Breaking News

Yearly Archives: 2021

ಕೊರೋನಾ ಲಸಿಕೆ ಪಡೆಯಲು ಆನ್ಲೈನ್ ರಿಜಿಸ್ಟ್ರೇಷನ್ ಮಾಡಿಕೊಳ್ಳುವುದು ಕಡ್ಡಾಯವಲ್ಲ : ಅರೋಗ್ಯ ಸಚಿವಾಲಯ ಸ್ಪಷ್ಟನೆ

ನವದೆಹಲಿ : ಕೋವಿಡ್-19 ಲಸಿಕೆಗೆ ಆನ್ ಲೈನ್ ನೋಂದಣಿ ಕಡ್ಡಾಯವಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ. ಯಾವುದೇ ವಯಸ್ಕರು ಹತ್ತಿರದ ಲಸಿಕೆ ಕೇಂದ್ರಕ್ಕೆ ಹೋಗಿ, ಸ್ಥಳದಲ್ಲೇ ನೋಂದಣಿ ಮಾಡಬಹುದು ಮತ್ತು ಅದೇ ಭೇಟಿಯಲ್ಲಿ ಲಸಿಕೆಯನ್ನು ಪಡೆಯಬಹುದು ಎಂದು ಅದು ಹೇಳಿದೆ. ಪಿಐಬಿ ಹೊರಡಿಸಿದ ಹೇಳಿಕೆಯು, ಕೋವಿನ್ ಪ್ಲಾಟ್ ಫಾರ್ಮ್ ವಾಕ್-ಇನ್ ಗಳನ್ನು ಹೊರತುಪಡಿಸಿ ಲಸಿಕೆಗಳಿಗೆ ನೋಂದಣಿಯ ಅನೇಕ ವಿಧಾನಗಳಲ್ಲಿ ಒಂದಾಗಿದೆ ಎಂದು ಹೇಳಿತು. ಆರೋಗ್ಯ ಕಾರ್ಯಕರ್ತರು ಅಥವಾ …

Read More »

ಕೊವಿಡ್ ಮೂರನೇ ಅಲೆ: ಗರಿಷ್ಠ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಮಹಿಳಾ ಇಲಾಖಾ ಅಧಿಕಾರಿಗಳಿಗೆ ಶಶಿಕಲಾ ಜೊಲ್ಲೆ ತಾಕೀತು

ಹಾವೇರಿ: ಮಕ್ಕಳ ಮೇಲೆ ಕೊವಿಡ್ ಮೂರನೇ ಅಲೆಯ ಸಂಭಾವ್ಯ ಪರಿಣಾಮ ನಿಯಂತ್ರಣದ ನಿಟ್ಟಿನಲ್ಲಿ ಸೋಂಕಿನಿಂದ ಮಕ್ಕಳ ರಕ್ಷಣೆ, ಮುನ್ನೆಚ್ಚರಿಕೆ, ಜಾಗೃತಿ, ಪ್ರತ್ಯೇಕ ಕೋವಿಡ್ ವಾರ್ಡ್‍ಗಳ ಸಿದ್ಧತೆ, ಪಾಲಕರಿಗೆ ವ್ಯವಸ್ಥೆ ಕುರಿತಂತೆ ಶಿಶು ಅಭಿವೃದ್ಧಿ ಅಧಿಕಾರಿಗಳು ಕ್ಷೇತ್ರಮಟ್ಟಕ್ಕೀಳಿದು ಕಾರ್ಯನಿರ್ವಹಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರು ತಾಕೀತು ಮಾಡಿದರು. ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲೆಯಲ್ಲಿ ಕೊರೊನಾ ಸಂಭಾವ್ಯ …

Read More »

ಖಾಸಗಿ ಶಾಲೆಗಳ ಬೋಧನಾ ಶುಲ್ಕ ನಿಗದಿಗೆ ಸಮಿತಿ ರಚನೆ ಪ್ರಸ್ತಾಪ: ವಿರೋಧಿಸಿದ ಕ್ಯಾಮ್ಸ್, ಸ್ವಾಗತಿಸಿದ ರುಪ್ಸಾ

ಬೆಂಗಳೂರು: ಸರ್ಕಾರದ ಸಮಿತಿ ಸೂಚನೆಯಂತೆ ಶುಲ್ಕ ನಿಗದಿ ಪರಿಶೀಲನೆಗೆ ಖಾಸಗಿ ಶಾಲೆಗಳ ಒಕ್ಕೂಟ ವಿರೋಧ ವ್ಯಕ್ತಪಡಿಸಿದೆ. ಖಾಸಗಿ ಶಾಲೆಗಳಿಗೆ ಲಾಭವಿಲ್ಲದೇ ಬೋಧನಾ ಶುಲ್ಕ ನಿಗದಿ ಮಾಡುವ ಹಕ್ಕಿದೆ. ಸರ್ಕಾರ ಸಮಿತಿ ರಚಿಸಿ ಶುಲ್ಕ ನಿಗದಿ ಮಾಡಲು ಆಗುವುದಿಲ್ಲ. ಸರ್ಕಾರದ ಈ ನಡೆ ವಿರೋಧಿಸಿ ಕೋರ್ಟ್ ಮೊರೆ ಹೋಗುತ್ತೇವೆ. ನಾವು ಮತ್ತೆ ಕೋರ್ಟ್​ ಮೊರೆ ಹೋಗಬೇಕಾಗುತ್ತದೆ. ನಾವು ಎರಡು ವರ್ಷದ ಹಿಂದಿನ ಶುಲ್ಕ ಪಡೆಯುತ್ತಿದ್ದೇವೆ. ಸರ್ಕಾರ ಗೊಂದಲದ ಮೇಲೆ ಗೊಂದಲ ಸೃಷ್ಟಿಸಬಾರದು …

Read More »

ಸಾವಿನಲ್ಲೂ ಸಾರ್ಥಕತೆ ಮೆರೆದ ನಟ ಸಂಚಾರಿ ವಿಜಯ್​ ಅಂಗಾಂಗಗಳು ಯಾರಿಗೆಲ್ಲ ಜೀವ ತುಂಬಿದೆ ಗೊತ್ತಾ?

ಬೆಂಗಳೂರು: ನಡುರಾತ್ರಿ ನಡೆದಿದ್ದ ಆಕಸ್ಮಿಕ ಅಪಘಾತದಲ್ಲಿ ಅಕಾಲಿಕವಾಗಿ ಪ್ರಾಣತೆತ್ತ ಯುವ ಪ್ರತಿಭಾನ್ವಿತ ನಟ ಸಂಚಾರಿ ವಿಜಯ್ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಅವರ ಕುಟುಂಬದವರು ಸಂಚಾರಿ ವಿಜಯ್ ಅವರ ಅಂಗಾಂಗಳನ್ನ ದಾನ ಮಾಡಲು ಒಪ್ಪಿಗೆ ಸೂಚಿಸಿದ್ದರು. ಹಾಗಾಗಿ, ಸಂಚಾರಿ ವಿಜಯ್​ ಅವರ ಅಂಗಾಂಗ ಟ್ರಾನ್ಸ್​ಪ್ಲಾಂಟೇಷನ್ ಯಶಸ್ವಿಯಾಗಿ ನಡೆದಿದೆ. ಸಂಚಾರಿ ವಿಜಯ್​ ಅವರ ಕಿಡ್ನಿ ಟ್ರಾನ್ಸ್​ಪ್ಲಾಂಟೇಷನ್ ಯಶಸ್ವಿಯಾಗಿದ್ದು ಮಹಿಳೆಯೊಬ್ಬರಿಗೆ ಕಿಡ್ನಿ ಟ್ರಾನ್ಸ್​ಪ್ಲಾಂಟೇಷನ್ ಮಾಡಲಾಗಿದೆ. 34 ವರ್ಷದ ಮಹಿಳೆಗೆ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಕಿಡ್ನಿ …

Read More »

100 ಹೆಚ್ಚುವರಿ ರೈಲು ಸಂಚಾರ ಆರಂಭಿಸಲು ಸಿದ್ಧತೆ

ನವದೆಹಲಿ: ಹಲವಾರು ರಾಜ್ಯಗಳು ಲಾಕ್‌ಡೌನ್‌ ಸಡಿಲಿಕೆ ಮಾಡುತ್ತಿದ್ದು, ಪ್ರಯಾಣಿಕರ ಬೇಡಿಕೆ ಪೂರೈಸುವುದಕ್ಕಾಗಿ ಹೆಚ್ಚು ರೈಲುಗಳ ಕಾರ್ಯಾಚರಣೆ ಮಾಡಲು ಭಾರತೀಯ ರೈಲ್ವೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಸುಮಾರು 100 ಹೆಚ್ಚುವರಿ ರೈಲುಗಳನ್ನು ಈ ವಾರವೇ ಓಡಿಸಲು ನಿರ್ಧರಿಸಿದೆ. ಕಳೆದ ತಿಂಗಳಿಗೆ ಹೋಲಿಸಿದರೆ ಈ ತಿಂಗಳು ಮುಂಗಡವಾಗಿ ಕಾಯ್ದಿರಿಸುವ ದರ್ಜೆಗೆ ಪ್ರಯಾಣಿಕರು ಹೆಚ್ಚು ಟಿಕೆಟ್‌ ಪಡೆಯುತ್ತಿದ್ದಾರೆ. ಇದರಿಂದಾಗಿ ಹೆಚ್ಚು ಅಂತರದ ಸ್ಥಳಗಳ ನಡುವೆ ಮೇಲ್‌ ಮತ್ತು ಎಕ್ಸ್‌ಪ್ರೆಸ್‌ ರೈಲುಗಳ ಚಾಲನೆ ಮಾಡಲಾಗುವುದು ಎಂದು ಅಧಿಕಾರಿಗಳು …

Read More »

ಅಧಿಕಾರ ಬಿಟ್ಟು ತೊಲಗಲಿ: ಪ್ರತಿಭಟನೆ

ಮಂಡ್ಯ: ಪೆಟ್ರೋಲ್‌, ಡೀಸೆಲ್‌, ಗ್ಯಾಸ್‌ ಬೆಲೆ ಏರಿಕೆಖಂಡಿಸಿ 3ನೇ ದಿನವಾದ ಭಾನುವಾರ ಹೋಬಳಿವ್ಯಾಪ್ತಿಯ ತಗ್ಗಹಳ್ಳಿ ಜಿಲ್ಲಾ ಪಂಚಾಯತ್‌ ಕ್ಷೇತ್ರದ ಕಾಂಗ್ರೆಸ್‌ಪದಾ ಧಿಕಾರಿಗಳು ಪ್ರತಿಭಟನೆ ನಡೆಸಿದರು. ತಾಲೂಕಿನ ತಗ್ಗಹಳ್ಳಿ ಗ್ರಾಮದಲ್ಲಿರುವ ಭಾರತ್‌ಪೆಟ್ರೋಲಿಯಂ ಬಂಕ್‌ ಬಳಿ ಜಮಾವಣೆಗೊಂಡಪ್ರತಿಭಟನಾಕಾರರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳವಿರುದ್ಧ ಧಿಕ್ಕಾರ ಕೂಗಿ, ಆಕ್ರೋಶ ವ್ಯಕ್ತಪಡಿಸಿದರು. ಜನರ ಶೋಷಣೆ ಮಾಡುವುದೇ ಕೇಂದ್ರ ಹಾಗೂ ರಾಜ್ಯಸರ್ಕಾರಗಳ ನೀತಿಯಾಗಿದೆ ಎಂಬುದಕ್ಕೆ ಇದೇ ಸಾಕ್ಷಿಯಾಗಿದೆ. ಪ್ರತಿದಿನ ಪೆಟ್ರೋಲ್‌, ಡೀಸೆಲ್‌, ಗ್ಯಾಸ್‌ ಬೆಲೆ ಏರಿಕೆಮಾಡಿಕೊಂಡು, ಜನರ …

Read More »

ಕರೆಂಟ್ ಬಿಲ್, ಪೆಟ್ರೋಲ್-ಡೀಸೆಲ್ ಬೆಲೆ ಕಡಿಮೆ ಮಾಡುವ ಯೋಗ್ಯತೆ ಸರ್ಕಾರಕ್ಕೆ ಇಲ್ಲ: ಡಿ.ಕೆ. ಸುರೇಶ್

ಚನ್ನಪಟ್ಟಣ (ಜೂನ್ 14): ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದಿನದಿಂದಕ್ಕೆ ಏರಿಕೆಯಾಗುತ್ತಲೇ ಇದೆ. ಕೊರೋನಾ ಸಂಕಷ್ಟ ಮತ್ತು ಲಾಕ್​ಡೌನ್ ಸಮಸ್ಯೆಯ ನಡುವೆಯೂ ಕೇಂದ್ರ ಸರ್ಕಾರ ತೈಲ ಬೆಲೆಯನ್ನು ಹೆಚ್ಚಿಸುತ್ತಲೇ ಇದೆ. ಪರಿಣಾಮ ದಿನೋಪಯೋಗಿ ವಸ್ತುಗಳ ಬೆಲೆಯೂ ಏರುತ್ತಲೇ ಇದ್ದು, ಜನ ಸಾಮಾನ್ಯರು ಸಂಕಷ್ಟ ಎದುರಿಸುವಂತಾಗಿದೆ. ಈ ಬಗ್ಗೆ ವಿರೋಧ ಪಕ್ಷಗಳು ಸತತ ವಾಗ್ದಾಳಿ ನಡೆಸುತ್ತಲೇ ಇದೆ. ಈ ನಡುವೆ ಇಂದು ರಾಮನಗರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಸಂಸದ …

Read More »

ಖಾತಾ ನೋಂದಣಿ ಮಾಡಿಸುವವರಿಗೆ ಗುಡ್ ನ್ಯೂಸ್

ಬೆಂಗಳೂರು: ವಸತಿ ಸಮುಚ್ಚಯದ ಖಾತಾ ನೋಂದಣಿ ಸರಳೀಕರಣಗೊಳಿಸಲಾಗಿದೆ. ಸಕಾಲ ಯೋಜನೆಯಡಿ ಸೌಲಭ್ಯ ಕಲ್ಪಿಸಿ ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯಲು ಸೂಚನೆ ನೀಡಲಾಗಿದೆ. ವಸತಿ ಸಮುಚ್ಚಯದಲ್ಲಿ ನಿವಾಸಿ ಖಾತಾ ನೋಂದಣಿಗೆ ಅರ್ಜಿ ಸಲ್ಲಿಸಿದರೆ ವಸತಿ ಸಮುಚ್ಚಯದ ಎಲ್ಲ ಘಟಕಗಳಿಗೂ ಮುನ್ಸಿಪಲ್ ಸಂಖ್ಯೆಯನ್ನು ಸೃಷ್ಟಿಸಲು ಒಂದೇ ಬಾರಿ ಕಡತ ಮಂಡಿಸಿ ಸಂಬಂಧಿತ ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯಲು ತಿಳಿಸಲಾಗಿದೆ. ವಸತಿ ಸಮುಚ್ಚಯದ ಘಟಕಗಳ ಮಾಲೀಕರು ಖಾತೆ ನೋಂದಣಿಗೆ ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ಮತ್ತೊಮ್ಮೆ …

Read More »

ಅಬಕಾರಿ ಪೊಲೀಸರ ದಾಳಿ 15 ಲಕ್ಷ ಮೌಲ್ಯದ ಗೋವಾ ಮದ್ಯ , ನಾಲ್ವರ ಬಂಧನ..!

ಸಹಾಯಕ ಅಬಕಾರಿ ಕಮಿಷನರ್ ಬೆಳಗಾವಿ ಇವರ ಮಾರ್ಗದರ್ಶನ ಅದರ ಅನ್ವಯ ಗೋಕಾಕ್ ವಲಯದ ಮೂಡಲಗಿ ತಾಲ್ಲೂಕಿನ ಸಂಗನಕೇರಿ ಬಳಿ ಅಬಕಾರಿ ದಾಳಿ ಮಾಡಲಾಗಿದೆ.   ಈ ದಾಳಿಯಲ್ಲಿ 9ಬಾಕ್ಸ್ 76.62 ಲೀ. ಸುಮಾರು ಹದಿನೈದು ಲಕ್ಷ ರೂ ಮೊತ್ತದ ಗೋವಾ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಟಾಟಾ ಹೆಕ್ಸಾ ಕಾರ್ ಅನ್ನು ಕೂಡ ಸೀಜ್ ಮಾಡಲಾಗಿದೆ.   ವಶಪಡಿಸಿಕೊಂಡ ಒಟ್ಟು ಮೌಲ್ಯ ರೂ .15,35,000..ಈ ಪ್ರಕರಣವನ್ನು ಶಂಕರ್ ಗೌಡ …

Read More »

ಕರ್ನಾಟಕ; ಕೋವಿಡ್ ಸೋಂಕಿತರ ಸಾವಿನ ಸಂಖ್ಯೆ ಇಳಿಕೆ

ಬೆಂಗಳೂರು, ಜೂನ್ 15; ಕರ್ನಾಟಕದಲ್ಲಿ ಹೊಸ ಕೋವಿಡ್ ಪ್ರಕರಣಗಳ ಜೊತೆಗೆ ಸಾವಿನ ಪ್ರಮಾಣವೂ ಇಳಿಕೆಯಾಗಿದೆ. ಸೋಮವಾರ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಪ್ರಕಾರ ರಾಜ್ಯದಲ್ಲಿನ ಮರಣ ಪ್ರಮಾಣ ಶೇ 1.75. ಲಾಕ್‌ಡೌನ್ ಘೋಷಣೆ ಬಳಿಕ ರಾಜ್ಯದಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಾ ಬಂದಿತ್ತು. ಆದರೆ ಮರಣ ಪ್ರಮಾಣ ಕಡಿಮೆಯಾಗದಿರುವುದು ಚಿಂತೆಗೆ ಕಾರಣವಾಗಿತ್ತು. ಸರ್ಕಾರ ಸಹ ಜಿಲ್ಲಾಡಳಿತಕ್ಕೆ ಮರಣ ಪ್ರಮಾಣ ಕಡಿಮೆ ಮಾಡಲು ಸೂಚನೆಗಳನ್ನು ನೀಡಿತ್ತು.   ಸೋಮವಾರದ ವರದಿಯಂತೆ ರಾಜ್ಯದಲ್ಲಿ …

Read More »