಕೊಂಡು ಬಂದಿದ್ದ ಸುಮಾರು ಹತ್ತು ಸಾವಿರ ರೂಪಾಯಿಯನ್ನು ಆಸ್ಪತ್ರೆಗೆ ನೀಡಿದ್ದಾಳೆ. ಪುತ್ತೂರಿನ ಖ್ಯಾತ ಸರ್ಜನ್ ಡಾ.ಎಂ.ಕೆ. ಪ್ರಸಾದ್‌ಗೆ ತನ್ನ ಪಿಗ್ಗಿ ಹಣ ನೀಡಿರುವ ದಿಶಾ, ಬಡವರ …

Read More »

ಬಿ.ವೈ. ವಿಜಯೇಂದ್ರ ವಿರುದ್ಧ ಸಚಿವ ಶ್ರೀರಾಮುಲು ಅಸಮಾಧಾನ?

ವಿಧಾನಸೌಧ: ತಮ್ಮ ಬಳಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿರುವ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ವಿಧಾನಸೌಧದಲ್ಲಿ ಮಾಧ್ಯಮಗಳ ಮುಂದೆ ಪ್ರತಿಕ್ರಿಯೆ ನೀಡಿದ ಸಚಿವರು ಯಾರೂ ಕೂಡ ಯಾರ ಹೆಸರನ್ನೂ ದುರ್ಬಳಕೆ ಮಾಡಿಕೊಳ್ಳಬಾರದು, ಅದು ಸರಿಯಲ್ಲ, ನನ್ನ ಬಳಿ ಕೆಲಸಕ್ಕಿದ್ದ ರಾಜಣ್ಣ ವಿರುದ್ಧ ಎಫ್ ಐಆರ್ ದಾಖಲಾಗಿದೆ, ತನಿಖೆ ಕೂಡ ನಡೆಯುತ್ತಿದೆ, ಹೀಗಾಗಿ ನಾನು ಹೆಚ್ಚಿಗೆ ಮಾತನಾಡಲು, ಪ್ರತಿಕ್ರಿಯೆ …

Read More »

ಸಚಿವ ಶ್ರೀರಾಮುಲು ಪಿಎ ರಾಜಣ್ಣ ಬಂಧನ ಪ್ರಕರಣ: ಸ್ಪಷ್ಟನೆ ನೀಡಿದ ವಿಜಯೇಂದ್ರ

ಬೆಂಗಳೂರು: ಸಿಎಂ ಯಡಿಯೂರಪ್ಪ ಪುತ್ರ ವಿಜಯೇಂದ್ರ, ಸಚಿವ ಶ್ರೀರಾಮುಲು ಹೆಸರು ಹೇಳಿಕೊಂಡು ಹಲವಾರು ಮಂದಿಗೆ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಶ್ರೀರಾಮುಲು ಆಪ್ತ ಸಹಾಯಕ ರಾಜಣ್ಣ ಎಂಬವರನ್ನು ಗುರುವಾರ ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಬಿ ವೈ ವಿಜಯೇಂದ್ರ, ಸಾರ್ವಜನಿಕರು ಮೋಸ ಹೋಗಬಾರದೆಂಬ ಹಿತದೃಷ್ಟಿಯಿಂದ ಹಾಗೂ ನನ್ನ ವ್ಯಕ್ತಿತ್ವ ರಕ್ಷಣೆಗಾಗಿ, ಅನಿವಾರ್ಯವಾಗಿ ನೀಡಿದ ದೂರಿನ ಮೇಲೆ ಪೋಲಿಸರು ಕ್ರಮ ತೆಗೆದುಕೊಂಡಿದ್ದಾರೆ ಎಂದಿದ್ದಾರೆ. ಈ ಬಗ್ಗೆ …

Read More »

ಮದುವೆಯಾಗಿ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ರಸ್ತೆ ಅಪಘಾತ: ವಧು ಸಾವು, ವರನಿಗೆ ಗಂಭೀರ ಗಾಯ

ವಿಜಯಪುರ: ಜಿಲ್ಲೆಯ ಸಿಂದಗಿ ತಾಲೂಕಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮದುವೆಯಾಗಿ ದೇವಸ್ಥಾನಕ್ಕೆ ಹೊರಟಿದ್ದ ನವವಿವಾಹಿತೆ ಸ್ಥಳದಲ್ಲೇ ಮೃತಪಟ್ಟು, ಆಕೆಯ ಪತಿ ಸೇರಿ ಹಲವರು ಗಂಭೀರ ಗಾಯಗೊಂಡಿರುವ ದುರಂತ ಘಟನೆ ಜರುಗಿದೆ. ಸಿಂದಗಿ ತಾಲೂಕಿನ ಯರಗಲ್ ಬಿ.ಕೆ. ಗ್ರಾಮದ ಬಳಿ ಟೆಂಪೋ ಹಾಗೂ ಕ್ರೂಸರ್ ಮಧ್ಯೆ‌ ಮುಖಾಮುಖಿ ಢಿಕ್ಕಿಯಾದ ಪರಿಣಾಮ ನವ ವಿವಾಹಿತೆ ರಾಣಿ ಗಣೇಶ್ ಚವ್ಹಾಣ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಮದುಮಗ ಗಣೇಶ ಚವ್ಹಾಣ ಸೇರಿದಂತೆ ಏಳು ಜನರಿಗೆ ಗಂಭೀರ ಗಾಯಗಳಾಗಿದ್ದು, …

Read More »

ರಾಜ್ಯದಲ್ಲೂ ಪ್ರವಾಸಿ ಥೀಮ್‌ಪಾರ್ಕ್‌

ಬೆಂಗಳೂರು: ಒಡಿಶಾದ ಕೊನಾರ್ಕ್‌ ಸೂರ್ಯ ದೇಗುಲದಲ್ಲಿ ಇರುವ ಥೀಮ್‌ ಪಾರ್ಕ್‌ ಮಾದರಿಯಲ್ಲಿ ರಾಜ್ಯದ ಪ್ರಮುಖ ಪ್ರವಾಸಿ ಮತ್ತು ಐತಿಹಾಸಿಕ ತಾಣಗಳಲ್ಲಿ ಥೀಮ್‌ ಪಾರ್ಕ್‌ ಸ್ಥಾಪಿಸುವ ಇರಾದೆ ರಾಜ್ಯ ಸರಕಾರಕ್ಕೆ ಇದೆ. ಮೊದಲ ಹಂತದಲ್ಲಿ ಹಂಪಿಯ 200 ಎಕರೆ ಪ್ರದೇಶ ದಲ್ಲಿ ಥೀಮ್‌ ಪಾರ್ಕ್‌ ಸ್ಥಾಪನೆಯಾಗಲಿದೆ. ಅದರಲ್ಲಿ ವಿಜಯನಗರ ಸಾಮ್ರಾಜ್ಯದ ಗತವೈಭವ ಕುರಿತು ಡಿಜಿಟಲ್‌ ಸ್ಪರ್ಶದೊಂದಿಗೆ ಕಿರುಚಿತ್ರ ಪ್ರದರ್ಶಿಸಲು ಉದ್ದೇಶಿಸಲಾಗಿದೆ. ಸಮೀಪದಲ್ಲೇ ಆಂಜನೇಯನ ಜನ್ಮಸ್ಥಳ ಎಂದು ಪ್ರತೀತಿ ಇರುವ ಅಂಜನಾದ್ರಿ ಬೆಟ್ಟವೂ ಇರುವುದರಿಂದ …

Read More »