Breaking News

Yearly Archives: 2021

ಒಮಿಕ್ರಾನ್​ಗೆ ಏಕರೂಪ ಚಿಕಿತ್ಸಾ ಪದ್ಧತಿ ಅನುಸರಿಸಲು ಕ್ಲಿನಿಕಲ್ ತಜ್ಞರ ಸಮಿತಿ ರಚಿಸಿದ ಸರ್ಕಾರ

ಬೆಂಗಳೂರು: ಒಮಿಕ್ರಾನ್ ರೂಪಾಂತರಿಗೆ ಏಕರೂಪ ಚಿಕಿತ್ಸಾ ಪದ್ಧತಿ ಅನುಸರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ 17 ಸದಸ್ಯರ ಕ್ಲಿನಿಕಲ್ ತಜ್ಞರ ಸಮಿತಿ ಪುನಃ ರಚಿಸಿ ಆದೇಶಿಸಿದೆ. ಬಿ.ಎಂ.ಸಿ.ಆರ್.ಐ ಔಷಧಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಕೆ.ರವಿ ಅಧ್ಯಕ್ಷತೆಯಲ್ಲಿ ಕ್ಲಿನಿಕಲ್ ತಜ್ಞರ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿ ಕೋವಿಡ್-19 ನಿಯಂತ್ರಣಕ್ಕಾಗಿ ವಿಶ್ವ ಆರೋಗ್ಯ ಸಂಸ್ಥೆ ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರ ನೀಡುವ ಸೂಚನೆ/ಆದೇಶಗಳನ್ನು ಕಾರ್ಯಗತಗೊಳಿಸಲು ಮತ್ತು ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ನಡುವೆ ಸಮನ್ವಯ ಸಾಧಿಸಿ, …

Read More »

ನಿಯಮ ಮೀರಿ ಸಭೆ, ಸಮಾರಂಭ ನಡೆಸಿದರೆ ಸೂಕ್ತ ಕ್ರಮ-ಗೌರವ್ ಗುಪ್ತಾ

ಬೆಂಗಳೂರು:ಯಾವುದೇ ಸಭೆ ಸಮಾರಂಭಗಳನ್ನು ಸರ್ಕಾರದ ನಿಯಮಾನುಸಾರ ಮಾಡಬೇಕು. ತಪ್ಪಿದಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಯಾರು ಹೈರಿಸ್ಕ್ ಏರಿಯಾದಿಂದ ಬಂದಿರುತ್ತಾರೋ ಅಂತವರಿಗೆ ಪಾಸಿಟಿವ್ ಕಂಡು ಬಂದರೆ ಅವರ ಸ್ಯಾಂಪಲ್‍ಗಳನ್ನು ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಗೆ ರವಾನಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದಲ್ಲಿ ಕೊರೊನಾ ಸೋಂಕು ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ ಕಾಲೇಜುಗಳಲ್ಲಿ ಯಾವುದೇ ಸಾಂಸ್ಕøತಿಕ ಕಾರ್ಯಕ್ರಮ ನಡೆಸುವಂತಿಲ್ಲ ಎಂದು ಅವರು ಸೂಚಿಸಿದರು. …

Read More »

ಮೂರ್ನಾಲ್ಕು ತಿಂಗಳಿಂದ ಸುಳ್ಳು ಹೇಳುತ್ತಿರುವ ಸಿದ್ದರಾಮಯ್ಯ ರಮೇಶ್ ಜಾರಕಿಹೊಳಿ ಕಿಡಿಕಾರಿದ್ದಾರೆ.

👉👉ನಿನ್ನೆ ಸಿದ್ದರಾಯ್ಯನವರು ಹೇಳಿದ್ದಕ್ಕೆ ಇವತ್ತು ಉತ್ತರ ಕೊಡಲು ಬಂದಿದ್ದೆನೆ..👍👍👍👍 ————- ರಾಯಬಾಗ: ಸಿದ್ದರಾಮಯ್ಯ ಅವರು ಯಾವತ್ತೂ ಸುಳ್ಳು ಹೇಳುವುದಿಲ್ಲ. ನಮ್ಮಂತೆಯೇ ಅವರು ಬಹಳ ನಿಷ್ಠುರವಾದಿ. ಆದರೆ, ಕಳೆದ ಮೂರ್ನಾಲ್ಕು ತಿಂಗಳಿಂದ ಅವರು ಯಾರ ಒತ್ತಡಕ್ಕೆ ಒಳಗಾಗಿ ಸುಳ್ಳು ಹೇಳುತ್ತಿದ್ದಾರೋ ಗೊತ್ತಿಲ್ಲ ಎಂದು ಮಾಜಿ ಸಚಿವ, ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಬೆಳಗಾವಿ ಜಿಲ್ಲೆಯ ಸ್ಥಳೀಯ ಸಂಸ್ಥೆಯಿಂದ ಆಯ್ಕೆಯಾಗುವ ವಿಧಾನ ಪರಿಷತ್ ಚುನಾವಣೆಯ ಅಂಗವಾಗಿ ರಾಯಬಾಗದಲ್ಲಿ ಮಹಾವೀರ ಭವನದಲ್ಲಿ ಸೋಮವಾರ ನಡೆದ …

Read More »

ಒಮಿಕ್ರಾನ್ ನಿಯಂತ್ರಣ ಜವಾಬ್ದಾರಿ ಐಎಎಸ್ ಅಧಿಕಾರಿಗಳ ಹೆಗಲಿಗೆ

ಬೆಂಗಳೂರು: ಕೊರೊನಾ ಮೂರನೇ ಅಲೆ, ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ತಡೆಗಟ್ಟಲು ರಾಜ್ಯ ಸರ್ಕಾರ ಸಜ್ಜುಗೊಂಡಿದ್ದು, ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಒಮಿಕ್ರಾನ್ ನಿಯಂತ್ರಣ ಜವಾಬ್ದಾರಿಯನ್ನು ಐಎಎಸ್ ಅಧಿಕಾರಿಗಳ ಹೆಗಲಿಗೆ ವಹಿಸಲಾಗಿದ್ದು, ನೋಡಲ್ ಅಧಿಕಾರಿಗಳನ್ನು ನೇಮಿಸಿ ಆದೇಶ ಹೊರಡಿಸಿದೆ. ರಾಜ್ಯ ಕೋವಿಡ್ ವಾರ್ ರೂಮ್ ನಿರ್ವಹಣೆ, ಆಕ್ಸಿಜನ್ ನಿರ್ವಹಣೆ- ಮನೀಶ್ ಮೌದ್ಗಿಲ್ ಹೋಮ್ ಐಸೋಲೇಷನ್ ನಿರ್ವಹಣೆ – ಪಂಕಜ್ ಕುಮಾರ್ ಪಾಂಡೆ ವಿದೇಶಿ ಪ್ರಯಾಣಿಕರ ತಪಾಸಣೆ, ಸ್ಕ್ರೀನಿಂಗ್ – …

Read More »

ಚಾಮುಂಡಿ, ವರುಣಾ ಬಿಟ್ಟು ಬಾದಾಮಿಗೆ ಯಾಕೆ ಬಂದ್ರಿ?, ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಚಿಮ್ಮನಕಟ್ಟಿ ಬಹಿರಂಗ ವಿರೋಧ

ಬಾಗಲಕೋಟೆ : ಚಾಮುಂಡಿ, ವರುಣಾ ಕ್ಷೇತ್ರ ಬಿಟ್ಟು ಬಾದಾಮಿಗೆ ಬಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಶಾಸಕ ಬಿ ಬಿ ಚಿಮ್ಮನಕಟ್ಟಿ ಬಹಿರಂಗವಾಗಿಯೇ ವಿರೋಧ ವ್ಯಕ್ತಪಡಿದ್ದಾರೆ.ವಿಧಾನ ಪರಿಷತ್ ಚುನಾವಣೆ ಪ್ರಚಾರದ ಅಂಗವಾಗಿ ಬಾದಾಮಿ ಪಟ್ಟಣದ ಅಕ್ಕ ಮಹಾದೇವಿ ಕಲ್ಯಾಣ ಮಂಟಪದಲ್ಲಿ ನಡೆದ ಸಮಾರಂಭದಲ್ಲಿ ಸಿದ್ದರಾಮಯ್ಯ ಅವರ ಎದುರೇ ಚಿಮ್ಮನಕಟ್ಟಿ ಟೀಕಾಪ್ರಹಾರ ನಡೆಸಿದ್ದಾರೆ. ಚಾಮುಂಡಿ, ವರುಣಾ ಬಿಟ್ಟು ಬಾದಾಮಿಗೆ ಯಾಕೆ ಬಂದ್ರಿ?, ನೀವು ಇಲ್ಲಿ ಬಂದ ಮೇಲೆ ‘ಹುಲಿ’ಯನಾಗಿದ್ದ ನನ್ನನ್ನು ‘ಇಲಿ’ …

Read More »

ಧರ್ಮಸ್ಥಳ ಮೇಳ: ಬಯಲಾಟ ಪ್ರದರ್ಶನ ಪ್ರಾರಂಭ

ಬೆಳ್ತಂಗಡಿ: ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಯಕ್ಷಗಾನ ಮಂಡಳಿಯ ಸೇವಾ ಬಯಲಾಟ ಪ್ರದರ್ಶನಗಳು ಭಾನುವಾರ ಮಂಗಳೂರಿನಲ್ಲಿ ಸೇವಾ ಪ್ರದರ್ಶನದೊಂದಿಗೆ ಪ್ರಸ್ತುತ ವರ್ಷದ ತಿರುಗಾಟ ಆರಂಭಗೊಂಡಿದೆ. ಈಗಾಗಲೇ ಕೆಲವು ದಿನಗಳಲ್ಲಿ ಧರ್ಮಸ್ಥಳದಲ್ಲಿ ಸೇವಾ ಹರಿಕೆ ಬಯಲಾಟ ಪ್ರದರ್ಶನಗಳು ನಡೆದಿವೆ. ಕಳೆದ ಆರು ವರ್ಷಗಳಿಂದ ಕಾಲಮಿತಿಯ ಯಕ್ಷಗಾನ ಪ್ರದರ್ಶನವನ್ನು ಆಯೋಜಿಸಲಾಗಿದೆ. ಪ್ರತಿದಿನ ಸಂಜೆ ಗಂಟೆ 7 ರಿಂದ 12 ರ ವರೆಗೆ ಯಕ್ಷಗಾನ ಬಯಲಾಟ ಪ್ರದರ್ಶನ ನಡೆಯುತ್ತದೆ. ಪ್ರೇಕ್ಷಕರಿಂದ, ಸೇವಾಕರ್ತರಿಂದ ಹಾಗೂ ಕಲಾವಿದರಿಂದಲೂ ಇದಕ್ಕೆ ಉತ್ತಮ …

Read More »

ಜಿಲ್ಲೆಯಲ್ಲಿ ಕಳೆದ 10 ದಿನಗಳಲ್ಲಿ 109 ಜನರಿಗೆ ಕೋವಿಡ್ ಪಾಸಿಟಿವ್,ಕೇರಳದಿಂದ ಆಗಮಿಸಿರುವ 23 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢ

ತುಮಕೂರು: ಕೇರಳದಿಂದ ಆಗಮಿಸಿರುವ 23 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟ ಘಟನೆ ತುಮಕೂರಿನಲ್ಲಿ ಬೆಳಕಿಗೆ ಬಂದಿದೆ. ಮೂರು ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಲಲ್ಲಿ ಸೋಂಕು ಪತ್ತೆಯಾಗಿದ್ದು, ಜಿಲ್ಲೆಯಾದ್ಯಂತ ಆತಂಕ ಮನೆ ಮಾಡಿದೆ. ಅರುಣ ನರ್ಸಿಂಗ್ ಕಾಲೇಜಿನ 3, ಸಿದ್ಧಂಗಂಗಾ ನರ್ಸಿಂಗ್ ಕಾಲೇಜಿನ 8 ಹಾಗೂ ವರದರಾಜ ಕಾಲೇಜಿನ 12 ವಿದ್ಯಾರ್ಹಿಗಳು ಸೇರಿದಂತೆ ಒಟ್ಟು 23 ವಿದ್ಯಾರ್ಥಿಗಳಲ್ಲಿ ಕೋವಿಡ್ ಪಾಸಿಟಿವ್ ಬಂದಿದೆ. ಸೋಂಕಿತ ವಿದ್ಯಾರ್ಥಿಗಳನ್ನು ಐಸೋಲೇಷನ್ ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. …

Read More »

ಹುಲಿಯಂತಿದ್ದ ನಾನು ಇಲಿಯಂತಾಗಿದ್ದೀನಿ’; ಸಿದ್ದರಾಮಯ್ಯ ಬಾದಾಮಿಯಿಂದ ಸ್ಪರ್ಧಿಸುವುದು ಬೇಡ; ಮಾಜಿ ಸಿಎಂ ವಿರುದ್ಧ ವೇದಿಕೆ ಮೇಲೆಯೇ ಗುಡುಗಿದ ಮಾಜಿ ಸಚಿವ

ಬಾದಾಮಿ: ವಿಧಾನಪರಿಷತ್ ಚುನಾವಣಾ ಪ್ರಚಾರ ಸಭೆಯ ವೇದಿಕೆಯಲ್ಲಿಯೇ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಮಾಜಿ ಸಚಿವ ಚಿಮ್ಮನಕಟ್ಟಿ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಬಾದಾಮಿಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ ಬಿ.ಬಿ. ಚಿಮ್ಮನಕಟ್ಟಿ, ಸಿದ್ದರಾಮಯ್ಯ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಾದಾಮಿಯಿಂದ ಸ್ಪರ್ಧಿಸುವುದು ಬೇಡ. ಅವರು ವರುಣಾದಿಂದಲೇ ಸ್ಪರ್ಧೆ ಮಾಡಲಿ. ಬಾದಾಮಿ ನನ್ನ ಕ್ಷೇತ್ರ. ನನ್ನ ಕ್ಷೇತ್ರವನ್ನು ನನ್ನಿಂದ ಕಿತ್ತುಕೊಂಡು ಸ್ಪರ್ಧಿಸಿ ಗೆದ್ದಿದ್ದಾರೆ. ನನ್ನ ಎಂ ಎಲ್ …

Read More »

ಖಾನಾಪುರ ಅಭಿವೃದ್ಧಿಗೆ ಸ್ಪಂದಿಸದ ರಾಜ್ಯ ಸರಕಾರದ ವಿರುದ್ದ ಸುವರ್ಣಸೌಧವರೆಗೂ ಪಾದಯಾತ್ರೆಗೆ ಮುಂದಾದ ಅಂಜಲಿ ನಿಂಬಾಳ್ಕರ್

ಖಾನಾಪುರ ಅಭಿವೃದ್ಧಿಗೆ ಸ್ಪಂದಿಸದ ರಾಜ್ಯ ಸರಕಾರದ ವಿರುದ್ದ ಸುವರ್ಣ ಸೌಧ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಬೆಳಗಾವಿಯ ಅಧಿವೇಶನ ಹಿನ್ನೆಲೆ ಈ ಭಾಗದ ರೈತರು, ಸಾರ್ವಜನಿಕರು ಸೇರಿ ಹೆಸರಲ್ಲಿ ಡಿ. 12ರಂದು ಖಾನಾಪುರ ಸಂಘರ್ಷ ಪಾದಯಾತ್ರೆ ನಡೆಸುತ್ತಿದ್ದೇವೆ ಎಂದು ಖಾನಾಪೂರ ಶಾಸಕಿ ಅಂಜಲಿ ನಿಂಬಾಳ್ಕರ್ ಮಾಹಿತಿ ನೀಡಿದ್ದಾರೆ. ಖಾನಾಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 13ರಿಂದ ಅಧಿವೇಶನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸಮಗ್ರ …

Read More »

ಬೆಳಗಾವಿ  ಮಾಜಿ ಶಾಸಕ ರಮೇಶ್ ಕುಡಚಿ ಮತ್ತೆ ಜೆಡಿಎಸ್ ನಿಂದ ಪಕ್ಷಾಂತರಗೊಂಡು ಕಾಂಗ್ರೆಸ್ ಸೇರಿದ್ದಾರೆ.

ರಾಯಬಾಗದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಬೆಳಗಾವಿ  ಮಾಜಿ ಶಾಸಕ ರಮೇಶ್ ಕುಡಚಿ ಮತ್ತೆ ಜೆಡಿಎಸ್ ನಿಂದ ಪಕ್ಷಾಂತರಗೊಂಡು ಕಾಂಗ್ರೆಸ್ ಸೇರಿದ್ದಾರೆ. ಹೌದು, ಭಾನುವಾರ ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರಾಯಬಾಗದಲ್ಲಿ ಕಾಂಗ್ರೆಸ್ ಸಮಾವೇಶ ಆಯೋಜಿಸಲಾಗಿತ್ತು. ಈ ವೇಳೆ ಬೆಳಗಾವಿ ನಗರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ರಮೇಶ್ ಕುಡಚಿ ಪಕ್ಷಾಂತರ ಮಾಡಿ ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ದರು. ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಶಾಲು ಹೊದಿಸಿ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರು. ಪ್ರಥಮ ಬಾರಿಗೆ …

Read More »