Breaking News

Yearly Archives: 2021

ಕೋವಿಡ್‌ 3ನೇ ಅಲೆ- ಮಕ್ಕಳಿಗಾಗಿಯೇ ಪ್ರತ್ಯೇಕ ಆಸ್ಪತ್ರೆಗೆ ಚಿಂತನೆ: ಶಶಿಕಲಾ ಜೊಲ್ಲೆ

ಬೆಂಗಳೂರು: ಕೊರೋನಾ 3ನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರುವ ಆತಂಕ ಇರುವುದರಿಂದ ಬೆಂಗಳೂರಿನಲ್ಲಿ ಮಕ್ಕಳಿಗಾಗಿಯೇ ಪ್ರತ್ಯೇಕ ಕೋವಿಡ್ ಆಸ್ಪತ್ರೆ ನಿರ್ಮಿಸುವಂತೆ ಸಲಹೆ ಬಂದಿದೆ. ಈ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ‘ಈ ಕುರಿತು ಮುಖ್ಯಮಂತ್ರಿಯನ್ನು ಶೀಘ್ರದಲ್ಲೇ ಭೇಟಿ ಮಾಡಿ ಮಾತುಕತೆ ನಡೆಸಲಿದ್ದು, ಅವರ ಅಂತಿಮ ಆದೇಶದಂತೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಸಮುದಾಯ ಕೇಂದ್ರಗಳು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ …

Read More »

ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಹಳ್ಳಿಗಳಲ್ಲಿ ಸಮಸ್ಯೆ: ಅಧಿಕಾರಿಗಳೊಂದಿಗೆ ಶಾಸಕ ಸತೀಶ ಜಾರಕಿಹೊಳಿ ಸಭೆ

ಬೆಳಗಾವಿ ಜಿಲ್ಲೆ ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಹಳ್ಳಿಗಳಲ್ಲಿ ಕುಡಿಯುವ ನೀರು, ವಿದ್ಯುಚ್ಚಕ್ತಿ ಪೂರೈಕೆ, ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಆಗಿರುವ ಸಮಸ್ಯೆಗಳ ಕುರಿತು ಚರ್ಚಿಸಲು ತಾಲೂಕು ಪಂಚಾಯಿತಿಯಲ್ಲಿ ಶಾಸಕ ಸತೀಶ ಜಾರಕಿಹೊಳಿ ಅಧಿಕಾರಿಗಳ ಸಭೆ ನಡೆಸಿ, ಸಲಹೆ ಸೂಚನೆ ನೀಡಿದರು. ಯಮಕನಮರಡಿ ಕ್ಷೇತ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರು, ವಿದ್ಯುಚ್ಚಕ್ತಿ ಪೂರೈಕೆ, ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಆಗಿರುವ ಸಮಸ್ಯೆಗಳ ಕುರಿತು ಗ್ರಾಮಗಳ ಜನರು ದೂರು ಸಲ್ಲಿಸಿರುವ ಹಿನ್ನೆಲೆಯಲ್ಲಿ ಈ ಕುರಿತು ಚರ್ಚಿಸಲು ತಾಲೂಕು …

Read More »

ಗೋಕಾಕ ಸಾರ್ವಜನಿಕರ ಗಮನಕ್ಕೆ,ನಗರದಲ್ಲಿ ನಾಲ್ಕು ಕೇಂದ್ರಗಳಲ್ಲಿ ಅಂದರೆ.

ಗೋಕಾಕ ಸಾರ್ವಜನಿಕರ ಗಮನಕ್ಕೆ, ದಿನಾಂಕ: 22.06.2021 ರಂದು ಮಾತ್ರ ಗೋಕಾಕ ನಗರದಲ್ಲಿ ನಾಲ್ಕು ಕೇಂದ್ರಗಳಲ್ಲಿ ಅಂದರೆ 1. ಮಯೂರ್ ಸ್ಕೂಲ್ 2. ಅಕ್ಕಮಹಾದೇವಿ ದೇವಸ್ಥಾನ ಬಣಗಾರ್ ಗಲ್ಲಿ 3. ಸಿಟಿ PHC, ಗೊಂಬಿ ಗುಡಿ ಹತ್ತಿರ 4. ನ್ಯೂ ಇಂಗ್ಲಿಷ್ ಸ್ಕೂಲ್ ( ಸರಕಾರಿ ಆಸ್ಪತ್ರೆ ಬದಲಾಗಿ) ಗಳಲ್ಲಿ ಮಾತ್ರ ಲಸಿಕಾ ಮೇಳ (vaccin camp) ನಡೆಯಲಿದ್ದು, ಇವನ್ನು ಹೊರತು ಪಡಿಸಿ ತಾಲೂಕಿನ ಗ್ರಾಮೀಣ ಭಾಗದಲ್ಲಿ ಹಾಗು ಇತರ ಕಡೆಗಳಲ್ಲಿ …

Read More »

₹ 2 ಲಕ್ಷ ಮೌಲ್ಯದ ಮೊಬೈಲ್‌ಗಳು ವಶ

ಹಾವೇರಿ: ‘ತಿಳವಳ್ಳಿ ಗ್ರಾಮದ ಹರ್ಡೇಕಲ್‌ ಸರ್ಕಲ್‌ ಬಳಿ ಭಾನುವಾರ ಪೊಲೀಸರು ದಾಳಿ ನಡೆಸಿ, ₹2 ಲಕ್ಷ ಮೌಲ್ಯದ 50 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಒಬ್ಬ ಆರೋಪಿಯನ್ನು ಬಂಧಿಸಿದ್ದು, ಮತ್ತೊಬ್ಬ ನಾಪತ್ತೆಯಾಗಿದ್ದಾನೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ ಹೇಳಿದರು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮೊಬೈಲ್‌ ಮಾರಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದರು. ಹಾನಗಲ್‌ ತಾಲ್ಲೂಕು ಹುಲಗಿನಕೊಪ್ಪ ಗ್ರಾಮದ ನಿತಿನ್‌ ಗೌಂಡಿ ಬಂಧಿತ ಆರೋಪಿ. ಅದೇ …

Read More »

ಮಹಿಳೆ ಹೆಸರಲ್ಲಿ ಅಶ್ಲೀಲ ಚಾಟಿಂಗ್‌ ; ಥಳಿಸಿ ಪೋಲೀಸರಿಗೆ ಒಪ್ಪಿಸಿದ ಮಹಿಳೆ

ಮಡಿಕೇರಿ : ಯುವತಿಯ ಹೆಸರನ್ನು ಹಾಕಿಕೊಂಡು ನಕಲಿ ಪ್ರೊಪೈಲ್‌ ಮಾಡಿ ಫೇಸ್​ಬುಕ್​ನಲ್ಲಿ ಮಹಿಳೆಯೊಂದಿಗೆ ಅಶ್ಲೀಲವಾಗಿ ಮೆಸೇಜ್​ ಮಾಡುತಿದ್ದ ಯುವಕನನ್ನು ಉಪಾಯವಾಗಿ ಕರೆಸಿಕೊಂಡು ಥಳಿಸಿ, ನಂತರ ಪೊಲೀಸರ ವಶಕ್ಕೆ ಒಪ್ಪಿಸಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಇಲ್ಲಿಗೆ ಸಮೀಪದ ಹಾಕತ್ತೂರಿನ ಅಶ್ರಫ್‌ ಎಂಬ ಯುವಕ ಕಳೆದ 15 ದಿನಗಳಿಂದ ಅರುಣಾ ಎಂಬ ಯುವತಿಯ ಹೆಸರಿನ ಮೂಲಕ ಮಹಿಳೆಯೊಬ್ಬರೊಂದಿಗೆ ಅಶ್ಲೀಲವಾಗಿ ಚಾಟಿಂಗ್​ ಮಾಡುತ್ತಿದ್ದ. ಮಹಿಳೆಯು ಈ ರೀತಿ ಚಾಟಿಂಗ್‌ ಮಾಡಬಾರದೆಂದು ಎಚ್ಚರಿಕೆ ನೀಡಿದ್ದರೂ ಈ …

Read More »

ಮನೆ ದರೋಡೆ ; ಸರ್ಕಾರಿ ಶಿಕ್ಷಕ, ಗ್ರಾಪಂ ಸದಸ್ಯ ಸೇರಿ ಐವರ ಬಂಧನ

ಬಳ್ಳಾರಿ: ಕೊಟ್ಟೂರು ತಾಲೂಕಿನ ಬಸವೇಶ್ವರ ಬಡಾವಣೆಯ ಉದ್ಯಮಿ ಮಲ್ಲೇಶಪ್ಪ ಅವರ ಮನೆಯಲ್ಲಿ ನಡೆದಿದ್ದ ದರೋಡೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಸರ್ಕಾರಿ ಶಾಲಾ ಶಿಕ್ಷಕ ಹಾಗೂ ಗ್ರಾಮ ಪಂಚಾಯತಿ ಸದಸ್ಯ ಸೇರಿದಂತೆ ಒಟ್ಟು ಐದು ಜನರನ್ನು ಪೊಲೀಸರು ಬಂಧನಮಾಡಿದ್ದಾರೆ. ಉದ್ಯಮಿ ಮಲ್ಲೇಶ್ ಅವರ ಮನೆಯಲ್ಲಿ ಏ.11ರಂದು ಹತ್ತು ಜನರ ತಂಡ ರಾತ್ರಿ ಏಕಾಏಕಿ ನುಗ್ಗಿ ಮನೆಯಲ್ಲಿ ಇದ್ದ ಗಂಡ ಹೆಂಡತಿಯನ್ನು ಹೆದರಿಸಿ ಮನೆಯಲ್ಲಿದ್ದ 30 ಲಕ್ಷ ರೂ. ನಗದು …

Read More »

ತಿಹಾರ್ ಜೈಲಿನಲ್ಲಿ ನೆರವಿಗೆ ನಿಂತವನ ಕೈಬಿಡದ ಕಾಂಗ್ರೆಸ್ ನಾಯಕ; ಡಿ.ಕೆ‌. ಶಿವಕುಮಾರ್

ಕಷ್ಟದ ದಿನಗಳಲ್ಲಿ ಕೈಚಾಚಿದವರನ್ನು, ಸಹಾಯ ಮಾಡಿದವರನ್ನು ಮರೆಯಲು ಸಾಧ್ಯವೇ? ಸೆರೆಯಾಗಿದ್ದ ಹಕ್ಕಿಯು ಬಿಡುಗಡೆಯಾಗುತ್ತಿದ್ದಂತೆಯೇ ಪಂಜರದಲ್ಲಿ ಜೊತೆಯಾಗಿದ್ದ ಮತ್ತೊಂದು ಹಕ್ಕಿಯತ್ತ ಸುಳಿಯುತ್ತದೆಯೇ? ಇಲ್ಲ. ಆದರೆ, ಒಡಲ ನೋವನ್ನು ಆಲಿಸಿದ, ಕಷ್ಟದ ಘಟನೆಗಳ ಕೇಳುಗನಾದ, ಸ್ಪಂದಿಸಿ, ಸಂತೈಸಿದ ವ್ಯಕ್ತಿ ಸೆರೆಯಲ್ಲಿದ್ದಾಗ, ಹೃದಯವಂತನಾದವನು ಮತ್ತೆ ಧಾವಿಸದೇ ಇರನು. ಹಾಗೆ ಧಾವಿಸಿ, ವ್ಯಕ್ತಿಯ ಕಷ್ಟಕ್ಕೆ ಸ್ಪಂದಿಸಿದವರು ರಾಜ್ಯದ ನಾಯಕರಲ್ಲೊಬ್ಬರು. ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಡಿ.ಕೆ‌ ಶಿವಕುಮಾರ್ ತಿಹಾರ್ ಜೈಲು ಸೇರಿದ್ರು.ಬರೋಬ್ಬರಿ …

Read More »

ಮಾನನಷ್ಟ ಮೊಕದ್ದಮೆಯಲ್ಲಿ ದೇವೇಗೌಡರಿಗೆ ಹಿನ್ನಡೆ: 2 ಕೋಟಿ ಪರಿಹಾರ ಕಟ್ಟಿಕೊಡಲು ಕೋರ್ಟ್ ಆದೇಶ

ಬೆಂಗಳೂರು: ನಂದಿ ಇನ್​ಫ್ರಾ ಸ್ಟ್ರಕ್ಚರ್ ಕಾರಿಡಾರ್ (Nandi Infrastructure Corridor Enterprises – NICE) ಕಂಪನಿಯ ವಿರುದ್ಧ ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಮಾಡಿದ್ದ ಆರೋಪವನ್ನು ಸಾಬೀತುಪಡಿಸುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ನೈಸ್ ಕಂಪನಿಗೆ ₹ 2 ಕೋಟಿ ಪರಿಹಾರ ಕಟ್ಟಿಕೊಡಬೇಕು ಎಂದು ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆದೇಶ ಮಾಡಿದೆ. ದೇವೇಗೌಡರ ವಿರುದ್ಧ ನೈಸ್ ಕಂಪನಿಯು ಮಾನನಷ್ಟ ದಾವೆ ಹೂಡಿತ್ತು. ಖಾಸಗಿ ವಾಹಿನಿಗೆ ನೀಡಿದ್ದ ಸಂದರ್ಶನದಲ್ಲಿ ದೇವೇಗೌಡರು ನೈಸ್ ಸಂಸ್ಥೆಯ ಗೌರವಕ್ಕೆ …

Read More »

ಪೊಲೀಸರ ಕಿರುಕುಳ ಸಹಿಸಲಾಗ್ತಿಲ್ಲ, ನನಗೆ ದಯಾಮರಣ ಕೊಡಿ: ಮಧುಗಿರಿಮೋದಿ

ತುಮಕೂರು: ಭಯೋತ್ಪಾದನೆ, ಭ್ರಷ್ಟಾಚಾರ, ಅತ್ಯಾಚಾರ, ಲವ್ ಜಿಹಾದ್, ಗೋಹತ್ಯೆಯ ವಿರುದ್ಧ ನಾನು ಹೋರಾಟ ಮಾಡುತಿದ್ದೇನೆ. ಆದರೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ಪದೇಪದೆ ವಿಚಾರಣೆ ನೆಪದಲ್ಲಿ ನನಗೆ ಮಾನಸಿಕ ಕಿರುಕುಳ ನೀಡುತಿದ್ದು, ಅನೇಕ ಬಾರಿ ವಿಚಾರಣೆಗೆಂದು ಕರೆದು ಸುಳ್ಳು ಆರೋಪದಡಿ ಬಂಧಿಸಿದ್ದಾರೆ. ಹಿಂದೂ ಸಮಾಜ ನನ್ನ ಬೆಂಬಲಕ್ಕೆ ನಿಲ್ಲದಿರುವುದು ತುಂಬಾ ನೋವು ತಂದಿದೆ. ನನಗೆ ಪೊಲೀಸರ ಕಿರುಕುಳ ಸಹಿಸಲಾಗುತ್ತಿಲ್ಲ. ನನಗೆ ದಯಾಮರಣ ನೀಡಿ ಎಂದು ರಾಜ್ಯಪಾಲರಿಗೆ ಮಧುಗಿರಿಮೋದಿ ಮನವಿ ಪತ್ರ ಸಲ್ಲಿಸಿದ್ದಾರೆ. …

Read More »

ಭೂಗತ ಪಾತಕಿ ರವಿ ಪೂಜಾರಿ ಕಸ್ಟಡಿಗೆ ಗುಜರಾತ್ ಮನವಿ

ಬೆಂಗಳೂರು ; ಅನೇಕ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಭೂಗತ ಪಾತಕಿ ರವಿ ಪೂಜಾರಿಯನ್ನು ಕಳೆದ ವರ್ಷ ಫೆ.24ರಂದು ಕರ್ನಾಟಕ ಪೊಲೀಸರು ವಿದೇಶದಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದರು. ಸದ್ಯ ಆತ ಕೇಂದ್ರ ಅಪರಾಧ ತನಿಖಾ ದಳದ​ ವಶದಲ್ಲಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಆದರೆ, ದೇಶದ ಅನೇಕ ಭಾಗಗಳಲ್ಲಿ ಡಾನ್ ರವಿ ಪೂಜಾರಿ ಅಪರಾಧ ನಡೆಸಿದ್ದು, ಮುಂಬೈ,ಕೇರಳ, ಬಳಿಕ ಗುಜರಾತ್ ಪೊಲೀಸರು ಇದೀಗ ವಿಚಾರಣೆಗೆ ರವಿ ಪೂಜಾರಿನ್ನು ತಮ್ಮ ಕಸ್ಟಡಿಗೆ ನೀಡಬೇಕು ಎಂದು ಕರ್ನಾಟಕ …

Read More »