ಮುಂಬೈ: ದೇಶಾದ್ಯಂತ ಕೊರೊನಾ ತಾಂಡವಾಡುತ್ತಿದ್ದು, ಮಹಾರಾಷ್ಟ್ರದಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ಇನ್ನೂ ಭಯಾನಕ ವಿಚಾರ ಎಂಬಂತೆ ಹಳ್ಳಿಗಳಿಗೂ ಸಹ ಮಹಾಮಾರಿ ಆವರಿಸುತ್ತಿದೆ. ಹೀಗಾಗಿ ಹಳ್ಳಿಗಳಿಗೆ ಕೊರೊನಾ ಹರಡುವುದನ್ನು ತಡೆಯಲು ಮಹಾರಾಷ್ಟ್ರ ಸರ್ಕಾರ ಮಾಸ್ಟರ್ ಪ್ಲಾನ್ ಮಾಡಿದ್ದು, ‘ಕೊರೊನಾ ಮುಕ್ತ ಗ್ರಾಮ’ ಸ್ಪರ್ಧೆಯ ಪರಿಕಲ್ಪನೆಯನ್ನು ಜಾರಿಗೆ ತಂದಿದೆ. ಸ್ಥಳೀಯ ಆಡಳಿತವನ್ನು ಪ್ರೋತ್ಸಾಹಿಸುವುದು ಹಾಗೂ ಹಳ್ಳಿಗಳಿಗೆ ಕೊರೊನಾ ವ್ಯಾಪಿಸದಂತೆ ತಡೆಯುವುದು, ಈ ಮೂಲಕ ಕೊರೊನಾ ಮುಕ್ತ ರಾಜ್ಯವನ್ನಾಗಿಸುವುದು ಈ ಪರಿಕಲ್ಪನೆಯ ಉದ್ದೇಶವಾಗಿದೆ. ಹೀಗಾಗಿ …
Read More »Yearly Archives: 2021
ಕೋವಿಡ್ ಗೆ ದಂಪತಿ ಬಲಿ ಅನಾಥರಾಗಿರುವ ಎಂಟು ಜನ ಮಕ್ಕಳು
ಬಾಗಲಕೋಟೆ: ವಾರದ ಅಂತರದಲ್ಲಿ ಕೋವಿಡ್ ಗೆ ದಂಪತಿ ಬಲಿಯಾದ ಕಾರಣ, ಎಂಟು ಜನ ಮಕ್ಕಳು ಅನಾಥರಾಗಿರುವ ಹೃದಯವಿದ್ರಾವಕ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಿಗಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರಾಮಪ್ಪ ಹೂಗಾರ, ದುಂಡವ್ವ ಹೂಗಾರ ಅವರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಕಳೆದ ಶನಿವಾರ ಮೇ 29 ರಂದು ದುಂಡವ್ವ ಹೂಗಾರ ಮೃತರಾದರೆ, ಬಳಿಕ ಪತಿ ದುಂಡಪ್ಪ ಸಾವನ್ನಪ್ಪಿದ್ದಾರೆ. ಕಾರಣ ಎಂಟು ಜನ ಮಕ್ಕಳು ಅನಾಥರಾಗಿದ್ದಾರೆ. ದಂಪತಿಗೆ ಏಳು ಜನ ಹೆಣ್ಣು ಮಕ್ಕಳು, …
Read More »ಡೆಂಗ್ಯೂ ಪೀಡಿತ ಆರು ವರ್ಷದ ಬಾಲಕ ಸಾವು: ವೈದ್ಯರ ಮೇಲೆ ಹಲ್ಲೆ ನಡೆಸಿದ್ದ ಕುಟುಂಬಸ್ಥರು
ಚಿಕ್ಕಮಗಲೂರು: ಡೆಂಗ್ಯೂ ಪೀಡಿತ ಆರು ವರ್ಷದ ಬಾಲಕನ ಸಾವಿನ ಪ್ರಕರಣದಲ್ಲಿ ವೈದ್ಯರನ್ನು ಕೊಲೆ ಯತ್ನದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಡಾ.ದೀಪಕ್ (50) ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲೆಯ ತಾರಿಕೆರೆ ಪಟ್ಟಣದಲ್ಲಿ ಸೋಮವಾರ ಡೆಂಗ್ಯೂ ಪೀಡಿತ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಹದಗೆಟ್ಟಾಗ ಅವರನ್ನು ಶಿವಮೊಗ್ಗ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು. ಸಾವಿನ …
Read More »ಅಕ್ಷಯ ಪಾತ್ರೆ ಪ್ರತಿಷ್ಠಾನದಿಂದ ಪ್ರತಿನಿತ್ಯ 95 ಸಾವಿರ ಜನಕ್ಕೆ ಉಚಿತ ಊಟ
ಬೆಂಗಳೂರು: ಕೊರೊನಾ ಲಾಕ್‍ಡೌನ್ ಹಿನ್ನೆಲೆ ದೇಶಾದ್ಯಂತ ಅನೇಕ ಜನ ಆಹಾರದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಬೆಂಗಳೂರಿನ ಅಕ್ಷಯ ಪಾತ್ರೆ ಪ್ರತಿಷ್ಠಾನವು ಅನೇಕ ಜನರ ಹಸಿದ ಹೊಟ್ಟೆಗಳನ್ನು ತುಂಬಿಸುತ್ತಿದೆ. ಅದರಲ್ಲೂ ನಗರದ ಕೂಲಿ ಕಾರ್ಮಿಕರು, ಸ್ಮಶಾನದ ಸಿಬ್ಬಂದಿ, ಪೋಲಿಸರು, ಆರೋಗ್ಯ ಸಿಬ್ಬಂದಿಗಳಿಗೆ ಫುಡ್ ಪ್ಯಾಕೆಟ್ ಗಳ ವಿತರಣೆ ಮಾಡುತ್ತಿದೆ. ಬೆಂಗಳೂರಿನ ವಿವಿಧ ಭಾಗಗಳಲ್ಲಿ ಪ್ರತಿನಿತ್ಯ 95,000 ಜನರಿಗೆ ಫುಡ್ ಪ್ಯಾಕೆಟ್ ಗಳನ್ನು ವಿತರಣೆ ಮಾಡುತ್ತಿದೆ. ಅದರಲ್ಲಿ 1,450 ಸ್ಮಶಾನ ಸಿಬ್ಬಂದಿಗಳಿಗೆ ನಿತ್ಯ …
Read More »“ಉಚಿತ ಲಸಿಕೆ ಕೊಡಿ, ಇಲ್ಲವೇ ಅಧಿಕಾರ ಬಿಡಿ” ಒಂದೇ ಸಮಯಕ್ಕೆ ನಾಡಿನಾದ್ಯಂತ ಒಂದು ಸಾವಿರಕ್ಕೂ ಹೆಚ್ಚು ಪ್ರತಿಭಟನೆ
ಬೆಳಗಾವಿ: ಕರ್ನಾಟಕದ ಚರಿತ್ರೆಯಲ್ಲೇ ಮೊದಲ ಬಾರಿ ಜೂನ್ 10ರಂದು ಗುರುವಾರ ಬೆಳಿಗ್ಗೆ 9 ಗಂಟೆ 10 ನಿಮಿಷಕ್ಕೆ ಸರಿಯಾಗಿ ಒಂದೇ ದಿನ, ಒಂದೇ ಸಮಯಕ್ಕೆ ನಾಡಿನಾದ್ಯಂತ ಒಂದು ಸಾವಿರಕ್ಕೂ ಹೆಚ್ಚು ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗಿದ್ದು, “ಉಚಿತ ಲಸಿಕೆ ಕೊಡಿ, ಇಲ್ಲವೇ ಅಧಿಕಾರ ಬಿಡಿ” ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಕರ್ನಾಟಕ ರಕ್ಷಣ ವೇದಿಕೆ ತಿಳಿಸಿದೆ. ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಪದಾಧಿಕಾರಿಗಳು ಮತ್ತು ಜಿಲ್ಲಾಧ್ಯಕ್ಷರ …
Read More »ರಾಯಭಾಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ 70 ಜನರು ಸಾವನ್ನಪ್ಪಿದ್ದು, ಸರಣಿ ಸಾವಿನಿಂದ ಗ್ರಾಮಸ್ಥರು ಕಂಗಾಲ
ಬೆಳಗಾವಿ: ಹಳ್ಳಿ ಹಳ್ಳಿಗಳಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದೆ. ಈ ನಡುವೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ 70 ಜನರು ಸಾವನ್ನಪ್ಪಿದ್ದು, ಸರಣಿ ಸಾವಿನಿಂದ ಗ್ರಾಮಸ್ಥರು ಕಂಗಾಲಾಗಿದ್ದಾರೆ. ಚಿಂಚಲಿ ಗ್ರಾಮದಲ್ಲಿ ಕಳೆದ 20 ದಿನಗಳಲ್ಲಿ 70 ಜನರು ಸಾವನ್ನಪ್ಪಿದ್ದು, ಅವರಲ್ಲಿ 22 ಜನರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಅಧಿಕೃತವಾಗಿ ದಾಖಲಾಗಿದೆ. ಇತರರು ಬೇರೆ ಬೇರೆ ಕಾರಣಗಳಿಂದ ಸಾವಿಗೀಡಾಗಿದ್ದಾರೆ.
Read More »ಸಿನಿಮೀಯ ರೀತಿ ಚಿರತೆಯಿಂದ ಪ್ರಾಣ ಉಳಿಸಿಕೊಂಡ ಮಹಿಳೆ.. ಆಕೆ ಹೋರಾಡಿದ್ದೇ ರೋಚಕ
ಚಿತ್ರದುರ್ಗ: ಮನೆಯಲ್ಲಿ ಮಲಗಿದ್ದ ಮಹಿಳೆಯ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ಚಿತ್ರದುರ್ಗದ ಹಿರಿಯೂರು ತಾಲೂಕಿನ ಕುರುಬರಹಳ್ಳಿ ಗ್ರಾಮದಲ್ಲಿ ನಡೆದಿದೆ. ಇಂಟರೆಸ್ಟಿಂಗ್ ವಿಚಾರ ಏನಂದ್ರೆ ಆ ಮಹಿಳೆ ಚಿರತೆಯೊಂದಿಗೆ ಕಾದಾಡಿ ಪ್ರಾಣ ರಕ್ಷಿಸಿಕೊಂಡಿದ್ದಾರೆ. ಈ ರೋಚಕ ಘಟನೆ ಬಗ್ಗೆ ಗೊತ್ತಾದ ಬಳಿಕ ಗ್ರಾಮದ ಜನರು ಮಹಿಳೆಯ ಚಾಣಾಕ್ಷತನ ಮತ್ತು ಸಮಯಪ್ರಜ್ಞೆಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಆಗಿದ್ದೇನು? ಲಕ್ಷ್ಮೀಬಾಯಿ(45) ಚಿರತೆಯೊಂದಿಗೆ ಕಾದಾಡಿ ಗಾಯಗೊಂಡ ಮಹಿಳೆ. ನಿನ್ನೆ ಬೆಳಗಿನ ಜಾವ ನಡೆದಿರುವ ಘಟನೆ ಇಂದು …
Read More »ರಾಜ್ಯದಲ್ಲೂ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ ರದ್ದು ಮಾಡಿ: ಡಿಕೆಶಿ
ಬೆಂಗಳೂರು: ‘ಕೇಂದ್ರ ಸರ್ಕಾರ ನಿರ್ಧರಿಸಿದಂತೆಯೇ ರಾಜ್ಯ ಸರ್ಕಾರ ಕೂಡಾ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಾರ್ಷಿಷಕ ಪರೀಕ್ಷೆಗಳನ್ನು ರದ್ದು ಮಾಡಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರಿಗೆ ಟ್ವೀಟ್ ಮಾಡಿರುವ ಅವರು, ‘ಕೆಲವೊಮ್ಮೆ ಅನಿವಾರ್ಯ ಸಂದರ್ಭಗಳಲ್ಲಿ ವಿನಾಯಿತಿ ನೀಡಲೇಬೇಕಾಗುತ್ತದೆ’ ಎಂದಿದ್ದಾರೆ. ’12ನೇ ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ’ ಎಂದು ಅವರು ಹೇಳಿದ್ದಾರೆ.
Read More »ಜಿಲ್ಲೆಯ ಎಲ್ಲಾ ಶಾಸಕರು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಆಕ್ಸಿಜನ್ ಕಿಟ್ ನೀಡಿದರೆ ರೋಗಿಗಳಿಗೆ, ವೈದ್ಯರಿಗೆ ಅನುಕೂಲ: ಸತೀಶ ಜಾರಕಿಹೊಳಿ
ಗೋಕಾಕ: ಯಮಕನಮರಡಿ ಕ್ಷೇತ್ರದ 12 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆಕ್ಸಿಜನ್ ಕಿಟ್ ವಿತರಿಸಿ, ಕೊರೋನಾ ಜಾಗೃತಿ ಮೂಡಿಸಿದರು. ಈ ವೇಳೆ ಮಾತನಾಡಿದ ಅವರು, ಸರ್ಕಾರ ಕೋವಿಡ್ ನಿಯಂತ್ರಿಸುವ ಉದ್ದೇಶದಿಂದ 25% ರಷ್ಟು ಅನುದಾನ ಮೀಸಲಿಟ್ಟಿದೆ. ಜನರ ತುರ್ತು ಸೇವೆಗಾಗಿ 12 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಕ್ಸಿಜನ್ ನೀಡಲಾಗುತ್ತಿದೆ. ಎರಡ್ಮೂರು ದಿನಗಳಲ್ಲಿ ಜನತೆ ಸೇವೆಗಾಗಿ ಆಕ್ಸಿಜನ್ ವ್ಯವಸ್ಥೆ ಕಲ್ಪಿಸಲಾಗಿದೆ. ಇದರಿಂದ ಸಾವಿರಾರೂ ರೋಗಿಗಳಿಗೆ ಅನುಕೂಲವಾಗಲಿದೆ. ಇಲ್ಲಿನ …
Read More »ಸಂಬಳ ಕೊಡದ್ದಕ್ಕೆ ಪೊಲೀಸರ ವೇಷದಲ್ಲಿ ಮಾಲೀಕನನ್ನೇ ದೋಚಿದರು!
ಸಂಬಳ ಕೊಡದೇ ಸತಾಯಿಸುತ್ತಿದ್ದ ಮಾಲೀಕನನ್ನು ಕೆಲಸಗಾರರು ಪೊಲೀಸರ ಮಾರುವೇಷದಲ್ಲಿ ದರೋಡೆ ಬೆಂಗಳೂರಿನ ಕೆಂಗೇರಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಶರತ್ ಶೆಟ್ಟಿ, ಪೂರ್ವಿಕ್ ರಾಜ್, ಮೋಹನ್ ಕುಮಾರ್, ತಪಸ್ ರಾಯ್ ಬಂಧಿತರು. ಕೊಮ್ಮಘಟ್ಟ ಬಳಿ ಪೊಲೀಸರ ಮಾರುವೇಷದಲ್ಲಿ ಮಾಲೀಕನನ್ನು ದೋಚಲು ಸಂಚು ರೂಪಿಸಿದ ಕೆಲಸಗಾರರು, ರಸ್ತೆ ಮಧ್ಯದಲ್ಲಿ ಅಡ್ಡಗಟ್ಟಿ, ನಾವು ಪೊಲೀಸರು ಲಾಕ್ ಡೌನಲ್ಲಿ ಯಾಕೆ ಓಡಾಡ್ತಿರಿ ಎಂದು ಆವಾಜ್ ಹಾಕಿದ್ದಾರೆ. ವಾಹನ ತಪಾಸಣೆ ಮಾಡುವವರ ರೀತಿ ಬಂದು ಬೈಕ್ ಹಾಗೂ …
Read More »