ಚಿಕ್ಕೋಡಿ(ಬೆಳಗಾವಿ): ಚಾಲೆಂಜಿಗ್ ಸ್ಟಾರ್ ದರ್ಶನ ಅಭಿಮಾನಿಗಳು ಅವರ ಮೇಲಿನ ಪ್ರೀತಿಯಿಂದಾಗಿ ವಿಶಿಷ್ಟವಾಗಿ ತಮ್ಮ ಅಭಿಮಾನವನ್ನ ಪ್ರದರ್ಶನ ಮಾಡುತ್ತಾರೆ. ಅದೇ ರೀತಿ ಉತ್ತರ ಕರ್ನಾಟಕದಲ್ಲಿ ಆಚರಣೆ ಮಾಡುವ ಕಾರ ಹುಣ್ಣಿಮೆಯಲ್ಲೂ ಡಿ ಬಾಸ್ ಅಭಿಮಾನಿಗಳು ವಿಭಿನ್ನವಾಗಿ ತಮ್ಮ ಬಾಸ್ ಮೇಲೆ ಪ್ರೀತಿ ತೋರಿಸಿದ್ದಾರೆ. ಉತ್ತರ ಕರ್ನಾಟಕದಲ್ಲಿ ಆಚರಣೆ ಮಾಡುವ ರೈತರ ಹಬ್ಬ ಕಾರ ಹುಣ್ಣಿಮೆಯ ನಿಮಿತ್ತ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಶಮನೇವಾಡಿ ಗ್ರಾಮದಲ್ಲಿ ಎತ್ತುಗಳ ಮೇಲೆ ದರ್ಶನ ಚಿತ್ರ ಬಿಡಿಸಿ …
Read More »Yearly Archives: 2021
ಅಥಣಿ ಪಟ್ಟಣದಲ್ಲಿರುವ ಆರ್‍ಎಸ್‍ಎಸ್ ಪ್ರಮುಖ ಅರವಿಂದರಾವ್ ದೇಶಪಾಂಡೆ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ ರಮೇಶ್ ಜಾರಕಿಹೊಳಿ
ಚಿಕ್ಕೋಡಿ(ಬೆಳಗಾವಿ): ಶುಕ್ರವಾರ ಸುತ್ತೂರು ಮಠಕ್ಕೆ ಭೇಟಿ ನೀಡಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇಂದು ಆರ್ ಎಸ್ ಎಸ್ ಪ್ರಮುಖರ ಮನೆ ಕದ ತಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿರುವ ಆರ್‍ಎಸ್‍ಎಸ್ ಪ್ರಮುಖ ಅರವಿಂದರಾವ್ ದೇಶಪಾಂಡೆ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಪ್ರಸಕ್ತ ವಿದ್ಯಮಾನಗಳ ಬಗ್ಗೆ ಅರವಿಂದರಾವ್ ಜೊತೆ ಮಾತುಕತೆ ಮಾತನಾಡುವುದರ ಜೊತೆಗೆ ಬಿಜೆಪಿ ಪಕ್ಷ ಅಧಿಕಾರ ಬರಲು ನನ್ನ ಪಾತ್ರ ತುಂಬಾ ಇದೆ. ಹೀಗಾಗಿ ಕೆಲ …
Read More »ಹಳಿತಪ್ಪಿದ ಹಜರತ್ ನಿಜಾಮುದ್ದೀನ್‌ನ ರಾಜಧಾನಿ ಎಕ್ಸ್‌ಪ್ರೆಸ್
ಮುಂಬೈ: ‘ಮಹಾರಾಷ್ಟ್ರ ರಾಜ್ಯದ ರತ್ನಗಿರಿ ಜಿಲ್ಲೆಯಲ್ಲಿ ಹಜರತ್ ನಿಜಾಮುದ್ದೀನ್‌ನ ರಾಜಧಾನಿ ಎಕ್ಸ್‌ಪ್ರೆಸ್, ಸುರಂಗವೊಂದರಲ್ಲಿ ಹಳಿ ತಪ್ಪಿದ ಘಟನೆ ಶನಿವಾರ ನಡೆದಿದೆ. ಘಟನೆಯಲ್ಲಿ ಯಾವುದೇ ಸಾವು-ನೋವಿನ ವರದಿಯಾಗಿಲ್ಲ. ಗೋವಾದ ಮಡ್‌ಗಾಂವ್‌ನತ್ತ ಪ್ರಯಾಣಿಸುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್ ಮುಂಬೈನಿಂದ 325 ಕಿ.ಮೀ ದೂರದಲ್ಲಿರುವ ಕಾರ್ಬೂಡ್ ಸುರಂಗದಲ್ಲಿ ಬೆಳಿಗ್ಗೆ 4.15ಕ್ಕೆ ಹಳಿ ತಪ್ಪಿದೆ ಎಂದು ಕೊಂಕಣ್ ರೈಲ್ವೆ ಅಧಿಕಾರಿಗಳು ಹೇಳಿದರು. ಹಳಿಯ ಮೇಲೆ ಕಲ್ಲು ಬಂಡೆಯೊಂದು ಬಿದ್ದ ಕಾರಣ, ರೈಲು ಹಳಿ ತಪ್ಪಿದೆ. ರತ್ನಗಿರಿ ಜಿಲ್ಲೆಯ …
Read More »ದೇಶದಾದ್ಯಂತ ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ
ನವದೆಹಲಿ: ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆಯಾಗಿದೆ. ಪೆಟ್ರೋಲ್ ದರ 31ರಿಂದ 35 ಪೈಸೆ ಮತ್ತು ಡೀಸೆಲ್ ದರ 35 ಪೈಸೆ ಏರಿಕೆಯಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ ಕಂಪನಿಗಳು (ಒಎಂಸಿ) ಶನಿವಾರ ದೇಶದಾದ್ಯಂತ ಇಂಧನ ದರವನ್ನು ಮತ್ತೊಮ್ಮೆ ಏರಿಕೆ ಮಾಡಿವೆ. ಈ ಮೂಲಕ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೊಸ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 101.45ಕ್ಕೆ ಏರಿಕೆಯಾಗಿದ್ದು, …
Read More »ವ್ಯಾಕ್ಸಿನ್ ಪಡೆಯದ ಆಟೋ ಚಾಲಕರು ಆಟೋವನ್ನು ರಸ್ತೆಗಿಳಿಸುವಂತಿಲ್ಲ: ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ
ವಿಜಯಪುರ: ವ್ಯಾಕ್ಸಿನ್ ಹಾಕಿಸಿಕೊಳ್ಳದ ಆಟೋ ಚಾಲಕರು ಆಟೋಗಳನ್ನ ರಸ್ತೆಗೆ ಇಳಿಸುವ ಹಾಗಿಲ್ಲ. ಇನ್ನು ಈವರೆಗೂ ವ್ಯಾಕ್ಸಿನ್ ಪಡೆಯದ ಬೀದಿಬದಿ ವ್ಯಾಪಾರಸ್ಥರು ವ್ಯಾಪಾರ ಮಾಡುವ ಹಾಗಿಲ್ಲ ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ ಸುನೀಲ್‍ಕುಮಾರ್ ಖಡಕ್ ನಿರ್ಧಾರಕ್ಕೆ ಮುಂದಾಗಿದ್ದಾರೆ. ವ್ಯಾಕ್ಸಿನ್ ಹಾಕಿಸಿಕೊಳ್ಳಿ ಎಂದು ಎಷ್ಟೇ ಹೇಳಿದರೂ, ಆಟೋ ಚಾಲಕರು, ಬೀದಿ ಬದಿ ವ್ಯಾಪಾರಸ್ಥರು, ಕಟ್ಟಡ ಕಾರ್ಮಿಕರು ಕೇಳುತ್ತಿಲ್ಲ. ನಾವು ಆರೋಗ್ಯವಾಗಿದ್ದೀವಿ ವ್ಯಾಕ್ಸಿನ್ ಯಾಕೆ ಎಂದು ಹೇಳುತ್ತಿದ್ದಾರೆ. ಹೀಗಾಗಿ ಗರಂ ಆಗಿರುವ ಡಿಸಿ ಸುನೀಲ್‍ಕುಮಾರ್, …
Read More »ನಡು ರಸ್ತೆಯಲ್ಲಿ ಡೀಸೆಲ್ ಲಾರಿ ಪಲ್ಟಿ : ಬಕೆಟ್, ಪಾತ್ರೆ ಹಿಡಿದು ಮುಗಿಬಿದ್ದ ಜನರು.!
ದಾವಣಗೆರೆ : ಇಂದು ಡೀಸೆಲ್ ತುಂಬಿದ ಲಾರಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ನಂದಿಬೇವೂರು ಗ್ರಾಮದಲ್ಲಿ ನಡೆದಿದೆ. ಜಿಲ್ಲೆ ಹರಪನಹಳ್ಳಿ ತಾಲೂಕಿನ ನಂದಿಬೇವೂರು ಗ್ರಾಮದಲ್ಲಿ ಡೀಸೆಲ್ ತುಂಬಿದ ಲಾರಿ ನಿಯಂತ್ರಣ ತಪ್ಪಿ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅಪಘಾತದಲ್ಲಿ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೂ ಲಾರಿಯಿಂದ ಡೀಸೆಲ್ ಸೋರಿಕೆಯಾಗುತ್ತಲೇ ಮುಗಿಬಿದ್ದ ಜನರು ಪಾತ್ರೆ, ಬಕೆಟ್ …
Read More »ಸಂಭ್ರಮದಲ್ಲಿದ್ದ ಈ ಗ್ರಾಮದಲ್ಲೀಗ ಸೂತಕ.. ಎತ್ತು ಹಿಡಿಯಲು ಹೋಗಿ ಪ್ರಾಣ ಕಳ್ಕೊಂಡ ಯುವಕ
ಗದಗ: ಕಾರಹುಣ್ಣಿಮೆ ಸಂಭ್ರಮದ ವೇಳೆ ರಾಸು ಹಾಯ್ದು ಯುವಕನೊಬ್ಬ ಮೃತಪಟ್ಟ ಘಟನೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಸಂಭವಿಸಿದೆ.. ಕಿರಣಕುಮಾರ್ ನರ್ತಿ ಮೃತ ದುದೈವಿ. ಉತ್ತರ ಕರ್ನಾಟಕ ಭಾಗದಲ್ಲಿ ಗುರುವಾರ ಕಾರಹುಣ್ಣಿಮೆ ಸಡಗರ ಕಳೆಗಟ್ಟಿತ್ತು. ಗದಗ ಜಿಲ್ಲೆಯ ಸೂರಣಗಿ ಗ್ರಾಮದಲ್ಲೂ ಕಾರಹುಣ್ಣಿಮೆ ಪ್ರಯುಕ್ತ ಆಯೋಜಿಸಿದ್ದ ಕರಿ ಹರಿಯುವ ಕಾರ್ಯಕ್ರಮದಲ್ಲಿ ರಾಸುಗಳನ್ನು ಓಡಿಸುವಾಗ ಯುವಕ ಕಿರಣಕುಮಾರ್ಗೆ ರಾಸು ಡಿಕ್ಕಿ ಹೊಡೆದಿತ್ತು. ಡಿಕ್ಕಿಯಾದ ರಭಸಕ್ಕೆ ನೆಲಕ್ಕುರುಳಿದ್ದ ಕಿರಣಕುಮಾರ್ ಗಂಭೀರ ಗಾಯಗೊಂಡಿದ್ದ. ಹುಬ್ಬಳ್ಳಿ …
Read More »ಐಎಂಎ ಹಗರಣ: ರೋಷನ್ ಬೇಗ್ ಆಸ್ತಿ ಜಪ್ತಿಗೆ ಕ್ರಮ ಕೈಗೊಂಡ ಸರ್ಕಾರ
ಬೆಂಗಳೂರು: ಐಎಂಎ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಆರ್.ರೋಷನ್ ಬೇಗ್ ಅವರ ಆಸ್ತಿಯನ್ನು ಜಪ್ತಿ ಮಾಡಲು ಕ್ರಮ ಕೈಗೊಂಡಿರುವುದಾಗಿ ಹೈಕೋರ್ಟ್’ಗೆ ರಾಜ್ಯ ಸರ್ಕಾರ ಶುಕ್ರವಾರ ಮಾಹಿತಿ ನೀಡಿದೆ. ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಮ್ರಾನ್ ಪಾಷಾ ಹಾಗೂ ಇತರರು ಸಲ್ಲಿಸಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರ ನೇತೃತ್ವದ ವಿಭಾಗೀಯ ಪೀಠಕ್ಕೆ ಸರ್ಕಾರದ ಪರ ವಕೀಲರು ಈ ಮಾಹಿತಿ ನೀಡಿದರು. ಅರ್ಜಿ …
Read More »ಪ್ರಧಾನಮಂತ್ರಿ ಆವಾಸ್ ಯೋಜನೆ : 80 ಸಾವಿರ ಬಹುಮಹಡಿ ಮನೆಗಳಿಗೆ ಸೀಮಿತ : ವಿ.ಸೋಮಣ್ಣ
\: ಪ್ರಧಾನಮಂತ್ರಿ ಅವಾಸ್ ಯೋಜನೆಯಡಿ ಬಡ ಜನರಿಗೆ ವಿತರಿಸಲು ಬೆಂಗಳೂರು ನಗರ ಜಿಲ್ಲೆಯಲ್ಲಿ ನಿರ್ಮಾಣ ಮಾಡುತ್ತಿರುವ ಒಂದು ಲಕ್ಷ ಬಹುಮಹಡಿ ಮನೆಗಳ ಯೋಜನೆ 80 ಸಾವಿರಕ್ಕೆ ಸೀಮಿತಗೊಳ್ಳಲಿದೆ. ಜಮೀನು ಕೊರತೆ ಹಿನ್ನೆಲೆಯಲ್ಲಿ ಒಂದು ಲಕ್ಷ ಮನೆಗಳ ಬದಲಿಗೆ 80 ಸಾವಿರ ಮನೆ ಮಾತ್ರ ನಿರ್ಮಾಣವಾಗಲಿದೆ. ಆಗಸ್ಟ್ 15 ರೊಳಗೆ 5 ಸಾವಿರ ಮನೆಗಳು ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ವಿಕಾಸಸೌಧಲ್ಲಿ ಶುಕ್ರವಾರ ರಾಜೀವ್‌ಗಾಂಧಿ ವಸತಿ …
Read More »ಮುಂದಿನ ಸಿ.ಎಂ. ಚರ್ಚೆ ನೇಣು ಹಾಕಿಕೊಂಡಂತೆ: ಕಾಗೋಡು ತಿಮ್ಮಪ್ಪ
ಸಾಗರ: ‘ರಾಜ್ಯದ ಮುಂದಿನ ಸಿ.ಎಂ. ಯಾರು ಎಂದು ಕಾಂಗ್ರೆಸ್ ನಾಯಕರು ಈಗಲೇ ಚರ್ಚಿಸುವುದು ನೇಣು ಹಾಕಿಕೊಂಡಂತಾಗಲಿದೆ’ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು. ತಾಲ್ಲೂಕು ಆಡಳಿತದ ವೈಫಲ್ಯ ಖಂಡಿಸಿ ಕಾಂಗ್ರೆಸ್ ಶುಕ್ರವಾರ ಏರ್ಪಡಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ‘ಮುಂದಿನ ವಿಧಾನಸಭೆ ಚುನಾವಣೆ ಬರುವವರೆಗೂ ಜನರ ಸಮಸ್ಯೆಗಳನ್ನು ಕೈಗೆತ್ತಿಕೊಂಡು ಕಾಂಗ್ರೆಸ್ ಹೋರಾಟ ನಡೆಸಬೇಕೇ ಹೊರತು, ಈಗಲೇ ಮುಂದಿನ ಸಿ.ಎಂ. ಯಾರು ಎಂದು ಚರ್ಚಿಸುವುದು ಸಾಧುವಲ್ಲ’ ಎಂದು ಅವರು ಅಭಿಪ್ರಾಯಪಟ್ಟರು.
Read More »