Breaking News

Yearly Archives: 2021

ಜನ ಸಹಕರಿಸಿದರೆ ಜೂ.7ರ ನಂತರ ಲಾಕ್‍ಡೌನ್ ಇರಲ್ಲ : ಸಿಎಂ

ಬೆಂಗಳೂರು,- ಜನ ಅಗತ್ಯ ಸಹಕಾರ ನೀಡಿದರೆ ಜೂನ್ 7ರ ನಂತರ ಲಾಕ್‍ಡೌನ್ ಮುಂದುವರೆಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ 7ರವರೆಗೂ ಎಂದಿನಂತೆ ಲಾಕ್‍ಡೌನ್ ಮುಂದುವರೆಯಲಿದೆ. 7ರ ನಂತರ ಪರಿಸ್ಥಿತಿ ಅವಲೋಕಿಸಿ ಲಾಕ್‍ಡೌನ್ ವಿಸ್ತರಣೆ ಬಗ್ಗೆ ತೀರ್ಮಾನಿಸಲಾಗುವುದು ಎಂದರು. ಜನ ಕೊರೊನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಜೂನ್ 7ರ ನಂತರ ಲಾಕ್‍ಡೌನ್ ವಿಸ್ತರಣೆಯ ಅವಶ್ಯಕತೆ ಇರುವುದಿಲ್ಲ. ಹೀಗಾಗಿ ಜನರು ಲಾಕ್‍ಡೌನ್ ಸಂದರ್ಭದಲ್ಲಿ …

Read More »

ಕಮಿಷನ್‌ ಪಡೆದ ಆರೋಪ ; ಶಾಸಕ ರವಿ ಸುಬ್ರಮಣ್ಯ ವಿರುದ್ದ ಪೋಲೀಸ್‌ ದೂರು

ಬೆಂಗಳೂರು: ‘ಉಚಿತವಾಗಿ ನೀಡಬೇಕಾದ ಕೋವಿಡ್‌ ಲಸಿಕೆಯನ್ನು ಖಾಸಗಿ ಆಸ್ಪತ್ರೆಯಲ್ಲಿ ಜನರಿಗೆ ಮಾರಾಟ ಮಾಡಲಾಗುತ್ತಿದೆ. ಬಸವನಗುಡಿ ಕ್ಷೇತ್ರದ ಬಿಜೆಪಿ ಶಾಸಕ ರವಿ ಸುಬ್ರಹ್ಮಣ್ಯ ಹಣ ಪಡೆಯುತ್ತಿದ್ದಾರೆ’ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಎಚ್‌.ಎಂ.ವೆಂಕಟೇಶ್‌ ನಗರ ಪೊಲೀಸ್‌ ಕಮಿಷನರ್‌ ಕಮಲ್‌ ಪಂತ್‌ ಅವರಿಗೆ ಶನಿವಾರ ದೂರು ನೀಡಿದ್ದಾರೆ. ‘ಲಸಿಕೆ’ ಪಡೆಯುವ ಬಗ್ಗೆ ವಿಚಾರಿಸಲು ಹೊಸಕೆರೆಹಳ್ಳಿಯ ಎ.ವಿ. ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಕರೆ ಮಾಡಿರುವ ವೆಂಕಟೇಶ್‌, ಅಲ್ಲಿನ ಸಿಬ್ಬಂದಿಜೊತೆ ಮಾತನಾಡಿದ ಆಡಿಯೊ ತುಣುಕನ್ನೂ ದೂರಿನ ಜೊತೆ …

Read More »

ಗೋಕಾಕ್ ತಾಲೂಕಿನ ಲೊಳಸರ ಗ್ರಾಮದಲ್ಲಿ ಆಟವಾಡುತ್ತಿದ್ದ ಮಗು ಚರಂಡಿಗೆ ಬಿದ್ದು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ

ಬೆಳಗಾವಿ: ಕೊರೊನಾ ಲಾಕ್ ಡೌನ್ ನಡುವೆ ಬೆಳಗಾವಿಯಲ್ಲಿ ದುರಂತವೊಂದು ಸಂಭವಿಸಿದೆ. ಮನೆಮುಂದೆ ಆಟವಾಡುತ್ತಿದ್ದ ಮಗು ಚರಂಡಿಗೆ ಬಿದ್ದು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಸಂಭವಿಸಿದೆ. ಗೋಕಾಕ್ ತಾಲೂಕಿನ ಲೊಳಸರ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮನೆ ಮುಂದೆ ಇದ್ದ ಚಂಡಿಗೆ ಸಾದಿಕಾ ಸದ್ದಾಂ ಎಂಬ ಒಂದು ವರ್ಷದ ಮಗು ಬಿದ್ದು ಸಾವನ್ನಪ್ಪಿದೆ. ಚರಂಡಿ ನೀರು ಮನೆ ಮುಂದೆ ಕಟ್ಟಿಕೊಂಡಿದ್ದರೂ ಈ ಬಗ್ಗೆ ಮನೆಯವರಾಗಲಿ, ಸಂಬಂಧಪಟ್ಟವರಾಗಲಿ ಗಮನಹರಿಸಿಲ್ಲ. ಆಟವಾಡಲು ಹೋದ ಮಗು ಆಯತಪ್ಪಿ …

Read More »

ಹದಗೆಟ್ಟು ಹೋದ ಬೆಳಗಾವಿ ಸರ್ಕಾರಿ ಆಸ್ಪತ್ರೆ ಪರಿಸ್ಥಿತಿ ಸ್ವತಃ B.S.Y. ಬಂದು ಪರಿಶೀಲನೆ….

ಬೆಳಗಾವಿ – ಬೆಳಗಾವಿಯ ಜಿಲ್ಲಾ ಆಸ್ಪತ್ರೆ (ಬಿಮ್ಸ್) ಪರಿಸ್ಥಿತಿ ಎಲ್ಲಿಗೆ ಬಂದಿದೆ ಎಂದರೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪರಿಸ್ಥಿತಿ ನೋಡುವುದಕ್ಕಾಗಿಯೇ ಸ್ವತಃ ಇಲ್ಲಿಗೆ ಆಗಮಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಉಸ್ತುವಾರಿ ಸಚಿವರೂ ಸೇರಿ ಐವರು ಮಂತ್ರಿಗಳಿದ್ದಾರೆ.  ಓರ್ವ ಉಪಮುಖ್ಯಮಂತ್ರಿ ಇದ್ದಾರೆ. ಸಂಸದರಿದ್ದಾರೆ. ಇವರೆಲ್ಲರೂ ಸೇರಿದಂತೆ 18 ಶಾಸಕರಿದ್ದಾರೆ. ದೆಹಲಿ ಪ್ರತಿನಿಧಿ, ಸರಕಾರದ ಮುಖ್ಯಸಚೇತಕ, ವಿಧಾನಸಭೆ ಉಪಸಭಾಧ್ಯಕ್ಷ, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು ಎಲ್ಲರೂ ಇದ್ದಾರೆ. ಆದರೆ ಯಾರಿಂದಲೂ ಬಿಮ್ಸ್  ನಿಯಂತ್ರಣ ಸಾಧ್ಯವಾಗಿಲ್ಲ. ಇಲ್ಲಿನ ಅಧಿಕಾರಿಗಳು …

Read More »

ಏರ್ ಸ್ಪ್ರೇ ಅಸ್ತ್ರ- ಲಘು ವಿಮಾನದಿಂದ ಸೋಂಕು ನಿವಾರಕ ದ್ರಾವಣ ಸಿಂಪಡಣೆ

ಬೆಂಗಳೂರು: ಗಾಳಿಯಲ್ಲಿ ಅಲ್ಪ ಕಾಲ ತೇಲುವ ಕೊರೊನಾ ವೈರಸ್ ನಾಶಕ್ಕೆ ಬಿಬಿಎಂಪಿ ಮುಂದಾಗಿದ್ದು, ಇದಕ್ಕಾಗಿ ಸೋಂಕು ನಿವಾರಕ ದ್ರಾವಣವನ್ನು ವಿಮಾನದ ಮೂಲಕ ಸಿಂಪಡಣೆ ಮಾಡಲು ಪ್ಲಾನ್ ಮಾಡಿದೆ. ವಿಮಾನದ ಮೂಲಕ ಜೈವಿಕ ಸೋಂಕು ನಿವಾರಕವನ್ನು ಸಿಂಪಡಿಸುವ ಏರಿಯಲ್ ವರ್ಕ್ಸ್ ಏರೋ ಎಲ್‍ಎಲ್‍ಪಿ ಸಂಸ್ಥೆಯ ಪ್ರಾಯೋಗಿಕ ಕಾರ್ಯಾಚರಣೆ ಯೋಜನೆಗೆ ಇಂದು ಚಾಲನೆ ಕೊಡಲಾಗಿದೆ. ವಿದೇಶಗಳಂತೆ ಬೆಂಗಳೂರಿನಲ್ಲಿ ಕೂಡ ಲಘು ವಿಮಾನದ ಮೂಲಕ ಸಾಂಕ್ರಾಮಿಕ ಔಷಧಿ ಸಿಂಪಡಣೆ ಮಾಡಲಾಗುತ್ತದೆ. ದೇಶದಲ್ಲೇ ಇದು ಮೊದಲ …

Read More »

ಕೊರೋನಾ 2ನೇ ಅಲೆಯು ಗ್ರಾಮೀಣ ಭಾಗದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗ ದಳದ ಕಾರ್ಯಕರ್ತರಿಂದ ಪ್ರಾರಂಭಿಸಲಾದ ಉಚಿತ ಅಂಬ್ಯುಲೆನ್ಸ್ ಸೇವೆ

ಗೋಕಾಕ: ಕೊರೋನಾ 2ನೇ ಅಲೆಯು ಗ್ರಾಮೀಣ ಭಾಗದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗ ದಳದ ಕಾರ್ಯಕರ್ತರಿಂದ ಪ್ರಾರಂಭಿಸಲಾದ ಅಂಬ್ಯುಲೆನ್ಸ್ ಉಚಿತ ಸೇವೆಗೆ ಆರ್‍ಎಸ್‍ಎಸ್‍ನ ಬೆಳಗಾವಿ ವಿಭಾಗ ಸಂಚಾಲಕ ಎಮ್.ಡಿ.ಚುನಮರಿ ಅವರು ಶನಿವಾರದಂದು ನಗರದ ಪಟಗುಂದಿ ಮಾರುತಿ ದೇವಸ್ಥಾನದ ಆವರಣದಲ್ಲಿ ಚಾಲನೆ ನೀಡಿದರು. ಭಜರಂಗದಳದ ಬೆಳಗಾವಿ ವಿಭಾಗೀಯ ಸಂಯೋಜಕ ಸದಾಶಿವ ಗುದಗಗೋಳ ಅವರು ಮಾತನಾಡಿ, ಜನತೆ ಧೈರ್ಯದಿಂದ ಈ ಕೊರೋನಾ ವೈರಸ್‍ನ್ನು ಎದುರಿಸಿ, ನಿಮ್ಮೊಂದಿಗೆ …

Read More »

ರೈತರಿಗೆ ಬಿತ್ತನೆ ಬೀಜ ವಿತರಿಸಿದ ನಾಗಪ್ಪ ಶೇಖರಗೋಳ

ಗೋಕಾಕ: ನಗರದ ಎನ್‍ಎಸ್‍ಎಫ್ ಅತಿಥಿ ಗೃಹದ ಆವರಣದಲ್ಲಿ ಕೃಷಿ ಇಲಾಖೆಯಿಂದ ಸಹಾಯಧನದಲ್ಲಿ ಬಿತ್ತನೆ ಬೀಜ ವಿತರಣಾ ಕಾರ್ಯಕ್ರಮಕ್ಕೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಅವರು ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಮುಂಗಾರು ಹಂಗಾಮಿಗೆ ರೈತರಿಗೆ ಅನುಕೂಲವಾಗುವ ದೃಷ್ಟಿಯಿಂದ ರೈತ ಸಂರ್ಪಕ ಕೇಂದ್ರಗಳಾದ ಗೋಕಾಕ, ಅರಭಾವಿ, ಕೌಜಲಗಿ ಹಾಗೂ ಬೀಜ ಮಾರಾಟ ಕೇಂದ್ರಗಳ ಜೊತೆಗೆ 18 ಉಪ ಮಾರಾಟ ಕೇಂದ್ರಗಳಲ್ಲಿಯೂ ಬೀಜಗಳನ್ನು ವಿತರಿಸಲಾಗುತ್ತಿದೆ …

Read More »

ಪಿಪಿಇ ಉಡುಪು ಧರಿಸಿ ಕೋವಿಡ್ ವಾರ್ಡ್‌ಗೆ ಹೋಗಿದ್ದ ಲಕ್ಷ್ಮಣ ಸವದಿ ಅಸಮಾಧಾನ

ಬೆಳಗಾವಿ: ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಇಲ್ಲಿನ ಜಿಲ್ಲಾಸ್ಪತ್ರೆ (ಬಿಮ್ಸ್)ಗೆ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು. ಪಿಪಿಇ ಉಡುಪು ಧರಿಸಿ ಕೋವಿಡ್ ವಾರ್ಡ್‌ಗೆ ಹೋಗಿದ್ದ ಅವರು ಅಲ್ಲಿನ ಅವ್ಯವಸ್ಥೆ ಕಂಡು ಅಧಿಕಾರಿಗಳ ‌ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಆಸ್ಪತ್ರೆಯಲ್ಲಿ ಶುಚಿತ್ವ ಇಲ್ಲದಿರುವುದನ್ನು ಕಂಡು ಬಿಮ್ಸ್ ನಿರ್ದೇಶಕ ಡಾ.ವಿನಯ್ ದಾಸ್ತಿಕೊಪ್ಪ ಹಾಗೂ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ‘ಕೂಡಲೇ ವ್ಯವಸ್ಥೆ ಸರಿಪಡಿಸಬೇಕು. ಶುಚಿತ್ವ ಕಾಪಾಡಿಕೊಳ್ಳಬೇಕು. ಸೋಂಕಿತರಿಗೆ ಪೌಷ್ಟಿಕ ಆಹಾರ ನೀಡಬೇಕು’ ಎಂದು …

Read More »

ಕೊರೊನಾ ಸೋಂಕಿಗೆ ನಾಟಿ ಔಷಧ ನೀಡುತ್ತಿದ್ದ ಮಹಿಳೆಗೆ ತಹಶೀಲ್ದಾರ್​ ಎಚ್ಚರಿಕೆ

ಬಳ್ಳಾರಿ: ಕೊರೊನಾ ಸೋಂಕಿಗೆ ನಾಟಿ ಔಷಧ ನೀಡುತ್ತಿದ್ದ ಮಹಿಳೆಗೆ ಜಿಲ್ಲೆಯ ಸಂಡೂರು ತಾಲೂಕಿನ ತಹಶೀಲ್ದಾರ್​ ರಶ್ಮಿ ಅವರು ಎಚ್ಚರಿಕೆ ನೀಡಿದ್ದು, ಯಾರಿಗೂ ಔಷಧಿ ನೀಡದಂತೆ ಸೂಚನೆ ಕೊಟ್ಟಿದ್ದಾರೆ. ಸಂಡೂರು ತಾಲೂಕಿನ ಹಳೆ ದರೋಜಿ ಗ್ರಾಮದಲ್ಲಿ ಕೊರೊನಾಗೆ ಮಹಿಳೆಯೊಬ್ಬರು ನಾಟಿ ಔಷಧ ನೀಡುತ್ತಿದ್ದರು. ಈ ಔಷಧ ಪಡೆದರೆ ಕೊರೊನಾ ವಾಸಿಯಾಗುತ್ತೆ ಎಂದು ನಂಬಿರುವ ಹಲವರು ಔಷಧ ಪಡೆಯಲು ಮಹಿಳೆಯ ನಿವಾಸದ ಎದುರು ಆಗಮಿಸುತ್ತಿದ್ದರು. ಮಹಿಳೆ ಮನೆಯಲ್ಲಿ ಔಷಧ ತಯಾರಿಸಿ ಜನರಿಗೆ ನೀಡುತ್ತಿದ್ದಾರೆ …

Read More »

ಸಿಎಂ ವಿಡಿಯೋ ಸಂವಾದ

ಬೆಳಗಾವಿ : ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ನಿರೀಕ್ಷೆಗೂ ಮೀರಿ ಹರಡಿದ್ದು, ಸದ್ಯಕ್ಕೆ ಸೋಂಕುಗಳ ತೀವ್ರತೆ ಕಡಿಮೆಯಾಗಿದೆ. ಆದರೆ ಕೊವಿಡ್ ಸೋಂಕು ತಡೆಗಟ್ಟಬೇಕಾದರೆ ಗ್ರಾಮೀಣ ಪ್ರದೇಶಗಳಲ್ಲಿನ ಸೋಂಕಿತರನ್ನು ಹೋಮ್ ಐಸೋಲೇಷನ್ ಬದಲಾಗಿ ಕಡ್ಡಾಯವಾಗಿ ಕೋವಿಡ್ ಆರೈಕೆ ಕೇಂದ್ರಗಳಿಗೆ ದಾಖಲಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೂಚನೆ ನೀಡಿದರು. ಕೋವಿಡ್ ಸೋಂಕು ತಡೆಗಟ್ಟುವುದಕ್ಕೆ ಸಂಬಂಧಿಸಿದಂತೆ ಕೈಗೊಂಡಿರುವ ಕ್ರಮಗಳ ಕುರಿತು ಬೆಳಗಾವಿ ಸೇರಿದಂತೆ ಐದು ಜಿಲ್ಲೆಗಳ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ …

Read More »