ಗೋಕಾಕ: ಸಮೀಪದ ಅರಭಾವಿ ನಾಡ ಕಛೇರಿಯಲ್ಲಿ ಉಪತಹಶೀಲ್ದಾರರಾಗಿ ಕಾರ್ಯ ನಿರ್ವಹಿಸುತ್ತಿದ್ದ ಎಲ್.ಎಚ್.ಭೋವಿ ಅವರು ಸರ್ಕಾರದ ಆದೇಶ ಮೇರೆಗೆ ಗ್ರೇಡ್-2 ತಹಶೀಲ್ದಾರರಾಗಿ ಪದನೊತ್ತಿ ಹೊಂದಿ ಸೋಮವಾರದಂದು ಇಲ್ಲಿಯ ತಹಶೀಲ್ದಾರ ಕಚೇರಿಯಲ್ಲಿ ಗ್ರೇಡ್-2 ತಹಶೀಲ್ದಾರಾಗಿ ಅಧಿಕಾರವನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ, ಗ್ರೇಡ್-2 ತಹಶೀಲ್ದಾರ ಎಮ್.ಎ.ಚೌಧರಿ, ಪ್ರಥಮ ದರ್ಜೆ ಸಹಾಯಕ ಆರ್.ಆಯ್. ನೇಸರಗಿ, ಗೋಕಾಕ ಕಂದಾಯ ನಿರೀಕ್ಷಕ ಎಸ್.ಎನ್.ಹಿರೇಮಠ ಸೇರಿದಂತೆ ಇತರೆ ಸಿಬ್ಬಂದಿಗಳು ಶುಭ ಹಾರೈಸಿದರು. ಎಲ್.ಎಚ್.ಭೋವಿ ಅವರು ಸರ್ಕಾರದ …
Read More »Yearly Archives: 2021
ಲಾಕ್ ಡೌನ್ ಇದ್ದಷ್ಟು ದಿನ ಮಾತ್ರ ಯಡಿಯೂರಪ್ಪ ಮುಖ್ಯಮಂತ್ರಿ!
ವಿಜಯಪುರ, ಮೇ 31: ಮುಖ್ಯಮಂತ್ರಿ ಯಡಿಯೂರಪ್ಪ ಮತ್ತವರ ಪುತ್ರ ವಿಜಯೇಂದ್ರ ವಿರುದ್ದ ಕಿಡಿಕಾರುವಲ್ಲಿ ವಿರೋಧ ಪಕ್ಷದವರೂ ನಾಚಿಸುವಂತೆ ಮಂಚೂಣಿಯಲ್ಲಿ ಬರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಸಿಎಂ ವಿರುದ್ದ ಗುಡುಗಿದ್ದಾರೆ. ಈಗಿರುವ ಲಾಕ್ ಡೌನ್ ಎಲ್ಲಾ ವೇಸ್ಟ್, ಜೂನ್ ಏಳರ ನಂತರ ಲಾಕ್ ಡೌನ್ ವಿಸ್ತರಿಸಬಾರದು ಎಂದು ಅಭಿಪ್ರಾಯ ಪಟ್ಟಿರುವ ಯತ್ನಾಳ್, ಲಾಕ್ ಡೌನ್ ಇದ್ದರೆ ಮಾತ್ರ ಯಡಿಯೂರಪ್ಪನವರ ಸಿಎಂ ಕುರ್ಚಿ ಭದ್ರ ಎನ್ನುವ ಹೇಳಿಕೆಯನ್ನು ನೀಡಿದ್ದಾರೆ. …
Read More »ಕುರ್ಚಿ ಉಳಿಸಿಕೊಳ್ಳಲು ಲಾಕ್‌ಡೌನ್ ದುರ್ಬಳಕೆ ಬೇಡ: ಶಾಸಕ ಬಸನಗೌಡ ಪಾಟೀಲ ಯತ್ನಾಳ
ವಿಜಯಪುರ: ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳುವ ರಾಜಕೀಯ ಸ್ವಾರ್ಥಕ್ಕಾಗಿ ಕೋವಿಡ್ ಲಾಕ್‌ಡೌನ್ ದುರ್ಬಳಕೆ ಆಗದಿರಲಿ. ರೋಗ ನಿಯಂತ್ರಣಕ್ಕೆ ಬಂದ ಜಿಲ್ಲೆಗಳಲ್ಲಿ ಹಂತ ಹಂತವಾಗಿ ಲಾಕ್‌ಡೌನ್ ಹಿಂಪಡೆಯಬೇಕು ಎಂದು ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದ್ದಾರೆ. ಸೋಮವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ಲಾಕ್‌ಡೌನ್ ಜೂನ್ 7ಕ್ಕೆ ಕೊನೆಗೊಳ್ಳಲಿದ್ದು, ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಬಂದ ಜಿಲ್ಲೆಗಳಲ್ಲಿ ಹಂತ ಹಂತವಾಗಿ ಲಾಕ್‌ಡೌನ್ ತೆರವುಗೊಳಿಸಬೇಕು ಎಂದು ಯತ್ನಾಳ …
Read More »‘ಸಚಿವ ಸಿ.ಪಿ.ಯೋಗೇಶ್ವರ್’ ‘ಸಚಿವ ಸಂಪುಟ’ದಿಂದ ಔಟ್.?
ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಸದ್ದು ಜೋರಾಗಿದೆ. ಅದರಲ್ಲೂ ಸ್ವತಹ ಸಿಎಂ ಯಡಿಯೂರಪ್ಪ ವಿರುದ್ಧವೇ ಅವರ ಸಚಿವ ಸಂಪುಟದ ಸಚಿವ ಸಿ.ಪಿ.ಯೋಗೇಶ್ವರ್ ಸಮರ ಸಾರಿದ್ದಾರೆ ಎನ್ನಲಾಗಿತ್ತು. ಹೀಗಾಗಿ ಸಿಎಂ ಯಡಿಯೂರಪ್ಪ ಬದಲಾವಣೆಯನ್ನು ವಿರೋಧಿಸಿ, ಅವರ ಬೆಂಬಲಕ್ಕೆ 18 ಬಿಜೆಪಿ ಶಾಸಕರು ನಿಂತಿದ್ದು, ಯೋಗೇಶ್ವರ್ ಪಕ್ಷಕ್ಕೆ ಆಮದು ಸರಕು, ಸಚಿವ ಸ್ಥಾನದಿಂದ ಕಿತ್ತೊಗೆಯಿರಿ, ನಿಮ್ಮ ಜೊತೆ ನಾವಿದ್ದೇವೆ ಎಂದಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ಸಚಿವ ಸಂಪುಟದಿಂದ ಸಚಿವ ಸಿ.ಪಿ.ಯೋಗೇಶ್ವರ್ ಔಟ್ ಆಗ್ತಾ …
Read More »ಸಿಎಂ ಬದಲಾವಣೆ ವಿಚಾರಗಳು ಏಕೆ ಹುಟ್ಟಿಕೊಳ್ಳುತ್ತಿವೆಯೋ ನನಗೆ ಗೊತ್ತಾಗುತ್ತಿಲ್ಲ ; ಜಗದೀಶ ಶೆಟ್ಟರ್
ಧಾರವಾಡ: ಸಿಎಂ ಬದಲಾವಣೆ ವಿಚಾರವಾಗಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಅವರು ಜಾಣತನದ ಉತ್ತರ ನೀಡಿದ್ದಾರೆ. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿನಾಕಾರಣದ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಆಗಾಗ ಸಿಎಂ ಬದಲಾವಣೆ ವಿಚಾರಗಳು ಏಕೆ ಹುಟ್ಟಿಕೊಳ್ಳುತ್ತಿವೆಯೋ ನನಗೆ ಗೊತ್ತಾಗುತ್ತಿಲ್ಲ. ರೇಣುಕಾಚಾರ್ಯ ಅವರ ಸಹಿ ಸಂಗ್ರಹದ ವಿಚಾರ ನನಗೆ ಗೊತ್ತಿಲ್ಲ. ಈ ಎಲ್ಲ ವಿಚಾರವಾಗಿ ಯಾವ ವೇದಿಕೆಯಲ್ಲಿ ಮಾತನಾಡಬೇಕೋ ಅಲ್ಲಿ ಮಾತನಾಡುತ್ತೇನೆ. ಇದು ವೇದಿಕೆಯಲ್ಲ ಎಂಬ ಉತ್ತರ …
Read More »ಪ್ರಾಣದ ಹಂಗು ತೊರೆದು ಸೇವೆ: ನರ್ಸ್ ಕಾರ್ಯಕ್ಕೆ ಸಿಎಂ ಅಭಿನಂದನೆ
ಬೆಂಗಳೂರು: ಕೋವಿಡ್ ಸಂಕಷ್ಟ ಸಮಯದಲ್ಲಿ ನರ್ಸ್ಗಳು ಪ್ರಾಣದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ಅವರನ್ನು ಯಾವ ಶಬ್ಧದಿಂದ ಅಭಿನಂದಿಸಿದರೂ ಕಡಿಮೆಯೇ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು. ನರ್ಸ್‌ಗಳ ಜತೆ ಮಾತುಕತೆ ನಡೆಸಿದ್ದೇನೆ. ಅವರು ತಮ್ಮ ಕೆಲವು ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಅವುಗಳನ್ನು ಪರಿಹರಿಸುತ್ತೇವೆ. ಕೆಲವು ಸಲಹೆಗಳನ್ನೂ ಕೊಟ್ಟಿದ್ದಾರೆ. ಅವುಗಳನ್ನು ಪರಿಗಣಿಸುತ್ತೇವೆ ಎಂದು ವಿಧಾನಸೌಧದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಲಾಕ್ ಡೌನ್ ಕುರಿತು ಜೂನ್ ಮೇ 4 ಅಥವಾ 5ರ ಬಳಿಕ ಚರ್ಚೆ …
Read More »‘ಎಲ್ಲವನ್ನೂ ಸಿಎಂ ಮಾಡೋದಾದ್ರೆ ಬೆಳಗಾವಿಯ ನಾಲ್ವರು ಸಚಿವರು ಯಾಕೆ?’ – ಸತೀಶ್ ಜಾರಕಿಹೊಳಿ
ಬೆಳಗಾವಿ, ಮೇ 31: ”ಎಲ್ಲವನ್ನೂ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರೇ ಮಾಡುವುದಾದರೆ ಜಿಲ್ಲೆಯ ನಾಲ್ವರು ಸಚಿವರು ಯಾಕಾಗಿ ಇದ್ದಾರೆ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಟೀಕಿಸಿದ್ದಾರೆ. ಮಂಗಳ ಬಿಮ್ಸ್ ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಸರಿಪಡಿಸಲು ಸ್ವತಃ ಮುಖ್ಯಮಂತ್ರಿಗಳೇ ಬೆಳಗಾವಿಗೆ ಬರುವುದಾಗಿ ಹೇಳಿದ್ದರು. ಈ ವಿಚಾರದಲ್ಲಿ ಜಿಲ್ಲೆಯ ಸಚಿವರುಗಳ ಬಗ್ಗೆ ಲೇವಡಿ ಮಾಡಿರುವ ಸತೀಶ್ ಜಾರಕಿಹೊಳಿ, ”ಮುಖ್ಯಮಂತ್ರಿಗಳೇ ಬೆಳಗಾವಿಗೆ ಬರುವುದಾಗಿ ಹೇಳಿದ್ದಾರೆ. ಎಲ್ಲವೂ ಮುಖ್ಯಮಂತ್ರಿಗಳೇ ಮಾಡುವುದಾದರೆ ಜಿಲ್ಲೆಯ ನಾಲ್ವರು ಸಚಿವರು ಯಾಕೆ …
Read More »ಸಚಿವ ಪ್ರಭು ಚವ್ಹಾಣ್ ವಿರುದ್ಧ ಕಳಪೆ ಗುಣಮಟ್ಟದ ಆಹಾರ ವಿತರಣೆ ಆರೋಪ
ಬೀದರ್, ಮೇ 31: ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಅವರು ವಿತರಿಸುತ್ತಿರುವ ಆಹಾರ ಕಳಪೆ ಗುಣಮಟ್ಟದಿಂದ ಕೂಡಿದೆ ಎಂಬ ಆರೋಪ ಕೇಳಿ ಬಂದಿದೆ. ಆಹಾರವನ್ನು ಮಕ್ಕಳು ಮುಟ್ಟುತ್ತಿಲ್ಲ, ನಾವು ಸಹ ತಿನ್ನುತ್ತಿಲ್ಲ. ಅದು ತಿನ್ನುವುದಕ್ಕೆ ಬಾರದಂತಿದೆ ಎಂಬ ಔರಾದ್ ಪಟ್ಟಣದ ಅಲೆಮಾರಿ ಜನಾಂಗದ ಮಹಿಳೆಯರು ಆರೋಪಿಸಿದ್ದಾರೆ. ಔರಾದ ಪಟ್ಟಣದ ಹೊರವಲಯದಲ್ಲಿರುವ ಅಲೆಮಾರಿ ಜನಾಂಗದವರು ವಾಸಿಸುವ ಗುಡಿಸಲುಗಳಿಗೆ ಕೆಲವು ಸಂಘಟನೆಯ ಪದಾಧಿಕಾರಿಗಳು ಹೋಗಿ ತಮ್ಮ ವತಿಯಿಂದ ಉಚಿತವಾಗಿ ಆಹಾರಗಳನ್ನು ಹಂಚುವ ಸಂದರ್ಭದಲ್ಲಿ …
Read More »ಮೇ 31, ಜೂನ್ 1 ರಂದು ಸಿನಿಮಾ ಕಲಾವಿದರಿಗೆ ಉಚಿತ ಕೋವಿಡ್ ಲಸಿಕೆ
ಚಿತ್ರರಂಗದ ಸದಸ್ಯರಿಗೆ ಉಚಿತವಾಗಿ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಮೇ 31 ಹಾಗೂ ಜೂನ್ 1 ರಂದು ಎರಡು ದಿನಗಳ ಕಾಲ ಸ್ಯಾಂಡಲ್‌ವುಡ್ ಇಂಡಸ್ಟ್ರಿಯ ನೋಂದಾಯಿತ ಕಲಾವಿದರಿಗೆ ಲಸಿಕೆ ನೀಡಲು ಕಾರ್ಯಕ್ರಮ ಆಯೋಜನೆಯಾಗಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕಲಾವಿದರ ಭವನ ಕಟ್ಟಡದಲ್ಲಿ ಉಚಿತ ಕೋವಿಡ್ ಲಸಿಕೆ ಅಭಿಯಾನಕ್ಕೆ ಡಿಸಿಎಂ ಅಶ್ವಥ್ ನಾರಾಯಣ, ಸಂಸದೆ ಸುಮಲತಾ ಚಾಲನೆ ನೀಡಲಿದ್ದಾರೆ. ಈ ವೇಳೆ ಕನ್ನಡ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್, ಕಲಾವಿದರ ಸಂಘದ ಕಾರ್ಯದರ್ಶಿ …
Read More »ಮಗಳು ವಮಿಕಾ ಹೆಸರಿನ ಅರ್ಥ ಹೇಳಿದ ವಿರಾಟ್ ಕೊಹ್ಲಿ
ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ದಂಪತಿಗೆ ಹೆಣ್ಣು ಜನಿಸಿದ ಎಂದು ತಿಳಿದಾಗ ಮಗುವಿಗೆ ಏನೆಂದು ಹೆಸರಿಡಬಹುದು ಎನ್ನುವ ದೊಡ್ಡ ಚರ್ಚೆಯೇ ನಡೆದಿತ್ತು. ಕುತೂಹಲದ ನಡುವೆ ಮಗಳಿಗೆ ‘ವಮಿಕಾ’ ಎಂದು ನಾಮಕರಣ ಮಾಡಿದ್ದರು ತಾರಾ ದಂಪತಿ. ವಮಿಕಾ ಎಂದು ಹೆಸರಿನ ಒಳ ಅರ್ಥವೇನು? ಯಾವ ಕಾರಣದಿಂದ ಮಗಳಿಗೆ ಅನುಷ್ಕಾ-ಕೊಹ್ಲಿ ದಂಪತಿ ಈ ಹೆಸರಿಟ್ಟರು ಎನ್ನುವುದು ಅಷ್ಟೇ ಚರ್ಚೆಯಾಗಿತ್ತು. ವಿರಾಟ್ ಹೆಸರಿನಿಂದ ‘ವ’, ಅನುಷ್ಕಾ ಹೆಸರಿನಿಂದ ‘ಕಾ’ ಒಳಗೊಂಡು ವಮಿಕಾ ಆಗಿದೆ …
Read More »