Breaking News

Yearly Archives: 2021

ಜೂನ್‌ನಲ್ಲಿ ಎಷ್ಟು ಲಸಿಕೆ ಲಭ್ಯವಾಗಲಿದೆ ಎಂದು ಲೆಕ್ಕ ನೀಡಿದ ಆರೋಗ್ಯ ಸಚಿವಾಲಯ

ನವದೆಹಲಿ, ಮೇ 30: ಸುಮಾರು 12 ಕೋಟಿಯಷ್ಟು ಲಸಿಕೆ ಜೂನ್‌ ತಿಂಗಳಿನಲ್ಲಿ ಲಭ್ಯವಾಗಲಿದೆ ಎಂದು ಆರೋಗ್ಯ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ. ಮೇ ತಿಂಗಳಿನಲ್ಲಿ ಒಟ್ಟು 7.94 ಕೋಟಿಯಷ್ಟು ಲಸಿಕೆಯನ್ನು ಉತ್ಪಾದನೆ ಮಾಡಲಾಗಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಲಸಿಕೆಯನ್ನು ವಿತರಣೆಯ ಮಾದರಿ, ಜನಸಂಖ್ಯೆ ಮತ್ತು ವಾಕ್ಸಿನ್ ವೇಸ್ಟೇಜ್ ಪ್ರಮಾಣವನ್ನು ನೋಡಿಕೊಂಡು ಹಂಚಲಾಗುತ್ತದೆ ಎಂದು ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಇನ್ನು ಜೂನ್ ತಿಂಗಳಿನಲ್ಲಿ …

Read More »

ಬೆಂಗಳೂರು; ಬಾಕಿ ಹಣಕ್ಕಾಗಿ ಸಂಬಂಧಿಕರನ್ನು ಕೂಡಿಹಾಕಿದ ಆಸ್ಪತ್ರೆ!

ಬೆಂಗಳೂರು, ಮೇ 30; ಬೆಂಗಳೂರು ನಗರದ ಖಾಸಗಿ ಆಸ್ಪತ್ರೆಗಳ ಧನ ದಾಹಕ್ಕೆ ಮತ್ತೊಂದು ಉದಾಹರಣೆ ಸಿಕ್ಕಿದೆ. ಕೋವಿಡ್‌ನಿಂದ ವ್ಯಕ್ತಿ ಮೃತಪಟ್ಟರೂ ಶವವನ್ನು ಕೊಡದೇ ಜೊತೆಗಿದ್ದ ಸಂಬಂಧಿಕರನ್ನು ಕೂಡಿಹಾಕಿದ ಘಟನೆ ನಡೆದಿದೆ. 42 ವರ್ಷದ ಲಕ್ಷ್ಮೀ ನಾರಾಯಣ ಚನ್ನಸಂದ್ರದ ಖಾಸಗಿ ಆಸ್ಪತ್ರೆಗೆ ಮೇ 17ರಂದು ದಾಖಲಾಗಿದ್ದರು. ಕೋವಿಡ್ ಸೋಂಕು ತಗುಲಿದ್ದ ಅವರು ಮೇ 27ರಂದು ಮೃತಪಟ್ಟಿದ್ದರು. ಒಟ್ಟು 8.17 ಲಕ್ಷ ರೂ. ಬಿಲ್ ಆಗಿತ್ತು. ಕುಟುಂಬದವರು 4.5 ಲಕ್ಷ ರೂ. ಪಾವತಿ …

Read More »

ಪೋಲೀಸರ ಮೇಲಿನ ಅಕ್ರಮ ಬಂಧನ ಆರೋಪ ಕೈ ಬಿಡಲು ನಿರಾಕರಿಸಿದ ಕೋರ್ಟ್‌

ಬೆಂಗಳೂರು: ಸರಗಳ್ಳತನ ಆರೋಪದಲ್ಲಿ ವ್ಯಕ್ತಿಯನ್ನು ಅಕ್ರಮ ಬಂಧನದಲ್ಲಿ ಇರಿಸಲಾಗಿತ್ತು ಎಂಬ ಆರೋಪದ ಪ್ರಕರಣದಲ್ಲಿ ಏಳು ಪೊಲೀಸರ ವಿರುದ್ಧ ನಡೆಯುತ್ತಿರುವ ವಿಚಾರಣೆ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ‘ಮುಗ್ಧರನ್ನು ಅಕ್ರಮವಾಗಿ ಬಂಧಿಸುವುದು ಮತ್ತು ಅವರನ್ನು ಕ್ರೂರವಾಗಿ ನಡೆಸಿಕೊಳ್ಳುವುದು ಪೊಲೀಸ್ ಅಧಿಕಾರಿಗಳ ಕರ್ತವ್ಯದ ಭಾಗ ಎಂದು ಪರಿಗಣಿಸಲು ಕಾನೂನಿನಲ್ಲಿ ಅವಕಾಶ ಇಲ್ಲ’ ಎಂದು ನ್ಯಾಯಮೂರ್ತಿ ಎಚ್‌.ಪಿ. ಸಂದೇಶ್ ಅವರಿದ್ದ ಪೀಠ ಅಭಿಪ್ರಾಯಪಟ್ಟಿತು. ‘ಒಬ್ಬ ವ್ಯಕ್ತಿಯನ್ನು 24 ಗಂಟೆಗಳಿಗೂ ಹೆಚ್ಚು ಕಾಲ ಲಾಕಪ್‌ನಲ್ಲಿ ಇಟ್ಟುಕೊಳ್ಳಲು ಅವಕಾಶ …

Read More »

ಹೊಸಪೇಟೆ; ಒಂದೇ ದಿನದ ಅಂತರದಲ್ಲಿ ಕೋವಿಡ್‌ಗೆ ಅಕ್ಕ, ತಮ್ಮ ಬಲಿ

ವಿಜಯನಗರ, ಮೇ 30; ಕೋವಿಡ್ ಸೋಂಕಿಗೆ ಅಕ್ಕ ಮತ್ತು ತಮ್ಮ ಬಲಿಯಾದ ಘಟನೆ ಹೊಸಪೇಟೆಯಲ್ಲಿ ನಡೆದಿದೆ. ಚಿಕಿತ್ಸೆ ಫಲಕಾರಿಯಾಗದೇ ಒಂದೇ ದಿನದ ಅಂತರದಲ್ಲಿ ಇಬ್ಬರೂ ಸಹ ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ವಿಜಯನಗರ ಜಿಲ್ಲೆಯ ಹೊಸಪೇಟೆಯ ಕ್ಯಾರೋಲಿನ್ ಲೂಸಿಯಾ ಸ್ಮಿತ್ (45) ಹಾಗೂ ಸಾವಿಯೋ ಸ್ಮಿತ್ (42) ಎಂದು ಗುರುತಿಸಲಾಗಿದೆ. ಕೋವಿಡ್ ಸೋಂಕು ತಗುಲಿದ ಬಳಿಕ 8 ದಿನಗಳಿಂದ ಬಳ್ಳಾರಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.   ಕಾಂಗ್ರೆಸ್‌ನ ರಾಜ್ಯ ಮಹಿಳಾ ಘಟಕದ ಕಾರ್ಯದರ್ಶಿ ಕ್ಯಾರೋಲಿನ್ …

Read More »

ರಾಜ್ಯದಲ್ಲಿ ಲಸಿಕೆ ಹಗರಣ; ಹೈಕೋರ್ಟ್ ಮಧ್ಯ ಪ್ರವೇಶಕ್ಕೆ ಡಿಕೆಶಿ ಮನವಿ

ಬೆಂಗಳೂರು, ಮೇ 29: ರಾಜ್ಯ ಸರ್ಕಾರ ಖರೀದಿಸಿದ ಲಸಿಕೆಯನ್ನು ಖಾಸಗಿ ಆಸ್ಪತ್ರೆಗಳಿಗೆ ಸರಬರಾಜು ಮಾಡಿ, ದುಬಾರಿ ಬೆಲೆಗೆ ಮಾರುತ್ತಿರುವ ಹಗರಣದ ಬಗ್ಗೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಮಧ್ಯ ಪ್ರವೇಶಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಜತೆ ಮಾಧ್ಯಮಗಳ ಮಾತನಾಡಿದ ಅವರು, “ಬೆಡ್ ಹಗರಣ ಬೆಳಕಿಗೆ ಬಂತು. ಬಿಜೆಪಿ ನಾಯಕರು ಒಂದು ಸಮುದಾಯವನ್ನು …

Read More »

ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಯಶಸ್ವಿ ಕ್ರಮ: ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆಯನ್ಮು ನಿಯಂತ್ರಿಸಲು ಅಧಿಕಾರಿಗಳು ಹಾಗೂ ಎಲ್ಲ ಜನ ಪ್ರತಿನಿಧಿಗಳ ಸಹಕಾರದೊಂದಿಗೆ ಯಶಸ್ವಿಯಾಗಿ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಶಶಿಕಲಾ ಜೊಲ್ಲೆಯವರು ತಿಳಿಸಿದ್ದಾರೆ. ಶನಿವಾರ ಮುಖ್ಯಮಂತ್ರಿಗಳಾದ ಬಿ ಎಸ್.ಯಡಿಯೂರಪ್ಪ ಅವರು ಕರೆದಿದ್ದ ಐದು ಜಿಲ್ಲೆಗಳ ಜನ ಪ್ರತಿನಿಧಿಗಳು ಮತ್ತು ಉಸ್ತುವಾರಿ ಸಚಿವರುಗಳ ಸಭೆಯಲ್ಲಿ ಬೆಂಗಳೂರಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ …

Read More »

ಅನಾಥ ಮಕ್ಕಳಿಗೆ ಸರಕಾರದ ಆಸರೆ: ತಂದೆ-ತಾಯಂದಿರನ್ನು ಕಳೆದುಕೊಂಡ ಮಕ್ಕಳಿಗೆ ಮಾಸಿಕ 3,500 ರೂ.

ಕೊರೊನಾ 2ನೇ ಅಲೆ ಅದೆಷ್ಟೋ ಕುಟುಂಬಗಳನ್ನು ಕಾಡಿದೆ. ಸಾವಿರಾರು ಸಂಸಾರಗಳು ದುಡಿಯುವವರನ್ನು ಕಳೆದುಕೊಂಡಿವೆ. ಸಾವಿರಾರು ಮಕ್ಕಳು ಅಪ್ಪ-ಅಮ್ಮ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಇಂಥ ಎಳೆಯರಿಗೆ ಮತ್ತು ಆದಾಯದ ಆಧಾರಸ್ತಂಭ ಕಳೆದುಕೊಂಡವರಿಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಹಾಯದ ಹಸ್ತ ಚಾಚಿವೆ. ಬಾಲ ಸೇವಾ ಯೋಜನೆ ಕೇಂದ್ರ ಸರಕಾರದ ಸಲಹೆಯ ಮೇರೆಗೆ ರಾಜ್ಯ ಸರಕಾರವು ಕೊರೊನಾದಿಂದ ಹೆತ್ತವರನ್ನು ಕಳೆದುಕೊಂಡ ಮಕ್ಕಳಿಗೆ ಮುಖ್ಯಮಂತ್ರಿ ಬಾಲಸೇವಾ ಯೋಜನೆ ಪ್ರಕಟಿಸಿದೆ. ಈ ಮೂಲಕ ಪ್ರತೀ ತಿಂಗಳು 3,500 ರೂ. …

Read More »

ಶಿಕ್ಷಕರ ಕೋವಿಡ್ ಆರೈಕೆ ಕೇಂದ್ರಕ್ಕೆ ಚಾಲನೆ

ಯಾದಗಿರಿ: ನಗರದ ಆರ್‌ಟಿಒ ಕಚೇರಿ ಹಿಂಭಾಗದಲ್ಲಿ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಆರಂಭಿಸಲಾದ ಶಿಕ್ಷಕರ ಕೋವಿಡ್ ಆರೈಕೆ ಕೇಂದ್ರಕ್ಕೆ ಲ್ಲಾ ಉಸ್ತುವಾರಿ ಸಚಿವ ಆರ್. ಶಂಕರ್‌ ಚಾಲನೆ ನೀಡಿದರು. ಕೋವಿಡ್‌ನಿಂದ ಮೃತಪಟ್ಟ 17 ಶಿಕ್ಷಕರ ಭಾವಚಿತ್ರಗಳಿಗೆ ಮಾಲಾರ್ಪಣೆ ಮಾಡಲಾಯಿತು.ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಾಂತಗೌಡ ಪಾಟೀಲ ಅವರು ಮೃತ ಶಿಕ್ಷಕರ ನೆನಪಿಗಾಗಿ ಶಾಲಾ ಆವರಣದಲ್ಲಿ ಸಸಿ ನೆಟ್ಟರು. ಶಾಸಕ ವೆಂಕಟರೆಡ್ಡಿ ಮುದ್ನಾಳ, ಸಂಸದ ರಾಜಾ ಅಮರೇಶ್ವರ ನಾಯಕ, …

Read More »

ಶಾಸಕರ ಅನುದಾನದಲ್ಲಿ ಯಲ್ಲಾಪುರ ಕ್ಕೆ ನಾಲ್ಕು ಆಂಬುಲೆನ್ಸ್‌ ನೀಡಿದ ಶಿವರಾಮ ಹೆಬ್ಬಾರ್‌

ಕಾರವಾರ: ಶಾಸಕರ ಅನುದಾನದಲ್ಲಿ ಕೊರೊನಾ ರೋಗಿಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅವರು ತಮ್ಮ ವಿಧಾನಸಭಾ ಕ್ಷೇತ್ರ ಯಲ್ಲಾಪುರಕ್ಕೆ ನಾಲ್ಕು ಅಂಬುಲೆನ್ಸ್ ಖರೀದಿಸಿದ್ದಾರೆ. ಖರೀದಿಸಿದ ಅಂಬುಲೆನ್ಸ್ ಗಟ್ಟಿಮುಟ್ಟಾಗಿದೆಯೇ ಎಂದು ಪರೀಕ್ಷಿಸಲು ತಾವೇ ಸ್ವತ: ಹೊಸದಾಗಿ ಬಂದ ಅಂಬುಲೆನ್ಸ್ ಏರಿ ವಾಹನ ಚಲಾಯಿಸಿ ಟ್ರಯಲ್ ನೋಡಿದರು. ಯಲ್ಲಾಪುರದ ಪ್ರವಾಸಿ ಮಂದಿರದಿಂದ ಯಲ್ಲಾಪುರ ನಗರವನ್ನು ಒಂದು ಸುತ್ತುಹಾಕಿ ನಂತರ ಅಂಬುಲೆನ್ಸ್ ಸೇವೆಗೆ ಚಾಲನೆ ನೀಡಿದರು. ಸಚಿವ ಶಿವರಾಮ್ ಹೆಬ್ಬಾರ್ ರವರು …

Read More »

ಮುಖ್ಯಮಂತ್ರಿ ಬದಲಾವಣೆ ವಿಚಾರ ಪ್ರಹ್ಲಾದ್ ಜೋಶಿ ಸ್ಪಷ್ಟನೆ

  ಹುಬ್ಬಳ್ಳಿ : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದು, ಸಮರ್ಥರು ಇದ್ದಾರೋ ಇಲ್ಲೊ ಅನ್ನೊದಕ್ಕಿಂತ, ಇದ್ದವರು ಸಮರ್ಥರಿದ್ದಾರೋ ಇಲ್ಲವೊ, ಅವರನ್ನು ಮುಂದುವರೆಸಬೇಕು ಬೇಡವೋ ಅನ್ನೊ ಪ್ರಶ್ನೆ ಇದೆ ಎಂದು ಕುತೂಹಲ ಕಾರಿ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಹೆಡ್ ಕ್ವಾರ್ಟರ್ಸ್ ದೆಹಲಿ, ಆ ಕಾರಣಕ್ಕೆ ದೆಹಲಿಯಲ್ಲಿ ಇರುತ್ತೇನೆ. ಮುಖ್ಯಮಂತ್ರಿ ಹುದ್ದೆ ಈಗ ಖಾಲಿ ಇಲ್ಲ ಯಡಿಯೂರಪ್ಪ ನವರು …

Read More »