ಮೈಸೂರು: ನೂರಾರು ಕನಸಿನ ಬುತ್ತಿಯೊಂದಿಗೆ ಎರಡು ತಿಂಗಳ ಹಿಂದಷ್ಟೇ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿತ್ತು. ಅಷ್ಟರಲ್ಲಿ ಸುಖಸಂಸಾರಕ್ಕೆ ಬಂದಪ್ಪಳಿಸಿದ ಮಹಾಮಾರಿ ಕರೊನಾ, ನವವಿವಾಹಿತನ ಪ್ರಾಣ ತೆಗೆದ ಹೃದಯವಿದ್ರಾವಕ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಆಲನಹಳ್ಳಿ ಬಡಾವಣೆ ನಿವಾಸಿ, ಇಂಜಿನಿಯರ್ ನವೀನ್ ಕುಮಾರ್ ಮೃತ ದುರ್ದೈವಿ. ಬೆಂಗಳೂರಿನ ಜೈನ್ ವಿವಿಯಲ್ಲಿ ಕೆಲಸ ಮಾಡುತ್ತಿದ್ದ ನವೀನ್, ಎರಡು ತಿಂಗಳ ಹಿಂದಷ್ಟೆ ಮದುವೆ ಆಗಿದ್ದರು. ಇತ್ತೀಚಿಗೆ ತೀವ್ರ ಉಸಿರಾಟದ ಬಳಲುತ್ತಿದ್ದ ನವೀನ್, ಬೆಂಗಳೂರಿನಿಂದ …
Read More »Yearly Archives: 2021
ತಂದೆಗೆ ಮಗುವನ್ನು ನೋಡಲು ಬಿಡದ IPS ಅಧಿಕಾರಿ..? ಪತಿಯಿಂದ ಆರೋಪ.. ಡಿಜಿಪಿಗೆ ದೂರು
ಬೆಂಗಳೂರು: ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ ಡಿಜಿ&ಐಜಿಪಿ ಪ್ರವೀಣ್ ಸೂದ್ಗೆ ದೂರು ನೀಡಲಾಗಿದೆ. ವರ್ತಿಕಾ ಅವರು ತನ್ನ ಪತಿಗೆ ಮಗುವನ್ನ ನೋಡಲು ಬಿಡ್ತಿಲ್ಲ ಎಂದು ಆರೋಪಿಸಲಾಗಿದೆ. ತನ್ನ ಅಧಿಕಾರ ಬಳಸಿಕೊಂಡು ವರ್ತಿಕಾ ಕಟಿಯಾರ್ ತಮ್ಮ ಪತಿಗೆ ಮಗು ನೋಡದಂತೆ ತಡೆದಿದ್ದಾರೆ.. ಹೀಗಾಗಿ ಅವರ ವಿರುದ್ಧ ಕ್ರಮ ಜರುಗಿಸುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಐಎಫ್ಎಸ್ ಅಧಿಕಾರಿಯಾಗಿರುವ ವರ್ತಿಕಾ ಅವರ ಪತಿ ನಿತಿನ್ ಶುಭಾಶ್, ತನಗೆ …
Read More »ಬೇರೆ ಮದುವೆಯಾದರೂ ಲವ್ ಮುಂದುವರಿಸಿದ್ದ ಪ್ರೇಮಿಗಳು ಒಂದೇ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ
ಬೆಳಗಾವಿ: ಮದುವೆ ಬಳಿಕವೂ ಪ್ರೀತಿ ಮುಂದುವರಿಸಿದ್ದ ಜೋಡಿಗೆ ವಿರೋಧ ವ್ಯಕ್ತವಾಗುತ್ತಿದ್ದಂತೆ ಒಂದೇ ಮರಕ್ಕೆ ಅಕ್ಕಪಕ್ಕ ದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸವದತ್ತಿ ತಾಲೂಕಿನ ಸಿಂದೋಗಿ ಗ್ರಾಮದ ಪಂಚಪ್ಪ ಕಣವಿ (25 ವ) ಹಾಗೂ ಸಕ್ಕೂಬಾಯಿ ಕರಿಗಾರ (23 ವ) ಮೃತ ಪ್ರೇಮಿಗಳು. ಪಂಚಪ್ಪ ಹಾಗೂ ಸಕ್ಕೂಬಾಯಿ ಐದು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಪ್ರೇಮ ವಿವಾಹಕ್ಕೆ ಉಭಯ ಕುಟುಂಬಸ್ಥರು ಅವಕಾಶ ನೀಡದ್ದಕ್ಕೆ ನಾಲ್ಕು ವರ್ಷಗಳ ಹಿಂದೆ ಪಂಚಪ್ಪ …
Read More »39 ಮಕ್ಕಳಿಗೆ ಕೊರೋನಾ ಸೋಂಕು, ಆಸ್ಪತ್ರೆಗೆ ದಾಖಲು
ಹಾಸನ: ಕೊರೋನಾ 3ನೇ ಅಲೆ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂಬ ತಜ್ಞರ ಎಚ್ಚರಿಕೆ ಬೆನ್ನಲ್ಲೇ ಹಾಸನ ಜಿಲ್ಲೆಯಲ್ಲಿ 39 ಮಕ್ಕಳು ಕೊರೋನಾ ಸೋಂಕಿಗೊಳಗಾಗಿ ಆಸ್ಪತ್ರೆಗೆ ದಾಖಲಾಗಿರುವುದು ಆತಂಕವನ್ನು ಹೆಚ್ಚಾಗುವಂತೆ ಮಾಡಿದೆ. ಹಾಸನದಲ್ಲಿ ಕಳೆದ 7 ದಿನಗಳಿಂದ 15 ವರ್ಷದೊಳಗಿನ 39 ಮಕ್ಕಳು ಕೊರೋನಾ ಸೋಂಕಿಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. ಜಿಲ್ಲಾ ಸರ್ಜನ್ ಡಾ.ಕೃಷ್ಣಮೂರ್ತಿಯವರು ಮಾಹಿತಿ ನೀಡಿ, ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಹಿಮ್ಸ್) ಆಸ್ಪತ್ರೆಯಲ್ಲಿ 7 ಮಕ್ಕಳು …
Read More »ಲಸಿಕೆ ಪಡೆದವರ ಸಂಖ್ಯೆ ೨೨ ಕೋಟಿಗೂ ಅಧಿಕ
ನವದೆಹಲಿ, : ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯ ನಡುವೆ ಲಸಿಕೆ ವಿತರಣೆ ವೇಗ ಹೆಚ್ಚಿಸಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 22 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 138 ದಿನಗಳಲ್ಲಿ 22,08,62,449 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಬುಧವಾರ ರಾತ್ರಿ 7 ಗಂಟೆ ವೇಳೆಗೆ 22,45,112 ಮಂದಿಗೆ …
Read More »ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ದಕ್ಷಿಣದ ಇಬ್ಬರು ನಟಿಯರ ರಕ್ಷಣೆ, ಮೂವರ ಬಂಧನ
ಥಾಣೆ: ಮಹಾರಾಷ್ಟ್ರದ ಥಾಣೆಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆಯಿಂದ ದಕ್ಷಿಣ ಭಾರತದ ಇಬ್ಬರು ನಟಿಯರನ್ಬು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಸಂಬಂಧ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ನಗರದ ನೌಪಡ ಪ್ರದೇಶದ ಫ್ಲ್ಯಾಟ್‌ನ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ‘ಅಮೃತ್ ನಗರದ ಮಹಿಳೆಯೊಬ್ಬರು ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಬಗ್ಗೆ ಮಾಹಿತಿ ದೊರೆತಿದ್ದು, ಪೊಲೀಸರು ಗ್ರಾಹಕರ …
Read More »ಆರೋಪಿಗಳಿಗೆ ಜಾಮೀನು ನೀಡಬೇಡಿ ಎಂದು ಎಸ್‍ಐಟಿ
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬ್ಲ್ಯಾಕ್‍ಮೇಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳಿಗೆ ಜಾಮೀನು ನೀಡಬೇಡಿ ಎಂದು ಎಸ್‍ಐಟಿ ನ್ಯಾಯಾಲಯಕ್ಕೆ ಆಕ್ಷೇಪಣೆ ಸಲ್ಲಿಸಿದೆ.. ಆರೋಪಿಗಳು ಇದೂವರೆಗೂ ತನಿಖೆಗೆ ಸಹಕಾರ ನೀಡಿಲ್ಲ. ಸಿಡಿ ರಿಲೀಸ್ ಆದ ದಿನವೇ ತಲೆ ಮರೆಸಿಕೊಂಡಿದ್ದಾರೆ. ಎಷ್ಟು ಬಾರಿ ನೋಟಿಸ್ ಕೊಟ್ಟರೂ ವಿಚಾರಣೆಗೆ ಹಾಜರಾಗಿಲ್ಲ. ದೂರುದಾರರಿಗೆ ಬೆದರಿಕೆ ಹಾಕಿದ್ದಕ್ಕೆ ಸಾಕ್ಷ್ಯಗಳಿದ್ದು, ಹೊರರಾಜ್ಯದಲ್ಲಿ ಯುವತಿಯ ಜೊತೆಯಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳಿವೆ. ಸಾಕ್ಷ್ಯಗಳ ಪ್ರಕಾರ ಕೆಲವೊಂದು ವೀಡಿಯೋ ತುಣುಕುಗಳನ್ನು ದೂರುದಾರರಿಗೆ ನೀಡಿದ್ದಾರೆ . …
Read More »ಕೊರೊನಾ ಮಧ್ಯೆ ಶುರುವಾಯ್ತು ಜನರಿಗೆ ಚಿಕನ್ ಗುನ್ಯಾ ಕಾಟ
ಧಾರವಾಡ: ಕೊರೊನಾ ಮಧ್ಯೆ ಗ್ರಾಮವೊಂದಕ್ಕೆ ಕೊರೊನಾ ಮಧ್ಯದಲ್ಲಿ ಈಗ ಚಿಕನ್ ಗುನ್ಯಾ ಕಾಟ ಆರಂಭವಾಗಿದೆ. ಜಿಲ್ಲೆಯ ಲಕಮಾಪುರ ಎಂಬ 2 ಸಾವಿರ ಜನಸಂಖ್ಯೆ ಹೊಂದಿರುವ ಗ್ರಾಮದಲ್ಲಿ ಚಿಕನ್ ಗುನ್ಯಾ ಕಾಣಿಸಿಕೊಂಡಿದ್ದು. ಕಳೆದ ವಾರ ಗ್ರಾಮದಲ್ಲಿ ಕೈ ಕಾಲು ಬೇನೆ ಬಂದವರಿಗೆ ತಪಾಸಣೆ ಮಾಡಿಸಿದಾಗ, ಗ್ರಾಮದ ಒಬ್ಬರಲ್ಲಿ ಚಿಕನ್ ಗುನ್ಯಾ ಪತ್ತೆಯಾಗಿತ್ತು. ನಂತರ ಗ್ರಾಮದಲ್ಲಿ ಇದು ಹೆಚ್ಚಾಗಬಾರದೆಂದು ಆರೋಗ್ಯ ಇಲಾಖೆಯವರು ಲಾರ್ವಾ ಸರ್ವೇ ಕೂಡಾ ಮಾಡಿಸಿದ್ದರು. ಈಗ ಗ್ರಾಮದಲ್ಲಿ ಚಿಕನ್ ಗುನ್ಯಾ …
Read More »ತಂದೆ ತಾಯಿ ಕಳೆದುಕೊಂಡ ಮಕ್ಕಳ ಜೊತೆ ನಾವಿದ್ದೇವೆ: ಶಶಿಕಲಾ ಜೊಲ್ಲೆ
ಬೆಂಗಳೂರು: ಕೋವಿಡ್‍ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳ ದುಃಖದಲ್ಲಿ ಭಾಗಿಯಾಗಿ, ಅವರ ನೆರವಿಗೆ ನಿಲ್ಲುವುದು ನಮ್ಮ ಕರ್ತವ್ಯ. ಅಂತಹ ಮಕ್ಕಳೊಂದಿಗೆ ನಾವಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾಗಿರುವ ಶಶಿಕಲಾ ಜೊಲ್ಲೆಯವರು ತಿಳಿಸಿದ್ದಾರೆ. ಕೋವಿಡ್-19ನಿಂದಾಗಿ ಪೋಷಕರನ್ನು ಕಳೆದುಕೊಂಡ ಮಕ್ಕಳು ಹಾಗೂ ಅವರನ್ನು ಪಾಲನೆ ಮಾಡುತ್ತಿರುವ ಪಾಲಕರ ಜೊತೆಗೆ ಗೂಗಲ್ ಮೀಟ್ ಮೂಲಕ ವೀಡಿಯೊ ಸಂವಾದ ನಡೆಸಿ, ಅವರಿಗೆ ಸಾಂತ್ವನ ಹೇಳಿ, ಆತ್ಮಸ್ಥೈರ್ಯ ತುಂಬಿ, ಅವರ ಮನಸ್ಸಿನ ನೋವು, ಸಮಸ್ಯೆಗಳನ್ನು …
Read More »ಆನಂದಯ್ಯರ ಆಯುರ್ವೇದಿಕ್ ಔಷಧ ನೀಡಲು ಕೋರ್ಟ್ ಅಸ್ತು, ನಾಳೆಯಿಂದ ಕೊವಿಡ್‌ಗೆ ಔಷಧ ವಿತರಣೆ ಶುರು
ಆಂಧ್ರ ಪ್ರದೇಶ: ದೇಶದಲ್ಲಿ ಮಹಾಮಾರಿ ಕೊರೊನಾ ಜನರಲ್ಲಿ ತಲ್ಲಣ ಉಂಟು ಮಾಡಿದೆ. ಈಗಾಗಲೇ ಕೊರೊನಾಗೆ ವ್ಯಾಕ್ಸಿನ್ ಬಂದಿದ್ರೂ ದೇಶದ ಎಲ್ಲರಿಗೂ ಈಗಲೇ ತಲುಪಿಸಲು ಆಗ್ತಿಲ್ಲ. ಇದರ ನಡುವೆ ಅಲ್ಲಲ್ಲಿ ಕೆಲವರು ಆಯುರ್ವೇದಿಕ್ ಔಷಧಿಗಳನ್ನ ನೀಡ್ತಿದ್ದಾರೆ. ಕೊರೊನಾಗೆ ಆಯುರ್ವೇದಿಕ್ ಔಷಧ ನೀಡಿದ್ರೆ ಗುಣವಾಗುತ್ತೆ ಅಂತಾ ಹೇಳಿಕೊಂಡಿದ್ದಾರೆ. ಇಂತಹವರಲ್ಲಿ ಒಬ್ಬರು ಅಂದ್ರೆ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಕೃಷ್ಣಪಟ್ನಂ ನಿವಾಸಿ ಆನಂದಯ್ಯ ಕೂಡ ಒಬ್ಬರು. ಆನಂದಯ್ಯನವರ ಆಯುರ್ವೇದಿಕ್ ಔಷಧಿಯಿಂದ ಕೊರೊನಾ ಗುಣಮುಖವಾಗುತ್ತೆ ಅಂತಾ ಸಾವಿರಾರು …
Read More »