ಮುಂಬೈ: ಬಾಂದ್ರಾದಲ್ಲಿ ನಾಲ್ಕು ಅಂತಸ್ತಿನ ಕಟ್ಟಡದ ಗೋಡೆಯು ಪಕ್ಕದ ಎರಡು ಅಂತಸ್ತಿನ ಮನೆಯ ಮೇಲೆ ಕುಸಿದಿರುವ ಪರಿಣಾಮ ಸಂಭವಿಸಿರುವ ದುರಂತದಲ್ಲಿ ಓರ್ವ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಾಂದ್ರಾ (ಪೂರ್ವ) ಖೇರ್ವಾಡಿ ರಸ್ತೆಯಲ್ಲಿರುವ ರಜಾಕ್ ಚಾವ್ಲ್‌ನಲ್ಲಿ ಭಾನುವಾರ ತಡರಾತ್ರಿ ಘಟನೆ ನಡೆದಿದ್ದು, ಇದುವರೆಗೆ 17 ಮಂದಿಯನ್ನು ರಕ್ಷಿಸಲಾಗಿದೆ. 28 ವರ್ಷದ ರಿಯಾಸ್ ಅಹ್ಮದ್ ಎಂಬವರು ಮೃತಪಟ್ಟಿದ್ದಾರೆ. ಗಾಯಗೊಂಡವರಲ್ಲಿ ಓರ್ವ ಮಹಿಳೆಯು ಸೇರಿದ್ದಾರೆ ಎಂದು ತಿಳಿಸಿದ್ದಾರೆ. ಅವಘಡ ಸಂಭವಿಸಿದ …
Read More »Yearly Archives: 2021
ಸಂಪೂರ್ಣ ಚೇತರಿಸಿಕೊಂಡ ಸಿದ್ದರಾಮಯ್ಯ; ಆಸ್ಪತ್ರೆಯಿಂದ ಬಿಡುಗಡೆ
ಬೆಂಗಳೂರು: ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆಯಿಂದ ಹೊರಟ ಸಿದ್ದರಾಮಯ್ಯ ಅವರನ್ನು ವೈದ್ಯರು ಹಾಗೂ ಸಿಬ್ಬಂದಿ ಬೀಳ್ಕೊಟ್ಟರು. ಕೆಲ ದಿನಗಳ ಹಿಂದೆ ಜ್ವರ ಕಾಣಿಸಿಕೊಂಡ ಕಾರಣ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ನಡೆಸಿದ ಕೋವಿಡ್ ಪರೀಕ್ಷೆಗಳಲ್ಲಿ ನೆಗಟಿವ್ ವರದಿಯಾಗಿತ್ತು.
Read More »ಮುಖ್ಯಮಂತ್ರಿ ಬದಲಾವಣೆ ಅಷ್ಟು ಸುಲಭದ ಕೆಲಸವಲ್ಲ: ಸಚಿವ ಬಿ.ಸಿ. ಪಾಟೀಲ್
ಬೆಳಗಾವಿ: ಯಾರೋ ದೆಹಲಿಗೆ ಹೋಗಿ ಬಂದ ತಕ್ಷಣ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ಮುಖ್ಯಮಂತ್ರಿ ಬದಲಾವಣೆ ಅಷ್ಟು ಸುಲಭದ ಕೆಲಸವಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಖಾರವಾಗಿ ಹೇಳಿದರು. ಬೆಳಗಾವಿಯಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಸಿಎಂ ಬದಲಾವಣೆ ಇಲ್ಲ. ಇನ್ನೂ ಎರಡು ವರ್ಷ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ. ಮುಂದಿನ ಚುನಾವಣೆಯನ್ನು ಯಡಿಯೂರಪ್ಪ ನೇತೃತ್ವದಲ್ಲಿ ಎದುರಿಸುತ್ತೇವೆ ಎಂದು ಸ್ಪಷ್ಟಪಡಿಸಿದರು. ಪಕ್ಷದ ವರಿಷ್ಠರು ಕೇಳಿದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ …
Read More »ಮಕ್ಕಳ ಮೇಲೆ ಕೋವ್ಯಾಕ್ಸಿನ್ ಪ್ರಯೋಗ ಆರಂಭ; ಕೊರೊನಾ 3ನೇ ಅಲೆಗೆ ಸಿದ್ಧತೆ
ನವದೆಹಲಿ: ಕೊರೊನಾ ಎರಡನೇ ಅಲೆ ಆರ್ಭಟ ಕೊಂಚ ಇಳಿಮುಖವಾಗುತ್ತಿರು ಮಧ್ಯೆ ಮೂರನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚು ಅಪಾಯಕಾರಿ ಎಂಬ ಎಚ್ಚರಿಕೆ ಬೆನ್ನಲ್ಲೇ ಮುಂಜಾಗೃತಾ ಕ್ರಮವಾಗಿ ಇದೀಗ ಮಕ್ಕಳ ಮೇಲೆ ಕೋವಿಡ್ ಲಸಿಕೆ ಪ್ರಯೋಗ ಆರಂಭವಾಗಿದೆ. ಭಾರತ್ ಬಯೋಟೆಕ್ ಕಂಪನಿಯ ಕೋವ್ಯಾಕ್ಸಿನ್ ಲಸಿಕೆ ಮಕ್ಕಳ ಮೇಲೆ ಪ್ರಯೋಗಿಸಲಾಗುತ್ತಿದ್ದು, ದೆಹಲಿಯ ಏಮ್ಸ್ ಹಾಗೂ ಮಹಾರಾಷ್ಟ್ರದ ನಾಗ್ಪುರದಲ್ಲಿಯೂ ಪ್ರಯೋಗ ಆರಂಭವಾಗಿದೆ. 12-18 ವರ್ಷದ 175 ಮಕ್ಕಳ ಮೇಲೆ ಲಸಿಕೆ ಪ್ರಯೋಗ ಮಾಡಲಾಗುತ್ತಿದ್ದು, 3 ಗ್ರೂಪ್ …
Read More »ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ ರಾಧಿಕಾ ಪಂಡಿತ್
ಬೆಂಗಳೂರು: ಕೊರೊನಾ ವೈರಸ್ ಮತ್ತು ಲಾಕ್‍ಡೌನ್‍ನಿಂದ ಉಂಟಾಗಿರುವ ಕಷ್ಟದ ಪರಿಸ್ಥಿತಿಯಲ್ಲಿ ಸ್ಯಾಂಡಲ್‍ವುಡ್ ನಟಿ ರಾಧಿಕಾ ಪಂಡಿತ್ ಅವರು ಎಲ್ಲರಿಗೂ ಧೈರ್ಯ ತುಂಬಲು ಇನ್‍ಸ್ಟಾಗ್ರಾಮ್‍ನಲ್ಲಿ ಹೊಸ ಪೋಸ್ಟ್ ಹಂಚಿಕೊಳ್ಳುವ ಮೂಲಕ ಅವರು ಕೆಲವು ವಿಚಾರಗಳನ್ನು ಬರೆದುಕೊಂಡಿದ್ದಾರೆ. ಕೊರೊನಾ ವೈರಸ್ ಹಾವಳಿಯಿಂದ ಅನೇಕರ ಬದುಕು ತತ್ತರಿಸಿ ಹೋಗಿದೆ. ಈ ಕಠಿಣ ಸಂದರ್ಭದಲ್ಲಿ ಅನೇಕ ನಟ, ನಟಿಯರು ಸಹಾಯ ಮಾಡಿದ್ದಾರೆ. ನಟ ಯಶ್ ಇತ್ತೀಚೆಗಷ್ಟೇ ಅವರು 1.5 ಕೋಟಿ ರೂ.ಗಿಂತಲೂ ಹೆಚ್ಚು ಹಣವನ್ನು ಸಿನಿಮಾರಂಗದ …
Read More »ಸಿಎಂ ಬದಲಾವಣೆ ಚರ್ಚೆಯಿಂದ ಸರ್ಕಾರದ ಇಮೇಜ್‌ಗೆ ಧಕ್ಕೆ ಬರಲಿದೆ: ಶೆಟ್ಟರ್
ಹುಬ್ಬಳ್ಳಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ. ನಾಯಕತ್ವ ಬದಲಾವಣೆ ಚರ್ಚೆಯಿಂದ ಸಿಎಂ ಬಿಎಸ್ ಯಡಿಯೂರಪ್ಪ ಮನಸ್ಸಿಗೆ ಬೇಸರವಾಗಿದೆ. ಅಲ್ಲದೇ ಪದೇ ಪದೇ ನಾಯಕತ್ವ ಬದಲಾವಣೆ ಚರ್ಚೆ ನಡೆಯುವುದರಿಂದ ಸರ್ಕಾರದ ಇಮೇಜ್‌ಗೆ ಧಕ್ಕೆ ಬರಲಿದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಯಡಿಯೂರಪ್ಪರಿಗೆ ವಯಸ್ಸಾದ್ರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಕೆಲಸಕ್ಕೆ ವಯಸ್ಸು ಅಡ್ಡಿ ಬಂದಿಲ್ಲ. ಹೈಕಮಾಂಡ್ ಮಟ್ಟದಲ್ಲೂ ನಾಯಕತ್ವ ಬದಲಾವಣೆ ವಿಚಾರ ಚರ್ಚೆಗೆ ಬಂದಿಲ್ಲ. …
Read More »ಪತಿಯನ್ನೇ ಕೊಂದ ಪತ್ನಿ- ಪುತ್ರ, ಪ್ರಿಯತಮನ ಸಾಥ್
ಚಿಕ್ಕೋಡಿ: ಪತ್ನಿಯ ಅನೈತಿಕ ಸಂಭಂಧವನ್ನು ಪತಿ ಪ್ರಶ್ನಿಸಿದಕ್ಕೆ ಪತ್ನಿ, ಪುತ್ರ ಹಾಗೂ ಆಕೆಯ ಪ್ರಿಯತಮ ಸೇರಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ನಡೆದಿದೆ. ಕುಮಾರ ರಾಮು ಖೋತ (39) ಮೃತನಾಗಿದ್ದಾನೆ. ಪತ್ನಿಯಿಂದ ಕೊಲೆಯಾದ ಈತ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದ ನಿವಾಸಿಯಾಗಿದ್ದನು. ಚಿಂಚಲಿ ಪಟ್ಟಣದ ಬಾಳೇಶ ಶ್ರೀಕಾಂತ ಹಾರೂಗೇರಿ, ಸಚಿನ ಕುಮಾರ ಖೋತ, ಗೀತಾ ಕುಮಾರ ಖೋತ, ಬೆಳಕೂಡ ಗ್ರಾಮದ …
Read More »ಶತಕ ದಾಟಿದ ಪೆಟ್ರೋಲ್ ದರ, ಸೆಸ್ ದರ ಕಡಿಮೆ ಮಾಡುವಂತೆ ಸರ್ಕಾರಕ್ಕೆ ಎಚ್‌ಡಿಕೆ ಒತ್ತಾಯ
ಬೆಂಗಳೂರು, ಜೂ. 7-ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್ ಕಡಿಮೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಕೋವಿಡ್ ಸಂಕಷ್ಟದ ಸಮಯದಲ್ಲಿ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಗಾಯದ ಮೇಲೆ ಬರೆ ಎಳೆದಂತಾಗಿದೆ ರಾಜ್ಯ ಸರ್ಕಾರಗಳು ಶೇ.30-32 ರಷ್ಟು ಸೆಸ್ ವಿಧಿಸುತ್ತವೆ. ಸೆಸ್ ಪ್ರಮಾಣ ಇಳಿಕೆ ಮಾಡಿದರೆ ಡೀಸೆಲ್, ಪೆಟ್ರೋಲ್ ದರದಲ್ಲಿ ಲೀಟರ್ ಗೆ 3-4 ರೂ. ಇಳಿಕೆಯಾಗಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜನರು ಸಂಕಷ್ಡದಲ್ಲಿದ್ದಾರೆ …
Read More »ಪಿಯು ಪರೀಕ್ಷೆ ಇಲ್ಲ ; ಪರೀಕ್ಷಾ ಶುಲ್ಕವೂ ವಾಪಾಸಿಲ್ಲ
ಪಿಯು ಪರೀಕ್ಷೆಯನ್ನು ರದ್ದು ಮಾಡಿರುವ ರಾಜ್ಯ ಸರ್ಕಾರ, ವಿದ್ಯಾರ್ಥಿಗಳಿಂದ ಪಡೆದಿರುವ ಪ್ರವೇಶ ಶುಲ್ಕ ಮರುಪಾವತಿಗೆ ನಿರಾಕರಿಸುತ್ತಿದೆ. ಪ್ರತಿ ವಿದ್ಯಾರ್ಥಿಗೆ ಪರೀಕ್ಷಾ ಶುಲ್ಕವಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ 190 ರೂ. ಪಡೆದಿದೆ. ಇದೇ ರೀತಿ ಖಾಸಗಿ ಮತ್ತು ಪುನರಾವರ್ತಿತ ಅಭ್ಯರ್ಥಿಗಳಿಂದ 500 ರೂ.ಪಡೆದಿದೆ. ಇನ್ನು ಕೆಲವು ವಿದ್ಯಾರ್ಥಿಗಳು ತಡವಾಗಿ ಶುಲ್ಕ ಪಾವತಿಸಿರುವುದಕ್ಕೆ ದಂಡ ಶುಲ್ಕವಾಗಿ 700 ರಿಂದ 1320 ರೂ.ಹೆಚ್ಚುವರಿಯಾಗಿ ಪಡೆದಿದೆ. ಈ ಬಾರಿ 6.25 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ …
Read More »ರೋಹಿಣಿ ಸಿಂಧೂರಿ ಗೈರು ಹಾಜರಿ ನಡುವೆ ಗೌತಮ್ ಬಗಾದಿ ಮೈಸೂರು ಡಿಸಿಯಾಗಿ ಅಧಿಕಾರ ಸ್ವೀಕಾರ
ವಿವಾದಗಳ ಹಿನ್ನೆಲೆಯಲ್ಲಿ ವರ್ಗಗೊಂಡ ರೋಹಿಣಿ ಸಿಂಧೂರಿ ಅನುಸ್ಥಿತಿಯಲ್ಲಿ ಗೌತಮ್ ಬಗಾದಿ ಮೈಸೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು. ನೂತನ ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಕಗೊಂಡ ಗೌತಮ್ ಬಗಾದಿ ಭಾನುವಾರ ಕಚೇರಿಗೆ ಆಗಮಿಸಿ ಸುಮಾರು ಅರ್ಧಗಂಟೆ ಕಾದರು. ಆದರೆ ವರ್ಗಗೊಂಡ ರೋಹಿಣಿ ಸಿಂಧೂರಿ ಅಧಿಕಾರ ಹಸ್ತಾಂತರಕ್ಕೆ ಬಾರದ ಹಿನ್ನೆಲೆಯಲ್ಲಿ ಅವರ ಅನುಪಸ್ಥಿತಿಯಲ್ಲೇ ಅಧಿಕಾರ ಸ್ವೀಕರಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಮಂಜುನಾಥ್ ಸ್ವಾಮಿ ಗೌತಮ್ ಅವರಿಗೆ ಅಧಿಕಾರ ಹಸ್ತಾಂತರಿಸಿದ್ದು, ಜಿ.ಪಂ ಸಿಇಓ ಉಪಸ್ಥಿತರಿದ್ದರು. ವಾಟ್ಸಪ್ ಮೂಲಕ ಮೈಸೂರು …
Read More »