Breaking News

Yearly Archives: 2021

ಜೂನ್ 7ರಿಂದ ದೆಹಲಿಯಲ್ಲಿ ಮಾರುಕಟ್ಟೆ, ಮೆಟ್ರೋ ಸಂಚಾರ ಆರಂಭ: ಕೇಜ್ರಿವಾಲ್

ದೆಹಲಿ: ಕೋವಿಡ್ 19 ಸೋಂಕು ಪ್ರಕರಣ ಇಳಿಕೆಯಾದ ಹಿನ್ನೆಲೆಯಲ್ಲಿ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೆಲವೊಂದು ನಿರ್ಬಂಧಗಳೊಂದಿಗೆ ಜೂನ್ 7ರಿಂದ ಅಂಗಡಿ, ಮಾಲ್ ಗಳನ್ನು ತೆರೆಯಲು ಅವಕಾಶ ನೀಡಲಾಗುವುದು, ಆದರೆ ಲಾಕ್ ಡೌನ್ ಮುಂದುವರಿಯಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ(ಜೂನ್ 05) ತಿಳಿಸಿದ್ದಾರೆ.   ಜೂನ್ 7ರಿಂದ ಮಾಲ್ ಗಳು ಹಾಗೂ ಅಂಗಡಿಗಳು ಪುನರಾರಂಭಗೊಳ್ಳಲಿದೆ. ಅಲ್ಲದೇ ಶೇ.50ರಷ್ಟು ಸಾಮರ್ಥ್ಯದೊಂದಿಗೆ ದೆಹಲಿ ಮೆಟ್ರೋ ಕೂಡಾ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕೇಜ್ರಿವಾಲ್ …

Read More »

ಬೈಕ್ ನಲ್ಲಿ ಬಂದು ಮಹಿಳೆಯರ ಹಿಂಭಾಗ ಸ್ಪರ್ಶಿಸಿ ಪರಾರಿಯಾಗ್ತಿದ್ದ ಕೀಚಕ; ಸೈಕೊ ಅರುಣ್ ಪೊಲೀಸರ ಬಲೆಗೆ

ಬೆಂಗಳೂರು: ಬೈಕ್ ನಲ್ಲಿ ಬಂದು ಮಹಿಳೆಯರ ಹಿಂಭಾಗ ಸ್ಪರ್ಶಿಸಿ ಅಸಭ್ಯವಾಗಿ ವರ್ತಿಸಿ ಪರಾರಿಯಾಗುತ್ತಿದ್ದ ಸೈಕೋನೋರ್ವನನ್ನು ಬೆಂಗಳೂರು ಕೋರಮಂಗಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕೆಜಿಎಫ್ ರಾಬರ್ಟ್ ಪೇಟೆಯ ಸೈಕೋ ಅರುಣ್ ಕುಮಾರ್ ಎಂದು ಗುರುತಿಸಲಾಗಿದೆ. ರಾತ್ರಿ ವೇಳೆ ಬೈಕ್ ನಲ್ಲಿ ಅಡ್ಡಾಡುತ್ತಾ ಮಹಿಳೆಯರ ಮೈಕೈ ಮುಟ್ಟಿ ಅಸಭ್ಯವಾಗಿ ವರ್ತಿಸುತ್ತಿದ್ದ. ಈ ಬಗ್ಗೆ ಹಲವು ಯುವತಿಯರು ಪೊಲೀಸರಿಗೆ ದೂರು ನೀಡಿದ್ದರು. ಆದರೆ ಅರುಣ್ ಈವರೆಗೂ ಪೊಲೀಸರ ಕೈಗೆ ಸಿಕ್ಕಿರಲಿಲ್ಲ. ಮೇ 31ರ …

Read More »

ಬ್ಯಾಂಕ್ ಎಡವಟ್ಟಿನಿಂದಾಗಿ ಮಹಾನಗರ ಪಾಲಿಕೆ ಸದಸ್ಯರ ಖಾತೆಗೆ 6 ಸಾವಿರ ರೂ ಬದಲಿಗೆ 6 ಲಕ್ಷ ರೂಪಾಯಿ ವರ್ಗಾವಣೆ

ದಾವಣಗೆರೆ: ಬ್ಯಾಂಕ್ ಎಡವಟ್ಟಿನಿಂದಾಗಿ ಮಹಾನಗರ ಪಾಲಿಕೆ ಸದಸ್ಯರ ಖಾತೆಗೆ 6 ಸಾವಿರ ರೂ ಬದಲಿಗೆ 6 ಲಕ್ಷ ರೂಪಾಯಿ ವರ್ಗಾವಣೆಯಾಗಿರುವ ಘಟನೆ ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ. ದಾವಣಗೆರೆ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್, ಆಡಳಿತ, ವಿಪಕ್ಷ ಸದಸ್ಯರು ಸೇರಿದಂತೆ 50 ಜನರ ಖಾತೆಗಳಿಗೆ 3 ಕೋಟಿಗೂ ಅಧಿಕ ಹಣ ಜಮೆಯಾಗಿದೆ. ಬ್ಯಾಂಕ್ ಸಿಬ್ಬಂದಿಗಳ ಎಡವಟ್ಟಿನಿಂದಾಗಿ ಇತದ್ದೊಂದು ಲೋಪ ಸಂಭವಿಸಿದೆ. ಸಧ್ಯ ಜಮಾ ಮಾಡಲಾಗಿರುವ ಹಣವನ್ನು ಬ್ಯಾಂಕ್ ವಾಪಸ್ ಪಡೆದುಕೊಂಡಿದೆ ಎಂದು …

Read More »

ರಾಜಧಾನಿ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಪೆಟ್ರೋಲ್ ದರ ಶತಕ ಬಾರಿಸಿದೆ.

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಡಿಸೆಲ್ ದರ ಗಗನಮುಖಿಯಾಗಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಪೆಟ್ರೋಲ್ ದರ ಶತಕ ಬಾರಿಸಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ ಬರೋಬ್ಬರಿ 98ರೂಪಾಯಿ 19 ಪೈಸೆಯಾಗಿದೆ. ಲೀಟರ್ ಡೀಸೆಲ್ ದರ 90 ರೂಪಾಯಿ 84 ಪೈಯಾಗಿದೆ. ಕೊರೊನಾ ಲಾಕ್ ಡೌನ್ ನಿಂದ ಜನ ಸಾಮಾನ್ಯರ ಬದುಕು ದುಸ್ಥರವಾಗಿದ್ದು, ಈ ನಡುವೆ ತೈಲ ಬೆಲೆಯಲ್ಲಿ ಭಾರಿ ಏರಿಕೆಯಾಗಿರುವುದು ಜನರ ಜೇಬಿಗೆ ಕತ್ತರಿ ಬಿದ್ದಂತಾಗಿದೆ. ಮುಂಬೈ ಮಹಾನಗರದಲ್ಲಿ …

Read More »

ಶಾಸಕರ ನಿಧಿಯಿಂದ ನೀಡಲಾದ ಎರಡು ರಕ್ಷಾ ಕವಚ ವಾಹನಗಳನ್ನು ಲೋಕಾರ್ಪಣೆಗೊಳಿಸಿದ ಜಡಿ ಸಿದ್ದೇಶ್ವರ ಮಠದ ಪೀಠಾಧಿಪತಿ

  ಮೂಡಲಗಿ: ಕೊರೋನಾ ಸೋಂಕಿತರ ನೇರವಿನ ಹಸ್ತ ಹಾಗೂ ಅಮೂಲ್ಯ ಜೀವ ಉಳಿಸುವ ಸಂದರ್ಭದಲ್ಲಿ ಅವಶ್ಯಕವಾಗಿ ಅಂಬ್ಯುಲೆನ್ಸ್‍ಗಳ ಅಗತ್ಯವಿದೆ. ಅರಭಾಂವಿ ಕ್ಷೇತ್ರದ ಶಾಸಕರ ನಿಧಿಯಿಂದ ನೀಡಿರುವ ತುರ್ತು ಸೇವೆ ಸೋಂಕಿತರಿಗೆ ಸಹಕಾರಿಯಾಗುವದು. ಶಾಸಕ ಹಾಗೂ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರ ಕಾರ್ಯ ಶ್ಲಾಘನೀಯವಾಗಿದೆ ಎಂದು ಸುಣಧೋಳಿ ಜಡಿಸಿದ್ಧೇಶ್ವರ ಮಠದ ಪೀಠಾಧಿಕಾರಿಗಳಾದ ಶ್ರೀ ಅಭಿನವ ಶಿವಾನಂದ ಸ್ವಾಮೀಜಿ ಹೇಳಿದರು.     ಅವರು ಶುಕ್ರವಾರ ಪಟ್ಟಣದ ಮೇಲ್ದರ್ಜೆಗೇರಿಸಿದ ಸಮುದಾಯ ಆರೋಗ್ಯ ಕೇಂದ್ರದಲ್ಲಿ …

Read More »

ಕೋವಿಡ್ ಮಾರ್ಗಸೂಚಿ ಉಲ್ಲಂಘನೆ: ಸಿಎಂ, ಸಚಿವರಿಗೆ ಬಿಸಿ ಮುಟ್ಟಿಸಿದ ಹೈಕೋರ್ಟ್

ಬೆಂಗಳೂರು: ಕೋವಿಡ್ ಮಾರ್ಗಸೂಚಿ ಉಲ್ಲಂಘನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಇನ್ನಿತರ ಸಚಿವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ರಾಜ್ಯದಲ್ಲಿ ಕೊರೊನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠವು ಶುಕ್ರವಾರ ವಿಚಾರಣೆ ನಡೆಸಿತು. ಈ ವೇಳೆ ಕೋರ್ಟ್, “ಕೋವಿಡ್ ಮಾರ್ಗಸೂಚಿ ಉಲ್ಲಂಘನೆಗೆ ಸಂಬಂಧಿಸಿದಂತೆ …

Read More »

ಕೆಎಸ್‌ಆರ್‌ಟಿಸಿ ಹೆಸರು ಕರ್ನಾಟಕದಿಂದ ಕೈ ತಪ್ಪುವ ಆತಂಕ ಬೇಡ: ಡಿಸಿಎಂ ಸವದಿ

ಬೆಂಗಳೂರು:ಕೆ. ಎಸ್. ಆರ್. ಟಿ. ಸಿ. ಎಂಬ ಹೆಸರು ಕರ್ನಾಟಕದಿಂದ ಕೈತಪ್ಪಿದೆ ಎಂಬ ಆತಂಕ ಪಡಬೇಕಾಗಿಲ್ಲ. ಕೇರಳ ಸರ್ಕಾರವು ಈ ಬಗ್ಗೆ ಏನೇ ಹೇಳಿಕೆ ನೀಡಿದರೂ ನಮ್ಮ ಕರ್ನಾಟಕ ಸರ್ಕಾರವು ಸೂಕ್ತ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳುವ ಮೂಲಕ ರಾಜ್ಯದ ಹಿತಾಸಕ್ತಿಯನ್ನು ಕಾಪಾಡಿಕೊಳ್ಳುತ್ತದೆ ಎಂದು ಉಪ ಮುಖ್ಯಮಂತ್ರಿ ಶ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಕೆ. ಎಸ್. ಆರ್. ಟಿ. ಸಿ. ಎಂಬ ಹೆಸರನ್ನು ಮುಂದೆಯೂ ಕರ್ನಾಟಕವು ಬಳಸಲು ಸ್ವತಂತ್ರವಾಗಿದೆ. ಈ ಬಗ್ಗೆ …

Read More »

ಪ್ರಜಾಪ್ರಭುತ್ವದ ಮೂರು ಮಂಗಗಳು ನಾಚುವಂತೆ ಸರ್ಕಾರ ವರ್ತಿಸುತ್ತಿದೆ’

ಬೆಂಗಳೂರು: ಮೈಸೂರಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಪಾಲಿಕೆ ಮೇಯರ್​ ಶಿಲ್ಪಾ ನಾಗ್​ ನಡುವಿನ ಜಟಾಪಟಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಸರ್ಕಾರ ಪ್ರಜಾಪ್ರಭುತ್ವದ ಮೂರು ಮಂಗಗಳು ನಾಚುವಂತೆ ವರ್ತಿಸುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ. ಹೆಚ್​.ಡಿ.ಕುಮಾರಸ್ವಾಮಿ ಟ್ವೀಟ್​ಗಳು.. ಸಾಂಸ್ಕೃತಿಕ ನಗರಿ ಮೈಸೂರಿನ ಜಿಲ್ಲಾಧಿಕಾರಿ ಹಾಗೂ ಅಲ್ಲಿನ ಪಾಲಿಕೆ ಆಯುಕ್ತರ ನಡುವೆ ನಡೆಸುತ್ತಿರುವ ಹಾದಿ- ಬೀದಿ ಜಗಳ ನೋಡಿದರೆ, ರಾಜ್ಯದಲ್ಲಿ ಸರಕಾರ ಅಸ್ಥಿತ್ವದಲ್ಲಿದಿಯೋ ಇಲ್ಲವೋ ಎಂಬ ಅನುಮಾನ ಸಾರ್ವಜನಿಕ …

Read More »

ರಾಜ್ಯದಲ್ಲಿ KSRTC ಟ್ರೇಡ್​ ಮಾರ್ಕ್​​ ನಿಷೇಧ ಇಲ್ಲ

ಬೆಂಗಳೂರು: ರಾಜ್ಯದಲ್ಲಿ ”ಕೆಎಸ್​​ಆರ್​​ಟಿಸಿ” ಟ್ರೇಡ್‌ಮಾರ್ಕ್ ಬಳಕೆ ಮಾಡುವ ವಿರುದ್ಧವಾಗಿ ಯಾವುದೇ ಆದೇಶ ಮತ್ತು ನಿಷೇಧ ಬಂದಿಲ್ಲ ಅಂತಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಶಿವಯೋಗಿ ಸಿ.ಕಳಸದ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿ ಕೆಎಸ್​ಆರ್​​ಟಿಸಿ ಸ್ಪಷ್ಟನೆ ನೀಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಇನ್ನು ಮುಂದೆ ”ಕೆಎಸ್‌ಆರ್‌ಟಿಸಿ” ಎಂದು ಬಳಸುವಂತಿಲ್ಲವೆಂದು, ಕೇಂದ್ರದ ಟ್ರೇಡ್ ಮಾರ್ಕ್ಸ್​ ರಿಜಿಸ್ಟರಿ ಅವರು ಬುಧವಾರ ತನ್ನ ಅಂತಿಮ ತೀರ್ಪನ್ನು ಪ್ರಕಟಿಸಿದ್ದು, ಎರಡು ರಾಜ್ಯಗಳ …

Read More »

ಪೈಲಟ್ ತರಬೇತಿ ಕೇಂದ್ರ: 2 ಸಂಸ್ಥೆಗಳಿಗೆ ಒಪ್ಪಿಗೆ -ಮಂಗಲಾ ಅಂಗಡಿ

ಬೆಳಗಾವಿ: ‘ವಿಮಾನ ಹಾರಾಟ ಕ್ಷೇತ್ರದಲ್ಲಿ ಅಗತ್ಯ ತರಬೇತಿ ನೀಡುವ ಸಂಸ್ಥೆ ಅಥವಾ ಕೇಂದ್ರವನ್ನು (‍ಪೈಲಟ್ ತರಬೇತಿ ಕೇಂದ್ರ) ನಗರದ ಸಮೀಪದಲ್ಲಿ ಪ್ರಾರಂಭಿಸಲು 2 ಖಾಸಗಿ ತರಬೇತಿ ಸಂಸ್ಥೆಗಳಿಗೆ ಕೇಂದ್ರ ವಿಮಾನಯಾನ ಸಚಿವಾಲಯವು ಇತ್ತೀಚೆಗೆ ಒಪ್ಪಿಗೆ ಸೂಚಿಸಿದೆ’ ಎಂದು ಸಂಸದೆ ಮಂಗಲಾ ಸುರೇಶ ಅಂಗಡಿ ತಿಳಿಸಿದ್ದಾರೆ. ಈ ಬಗ್ಗೆ ಶುಕ್ರವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ‘ಆಯ್ಕೆಯಾದ ಈ ಎರಡು ಸಂಸ್ಥೆಗಳಿಗೆ ತಲಾ 5ಸಾವಿರ ಚ.ಮೀ. ಅಳತೆಯಂತೆ ಒಟ್ಟು 10ಸಾವಿರ ಚ.ಮೀ. …

Read More »