Breaking News

Yearly Archives: 2021

ಟೊಮ್ಯಾಟೋ ಟ್ರೇನಲ್ಲಿ ತಮಿಳುನಾಡಿಗೆ ಅಕ್ರಮ ಮದ್ಯ ಸಾಗಾಟ- ಕೇರಳದ ಆರೋಪಿ ಅರೆಸ್ಟ್

ಚಾಮರಾಜನಗರ: ಟೊಮ್ಯಾಟೋ ಟ್ರೇಯಲ್ಲಿ ಅಕ್ರಮ ಮದ್ಯ ಸಾಗಿಸುತ್ತಿದ್ದ ಆರೋಪಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಜಿಲ್ಲೆಯ ಗುಂಡ್ಲುಪೇಟೆ ನಗರದಲ್ಲಿ ಆರೋಪಿ ಸಿಕ್ಕಿಬಿದ್ದಿದ್ದು, ಕೇರಳ ಮೂಲದ ಗಫೂರ್(37) ಬಂಧಿತ ಆರೋಪಿ. ತಮಿಳುನಾಡಿನಲ್ಲಿ ಕಠಿಣ ಲಾಕ್‍ಡೌನ್ ಜಾರಿಯಲ್ಲಿದ್ದು, ಮದ್ಯ ಮಾರಾಟಕ್ಕೆ ನಿರ್ಬಂಧ ಹೇರಲಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಅಕ್ರಮವಾಗಿ ತಮಿಳುನಾಡಿಗೆ ಮದ್ಯ ಸಾಗಣೆ ಮಾಡುತ್ತಿದ್ದ. ಅಲ್ಲದೆ ಯಾರಿಗೂ ತಿಳಿಯದಂತೆ ಟೊಮ್ಯಾಟೋ ಟ್ರೇಗಳ ಜೊತೆ ಮದ್ಯದ ಬಾಟಲಿ ಇಟ್ಟು ಸಾಗಿಸುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಖಚಿತ …

Read More »

ಜನರು ಹೋಗ ಹೋಗುತ್ತಲೇ ಬಿದ್ದು ಸಾಯುವ ಕಾಯಿಲೆಯೊಂದು ಬರಲಿದೆ: ಕೋಡಿಶ್ರೀ ಭವಿಷ್ಯ

ಹಾಸನ: ಜನರು ಹೋಗ ಹೋಗುತ್ತಲೇ ಬಿದ್ದು ಸಾಯುವ ಕಾಯಿಲೆಯೊಂದು ಬರಲಿದೆ ಎಂಬ ಭವಿಷ್ಯವೊಂದನ್ನು ಹಾಸನ ಜಿಲ್ಲೆಯ ಕೋಡಿಮಠದ ಶ್ರೀಗಳು ನುಡಿದಿದ್ದಾರೆ. ಹಾಸನದ ಅರಸೀಕೆರೆಯ ಕೋಡಿಮಠದಲ್ಲಿ ಮಾತನಾಡಿದ ಶ್ರೀಗಳು, ಕೊರೊನಾದಂತಹ ಮಾರಣಾಂತಿಕ ಕಾಯಿಲೆ ದೂರವಾಗಲು ಸುಮಾರು 10 ವರ್ಷಗಳೇ ಬೇಕು. ಭೂಮಿಯಲ್ಲಿ ಈಗಾಗಲೇ ಕೋಟ್ಯಂತರ ಜನರ ಶವವನ್ನು ಹೂತಿದ್ದಾರೆ. ಅದೇ ವಿಷವಾಗಿ ಭೂಮಿಯಿಂದ ಹೊರಬರಲಿದೆ. ಜನರು ಹೋಗ ಹೋಗುತ್ತಲೇ ಬಿದ್ದು ಸಾಯುವ ಕಾಯಿಲೆಯೊಂದು ಮುಂದೆ ಬರಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಇದನ್ನೂ …

Read More »

ಡಿಕೆಶಿ ಕಾರ್ಯಕ್ರಮದಲ್ಲಿ ನಿಯಮ ಉಲ್ಲಂಘನೆ – 10 ಸಾವಿರ ರೂಪಾಯಿ ದಂಡ..!

ಹುಬ್ಬಳ್ಳಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹುಬ್ಬಳ್ಳಿಗೆ ಆಗಮಿಸಿದ ವೇಳೆ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ ಪರಿಣಾಮ 10 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಸಭೆಯಲ್ಲಿ ಸಾಮಾಜಿಕ ಅಂತರ ಪಾಲನೆ ಮಾಡದೇ ಇರುವುದು. ಸರಿಯಾಗಿ ಮಾಸ್ಕ್ ಧರಿಸದೇ ಇರುವುದರಿಂದ ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಮಹಾನಗರ ಜಿಲ್ಲಾ ಕಾಂಗ್ರೆಸ್ ಘಟಕಕ್ಕೆ 10 ಸಾವಿರ ರೂಪಾಯಿ ದಂಡ ವಿಧಿಸಿದೆ. ಮೇ 31 ರಂದು ಸಂಜೆ ಹುಬ್ಬಳ್ಳಿಗೆ ಭೇಟಿ ನೀಡಿದ್ದ …

Read More »

ಸುರೇಶ ಅಂಗಡಿ ಜನ್ಮದಿನದ ನಿಮಿತ್ತ ಅವರ ಪತ್ನಿ, ಸಂಸದ ಮಂಗಲಾ ಅಂಗಡಿ ಬೆಳಗಾವಿಯ ವಿಶ್ವಹಿಂದೂ ಪರಿಷತ್ ಕೋವಿಡ್ ಸೆಂಟರ್ ಗೆ ತೆರಳಿ ಆರ್ಥಿಕ ನೆರವು

ಬೆಳಗಾವಿ – ಕೇಂದ್ರದ ಮಾಜಿ ಸಚಿವ ಸುರೇಶ ಅಂಗಡಿ ಜನ್ಮದಿನದ ನಿಮಿತ್ತ ಅವರ ಪತ್ನಿ, ಸಂಸದೇ ಮಂಗಲಾ ಅಂಗಡಿ ಬೆಳಗಾವಿಯ ವಿಶ್ವಹಿಂದೂ ಪರಿಷತ್ ನಡೆಸುತ್ತಿರುವ ಕೋವಿಡ್ ಸೆಂಟರ್ ಗೆ ತೆರಳಿ ಆರ್ಥಿಕ ನೆರವು ನೀಡಿದರು. ನಿಯತಿ ಫೌಂಡೇಶನ್ ಚೇರಮನ್ ಡಾ.ಸೋನಾಲಿ ಸರ್ನೋಬತ್ ಜೊತೆ ತೆರಳಿದ ಮಂಗಲಾ ಅಂಗಡಿ ವಿಶ್ವಹಿಂದೂ ಪರಿಷತ್ ಉತ್ತರ ಕರ್ನಾಟಕ ಸಹಕೋಶಾಧ್ಯಕ್ಷ ಕೃಷ್ಣ ಭಟ್ ಅವರಿಗೆ ತಮ್ಮ ಕಾಣಿಕೆಯನ್ನು ಹಸ್ತಾಂತರಿಸಿದರು. ವಿಜಯ ಜಾಧವ ಹಾಗೂ ವಿಶ್ವಹಿಂದೂ ಪರಿಷತ್ತಿನ …

Read More »

ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ವೃದ್ಧಾಶ್ರಮ 23 ಹಿರಿಯ ನಾಗರಿಕರಲ್ಲಿ ಕೊರೊನಾ ಸೋಂಕು ದೃಢ

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ಇದೀಗ ಎರಡು ವೃದ್ಧಾಶ್ರಮ 23 ಹಿರಿಯ ನಾಗರಿಕರಲ್ಲಿ ಕೊರೊನಾ ಸೋಂಕು ದೃಢಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ. ದೇವರಾಜ್ ಅರಸ್ ಕಾಲನಿಯ 14 ಜನರು ಹಾಗೂ ಬಾಮನವಾಡಿ ವೃದ್ಧಾಶ್ರಮದ 9 ಜನರಿಗೆ ಕೊರೊನಾ ಸೋಂಕು ಹರಡಿದೆ. ಮೂವರು ಸೋಮ್ಕಿತರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದವರನ್ನು ವೃದ್ಧಾಶ್ರಮದಲ್ಲೇ ಪ್ರತ್ಯೇಕ ಐಸೋಲೇಷನ್ ಮಾಡಲಾಗಿದೆ. ಸೋಂಕಿತರ ಪೈಕಿ ಬಹುತೇಕರಿಗೆ ಕೋವಿಡ್ ಲಕ್ಷಣಗಳೇ ಇಲ್ಲ ಆದರೂ ಕೋವಿಡ್ …

Read More »

ದೇಶದಲ್ಲಿ ಒಂದೇ ದಿನ 2,31,456 ಕೊರೊನಾ ಸೋಂಕಿತರು ಗುಣಮುಖ!

ನವದೆಹಲಿ, : ಭಾರತದ ಮಟ್ಟಿಗೆ ಮೇ ತಿಂಗಳಿನಲ್ಲಿ ಅಟ್ಟಹಾಸ ತೋರಿದ ಕೊರೊನಾವೈರಸ್ ಪ್ರಭಾವ ಜೂನ್ ಆರಂಭದಲ್ಲಿ ತಗ್ಗಿದೆ. ದಿನದಿಂದ ದಿನಕ್ಕೆ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಹೊಸ ಪ್ರಕರಣಕ್ಕಿಂತ ಗುಣಮುಖರ ಸಂಖ್ಯೆ ಪ್ರತಿನಿತ್ಯ ಏರಿಕೆಯಾಗುತ್ತಿದೆ. ದೇಶದಲ್ಲಿ ಒಂದೇ ದಿನ 1,32,788 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 2,31,456 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದೇ ದಿನ ಕೊರೊನಾವೈರಸ್ ಮಹಾಮಾರಿಗೆ 3,207 …

Read More »

ಮಾವಾ ತಯಾರಿಕೆ ಅಡ್ಡೆ ಮೇಲೆ ದಾಳಿ : ಮೂವರ ಬಂಧನ, 2.50 ಲಕ್ಷ ರೂ. ಮೌಲ್ಯದ ಸೊತ್ತು ವಶ

ವಿಜಯಪುರ : ರಾಜ್ಯದಲ್ಲಿ ನಿಷೇಧಿತವಾಗಿರುವ ತಂಬಾಕು ಉತ್ಪನ್ನವಾದ ಮಾವಾ ತಯಾರಿಕೆಯ ಅಡ್ಡೆಗಳ ಮೇಲೆ ದಾಳಿ ನಡೆಸಿರುವ ಪೊಲೀಸರು, ಮೂವರನ್ನು ಬಂಧಿಸಿ, 2.50 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ವಿಜಯಪುರ ಗ್ರಾಮೀಣ ಸಿಪಿಐ ಎಸ್.ಬಿ.ಪಾಲಭಾವಿ ಅವರು ತಿಕೋಟ ಪಟ್ಟಣದಲ್ಲಿ ಅಲ್ಲಿನ ಎಸೈ ಎಸ್.ಕೆ.ಲಂಗೋಟೆ ಅವರೊಂದಿಗೆ ಪೆಟ್ರೋಲಿಂಗ್‍ನಲ್ಲಿ ತೊಡಗಿದ್ದಾಗ ಅಕ್ರಮವಾಗಿ ಗುಟ್ಕಾ ತಯಾರಿಸುವ ಮಾಹಿತಿ ಲಭ್ಯವಾಗಿದೆ. ಖಚಿತ ಮಾಹಿತಿ ಆಧರಿಸಿ ಬಡಕಲ್ ಓಣಿ ಹಾಗೂ ಗೌಡರ ಓಣಿಗಳಲ್ಲಿ ಸ್ಥಳೀಯ ಠಾಣೆ …

Read More »

ಬೆಂಗಳೂರಲ್ಲಿ ಬಾಂಗ್ಲಾ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಆರೋಪಿ ಮೇಲೆ ಫೈರಿಂಗ್

ಬೆಂಗಳೂರಿನಲ್ಲಿ ಅತ್ಯಾಚಾರ ಆರೋಪಿ ಮೇಲೆ ಫೈರಿಂಗ್ ಮಾಡಲಾಗಿದೆ. ಆರೋಪಿ ಶೂಬೂಜ್ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆಯಲಾಗಿದೆ. ಬಾಂಗ್ಲಾ ಯುವತಿ ಮೇಲೆ ಗ್ಯಾಂಗ್ ರೇಪ್ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶೂಬೂಜ್ ಬಂಧನಕ್ಕೆ ತೆರಳಿದ್ದ ವೇಳೆಯಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ಶರಣಾಗಲು ಸೂಚನೆ ನೀಡಿದರೂ ಆರೋಪಿ ಪರಾರಿಯಾಗಲು ಯತ್ನಿಸಿದಾಗ ಫೈರಿಂಗ್ ಮಾಡಲಾಗಿದೆ. ಪಿಎಸ್‌ಐ ಶಿವರಾಜ್ ಮತ್ತು ದೇವೇಂದ್ರ ನಾಯಕ್ ಗಾಯಗೊಂಡಿದ್ದಾರೆ. …

Read More »

ಲಾಕ್‌ಡೌನ್‌ ಪರಿಣಾಮ: ಹೊಲದಲ್ಲೇ ಉಳಿದ ಹಣ್ಣು, ತರಕಾರಿ

ಹುಬ್ಬಳ್ಳಿ: ಲಾಕ್‌ಡೌನ್ ಪರಿಣಾಮ ಕೃಷಿ ಉತ್ಪನ್ನಗಳ ಮಾರಾಟದ ಮೇಲೂ ಆಗಿದೆ. ಮಾರುಕಟ್ಟೆ ಕೊರತೆ, ಬೇಡಿಕೆ ಕುಸಿತದ ಕಾರಣ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕೆಲವರು ಬೆಳೆಗಳನ್ನು ಹೊಲದಲ್ಲಿಯೇ ಬಿಟ್ಟಿದ್ದರೆ, ಇನ್ನು ಹಲವರು ನಾಶ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನಲ್ಲಿ ತೆಲಸಂಗ ಭಾಗದಲ್ಲಿ ರೈತರು ಕಲ್ಲಂಗಡಿ ಹಣ್ಣುಗಳನ್ನು ಗಿಡದಲ್ಲೇ‌ ಬಿಟ್ಟಿದ್ದರು. ಕಣಬರ್ಗಿಯಲ್ಲಿ ರೈತರೊಬ್ಬರು ಕೊತ್ತಂಬರಿ ಸೊಪ್ಪು, ಖಾನಾಪುರ ತಾಲ್ಲೂಕಿನ ಪಾರಿಶ್ವಾಡದ ಹೂಕೋಸು, ಮೂಡಲಗಿ ತಾಲ್ಲೂಕಿನ ಹಳ್ಳೂರದಲ್ಲಿ ಮೆಣಸಿನಕಾಯಿ ಬೆಳೆಯನ್ನು ಹಾಗೇ …

Read More »

ಮಾವಾ ತಯಾರಿಕೆ ಅಡ್ಡೆ ಮೇಲೆ ದಾಳಿ : ಮೂವರ ಬಂಧನ, 2.50 ಲಕ್ಷ ರೂ. ಮೌಲ್ಯದ ಸೊತ್ತು ವಶ

ವಿಜಯಪುರ : ರಾಜ್ಯದಲ್ಲಿ ನಿಷೇಧಿತವಾಗಿರುವ ತಂಬಾಕು ಉತ್ಪನ್ನವಾದ ಮಾವಾ ತಯಾರಿಕೆಯ ಅಡ್ಡೆಗಳ ಮೇಲೆ ದಾಳಿ ನಡೆಸಿರುವ ಪೊಲೀಸರು, ಮೂವರನ್ನು ಬಂಧಿಸಿ, 2.50 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ವಿಜಯಪುರ ಗ್ರಾಮೀಣ ಸಿಪಿಐ ಎಸ್.ಬಿ.ಪಾಲಭಾವಿ ಅವರು ತಿಕೋಟ ಪಟ್ಟಣದಲ್ಲಿ ಅಲ್ಲಿನ ಎಸೈ ಎಸ್.ಕೆ.ಲಂಗೋಟೆ ಅವರೊಂದಿಗೆ ಪೆಟ್ರೋಲಿಂಗ್‍ನಲ್ಲಿ ತೊಡಗಿದ್ದಾಗ ಅಕ್ರಮವಾಗಿ ಗುಟ್ಕಾ ತಯಾರಿಸುವ ಮಾಹಿತಿ ಲಭ್ಯವಾಗಿದೆ. ಖಚಿತ ಮಾಹಿತಿ ಆಧರಿಸಿ ಬಡಕಲ್ ಓಣಿ ಹಾಗೂ ಗೌಡರ ಓಣಿಗಳಲ್ಲಿ ಸ್ಥಳೀಯ ಠಾಣೆ …

Read More »