ಗದಗ: ಕೊರೊನಾ ನಿಯಂತ್ರಿಸಲು ಲಾಕ್ಡೌನ್ ಜಾರಿಯಾದ ಕಾರಣ ಬಸ್ಗಳ ಓಡಾಡ ಸಂಪೂರ್ಣವಾಗಿ ನಿಂತಿದೆ. ಹೀಗಾಗಿ ವೃದ್ಧಾಪ್ಯ ವೇತನ ಪಡೆಯುವುದಕ್ಕೆ ಅಜ್ಜಿಯೊಬ್ಬರು ಪರದಾಟ ಪಟ್ಟಿದ್ದಾರೆ. ವೃದ್ಧಾಪ್ಯ ವೇತನ ಪಡೆಯಲು ಅಂಚೆ ಕಚೇರಿಗೆ ಬರುವಂತೆ ವೃದ್ಧೆಗೆ ತಿಳಿಸಿದ್ದರು. ಹೀಗಾಗಿ ಅಜ್ಜಿ ಅಂಚೆ ಕಚೇರಿಗೆ ಸುಮಾರು ಎರಡು ಕಿಲೋಮೀಟರ್ ನಡೆದುಕೊಂಡು ಬಂದಿದ್ದಾರೆ. ಈ ವೇಳೆ ಪೊಲೀಸರು ಅಜ್ಜಿಯನ್ನು ತಡೆದು ಪ್ರಶ್ನೆ ಮಾಡಿದ್ದಾರೆ. ವೃದ್ಧಾಪ್ಯ ವೇತನ ಪಡೆಯಲು ಎರಡು ಕಿಲೋಮೀಟರ್ ನಡೆದುಕೊಂಡ ಬಂದ ಭಜಂತ್ರಿ ನಗರದ …
Read More »Yearly Archives: 2021
ಮಗನ ಔಷಧಿಗೆ 280 ಕಿಲೋಮೀಟರ್ ಸೈಕಲ್ ತುಳಿದ ಅಪ್ಪ
ಮೈಸೂರು : ಮಗನಿಗೆ ಔಷಧಿ ತರಲು ಸುಮಾರು 280 ಕಿಲೋಮೀಟರ್ ವರೆಗೆ ತಂದೆ ಸೈಕಲ್ ತುಳಿದಿರುವ ಮನ ಕಲಕುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಗಾರೆ ಕೆಲಸ ಮಾಡುತ್ತಿರುವ ಜಿಲ್ಲೆಯ ಗಾಣಿಗನಕೊಪ್ಪಲು ಗ್ರಾಮದ ನಿವಾಸಿ ಆನಂದ್ ಎಂಬುವವರು ತನ್ನ ಮಗನಿಗೆ ಔಷಧಿ ತರಲು ಸೈಕಲ್ ನಲ್ಲಿ ಸುಮಾರು 280 ಕಿಲೋಮೀಟರ್ ಹೋಗಿದ್ದಾರೆ. ಮಾನಸಿಕ ವಿಶೇಷ ಚೇತನ ಮಗನಿಗೆ 10 ವರ್ಷಗಳಿಂದ ಮಾತ್ರೆ ಕೊಡಿಸಲಾಗುತ್ತಿದೆ. ಬೆಂಗಳೂರು ನಿಮಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. …
Read More »71 ಶವಗಳನ್ನು ಗಂಗಾ ನದಿಯಿಂದ ಶಪಡಿಸಿಕೊಂಡು ಅಂತ್ಯಸಂಸ್ಕಾರ
ಬಲರಾಂಪುರ್: ಉತ್ತರಪ್ರದೇಶದಲ್ಲಿ ಕೋವಿಡ್ ನಿಂದ ಸಾವನ್ನಪ್ಪಿದ ವ್ಯಕ್ತಿಯ ಮೃತದೇಹವನ್ನು ನದಿಗೆ ಎಸೆಯುವ ಆಘಾತಕಾರಿ ವಿಡಿಯೋ ಬಯಲಾಗಿದೆ. ಗಂಗಾ ನದಿ ತೀರದಲ್ಲಿ ಆಳವಿಲ್ಲದ ಸಮಾಧಿಗಳಲ್ಲಿ ಸಾವಿರಾರು ಮೃತದೇಹಗಳ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ. ಕೆಲವು ಮೃತದೇಹಗಳನ್ನು ನದಿಗೆ ಎಸೆಯಲಾಗಿದೆ ಎಂದು ಕೆಲವು ವಾರಗಳ ಹಿಂದೆ ವಿಶ್ವದಾದ್ಯಂತ ಸುದ್ದಿಯಾಗಿತ್ತು. ನದಿಗಳಲ್ಲಿ ಮೃತದೇಹಗಳನ್ನು ಎಸೆಯದಂತೆ ನೋಡಿಕೊಳ್ಳಲು ಕೇಂದ್ರ ಸರ್ಕಾರ ಉತ್ತರದ ಅನೇಕ ರಾಜ್ಯಗಳಿಗೆ ಆದೇಶಿಸಿದೆ. ಇಂತಹ ಘಟನೆ ಮರುಕಳಿಸದಂತೆ ನದಿ ತೀರಗಳಲ್ಲಿ ಗಸ್ತು ಹೆಚ್ಚಿಸುವಂತೆ ಕೇಂದ್ರದಿಂದ …
Read More »ಹತ್ತು ವರ್ಷಗಳ ಬಳಿಕ ಮನೆಗೆ ಮರಳಿ ಬಂದ ಮಗ – ಕುಟುಂಬಸ್ಥರ ಸಂತೋಷ
ಕೊಪ್ಪಳ: ಹತ್ತು ವರ್ಷಗಳ ಮಗ ಬಳಿಕ ಜುಮಲಾಪೂರ ಗ್ರಾಮದ ಯುವಕನೊಬ್ಬ ಮರಳಿ ಮನೆಗೆ ಬಂದಿರುವ ಘಟನೆ ನಡೆದಿದ್ದು, ಕುಟುಂಬದವರೆಲ್ಲ ಸಂತಸ ಪಟ್ಟಿದ್ದಾರೆ. ಕುಷ್ಟಗಿ ತಾಲೂಕಿನ ಜುಮಲಾಪೂರ ಗ್ರಾಮದ ಗುರುಬಸಪ್ಪ ಹಾಗೂ ಪಾರ್ವತಮ್ಮ ದಂಪತಿಯ ಪುತ್ರ ದೇವರಾಜ (30) ಹತ್ತು ವರ್ಷದ ನಂತರ ಮರಳಿ ಮನೆಗೆ ಬಂದಿದ್ದಾನೆ. ಬಾಲ್ಯದಲ್ಲಿ ತಂದೆ, ತಾಯಿ ಜೊತೆ ವಾಗ್ವಾದ ಮಾಡಿಕೊಂಡು ಊರು ಬಿಟ್ಟು ತೆರಳಿದ್ದು, ಇದೀಗ ಕೊರೊನಾದಿಂದಾಗಿ ಕಂಪೆನಿಗಳು ಮುಚ್ಚಿರುವ ಕಾರಣ ತಮ್ಮ ಸ್ನೇಹಿತರ ಸಹಾಯದಿಂದ …
Read More »ವರ್ಷದ ಹಿಂದೆ ಮಗು ಕದ್ದಿದ್ದ ಮನೋವೈದ್ಯೆಯ ಬಂಧನ
ಬೆಂಗಳೂರು: ಚಾಮರಾಜಪೇಟೆ ಬಿಬಿಎಂಪಿ ಹೆರಿಗೆ ಆಸ್ಪತ್ರೆಯಿಂದ ಮಗು ಕಳ್ಳತನವಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ನಿರಂತರ ಒಂದು ವರ್ಷದ ಕಾರ್ಯಾಚರಣೆ ಬಳಿಕ ತಲಘಟ್ಟಪುರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬರೋಬ್ಬರಿ 1 ವರ್ಷಕ್ಕೆ ಪೊಲೀಸರು ಪ್ರಕರಣವನ್ನು ಬೇಧಿಸಿದ್ದಾರೆ. ಆರೋಪಿಯ ರೇಖಾ ಚಿತ್ರ ರಚಿಸಿ ತಲಘಟ್ಟಪುರ ಪಿಎಸ್‌ಐ ಶ್ರೀನಿವಾಸ್ ಮತ್ತು ತಂಡ ಕಾರ್ಯಾಚರಣೆಗೆ ಇಳಿದಿದ್ರು. ಸದ್ಯ ಒಂದು ವರ್ಷದ ಬಳಿಕ ಆರೋಪಿ ಸಿಕ್ಕಿದ್ದು ಮಗುವನ್ನು ಕಳ್ಳತನ ಮಾಡಿದ್ದು ಓರ್ವ ಮನೋವೈದ್ಯೆ ಎಂಬುವುದು ತಿಳಿದು ಬಂದಿದೆ. ಉತ್ತರ …
Read More »ಮಂಗಳಮುಖಿಯರಿಗೆ ಕಿಚ್ಚನ ನೆರವು
ಬೆಂಗಳೂರು: ಲಾಕ್‍ಡೌನ್‍ನಿಂದ ಕಷ್ಟ ಅನುಭವಿಸುತ್ತಿರುವ ಮಂಗಳಮುಖಿಯರಿಗೆ ಸ್ಯಾಂಡಲ್‍ವುಡ್ ನಟ ಕಿಚ್ಚ ಸುದೀಪ್ ಫುಡ್ ಕಿಟ್ ನೀಡುವ ಮೂಲಕವಾಗಿ ನೆರವಾಗಿದ್ದಾರೆ. ಒಂದುಹೊತ್ತಿನ ಊಟಕ್ಕೂ ಕಷ್ಟ ಪಡುತ್ತಿದ್ದ ಮಂಗಳಮುಖಿಯರು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ಗೆ ಕರೆ ಮಾಡಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ತಕ್ಷಣವೇ ನೆರವಿಗೆ ಬಂದ ಕಿಚ್ಚನ ಚಾರಿಟೇಬಲ್ ಸೊಸೈಟಿ, ಚಿತ್ರದುರ್ಗದ ಮಂಗಳಮುಖಿಯರ ಮನೆಗೆ ದಿನಸಿ ಕಿಟ್‍ಗಳನ್ನು ವಿತರಿಸಿದ್ದಾರೆ. ಇದನ್ನೂ ಕಿಚ್ಚ ಸರ್ ಕೊರೊನಾ ಸಂದರ್ಭದಲ್ಲಿ ಕಳೆದ ವರ್ಷದಿಂದ ಜನರ ಪರವಾಗಿ …
Read More »ಪೊಲೀಸರಿಂದ ತಪ್ಪಿಸಿಕೊಳ್ಳಲು ಕಳ್ಳನೊಬ್ಬ 35 ಗ್ರಾಂ ಚಿನ್ನವನ್ನೇ ನುಂಗಿರುವ ಘಟನೆ.
ಮಂಗಳೂರು, ಮೇ 31: ಪೊಲೀಸರಿಂದ ತಪ್ಪಿಸಿಕೊಳ್ಳಲು ಕಳ್ಳನೊಬ್ಬ 35 ಗ್ರಾಂ ಚಿನ್ನವನ್ನೇ ನುಂಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ. ಕೇರಳ ರಾಜ್ಯದ ತ್ರಿಶ್ಶೂರ್ ಜಿಲ್ಲೆಯ ಶಿಬು ಎಂಬುವವನ್ನೇ ಚಿನ್ನ ನುಂಗಿರುವ ಆರೋಪಿ. ಜುವೆಲ್ಲರಿ ಶಾಪ್‌ನಲ್ಲಿ ನಡೆದ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧ ನಡೆಸುತ್ತಿದ್ದ ಪೊಲೀಸರಿಂದ ತಪ್ಪಿಸಿಕೊಳ್ಳಲು ಬರೋಬ್ಬರಿ 35 ಗ್ರಾಂ ಚಿನ್ನವನ್ನು ಶಿಬು ನುಂಗಿ ಎಲ್ಲರೂ ದಂಗಾಗುವಂತೆ ಮಾಡಿದ್ದಾನೆ. ಸುಳ್ಯದ ಜುವೆಲ್ಲರಿ ಅಂಗಡಿಯೊಂದರಲ್ಲಿ ಮಾರ್ಚ್ 31ರಂದು …
Read More »1 -10 ನೇ ತರಗತಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಅಕ್ಕಿ, ಗೋಧಿ, ಬೇಳೆ, ಎಣ್ಣೆ ವಿತರಣೆ
ಬೆಂಗಳೂರು: ಒಂದರಿಂದ ಹತ್ತನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಅಕ್ಕಿ, ಬೇಳೆ, ಗೋಧಿ, ಉಪ್ಪು ಹಾಗೂ ಸೂರ್ಯಕಾಂತಿ ಎಣ್ಣೆಯನ್ನು ನೀಡಲಾಗುವುದು. 2020ರ ನವೆಂಬರ್ ನಿಂದ 2021 ರ ಏಪ್ರಿಲ್ ವರೆಗೆ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಬಿಸಿಯೂಟ ಬದಲಿಗೆ ಆಹಾರಧಾನ್ಯ ಬಿಡುಗಡೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಕೋವಿಡ್ ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಮಕ್ಕಳಿಗೆ ಆಹಾರಧಾನ್ಯಗಳನ್ನು ವಿತರಣೆ ಮಾಡುವಂತೆ ಶಾಲೆಗಳ ಮುಖ್ಯಸ್ಥರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು …
Read More »ಬೆಡ್ಗೆ ಒಬ್ಬ ಮಂತ್ರಿ, ಆಕ್ಸಿಜನ್‌ಗೆ ಒಬ್ಬ ಮಂತ್ರಿ, ಸ್ಮಶಾನಕ್ಕೆ ಒಬ್ಬ ಮಂತ್ರಿ ಮಾಡಿದರೂ ಕೋವಿಡ್ ನಿರ್ವಹಣೆಯಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಎರಡೂ ವಿಫಲವಾಗಿವೆ
ಬೆಳಗಾವಿ : ಬೆಡ್ಗೆ ಒಬ್ಬ ಮಂತ್ರಿ, ಆಕ್ಸಿಜನ್‌ಗೆ ಒಬ್ಬ ಮಂತ್ರಿ, ಸ್ಮಶಾನಕ್ಕೆ ಒಬ್ಬ ಮಂತ್ರಿ ಮಾಡಿದರೂ ಕೋವಿಡ್ ನಿರ್ವಹಣೆಯಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಎರಡೂ ವಿಫಲವಾಗಿವೆ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪಿಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯಲ್ಲಿ ನಿತ್ಯ 7 ಸಾವಿರ ಟೆಸ್ಟಿಂಗ್ ಮಾಡಿಸಿ ಅಂತಾ ಸರ್ಕಾರ ಹೇಳಿದೆ. ಆದರೆ ಬೆಳಗಾವಿಯಲ್ಲಿ ವೈದ್ಯರೇ ಇಲ್ಲ. ಪ್ರಾಥಮಿಕ ಆಸ್ಪತ್ರೆಗಳು ಸೋರುತ್ತಿವೆ. ಪ್ರಾಣ ಉಳಿಸಿಕೊಳ್ಳಲು …
Read More »ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್: ಕುಚ್ಚಲಕ್ಕಿ ನೀಡಲು ಚಿಂತನೆ -ಕರಾವಳಿ ಜಿಲ್ಲೆಗಳಲ್ಲಿ ಬೇಡಿಕೆಯಂತೆ ವಿತರಣೆ
ಬೆಂಗಳೂರು: ಪಡಿತರ ಚೀಟಿ ಹೊಂದಿದವರಿಗೆ ಅಕ್ಕಿ ಜೊತೆಗೆ ರಾಗಿ ಮತ್ತು ಜೋಳ ವಿತರಿಸಲಾಗುತ್ತಿದೆ. ದಕ್ಷಿಣ ಕರ್ನಾಟಕ ಭಾಗದಲ್ಲಿ ಪರಿತರ ಚೀಟಿದಾರರಿಗೆ ಅಕ್ಕಿ ಜೊತೆಗೆ ರಾಗಿ ಹಾಗೂ ಉತ್ತರ ಕರ್ನಾಟಕದಲ್ಲಿ ಅಕ್ಕಿ ಜೊತೆ ಜೋಳ ನೀಡಲಾಗುತ್ತಿದೆ. ಅದೇ ರೀತಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸ್ಥಳೀಯವಾಗಿ ಬಳಕೆಯಲ್ಲಿರುವ ಕುಚ್ಚಲಕ್ಕಿ ವಿತರಿಸಬೇಕೆಂಬ ಬೇಡಿಕೆ ಕೇಳಿಬಂದ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಉಮೇಶ್ ಕತ್ತಿ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿದೆ. …
Read More »