ನವದೆಹಲಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ತನ್ನ ಶಾಖೆಗಳು ಮತ್ತು ಎಟಿಎಂಗಳಿಂದ ಹಣ ಹಿಂಪಡೆಯುವುದು, ಚೆಕ್ ಬುಕ್ ಶುಲ್ಕ, ಹಣ ವರ್ಗಾವಣೆ ಮತ್ತು ಹಣಕಾಸೇತರ ವಹಿವಾಟುಗಳಿಗೆ ನಿಯಮಗಳು ಮತ್ತು ಕಟ್ಟುಪಾಡುಗಳನ್ನು ಬದಲಾಯಿಸಿದೆ. ಎಸ್ಬಿಐನ ಬೇಸಿಕ್ ಸೇವಿಂಗ್ಸ್ ಬ್ಯಾಂಕ್ ಠೇವಣಿ (ಬಿಎಸ್ಬಿಡಿ) ಖಾತೆದಾರರಿಗೆ ಅನ್ವಯವಾಗುವ ಈ ನಿಯಮಗಳು 2021ರ ಜುಲೈ 1ರಿಂದ ಜಾರಿಗೆ ಬರಲಿವೆ. ಮೂಲ ಉಳಿತಾಯ ಬ್ಯಾಂಕ್ ಠೇವಣಿ (ಬಿಎಸ್ಬಿಡಿ) ಖಾತೆಯು ಬ್ಯಾಂಕಿನ ಎಲ್ಲಾ ಶಾಖೆಗಳಲ್ಲಿ ಲಭ್ಯವಿದೆ. …
Read More »Yearly Archives: 2021
ಈ ಗಂಭೀರ ಸ್ಥಿತಿಯನ್ನು ತಡೆಗಟ್ಟಲು ದೇಶದ 100 ಕೋಟಿ ಜನರಿಗೆ ಕೋವಿಡ್ ತಡೆ ಲಸಿಕೆ (ವ್ಯಾಕ್ಸಿನೆಷನ್) ಮಾಡುವುದೊಂದೆ ಶಾಶ್ವತ ಪರಿಹಾರ: ಎಂ.ಬಿ.ಪಾಟೀಲ್.
ವಿಜಯಪುರ: ದೇಶದ ಆರ್ಥಿಕ ಸ್ಥಿತಿ ಗಂಭೀರವಾಗಿದೆ. ಈ ಗಂಭೀರ ಸ್ಥಿತಿಯನ್ನು ತಡೆಗಟ್ಟಲು ದೇಶದ 100 ಕೋಟಿ ಜನರಿಗೆ ಕೋವಿಡ್ ತಡೆ ಲಸಿಕೆ (ವ್ಯಾಕ್ಸಿನೆಷನ್) ಮಾಡುವುದೊಂದೆ ಶಾಶ್ವತ ಪರಿಹಾರ. ಆದಷ್ಟು ಬೇಗ ಲಸಿಕೆಯನ್ನು ನೀಡಬೇಕು ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ. ಕೊರೊನಾ ಮಹಾಮಾರಿ ಮೊದಲನೇ ಅಲೆ ಮುಗಿದು, ಸದ್ಯ ಎರಡನೇಯ ಅಲೆಯ ಹಾನಿಯನ್ನು ಅನುಭವಿಸುತ್ತಿರುವ ನಮ್ಮ ದೇಶಕ್ಕೆ ಮುಂದೆ 3ನೇ ಅಲೆ ಆತಂಕವೂ ಇದೆ. ಈ ಕಾರಣದಿಂದ ದೇಶದಲ್ಲಿ ಲಕ್ಷಾಂತರ …
Read More »ಬ್ಲಾಕ್ ಫಂಗಸ್ ಚಿಕಿತ್ಸೆಗೆ ಎಂಫೋಟೆರಿಸಿನ್-ಬಿ ಔಷಧಿ ಕರ್ನಾಟಕಕ್ಕೆ ಹೆಚ್ಚುವರಿ 1221 ವೈಲ್ಸ್ ಹಂಚಿಕೆ
ಬೆಂಗಳೂರು, ಮೇ 26- ಬ್ಲಾಕ್ ಫಂಗಸ್ ಚಿಕಿತ್ಸೆಗೆ ಬಳಸುವ ಎಂಫೋಟೆರಿಸಿನ್-ಬಿ ಔಷಧಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ ಎಂಬ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಕೇಂದ್ರ ಸರ್ಕಾರ ಇಂದು ಹೆಚ್ಚುವರಿಯಾಗಿ 1221 ವೈಲ್ಸ್ ಗಳನ್ನು ಹಂಚಿಕೆ ಮಾಡಿದೆ.ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ಅವರು, ದೇಶಾದ್ಯಂತ ವಿವಿಧ ರಾಜ್ಯಗಳಗೆ ಹಂಚಿಕೆ ಮಾಡಿರುವ ಔಷಧಿಗಳ ಬಗ್ಗೆ ಮಾಹಿತಿ ನೀಡಿದ್ದು, 481 ಕಪ್ಪು ಶಿಲೀಂದ್ರ ಪ್ರಕರಣಗಳಿರುವ ಕರ್ನಾಟಕಕ್ಕೆ 1221 ವೈಲ್ಸ್ ಗಳನ್ನು ಹಂಚಿಕೆ …
Read More »ಸಿಎಂ ಯಡಿಯೂರಪ್ಪ ಬದಲಾವಣೆ ವಿಚಾರವಾಗಿ ದೆಹಲಿ ದಂಡಯಾತ್ರೆ ಕೈಗೊಂಡಿದ್ದ ಬಂಡಾಯಗಾರರಿಗೆ ಹಿನ್ನಡೆ
ಬೆಂಗಳೂರು : ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಬದಲಾವಣೆ ವಿಚಾರವಾಗಿ ದೆಹಲಿ ದಂಡಯಾತ್ರೆ ಕೈಗೊಂಡಿದ್ದ ಬಂಡಾಯಗಾರರಿಗೆ ಹಿನ್ನಡೆಯಾಗಿದೆ. ಹೈಕಮಾಂಡ್ ಭೇಟಿಗೆ ಬಂದಿದ್ದ ಸಚಿವ ಸಿ.ಪಿ ಯೋಗೇಶ್ವರ್, ಶಾಸಕ ಅರವಿಂದ ಬೆಲ್ಲದ್ ಸೇರಿದಂತೆ ಮತ್ತಿತರರ ಭೇಟಿಗೆ ಹೈಕಮಾಂಡ್ ನಾಯಕರು ಸಮಯ ನೀಡಿಲ್ಲ.ಇದರಿಂದಾಗಿ ಬಂದ ದಾರಿಗೆ ಸುಂಕ ಇಲ್ಲ ಎಂಬಂತಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸೇರಿ ಹಲವು ನಾಯಕರ ಭೇಟಿಗೆ ಪ್ರಯತ್ನ ನಡೆಸಿದರೂ ಪ್ರಯೋಜನವಾಗಿಲ್ಲ. ದೇಶದಾದ್ಯಂತ …
Read More »ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ ಹೃದಯಾಘಾತದಿಂದ ನಿಧನ
ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 104 ವರ್ಷ ವಯಸ್ಸಾಗಿತ್ತು. ಇತ್ತೀಚೆಗೆ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದ ದೊರೆಸ್ವಾಮಿ ಇದೀಗ ಜಯದೇವ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. 1918 ಏಪ್ರಿಲ್ 10ರಂದು ಹಾರೋಹಳ್ಳಿಯಲ್ಲಿ ಜನಿಸಿದ್ದ ದೊರೆಸ್ವಾಮಿ ಪ್ರಾಥಮಿಕ ಶಿಕ್ಷಣದ ಬಳಿಕ ಬೆಂಗಳೂರಿಗೆ ಹೆಚ್ಚಿನ ಶಿಕ್ಷಣಕ್ಕಾಗಿ ಬಂದಿದ್ದರು. 1942ರ ಹೊತ್ತಿಗೆ, ಅವರು ತಮ್ಮ ಬಿ.ಎಸ್.ಸಿ ಯನ್ನು ಪೂರ್ಣಗೊಳಿಸಿದರು ಮತ್ತು ಉಪನ್ಯಾಸಕರಾಗಿ ಕಾಲೇಜಿನಲ್ಲಿ ಸೇರಿಕೊಂಡರು. ಆಗಸ್ಟ್ನಲ್ಲಿ, ಕ್ವಿಟ್ ಇಂಡಿಯಾ ಸ್ವಾತಂತ್ರ್ಯ …
Read More »ಹಿಲ್ ಗಾರ್ಡನ್ ಕಚೇರಿಯಲ್ಲಿ ಸ್ಯಾನಿಟೈಸರ್, ಮಾಸ್ಕ್ ಹಾಗೂ ಪಿಪಿಇ ಕಿಟ್ ಗಳನ್ನು ವಿತರಿಸಿದ ರಾಹುಲ್ ಜಾರಕಿಹೊಳಿ
ಗೋಕಾಕ: ಯಮಕನಮರಡಿ ಮತಕ್ಷೇತ್ರದ 6 ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ಕೊರೊನಾ ವಾರಿಯರ್ಸ್ ಗಳಿಗೆ ಯುವ ಮುಖಂಡರಾದ ರಾಹುಲ್ ಜಾರಕಿಹೊಳಿ ಅವರು ಇಂದು ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಸ್ಯಾನಿಟೈಸರ್, ಮಾಸ್ಕ್ ಹಾಗೂ ಪಿಪಿಇ ಕಿಟ್ ಗಳನ್ನು ವಿತರಿಸಿದರು. ನಂತರ ಮಾತನಾಡಿದ ಅವರು, “ಕೋವಿಡ್ ನಿಯಂತ್ರಣದಲ್ಲಿ ಕೊರೊನಾ ವಾರಿಯರ್ಸ್ ಗಳ ಪಾತ್ರ ಮಹತ್ವದ್ದಾಗಿದೆ. ವಾರಿಯರ್ಸ್ ಗಳು ಸಾರ್ವಜನಿಕರೊಂದಿಗೆ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಜನರು ಕೂಡ ಕೊರೊನಾ ವಾರಿಯರ್ಸ್ ಗಳೊಂದಿಗೆ ಸಹಕರಿಸಬೇಕು” ಎಂದು …
Read More »ಇಂಜಿನಿಯರಿಂಗ್ ಪದವಿ ಸೇರಿದ್ದು ಬಿಟ್ಟರೆ ಬರೋಬ್ಬರಿ 20 ಕ್ಕೂ ಹೆಚ್ಚು ವಿಷಯಗಳಲ್ಲಿ ಬ್ಯಾಕ್ ಲಾಕ್ ಇಟ್ಟುಕೊಂಡಿದ್ದಾಳೆ! ಇಂಜಿನಿಯರಿಂಗ್ ಪದವಿಯೂ ಮುಗಿಸಿರಲಿಲ್ಲ.
ಬೆಂಗಳೂರು, : ಇಂಜಿನಿಯರಿಂಗ್ ಪದವೀಧರೆಯಾಗಿದ್ದ ಯುವತಿಗೆ ಕೆಲಸದ ಅಮಿಷೆ ಒಡ್ಡಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬುದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಸಂತ್ರಸ್ತ ಯುವತಿ ಹೊರಸಿರುವ ಆರೋಪ. ವಿಪರ್ಯಾಸವೆಂದರೆ ಆಕೆ ಇಂಜಿನಿಯರಿಂಗ್ ಪದವಿ ಸೇರಿದ್ದು ಬಿಟ್ಟರೆ ಬರೋಬ್ಬರಿ 20 ಕ್ಕೂ ಹೆಚ್ಚು ವಿಷಯಗಳಲ್ಲಿ ಬ್ಯಾಕ್ ಲಾಕ್ ಇಟ್ಟುಕೊಂಡಿದ್ದಾಳೆ! ಇಂಜಿನಿಯರಿಂಗ್ ಪದವಿಯೂ ಮುಗಿಸಿರಲಿಲ್ಲ. ಇನ್ನು ಸರ್ಕಾರಿ ಕೆಲಸ ಕೇಳಿಕೊಂಡು ಸಂತ್ರಸ್ತ ಯುವತಿ ಹೋಗಿದ್ದು ಯಾಕೆ? ಜಲ ಸಂಪನ್ಮೂಲ ಖಾತೆ ಮಾಜಿ …
Read More »ಅತ್ಯಾಚಾರವೆಸಗಿ, ಮಹಿಳೆಯನ್ನ ವಿದ್ಯುತ್ ಕಂಬಕ್ಕೆ ನೇತು ಹಾಕಿದ ಕಾಮುಕರು
ಪಾಟ್ನಾ: ಬಿಹಾರದ ಸಮಸ್ತಿಪುರ ಜಿಲ್ಲೆಯಲ್ಲಿ ಅಮಾನವೀಯ ಘಟನೆವೊಂದು ನಡೆದಿರುವುದು ಬೆಳಕಿಗೆ ಬಂದಿದೆ. ಮಹಿಳೆಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ನಂತರ, ಆಕೆಯನ್ನ ವಿದ್ಯುತ್ ಕಂಬಕ್ಕೆ ನೇತು ಹಾಕಿರುವ ಪ್ರಕರಣ ನಡೆದಿದೆ. ಸಮಸ್ತಿಪುರ ಜಿಲ್ಲೆಯ ವಿಭೂತಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬೆಳಗ್ಗೆ ಶೌಚಕ್ಕಾಗಿ ಮನೆಯಿಂದ ಹೊರಗಡೆ ಹೋಗಿದ್ದ ಸಂದರ್ಭದಲ್ಲಿ ಮಹಿಳೆಗೆ ಕಿರುಕುಳ ನೀಡಿರುವ ದುಷ್ಕರ್ಮಿಗಳು ಅತ್ಯಾಚಾರವೆಸಗಿದ್ದಾರೆ. ಈ ವೇಳೆ ಪ್ರಜ್ಞೆ ತಪ್ಪಿರುವ ಆಕೆಯನ್ನ ವಿದ್ಯುತ್ ಕಂಬಕ್ಕೆ ಕಟ್ಟಿ ನೇತು …
Read More »ಬಾಬಾ ರಾಮ್‍ದೇವ್ ಅವರಿಗೆ 1000 ಕೋಟಿ ರೂ. ಮಾನನಷ್ಟ ನೋಟಿಸ್ ನೀಡಿದ ಐಎಂಎ
ನವದೆಹಲಿ: ಅಲೋಪತಿ ಔಷಧಿ ಕುರಿತು ಯೋಗ ಗುರು ಬಾಬಾ ರಾಮ್‍ದೇವ್ ನೀಡಿದ ಹೇಳಿಕೆಯನ್ನು ಖಂಡಿಸಿ ಭಾರತೀಯ ವೈದ್ಯಕೀಯ ಸಂಘ(ಐಎಂಎ)ದ ಉತ್ತರಾಖಂಡ್ ವಿಭಾಗ ಬರೋಬ್ಬರಿ 1000 ಕೋಟಿ ರೂ. ಮಾನನಷ್ಟ ನೋಟಿಸ್ ನೀಡಿದೆ. ಬಾಬಾ ರಾಮ್‍ದೇವ್ ಅವರು ತಮ್ಮ ಹೇಳಿಕೆ ಕುರಿತು ವೀಡಿಯೋ ಪೋಸ್ಟ್ ಮಾಡಬೇಕು ಹಾಗೂ 15 ದಿನಗಳೊಳಗೆ ಲಿಖಿತ ರೂಪದಲ್ಲಿ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ 1000 ಕೋಟಿ ರೂ.ಗಳನ್ನು ಬೇಡಿಕೆ ಇಡುತ್ತೇವೆ ಎಂದು ಐಎಂಎ ನೋಟಿಸ್‍ನಲ್ಲಿ ಬರೆಯಲಾಗಿದೆ. ಅಲ್ಲದೆ ಐಎಂಎ …
Read More »ಕಿಮ್ಸ್‌ನಲ್ಲಿ 96 ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಚಿಕಿತ್ಸೆ
ಹುಬ್ಬಳ್ಳಿ: ನಗರದ ಕಿಮ್ಸ್ ಆಸ್ಪತ್ರೆಯಲ್ಲಿ 96 ಜನ ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರತಾನಿ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಮಾಹಿತಿ ನೀಡಿರುವ ಅವರು, ಮೇ 24ರ ವರೆಗೆ ನಮ್ಮ ಆಸ್ಪತ್ರೆಯಲ್ಲಿ ಧಾರವಾಡ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳ 109 ಜನ ಬ್ಲ್ಯಾಕ್ ಫಂಗಸ್ ಸೋಂಕಿತರು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ಕೆಲವು ಸೋಂಕಿತರು ತಮ್ಮ ಜಿಲ್ಲೆಯ ಆಸ್ಪತ್ರೆಗಳಿಗೆ ಹೋಗಿದ್ದಾರೆ. ಸದ್ಯ ಕಿಮ್ಸ್ …
Read More »