Breaking News

Yearly Archives: 2021

ರಾಜ್ಯ ಸರ್ಕಾರದಿಂದ ಪಡಿತರ ಚೀಟಿದಾರರಿಗೆ ಸಿಹಿಸುದ್ದಿ :

ಬೆಂಗಳೂರು : ರಾಜ್ಯ ಸರ್ಕಾರವು (State Government) ಪಡಿತರ ಚೀಟಿದಾರರಿಗೆ (Ration card holders) ಸಿಹಿಸುದ್ದಿ ನೀಡಿದ್ದು, ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು (Garib Kalyan Yojana) ಕೇಂದ್ರ ಸರ್ಕಾರ ಮತ್ತೆ 4 ತಿಂಗಳು ವಿಸ್ತರಣೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೀಡುತ್ತಿರುವ ಆಹಾರ ಧಾನ್ಯದಲ್ಲಿ ಯಾವುದೇ ಕಡಿತ ಇಲ್ಲ ಎಂದು ಆಹಾರ ಸಚಿವ ಉಮೇಶ್ ಕತ್ತಿ (Minister Umesh Kaththi) ಹೇಳಿದ್ದಾರೆ. ಕೇಂದ್ರ ಸರ್ಕಾರವು ಗರೀಬ್ ಕಲ್ಯಾಣ್ ಅನ್ನ …

Read More »

ಸೇನಾ ಹೆಲಿಕಾಪ್ಟರ್ ಪತನ : 7 ಜನ ಸಾವು, ʼಬಿಪಿನ್‌ ರಾವತ್‌ʼ ಗಂಭೀರ ಗಾಯ,

ಚೆನ್ನೈ : ತಮಿಳುನಾಡಿನ (Tamil Nadu) ಊಟಿಯಲ್ಲಿ ಸೇನಾ ಹೆಲಿಕಾಪ್ಟರ್ (Army Helicopter) ಪತನವಾಗಿದ್ದು, ಘಟನಾ ಸ್ಥಳದಲ್ಲಿ ಏಳು ಮೃತ ದೇಹಗಳು ಪತ್ತೆಯಾಗಿದ್ದು, ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವ್ರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.   ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರಿನಲ್ಲಿ (Coonoor, Tamil Nadu) ಸೇನಾ ಹೆಲಿಕಾಪ್ಟರ್ (Army helicopter) ಪತನಗೊಂಡಿದೆ. ಸೇನಾ ಹೆಲಿಕಾಪ್ಟರ್ ಸೇನೆಯ ಐವರು ಹಿರಿಯ ಅಧಿಕಾರಿಗಳ ಸಹಿತ ಸೇನಾ ರಕ್ಷಣಾ …

Read More »

ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿದ್ದ ಕ್ರಮ ಪ್ರಶ್ನಿಸಿ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಬೆಂಗಳೂರು: ಪ್ರಮಾಣವಚನ ಸಮಾರಂಭಕ್ಕೆ ಆಗಮಿಸುತ್ತಿದ್ದ ವೇಳೆ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿದ್ದ ಕ್ರಮ ಪ್ರಶ್ನಿಸಿ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ವಕೀಲ ಜಿ.ಬಾಲಾಜಿ ನಾಯ್ಡು ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ಪೀಠ ಅರ್ಜಿ ವಜಾಗೊಳಿಸಿದೆ. ನ್ಯಾಯಾಲಯದ ನಿರ್ದೇಶನದಂತೆ ಅರ್ಜಿಯನ್ನು ಸರ್ಕಾರ ಮನವಿಯನ್ನಾಗಿ ಪರಿಗಣಿಸಿತ್ತು. ಆದರೆ ಯಾವುದೇ ನಿಯಮ ಉಲ್ಲಂಘನೆಯಾಗಿರುವ ಬಗ್ಗೆ ಅಥವಾ ಆಡಳಿತಾತ್ಮಕ ಅಧಿಕಾರ ದುರ್ಬಳಕೆಯಾಗಿರುವ ಬಗ್ಗೆ ಸಾಕ್ಷಾಧಾರಗಳನ್ನು …

Read More »

ವಿಧಿಯೇ ನೀನೆಷ್ಟು ಕ್ರೂರಿ ಚಿಕ್ಕ ಪ್ರಾಯದ ಎಸ್ಟು ಜನರ ಬಲಿ ಬೇಕು ನಿಂಗೆ..?

ಗೋಕಾಕ: ಗೋಕಾಕ ಪೊಲೀಸ ಕಾನ್ಸ್ ಟೇಬಲ್ ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಸಾವು, ವಿಧಿಯೇ ನೀನೆಷ್ಟು ಕ್ರೂರಿ ಇಂದು ಕರ್ತವ್ಯ ಮುಗಿಸಿ ವಾಪಸ ತೆರಳುತ್ತಿದ್ದ ವೇಳೆ ಗೋಕಾಕ ತಾಲೂಕಿನ ಬೆಣಚೀನ ಮರಡಿ ಗ್ರಾಮದ ಬಳಿ ಅಪಘಾತ ವಾಗಿದೆ   ಇವರು ಗೋಕಾಕ ನಿಂದಾ ಹುದಲಿ ಗ್ರಾಮಕ್ಕೆ ಹೋಗುತ್ತಿದ್ದಾಗ ಆದ ಅಫಘಾತ ಇದು ಆನಂದ ಸುಲಧಾಳ ಇವರ ವಯಸ್ಸು ಕೇವಲ 24ವರ್ಷ ಇನ್ನೇನು ಕೆಲಸ ಮುಗಿಸಿ ಹುಡಗಿ ನೋಡುವ ಕಾರ್ಯಕ್ರಮಕ್ಕೆ …

Read More »

ಲಖನ್ ಜಾರಕಿಹೊಳಿ ನಮ್ಮ ಪಕ್ಷದ ಬಂಡಾಯ ಅಭ್ಯರ್ಥಿ ಅಲ್ಲ,: ಲಕ್ಷ್ಮಣ ಸವದಿ

ಲಖನ್ ಜಾರಕಿಹೊಳಿ ನಮ್ಮ ಪಕ್ಷದ ಬಂಡಾಯ ಅಭ್ಯರ್ಥಿ ಅಲ್ಲ, ಅವರು ಪಕ್ಷೇತರ ಅಭ್ಯರ್ಥಿ. ನಮ್ಮ ಗುರಿ ಪ್ರಥಮ ಪ್ರಾಶಸ್ತ್ಯದ ಮತಗಳೊಂದಿಗೆ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಅವರನ್ನು ಗೆಲ್ಲಿಸುವುದು ಒಂದೇ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ. ಬೆಳಗಾವಿಯಲ್ಲಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಲಕ್ಷ್ಮಣ ಸವದಿ ಅವರು ಲಖನ್ ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರಿ, ನಮ್ಮಲ್ಲಿ ಸದಸ್ಯತ್ವ ಪಡೆದುಕೊಂಡು ಚುನಾವಣೆಗೆ …

Read More »

ಟೂರ್‍ಗೆ ಕರೆದುಕೊಂಡು ಹೋಗುವ ಪ್ರಶ್ನೆ ಇಲ್ಲ, ಕಾಂಗ್ರೆಸ್‍ನವರಿಗೆ ಅದು ಇಷ್ಟವಾಗದಿದ್ದರೆ ಮಿಲಿಟ್ರಿ ತಂದು ನಿಲ್ಲಿಸಿ ಚುನಾವಣೆ ಮಾಡಲಿ : ಬಾಲಚಂದ್ರ ಜಾರಕಿಹೊಳಿ

ಡಿಸೆಂಬರ್ 10ರಂದು ನಡೆಯಲಿರುವ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಇಂದು ಸಿಎಂ ಬೊಮ್ಮಾಯಿ ಬೆಳಗಾವಿ ತಾಲೂಕಿನಲ್ಲಿ ಖಾಸಗಿ ರೆಸಾರ್ಟ್‍ವೊಂದರಲ್ಲಿ ಸಭೆ ನಡೆಸಿದ್ದರು. ಈ ವೇಳೆ ಬೆಳಗಾವಿಯ ಎಲ್ಲಾ ಬಿಜೆಪಿ ಶಾಸಕರು, ಸಚಿವರು ಹಾಗೂ ಸಂಸದರು ಭಾಗಿಯಾಗಿದ್ದರು. ಈ ವೇಳೆ ಮುಖ್ಯಮಂತ್ರಿ ಬೊಮ್ಮಾಯಿಯವರು ಎಲ್ಲರೊಂದಿಗೆ ಸಭೆ ನಡೆಸಿದರು. ಆದರೆ ಈ ವೇಳೆ ಮುಖ್ಯಮಂತ್ರಿಗಳು ಮಾಜಿ ಸಚಿವ ರಮೇಶ ಜಾರಕಿಹೊಳಿ, ಸಚಿವ ಉಮೇಶ್ ಕತ್ತಿ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಜೊತೆಗೆ ಪ್ರತ್ಯೇಕ …

Read More »

ನಡೆಯಲಿರುವ ಮತದಾನ ವೇಳೆ ಹೆಚ್ಚು ಮತಬಿಜೆಪಿಗೆ: ಮಹಾಂತೇಶ ಕವಟಗಿಮಠ

ಡಿಸೆಂಬರ್ 10ನೇ ತಾರೀಖು ಪ್ರೀಲಿಮನರಿ ಮ್ಯಾಚ್ ಇದೆ. 14ರಂದು ಅಂತಿಮ ಮ್ಯಾಚ್ ಇದೆ. ಯಾರು ಯಾರಿಗೂ ಪ್ರತಿಸ್ಪರ್ಧೆ ಅಲ್ಲ. ಒಂದು ಸ್ಥಾನಕ್ಕಾಗಿ ನಾನು ಸ್ಪರ್ಧೆ ಮಾಡಿದ್ದೇನೆ. ಬಿಜೆಪಿ ಗೆಲ್ಲುತ್ತದೆ ಎಂಬ ವಿಶ್ವಾಸ ನನಗಿದೆ. ನಮ್ಮ ಜಿಲ್ಲೆಯ ಎಲ್ಲ ನಾಯಕರು ಸೇರಿ ಇಡೀ ಪಕ್ಷ ನನ್ನ ಜೊತೆಗಿದೆ ಎಂದು ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಸಿಎಂ ಬೊಮ್ಮಾಯಿ ನೇತೃತ್ವದ ಸಭೆ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಮಹಾಂತೇಶ …

Read More »

ಬೆಳಗಾವಿಯಲ್ಲಿ ಸಿಎಂ ಬೊಮ್ಮಾಯಿ ರಮೇಶ್, ಕತ್ತಿ, ಸವದಿ ಜೊತೆಗೆ ಪ್ರತ್ಯೇಕ ಸಭೆ ಈಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಬೆಳಗಾವಿಯಲ್ಲಿ ಸಿಎಂ ಬೊಮ್ಮಾಯಿ ರಮೇಶ್, ಕತ್ತಿ, ಸವದಿ ಜೊತೆಗೆ ಪ್ರತ್ಯೇಕ ಸಭೆ ನಡೆಸಿದ್ದು ಈಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಡಿಸೆಂಬರ್10ರಂದು ನಡೆಯಲಿರುವ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಇಂದು ಸಿಎಂ ಬೊಮ್ಮಾಯಿ ಬೆಳಗಾವಿ ತಾಲೂಕಿನಲ್ಲಿ ಖಾಸಗಿ ರೆಸಾರ್ಟ್‍ವೊಂದರಲ್ಲಿ ಸಭೆ ನಡೆಸಿದ್ದರು. ಈ ವೇಳೆ ಬೆಳಗಾವಿಯ ಎಲ್ಲಾ ಬಿಜೆಪಿ ಶಾಸಕರು, ಸಚಿವರು ಹಾಗೂ ಸಂಸದರು ಭಾಗಿಯಾಗಿದ್ದರು. ಈ ವೇಳೆ ಮುಖ್ಯಮಂತ್ರಿ ಬೊಮ್ಮಾಯಿಯವರು ಎಲ್ಲರೊಂದಿಗೆ ಸಭೆ ನಡೆಸಿದರು. ಆದರೆ ಈ ವೇಳೆ ಮುಖ್ಯಮಂತ್ರಿಗಳು ಮಾಜಿ …

Read More »

ಕೊರೊನಾ ರೂಪಾಂತರಿ ಒಮಿಕ್ರಾನ್‌ ಗೆ ಆತಂಕಪಡುವ ಅಗತ್ಯವಿಲ್ಲ

ನವದೆಹಲಿ: ರಾಜಸ್ಥಾನದಲ್ಲಿ ದೃಢಪಟ್ಟಿರುವ ಒಂಭತ್ತು ಪ್ರಕರಣಗಳಲ್ಲಿ ಅಲ್ಪ ತೀವ್ರತೆಯ ಒಮಿಕ್ರಾನ್‌ ಸೋಂಕು ಇರುವುದು ದೃಢಪಟ್ಟಿದೆ. ಈ ಬಗ್ಗೆ 9 ಮಂದಿಗೆ ಚಿಕಿತ್ಸೆ ನೀಡುತ್ತಿರುವ ಜೈಪುರದ ಸವಾಯ್‌ ಮಾನ್‌ ಸಿಂಗ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯರು ಮಂಗಳವಾರ ತಿಳಿಸಿದ್ದಾರೆ. ಕೊರೊನಾ ರೂಪಾಂತರಿ ಒಮಿಕ್ರಾನ್‌ ಗೆ ಆತಂಕಪಡುವ ಅಗತ್ಯವಿಲ್ಲ ಎಂಬ ಅಂಶ ಮತ್ತೂಮ್ಮೆ ಸಾಬೀತಾಗಿದೆ. ಇದರ ಜತೆಗೆ ಸೋಂಕಿನ ಮೊದಲ ಮತ್ತು ಎರಡನೇ ಅಲೆಯ ಅವಧಿಯಲ್ಲಿದ್ದಂತೆ ವಾಸನೆ ಗುರುತಿಸಲು ಅಸಾಧ್ಯವಾಗುವ ಮತ್ತು …

Read More »

ಮೊಟ್ಟೆ ಬದಲು ಹಣ್ಣು-ಹಂಪಲು ನೀಡಲು ಮುಖ್ಯಮಂತ್ರಿಗಳಿಗೆ ಜೈನ ಯುವ ಸಂಘಟನೆ ವತಿಯಿಂದ ಮನವಿ

ಬೆಳಗಾವಿ: ಸರಕಾರಿ ಶಾಲೆಗಳಲ್ಲಿ ಮಧ್ಯಾಹ್ನ ಊಟದ ಸಂದರ್ಭದಲ್ಲಿ ಪೌಷ್ಟಿಕ ಆಹಾರವಾಗಿ ಮೊಟ್ಟೆ ನೀಡುವಂತೆ ಸರಕಾರ ಆದೇಶ ಹೊರಡಿಸಿದ್ದು, ಈ ಆದೇಶವನ್ನು ತತ್‌ಕ್ಷಣ ಹಿಂಪಡೆಯಬೇಕೆಂದು ಆಗ್ರಹಿಸಿ ಇಂದು ಮಂಗಳವಾರ ಬೆಳಗಾವಿಯಲ್ಲಿ ಜೈನ ಯುವ ಸಂಘಟನೆಯ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಅರ್ಪಿಸಲಾಯಿತು. ವಿಧಾನ ಪರಿಷತ್ ಚುನಾವಣೆಯ ಪ್ರಚಾರಾರ್ಥ ಬೆಳಗಾವಿಗೆ ಆಗಮಿಸಿದ ಸಂದರ್ಭದಲ್ಲಿ ಜೈನ ಯುವ ಸಂಘಟನೆಯ ಪ್ರಮುಖ ಪದಾಧಿಕಾರಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. …

Read More »