ಬೆಂಗಳೂರು, ಸುದ್ದಿಒನ್, ಜೂ.01: ಸಮಾಜವಾದಿ ಸಿದ್ಧಾಂತವನ್ನು ತನ್ನ ಬದುಕಿನಲ್ಲಿ ಅಳವಡಿಸಿಕೊಂಡು ವಿಭಿನ್ನ, ನೇರ ನಿಷ್ಠೂರತೆ ಕಾರಣಕ್ಕೆ ರಾಜ್ಯ ರಾಜಕಾರಣದಲ್ಲಿ ವರ್ಣರಂಜಿತವಾಗಿದ್ದ ಜೆ.ಹೆಚ್.ಪಟೇಲರು ನಾಡು ಕಂಡ ಅಪರೂಪದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆ ಪಡೆದುಕೊಂಡಿದ್ದರು. ಹೆಚ್.ಡಿ.ದೇವೇಗೌಡರು, ರಾಮಕೃಷ್ಣಹೆಗಡೆ ಅವರೊಂದಿಗೆ ಅತ್ಯಂತ ಸಲಿಗೆಯಿಂದ ಮಾತನಾಡುವ ಶಕ್ತಿ, ವ್ಯಕ್ತಿತ್ವ ಹೊಂದಿದ್ದರು. ಜೊತೆಗೆ ಹಾಸ್ಯಭರಿತ, ನೇರ, ನಿಷ್ಠೂರತೆ ಮಾತು ಹೆಚ್ಚು ಆತ್ಮೀಯರನ್ನಾಗಿಸುತ್ತಿತ್ತು. ಆದರೆ ನಾಡಿನ ಮುಖ್ಯಮಂತ್ರಿ ಸ್ಥಾನ ಅಲಂಕರಿಸಬೇಕಾದರೆ ಕೆಲ ಅರ್ಹತೆಗಳು ಅನಿವಾರ್ಯವಾಗಿ ಇರಲೇಬೇಕು. ಜೊತೆಗೆ ಕೆಲ …
Read More »Yearly Archives: 2021
ಒಳ ಉಡುಪು ಹರಿದಿದೆ, ಬಟ್ಟೆ ಅಂಗಡಿ ಬಾಗಿಲು ತೆಗೆಸಿ ಸ್ವಾಮಿ’ : ಸಿಎಂ ‘BSY’ ಬಳಿ ವಿಚಿತ್ರ ಬೇಡಿಕೆಯಿಟ್ಟ ವ್ಯಕ್ತಿ.!
ಮೈಸೂರು : ರಾಜ್ಯದಲ್ಲಿ ಕೊರೊನಾ ಸ್ಪೋಟವಾದ ಹಿನ್ನೆಲೆ ಜೂನ್ 7 ರವರೆಗೆ ಲಾಕ್ ಡೌನ್ ಜಾರಿಯಲ್ಲಿದೆ. ಲಾಕ್ ಡೌನ್ ಹಿನ್ನೆಲೆ ಬಟ್ಟೆ ಅಂಗಡಿ ಸೇರಿದಂತೆ ಎಲ್ಲವೂ ಬಂದ್ ಆಗಿದೆ. ಕೊರೊನಾ ಲಾಕ್‌ಡೌನ್ ಸಂದರ್ಭ ಅಗತ್ಯ ವಸ್ತು ಹೊರತುಪಡಿಸಿ ಬೇರೆ ಯಾವುದೇ ಅಂಗಡಿಗಳು ತೆರೆಯಲು ಅವಕಾಶವಿಲ್ಲ. ಈ ಹಿನ್ನೆಲೆ ಮೈಸೂರಿನಲ್ಲಿ ವ್ಯಕ್ತಿಯೋರ್ವ ನನ್ನ ಬಳಿ ಇರುವ ಎರಡು ಒಳಉಡುಪು ಹರಿದು ಹೋಗಿದೆ, ದಯವಿಟ್ಟು ಬಟ್ಟೆ ಅಂಗಡಿ ತೆರೆಸಿ ಎಂದು ಮುಖ್ಯಮಂತ್ರಿ ಬಿ …
Read More »ಯೋಗೀಶ್ವರ್ ಗೆ ಇಂಧನ ಖಾತೆ ಸಹಿತ ಡಿಸಿಎಂ ಹುದ್ದೆ ನೀಡಿದರೂ ಅಚ್ಚರಿ ಪಡಬೇಕಿಲ್ಲ: ಯತ್ನಾಳ
ವಿಜಯಪುರ : ಸಚಿವ ಸ್ಥಾನದಿಂದ ಸಿ.ಪಿ.ಯೋಗೇಶ್ವರ ಅವರನ್ನು ವಜಾ ಮಾಡುವುದು ಅಸಾಧ್ಯ. ವಿಶಿಷ್ಟ ಕೋಟಾದಲ್ಲಿ ಮಂತ್ರಿಯಾಗಿರುವ ಅವರಿಗೆ ವಜಾ ಬದಲಾಗಿ ಅವರ ನಿರೀಕ್ಷೆಯ ಇಂಧನ ಖಾತೆ ಸಹಿತ ಉಪ ಮುಖ್ಯಮಂತ್ರಿ ಹುದ್ದೇ ನೀಡಿದರೂ ಅಚ್ಚರಿ ಪಡಬೇಕಿಲ್ಲ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪ್ರತಿಕ್ರಿಯಿಸಿದ್ದಾರೆ. ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೆಯ ವಿಡಿಯೋ ಹಾಕಿರುವ ಯತ್ನಾಳ, ಸಿ.ಪಿ.ಯೋಗೇಶ್ವರ ಅವರ ವಿರುದ್ಧ ಕ್ರಮ ಕೈಗೊಳ್ಳುವ …
Read More »ಕೊವಿಡ್ನಿಂದ ಬೇಗ ಗುಣಮುಖರಾಗೋದು ಹೇಗೆ?; ತಾವು ಉಪಯೋಗಿಸಿದ ತಂತ್ರ ಹೇಳಿದ ಅಭಿಷೇಕ್ ಬಚ್ಚನ್
ಅಭಿಷೇಕ್ ಬಚ್ಚನ್ ಅವರಿಗೆ ಕಳೆದ ವರ್ಷ ಕೊರೊನಾ ಕಾಣಿಸಿಕೊಂಡಿತ್ತು. 29 ದಿನಗಳ ಕಾಲ ಕೊವಿಡ್ನಿಂದ ಬಳಲಿದ್ದ ಅವರು, ನಂತರ ಚೇತರಿಕೆ ಕಂಡಿದ್ದರು. ಈ ಅನುಭವ ಹೇಗಿತ್ತು ಎನ್ನುವ ಬಗ್ಗೆ ಅಭಿಷೇಕ್ ಈಗ ಮಾತನಾಡಿದ್ದಾರೆ. ಕೊವಿಡ್ 19ರ ವಿರುದ್ಧ ಹೋರಾಡುವುದು ಅಷ್ಟು ಸುಲಭವಾಗಿರಲಿಲ್ಲ ಎಂದು ಅನುಭವ ಹಂಚಿಕೊಂಡಿದ್ದಾರೆ. ‘ಕೊರೊನಾ ಬಂದ ದಿನಗಳು ನನಗೆ ಒಳ್ಳೆಯ ಅನುಭವ ಆಗಿರಲಿಲ್ಲ. ನನ್ನ ನಂಬಿಕೊಂಡಿದ್ದ ಕುಟುಂಬ ಕೂಡ ಇದರಿಂದ ತೊಂದರೆಗೆ ಒಳಗಾಗಿತ್ತು. ನಿಮಗೆ ರೋಗ ಬಂದಿದೆ …
Read More »ರಾಜ್ಯದಲ್ಲೂ ರದ್ದಾಗುತ್ತಾ ‘ದ್ವಿತೀಯ PUC’ ಪರೀಕ್ಷೆ : ಈ ಕುರಿತು ಸಚಿವ ‘ಸುರೇಶ್ ಕುಮಾರ್’ ಹೇಳಿದ್ದೇನು..?
ಬೆಂಗಳೂರು : ಸಿಬಿಎಸ್ ಇ 12ನೇ ತರಗತಿ ಪರೀಕ್ಷೆಗಳನ್ನು ಕೇಂದ್ರ ಸರ್ಕಾರ ರದ್ದು ಮಾಡಿದ್ದು, ಈ ನಡುವೆ ರಾಜ್ಯದಲ್ಲೂ ‘ದ್ವಿತೀಯ PUC’, ‘SSLC’ ಪರೀಕ್ಷೆ ರದ್ದಾಗುತ್ತಾ..ರಾಜ್ಯ ಸರ್ಕಾರ ಏನು ಕ್ರಮ ಕೈಗೊಳ್ಳಲಿದೆ ಎಂಬ ಕುತೂಹಲವಿದೆ. ಈ ಕುರಿತು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ಪರೀಕ್ಷೆ ನಡೆಸಬೇಕೋ/ಬೇಡವೋ ಎಂಬುದರ ಬಗ್ಗೆ ಶೀಘ್ರದಲ್ಲೇ ತೀರ್ಮಾನ ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ. ರಾಜ್ಯ ಪಠ್ಯಕ್ರಮ ಅನುಸರಿಸಿ …
Read More »ಪರೀಕ್ಷೆಗೆ ಹಾಜರಾಗುವ 2ನೇ ವರ್ಷದ ಪಿಯುಸಿ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ
ಬೆಂಗಳೂರು: ಕೋವಿಡ್ ಸಾಂಕ್ರಾಮಿಕದ ಎರಡನೇ ಅಲೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ವರ್ಷ ಪರೀಕ್ಷೆಗೆ ಹಾಜರಾಗುವ ಎರಡನೇ ವರ್ಷದ ಪಿಯುಸಿ ಪಿಯುಸಿ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ಹಾಕಲು ಅವಲೋಕಿಸುತ್ತಿದೆ. ಈ ವರ್ಷ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ಹಾಕಲು ಸರ್ಕಾರ ಉದ್ದೇಶಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ. ಆರೋಗ್ಯ ತಜ್ಞರು ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಈ ಕುರಿತು ನಿರ್ಧಾರವನ್ನು ತೆಗದುಕೊಳ್ಳಲಾಗುವುದು …
Read More »ಸಿಬಿಎಸ್ ಇ 12ನೇ ತರಗತಿ ಪರೀಕ್ಷೆ ರದ್ದು; ಮೋದಿ
ನವದೆಹಲಿ : ಸಿಬಿಎಸ್ ಇ 12ನೇ ತರಗತಿ ವಿದ್ಯಾರ್ಥಿಗಳಿಗೆ ಈ ವರ್ಷ ಯಾವುದೇ ಪರೀಕ್ಷೆಗಳು ಇರುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಿಳಿಸಿದ್ದಾರೆ. ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆಯನ್ನು ನಡೆಸಬೇಕೇ, ಬೇಡವೇ ಎನ್ನುವ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಯಿತು. ಈ ಸಭೆಯಲ್ಲಿ, ಈ ವರ್ಷದ 12ನೇ ತರಗತಿ ಪರೀಕ್ಷೆಯನ್ನು ನಡೆಸದೇ ಇರುವಂತ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ವಿದ್ಯಾರ್ಥಿಗಳ …
Read More »ಸಿ.ಪಿ.ಯೋಗೇಶ್ವರ್ ಅವರನ್ನು ವಜಾ ಮಾಡುವ ಪ್ರಶ್ನೆಯೇ ಬರುವುದಿಲ್ಲ. ಅವರ ವಿರುದ್ಧ ಕ್ರಮ ಕೈಗೊಳ್ಳುವ ಶಕ್ತಿ ಯಡಿಯೂರಪ್ಪನವರಿಗಿಲ್ಲ:ಯತ್ನಾಳ್
ವಿಜಯಪುರ: ರಾಜ್ಯದಲ್ಲಿರುವುದು ಸಿಎಂ ಬಿ.ಎಸ್.ಯಡಿಯೂರಪ್ಪನವರ ಸರ್ಕಾರವಲ್ಲ, ಬಿ.ವೈ.ವಿಜಯೇಂದ್ರ ಸರ್ಕಾರ ಎಂದು ಹೇಳುವ ಮೂಲಕ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಕೆಂಡಕಾರಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್, ಸಿಎಂ ಯಡಿಯೂರಪ್ಪನವರು ದೆಹಲಿಗೆ ಹೋಗಬೇಕಿತ್ತು. ಆದರೆ ಅವರ ಪುತ್ರ ಬಿ.ವೈ.ವಿಜಯೇಂದ್ರ ದೆಹಲಿಗೆ ಹೋಗಿ ವರಿಷ್ಠರ ಭೇಟಿಗೆ ಮುಂದಾಗಿದ್ದಾರೆ. ರಾಜ್ಯದಲ್ಲಿರುವುದು ಬಿಎಸ್ ವೈ ಸರ್ಕಾರವಲ್ಲ, ವಿಜಯೇಂದ್ರ ಸರ್ಕಾರ ಎಂಬುದು ಇದರಿಂದಲೇ ಸಾಬೀತಾಗುತ್ತದೆ ಎಂದರು. ಸಚಿವ ಸಿ.ಪಿ.ಯೋಗೇಶ್ವರ್ ಅವರನ್ನು ವಜಾ …
Read More »ಸೋಂಕು ಕಡಿಮೆ ಆಗದಿದ್ದರೆ ಅನ್ ಲಾಕ್ ಇಲ್ಲ: ಡಿಸಿಎಂ ಸವದಿ
ಬೆಂಗಳೂರು, ಜೂ. 1- ರಾಜ್ಯದಲ್ಲಿ ಏಕ ಕಾಲಕ್ಕೆ ಅನ್ ಲಾಕ್ ಬೇಡ. ಹಂತ ಹಂತವಾಗಿ ಅನ್ ಲಾಕ್ ಮಾಡಿದರೆ ಸೂಕ್ತ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ತಿಳಿಸಿದರು. ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಆಶ್ರಯದಲ್ಲಿ ಇಂದು ಸಾರಿಗೆ ಸಿಬ್ಬಂದಿಗಳಿಗೆ ಎರಡನೆಯ ಹಂತದಲ್ಲಿ ಕೋವಿಡ್ ಲಸಿಕೆಯನ್ನು ಉಚಿತವಾಗಿ ನೀಡುವ ಆಂದೋಲನಕ್ಕೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಲಾಕ್ ಡೌನ್ ಮಾಡಿದ್ದರಿಂದ ರಾಜ್ಯದಲ್ಲಿ ಕೋವಿಡ್ ಪಾಸಿಟೀವ್ ಪ್ರಮಾಣ ಕಡಿಮೆಯಾಗಿದೆ. ಅನ್ …
Read More »ವೃತ್ತಿಪರ ಕುಲಕಸುಬನ್ನು ಅವಲಂಬಿಸಿರುವ ವಿವಿಧ ಸಮುದಾಯಗಳನ್ನೊಳಗಂಡ ಎಲ್ಲ ರೀತಿಯ ದುಡಿಯುವ ವರ್ಗಕ್ಕೆ 10 ಸಾವಿರ ರೂಗಳ ಆರ್ಥಿಕ ನೆರವು ನೀಡಬೇಕು: ವಿಷ್ಣು ಲಾತೂರ
ಗೋಕಾಕ: ಕೊರೋನಾ 2ನೇ ಅಲೆಯ ಹಿನ್ನೆಲೆಯಲ್ಲಿ ತೀವೃ ಸಂಕಷ್ಟದಲ್ಲಿರುವ ಹಿಂದುಳಿದ ವರ್ಗಗಳ ಸಂಘಟಿತ ಹಾಗೂ ಅಸಂಘಟಿತ ಸಂಪ್ರದಾಯಿಕ ವೃತ್ತಿಪರ ಕುಲಕಸುಬನ್ನು ಅವಲಂಬಿಸಿರುವ ವಿವಿಧ ಸಮುದಾಯಗಳನ್ನೊಳಗಂಡ ಎಲ್ಲ ರೀತಿಯ ದುಡಿಯುವ ವರ್ಗಕ್ಕೆ 10 ಸಾವಿರ ರೂಗಳ ಆರ್ಥಿಕ ನೆರವು ನೀಡಬೇಕೆಂದು ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ರಾಜ್ಯಾಧ್ಯಕ್ಷ ವಿಷ್ಣು ಲಾತೂರ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಈಗಾಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ದುಡಿಯುವ ವರ್ಗಕ್ಕೆ ಮೂಗಿಗೆ ತುಪ್ಪ …
Read More »