ಹುಬ್ಬಳ್ಳಿ: ಧಾರವಾಡ ಸಮೀಪದ ಎಸ್‌ಡಿಎಂ ಆಸ್ಪತ್ರೆಯಿಂದ ಲಿವರ್ (ಯಕೃತ್ತು) ಅನ್ನು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಾಗಿಸಲು ಸುಮಾರು 16 ಕಿ.ಮೀ ದೂರದ ಮಾರ್ಗವನ್ನು ಪೊಲೀಸರು ಹಸಿರು ಕಾರಿಡಾರ್ ಮೂಲಕ ಅಂಬ್ಯುಲೆನ್ಸ್ ತ್ವರಿತ ತಲುಪಲು ಅನುವು ಮಾಡಿಕೊಟ್ಟರು. ಜಿರೋ ಟ್ರಾಫಿಕ್ ನಲ್ಲಿ ಯಕೃತ್ ಇದ್ದ ಅಂಬ್ಯುಲೆನ್ಸ್ ನಿಗದಿಪಡಿಸಿದ ಸಮಯಕ್ಕೆ ವಿಮಾನ ನಿಲ್ದಾಣ ತಲುಪಿತಲ್ಲದೆ, ಯಕೃತ್ ನ್ನು ವಿಮಾನದಲ್ಲಿ ಬೆಂಗಳೂರಿಗೆ ಕಳುಹಿಸಲಾಯಿತು. ಮೃತ ಮಹಿಳೆಯೊಬ್ಬರ ಕಣ್ಣು, ಕಿಡ್ನಿ ಮತ್ತು ಲಿವರ್ ಸೇರಿದಂತೆ ವಿವಿಧ …
Read More »Yearly Archives: 2021
ಕೊರೋನಾದಿಂದ ಸಂಕಷ್ಟದಲ್ಲಿರುವವರಿಗೆ ಕಾಂಗ್ರೆಸ್ ನೆರವು
ಬೆಂಗಳೂರು, ಜೂ.26- ಕೋವಿಡ್ ಮೊದಲ ಮತ್ತು ಎರಡನೇ ಅಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಆಳುವ ಸರ್ಕಾರಕ್ಕಿಂತಲೂ ಹೆಚ್ಚಿನದಾಗಿ ಸಂಕಷ್ಟದಲ್ಲಿ ಇರುವ ಜನರಿಗೆ ನೆರವಾಗಿದೆ ಎಂದು ರಾಜ್ಯ ಸಭಾಸದಸ್ಯ ಎಲ್.ಹನುಮಂತಯ್ಯ ಅವರ ನೇತೃತ್ವದ ಸಮಿತಿ ವರದಿ ನೀಡಿದೆ. ಕೋವಿಡ್ ಸಂದರ್ಭದಲ್ಲಿನ ಕಾರ್ಯಚಟುವಟಿಕೆಗಳ ಅಧ್ಯಯನಕ್ಕಾಗಿ ರಚಿಸಲಾಗಿದ್ದ ಸಮಿತಿ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮಧ್ಯಂತರ ವರದಿ ನೀಡಿದೆ. ಬೂತ್ ಮಟ್ಟದಿಂದಲೂ ಮಾಹಿತಿ ಕಲೆ ಹಾಕಿರುವ ಸಮಿತಿ ಕಾಂಗ್ರೆಸ್ ಕಾರ್ಯಕರ್ತರು ನಾಯಕರು ಎಷ್ಟು …
Read More »ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರು ಆರ್.ಟಿ.ಪಿ.ಸಿ.ಆರ್. ನೆಗೆಟಿವ್ ವರದಿ ಕಡ್ಡಾಯ
ಬೆಳಗಾವಿ, – ಕೋವಿಡ್ 3ನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿರುವ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ರಾಜ್ಯದ ಗಡಿಭಾಗದಲ್ಲಿ ಇರುವ ಕೊಗನೊಳ್ಳಿ ರಾಷ್ಟ್ರೀಯ ಹೆದ್ದಾರಿ ಚೆಕ್ ಪೋಸ್ಟ್ ಗೆ ಶನಿವಾರ(ಜೂ.26) ಭೇಟಿ ನೀಡಿ, ಕೋವಿಡ್ ನಿಯಂತ್ರಣ ಕ್ರಮಗಳನ್ನು ಪರಿಶೀಲಿಸಿದರು. ನೆರೆಯ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರು ಆರ್.ಟಿ.ಪಿ.ಸಿ.ಆರ್. ನೆಗೆಟಿವ್ ವರದಿಯನ್ನು ಕಡ್ಡಾಯವಾಗಿ ಹೊಂದಿರಬೇಕು. ವರದಿಯನ್ನು ಹೊಂದಿರುವವರಿಗೆ ಮಾತ್ರ ಪ್ರಯಾಣಿಸಲು ಅವಕಾಶ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಒಂದು ವೇಳೆ …
Read More »ವಾರದೊಳಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾಯಿಸಲಾಗುವುದು. ಎಂದ ಸತೀಶ್ ಜಾರಕಿಹೊಳಿ
ಬೆಂಗಳೂರು – ಕೆಲವು ಜಿಲ್ಲೆಗಳಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಬದಲಾಯಿಸಲಾಗುವುದು. ವಾರದೊಳಗೆ ಈ ಪ್ರಕ್ರಿಯೆ ಮುಗಿಸಲು ಕೆಪಿಸಿಸಿ ಅಧ್ಯಕ್ಷರು ಸೂಚನೆ ನೀಡಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಕಾಂಗ್ರೆಸ್ ಪ್ರಮುಖರ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನೇಕ ಕಡೆ 3 ವರ್ಷ ಪೂರ್ಣಗೊಂಡಿದೆ. ಕೆಲವು ಕಡೆ ಬದಲಾವಣೆ ಬೇಡಿಕೆ ಇದೆ. ಕೆಲವರು ಸ್ವಯಂ ಪ್ರೇರಿತರಾಗಿ ಸ್ಥಾನ ಬಿಟ್ಟುಕೊಡಲು ಮುಂದಾಗಿದ್ದಾರೆ. ಅಂತಹ ಕಡೆಗಳಲ್ಲಿ ಜಿಲ್ಲಾವಾರು ಸಭೆ ನಡೆಸಿ …
Read More »ಪಕ್ಷ ಸಂಘಟನೆ: ಡಿ.ಕೆ. ಶಿವಕುಮಾರ್ ನೇತತ್ವದಲ್ಲಿ ಕಾರ್ಯಾಧ್ಯಕ್ಷರ ಸಭೆ
ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಮುಂಚೂಣಿ ಘಟಕಗಳನ್ನು ಪುನರ್ ರಚಿಸಲು ಮುಂದಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪಕ್ಷದ ಕಾರ್ಯಾಧ್ಯಕ್ಷರ ಜತೆ ಶನಿವಾರ ಸಭೆ ನಡೆಸಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮುಂಚೂಣಿ ಘಟಕಗಳ ಪುನರ್ ರಚನೆ, ಕೆಲವು ಜಿಲ್ಲಾ ಕಾಂಗ್ರೆಸ್ ಘಟಕಗಳ ಅಧ್ಯಕ್ಷರ ಬದಲಾವಣೆ, ಬ್ಲಾಕ್ ಕಾಂಗ್ರೆಸ್ ಘಟಕಗಳ ಪುನರ್ ರಚನೆ ಸಿದ್ಧತೆ ಕುರಿತು ಚರ್ಚೆ ನಡೆಯಿತು. ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ, ಸತೀಶ ಜಾರಕಿಹೊಳಿ, ಈಶ್ವರ್ …
Read More »ವಾರಾಂತ್ಯದ ಕರ್ಫ್ಯೂ: ಬಸ್ ಸಂಚಾರಕ್ಕೆ ಇಲ್ಲ ಅಡ್ಡಿ
ಬೆಂಗಳೂರು: ವಾರಾಂತ್ಯದ ಕರ್ಫ್ಯೂ ಸಂದರ್ಭದಲ್ಲಿ ಬಸ್‌ಗಳ ಕಾರ್ಯಚರಣೆ ನಡೆಸಲು ಕೆಎಸ್‌ಆರ್‌ಟಿಸಿ ನಿರ್ಧರಿಸಿದೆ. ಕರ್ಫ್ಯೂ ಸಂದರ್ಭದಲ್ಲಿ ಬಹಳಷ್ಟು ಚಟುವಟಿಕೆಗಳನ್ನು ನಿಷೇಧಿಸಿರುವುದರಿಂದ ಅವಶ್ಯಕತೆಗಳಿಗೆ ತಕ್ಕಂತೆ ಬಸ್‌ಗಳು ಸಂಚರಿಸಲಿವೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ. ‘ನಗರದಲ್ಲಿ ವಾಣಿಜ್ಯ ಚಟುವಟಿಕೆ ಮತ್ತು ಸಾರ್ವಜನಿಕರ ಸಂಚಾರ ನಿರ್ಬಂಧಿಸಿರುವ ಕಾರಣ ಬೆಂಗಳೂರು ನಗರದಲ್ಲಿ ಪ್ರಯಾಣಿಕರ ಸಂಖ್ಯೆಯೂ ಕಡಿಮೆಯಾಗಲಿದೆ. ಸದ್ಯ 4 ಸಾವಿರ ಬಸ್‌ಗಳು ಕಾರ್ಯಾಚರಣೆಯಲ್ಲಿದ್ದು, ಕರ್ಫ್ಯೂ ಸಂದರ್ಭದಲ್ಲಿ ಶೇ 30ರಷ್ಟು ಅಂದರೆ 1,200 ಬಸ್‌ಗಳನ್ನು ಮಾತ್ರ ರಸ್ತೆಗೆ ಇಳಿಸಲಾಗುವುದು’ ಎಂದು …
Read More »13 ವರ್ಷದ ಬಾಲಕನಲ್ಲಿ ರೂಪಾಂತರಿಯ ವಿಚಿತ್ರ ರೋಗ
ದಾವಣಗೆರೆ: ಕೊರೊನಾ ಮೂರನೇ ಅಲೆ ಆತಂಕದ ನಡುವೆ ಇದೀಗ ರಾಜ್ಯದಲ್ಲಿ ಮಕ್ಕಳಲ್ಲಿ ಎ-ನೆಕ್ ಎಂಬ ಅಪರೂಪದ ಕಾಯಿಲೆ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಅಕ್ಯುಟ್ ನೆಕ್ರೋಟೈಜಿಂಗ್ ಎನ್ಸೆಫಲೋಪತಿ(ANEC) ಎಂಬ ಅಪರೂಪದ ಕಾಯಿಲೆ ದೇಶದಲ್ಲಿಯೇ ಮೊದಲ ಬಾರಿಗೆ ಮಕ್ಕಳಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಪತ್ತೆಯಾಗಿದೆ. ಇಲ್ಲಿನ ಎಸ್.ಎಸ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಹೂವಿನಹಡಗಲಿ ಮೂಲದ 13 ವರ್ಷದ ಬಾಲಕನಲ್ಲಿ ಎ-ನೆಕ್ ಕಾಯಿಲೆ ಪತ್ತೆಯಾಗಿದೆ. ಇದೇ ಆಸ್ಪತ್ರೆಯಲ್ಲಿ ಈ ಕಾಯಿಲೆಯ ರೋಗಲಕ್ಷಣವಿರುವ 6 ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದು, …
Read More »ಕೋವಿಡ್ ನಿಯಮ ಉಲ್ಲಂಘಿಸಿ ಲೋಕೋಪಯೋಗಿ ಅಧಿಕಾರಿಗಳಿಂದ ಬಾಡೂಟ ಪಾರ್ಟಿ
ಚಾಮರಾಜನಗರ: ಲಾಕ್ ಡೌನ್ನಲ್ಲಿ ಲೋಕೋಪಯೋಗಿ ಅಧಿಕಾರಿಗಳು ಭರ್ಜರಿ ಬಾಡೂಟ ಪಾರ್ಟಿ ಮಾಡಿರುವ ಘಟನೆ ಚಾಮರಾಜನಗರ ಸಂತೇಮರಳ್ಳಿ ಸರ್ಕಾರಿ ಅತಿಥಿ ಗೃಹದಲ್ಲಿ ನಡೆದಿದೆ. ಲೋಕೋಪಯೋಗಿ ಇಲಾಖೆಯ ಅಧಿಕಾರಿಯೊಬ್ಬರು ಇದೇ ತಿಂಗಳ 30ರಂದು ನಿವೃತ್ತಿಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅಧಿಕಾರಿಯೊಬ್ಬರಿಗೆ ಬಿಳ್ಕೊಡುಗೆ ನೀಡುವ ನೆಪದಲ್ಲಿ ಅಧಿಕಾರಿಗಳು ಭರ್ಜರಿ ಪಾರ್ಟಿ ನಡೆಸಿದ್ದಾರೆ ಎನ್ನಲಾಗಿದೆ. ಕೊರೊನಾ ಲಾಕ್ಡೌನ್ ಹಾಗೂ ಮಾರ್ಗಸೂಚಿಗಳನ್ನು ಅಧಿಕಾರಿಗಳು ಉಲ್ಲಂಘನೆ ಮಾಡಿದ್ದು, ಸುಮಾರು 80 ರಿಂದ 100 ಜನರಿಗೆ ಬಾಡೂಟ ಏರ್ಪಡಿಸಿದ್ದರು ಎನ್ನಲಾಗಿದೆ. …
Read More »ಗಂಟೆಗೊಮ್ಮೆ ಕರೆ ಮಾಡಿ ಸಿಕ್ಕಿಬಿದ್ದಿದ್ದರು ರೇಖಾ ಕದಿರೇಶ್ ಹಂತಕರು: ಮತ್ತೆ ನಾಲ್ವರ ಬಂಧನ
ಬೆಂಗಳೂರು: ಛಲವಾದಿಪಾಳ್ಯದ ಬಿಜೆಪಿಯ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಅವರನ್ನು ನಡು ಬೀದಿಯಲ್ಲಿ ಭೀಕರವಾಗಿ ಕೊಲೆಗೈದಿದ್ದ ಇಬ್ಬರು ಕಿಂಗ್ ಪಿನ್ ಗಳಿಗೆ ಪಶ್ಚಿಮ ವಿಭಾಗ ಪೊಲೀಸರು ಗುಂಡೇಟಿನ ರುಚಿ ತೋರಿಸಿದ್ದಾರೆ. ಅಲ್ಲದೆ ರಾತ್ರಿ ಇನ್ನೂ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಛಲವಾದಿ ಪಾಳ್ಯ ನಿವಾಸಿಗಳಾದ ಪೀಟರ್(45) ಮತ್ತು ಸೂರ್ಯ(20) ಎಂಬವರು ಎಡಗಾಲಿಗೆ ಗುಂಡೇಟು ಬಿದ್ದಿದ್ದು, ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜತೆಗೆ ರಾತ್ರಿ ಕದಿರೇಶ್ ಸಹೋದರಿ ಮಾಲಾ ಪುತ್ರ ಅರುಳ್, ಸ್ಥಳೀಯ ನಿವಾಸಿ …
Read More »ಜಾರಕಿಹೊಳಿ ರಾಜೀನಾಮೆ ಕೊಡುವ ಅವಶ್ಯಕತೆಯಿಲ್ಲ, ಸೂಕ್ತ ಸ್ಥಾನಮಾನ ಸಿಗಲಿದೆ: ಬಿ.ಸಿ.ಪಾಟೀಲ್
ಉಡುಪಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವ ಅವಶ್ಯಕತೆಯಿಲ್ಲ. ಅವರ ವಿರುದ್ಧ ಪಿತೂರಿ ಮಾಡಿ ಪ್ರಕರಣದಲ್ಲಿ ಸಿಕ್ಕಿಸಿ ಹಾಕಿದ್ದಾರೆ. ಶೀಘ್ರದಲ್ಲಿ ಸತ್ಯ ಹೊರಬರುತ್ತದೆ. ನಂತರ ಅವರಿಗೆ ಸರ್ಕಾರದಲ್ಲಿ ಸೂಕ್ತ ಸ್ಥಾನಮಾನವನ್ನು ಪಕ್ಷದ ವರಿಷ್ಠರು ಕೊಡತ್ತಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಕಾಂಗ್ರೆಸ್ ಸಿಎಂ ಅಭ್ಯರ್ಥಿ ಗೊಂದಲ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮುಖ್ಯಮಂತ್ರಿಯಾಗಲು ಕಾಂಗ್ರೆಸ್ ಎಲ್ಲಿದೆ? ಕಾಂಗ್ರೆಸ್ ನಿರ್ನಾಮವಾಗಿದೆ. …
Read More »