Breaking News

Yearly Archives: 2021

ಗುರುವಾರದಿಂದ ಹಿಡಕಲ್ ಜಲಾಶಯದಿಂದ ಮೂರೂ ಕಾಲುವೆಗಳಿಗೆ ನೀರು ಬಿಡುಗಡೆ: ಬಾಲಚಂದ್ರ ಜಾರಕಿಹೊಳಿ

ಗೋಕಾಕ:  ಹಿಡಕಲ್ ಜಲಾಶಯದಿಂದ ಘಟಪ್ರಭಾ ಕಾಲುವೆಗಳಿಗೆ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರನ್ನು ಮೇ.೨೭ ರಿಂದ ೭ ದಿನಗಳ ವರೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಕಹಾಮ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಗುರುವಾರದಿಂದ ಹಿಡಕಲ್ ಜಲಾಶಯದಿಂದ ಮೂರೂ ಕಾಲುವೆಗಳಿಗೆ ನೀರು ಬಿಡುಗಡೆಯಾಗಲಿದೆ ಎಂದು ಅವರು ಹೇಳಿದ್ದಾರೆ. ಘಟಪ್ರಭಾ ಎಡದಂಡೆ ಕಾಲುವೆ ಮತ್ತು ಘಟಪ್ರಭಾ ಬಲದಂಡೆ ಕಾಲುವೆಗಳಿಗೆ ತಲಾ ೧.೫೦ ಟಿಎಂಸಿ ಹಾಗೂ ಸಿಬಿಸಿ ಕಾಲುವೆಗೆ …

Read More »

ಬ್ಲಾಕ್ ಫಂಗಸ್ – ಎಲ್ಲಾ ಮೆಡಿಕಲ್ ಕಾಲೇಜುಗಳಲ್ಲಿ ಚಿಕಿತ್ಸೆ

ಹಾಸನ: ಕೊರೊನಾ ಎರಡನೇ ಅಲೆ ನಡುವೆ ಬ್ಲ್ಯಾಕ್ ಫಂಗಸ್ ಅಟ್ಟಹಾಸ ಹೆಚ್ಚುತ್ತಿದ್ದು, ರಾಜ್ಯದ ಎಲ್ಲಾ ಮೆಡಿಕಲ್ ಕಾಲೇಜುಗಳಲ್ಲಿ ಚಿಕಿತ್ಸೆ ನೀಡಲು ನಿರ್ಧರಿಸಲಾಗಿದೆ ಎಂದು ರಾಜ್ಯ ಮುಖ್ಯಕಾರ್ಯದರ್ಶಿ ರವಿಕುಮಾರ್ ತಿಳಿಸಿದ್ದಾರೆ.   ಹಾಸನದಲ್ಲಿ ಮಾತನಾಡಿದ ರವಿಕುಮಾರ್, ಬ್ಲ್ಯಾಕ್ ಫಂಗಸ್ ಗೆ ಔಷಧ ಬಂದಿದೆ. ರಾಜ್ಯದ ಜನತೆ ಆತಂಕ್ಕೀಡಾಗುವ ಅಗತ್ಯವಿಲ್ಲ. ಮೆಡಿಕಲ್ ಕಾಲೇಜುಗಳಿರುವ ಕಡೆಗಳಲ್ಲಿ ಬ್ಲ್ಯಾಕ್ ಫಂಗಸ್ ರೋಗಿಗಳನ್ನು ಅಲ್ಲಿಯೇ ಚಿಕಿತ್ಸೆಗೊಳಪಡಿಸಲಾಗುವುದು. ಅಂತಹ ಸೋಂಕಿತರನ್ನು ಬೇರೆಡೆ ಶಿಫ್ಟ್ ಮಾಡುವಂತಿಲ್ಲ ಎಂದು ಸರ್ಕಾರದಿಂದ ಆದೇಶ …

Read More »

ರಾಧೇ ಪೈರಸಿ ಮಾಡಿದ್ರೆ ವಾಟ್ಸಾಪ್ ರದ್ದುಗೊಳಿಸಿ: ದೆಹಲಿ ಹೈ ಕೋರ್ಟ್

ಸಲ್ಮಾನ್ ಖಾನ್ ನಟನೆಯ ರಾಧೇ ಸಿನಿಮಾ ಇತ್ತೀಚಿಗಷ್ಟೆ ತೆರೆಕಂಡಿತ್ತು. ಲಾಕ್‌ಡೌನ್ ಕಾರಣದಿಂದ ಚಿತ್ರಮಂದಿರಗಳು ತೆರೆದಿಲ್ಲ. ಹಾಗಾಗಿ, ಒಟಿಟಿಯಲ್ಲಿ ರಾಧೇ ಸಿನಿಮಾ ಬಿಡುಗಡೆಯಾಗಿತ್ತು. ರಿಲೀಸ್ ಆದ ದಿನವೇ ರಾಧೇ ಚಿತ್ರಕ್ಕೆ ಪೈರಸಿ ಕಾಟ ಎದುರಾಯಿತು. ರಾಧೇ ಚಿತ್ರಕ್ಕೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದ್ದು ಒಂದು ಕಡೆಯಾದರೆ, ಸಿನಿಮಾ ಪೈರಸಿಯಾಗಿದ್ದು ಸಹಜವಾಗಿ ತಯಾರಕರಿಗೆ ತಲೆಬಿಸಿ ಹೆಚ್ಚಿಸಿತು. ಹಾಗಾಗಿ, ಪೈರಸಿ ಹರಡಿಸುವವರ ವಿರುದ್ಧ ನಿರ್ಮಾಪಕರು ಹೈ ಕೋರ್ಟ್ ಮೊರೆ ಹೋದರು. ಈ ಅರ್ಜಿ ವಿಚಾರಣೆ ಮಾಡಿದ ದೆಹಲಿ …

Read More »

ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಆಘಾತ; ಹಿರಿಯ ನಟ ಕೃಷ್ಣೇಗೌಡ ವಿಧಿವಶ

ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆ ಕನ್ನಡ ಚಿತ್ರರಂಗ ಒಬ್ಬರ ಹಿಂದೊಬ್ಬರಂತೆ ಹಿರಿಯ ಕಲಾವಿದರನ್ನು ಕಳೆದುಕೊಳ್ಳುತ್ತಿದೆ. ಇದೀಗ ಹಿರಿಯ ನಟ, ರಂಗಭೂಮಿ ಕಲಾವಿದ ಕೃಷ್ಣೇಗೌಡ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. 80 ವರ್ಷದ ಕೃಷ್ಣೇಗೌಡ ಅವರಿಗೆ ಕೆಲ ದಿನಗಳ ಹಿಂದೆ ಕೊರೊನಾ ಸೋಂಕು ದೃಢಪಟ್ಟಿತ್ತು. ಚಿಕಿತ್ಸೆ ಬಳಿಕ ಗುಣಮುಖರಾಗಿದ್ದರು. ಇತ್ತೀಚೆಗೆ ಮತ್ತೆ ಅನಾರೋಗ್ಯಕ್ಕೀಡಾಗಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ರಂಗಭೂಮಿ ಹಿನ್ನೆಲೆಯಿಂದ ಬಂದು ಚಿತ್ರರಂಗಕ್ಕೆ ಕಾಲಿಟ್ಟಿದ್ದ ಕೃಷ್ಣೇಗೌಡ …

Read More »

ಸಾವಿನಲ್ಲೂ ಒಂದಾದ ದಂಪತಿ

ಬಳ್ಳಾರಿ: ಪತಿ ಸಾವನ್ನಪಿದ್ದಾರೆ ಎಂಬ ವಿಷಯ ತಿಳಿಯುತ್ತಿದ್ದಂತೆ ಮಹಿಳೆ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಗುಡೇಕೋಟೆ ಗ್ರಾಪಂ ವ್ಯಾಪ್ತಿಯಾ ಅಪ್ಪೇನಹಳ್ಳಿಯಲ್ಲಿ ನಡೆದಿದೆ. ಪರಮೇಶ್ವರ, ಅಂಗಡಿ ವಾಮದೇವಮ್ಮ(60) ಮೃತರಾಗಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿದ್ದ ಪರಮೇಶ್ವರ ಕೊರೊನಾ ಸೋಂಕಿನಿಂದ ಮೃತರಾಗಿದ್ದಾರೆ. ಪತಿ ಸಾವಿನ ಸುದ್ದಿ ತಿಳಿದ ಪತ್ನಿ ಅಂಗಡಿ ವಾಮದೇವಮ್ಮ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ಕಳೆದ ಒಂದು ವಾರದ ಹಿಂದ ಪರಮೇಶ್ವರಗೆ ಕೊರೊನಾ ಸೋಂಕು ತಗುಲಿರುವುದು …

Read More »

ವಿಜಯೋತ್ಸವದ ನೆಪದಲ್ಲಿ ಬಿಜೆಪಿ ಬೆಳಗಾವಿಯಲ್ಲಿ ನಡೆಸಿದ್ದ ಜನಸೇವಕ ಸಮಾವೇಶ ಈಗ ಪೊಲೀಸ್ ಆಯುಕ್ತರಿಗೆ ಸಂಕಷ್ಟ: ರಾಜ್ಯ ಹೈಕೋರ್ಟ್ ಪೊಲೀಸ್ ಆಯುಕ್ತರ ವಿರುದ್ಧ ಗರಂ

ಬೆಳಗಾವಿ – ಗ್ರಾಮ ಪಂಚಾಯಿತಿ ಚುನಾವಣೆ ಬಳಿಕ ವಿಜಯೋತ್ಸವದ ನೆಪದಲ್ಲಿ ಬಿಜೆಪಿ ಬೆಳಗಾವಿಯಲ್ಲಿ ನಡೆಸಿದ್ದ ಜನಸೇವಕ ಸಮಾವೇಶ ಈಗ ಪೊಲೀಸ್ ಆಯುಕ್ತರಿಗೆ ಸಂಕಷ್ಟ ತಂದಿಟ್ಟಿದೆ. ಸಾಂಕ್ರಾಮಿಕ ರೋಗ ಕೊರೋನಾ ಸಂದರ್ಭದಲ್ಲಿ ಇಂತಹ ಸಮಾವೇಶ ನಡೆಸಿರುವ ಕುರಿತು ರಾಜ್ಯ ಹೈಕೋರ್ಟ್ ಪೊಲೀಸ್ ಆಯುಕ್ತರ ವಿರುದ್ಧ ಗರಂ ಆಗಿದ್ದು, ಜೂನ್ 3ರೊಳಗೆ ವಿವರಣೆ ನೀಡುವಂತೆ ಸೂಚಿಸಿದೆ. ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಜನಸೇವಕ ಸಮಾವೇಶ ನಡೆದಿತ್ತು. ಆಗಿನ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ …

Read More »

ಒಂದು ಔಷಧಿಗೆ 16 ಕೋಟಿ; ಮುಗ್ಧ ಮಗುವಿನ ಜೀವ ಉಳಿಸಿ ಮಾನವೀಯತೆ ಮೆರೆದ ಕಿಂಗ್ ಕೊಹ್ಲಿ

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ಇತ್ತೀಚಿಗಷ್ಟೆ ಕೆಟ್ಟೊ ಅಭಿಯಾನದಡಿ ಕೊರೊನಾ ವಿರುದ್ಧದ ಹೋರಾಟಕ್ಕೆ 11 ಕೋಟಿ ಹಣವನ್ನು ಸಂಗ್ರಹಿಸಿದ್ದರು. ಈ 11 ಕೋಟಿಯಲ್ಲಿ ವಿರುಷ್ಕಾ ದಂಪತಿಯದ್ದು 2 ಕೋಟಿ ದೇಣಿಗೆ ಕೂಡ ಇತ್ತು. ಇಷ್ಟು ದೊಡ್ಡ ಮೊತ್ತದ ದೇಣಿಗೆಯನ್ನು ನೀಡಿದ ಬೆನ್ನಲ್ಲೇ ಮಾಜಿ ಕ್ರಿಕೆಟ್ ಆಟಗಾರ್ತಿ ಶ್ರಾವಂತಿ ನಾಯ್ಡು ತಾಯಿಯ ಚಿಕಿತ್ಸೆಗೆ ಹಣದ ಕೊರತೆ ಉಂಟಾದಾಗ ವಿರಾಟ್ ಕೊಹ್ಲಿ 6.67 ಲಕ್ಷ ರೂಪಾಯಿಗಳನ್ನು ನೀಡಿ ಮಾನವೀಯತೆ ಮೆರೆದಿದ್ದರು. …

Read More »

ನೀರಿನಲ್ಲೂ ಪತ್ತೆಯಾದ ಕೋವಿಡ್ ವೈರಸ್​​​!

ಲಖನೌ : ಕೋವಿಡ್​ ಎರಡನೇ ಅಲೆಗೆ ಸಿಲುಕಿ ದೇಶಕ್ಕೆ ದೇಶವೇ ತತ್ತರಿಸಿರುವ ನಡುವೆ, ಈಗ ಇನ್ನೊಂದು ಆಘಾತಕಾರಿ ಸುದ್ದಿ ಹೊರ ಬಿದ್ದಿದ್ದು, ನೀರಿನಲ್ಲಿ ಕೋವಿಡ್ ವೈರಸ್ ಪತ್ತೆಯಾಗಿರುವುದಾಗಿ ತಜ್ಞರು ಹೇಳಿದ್ದಾರೆ. ಇಂಡಿಯನ್ ಕೌನ್ಸಿಲ್ ಆಫ್​ ಮೆಡಿಕಲ್ ರಿಸರ್ಚ್ ( ಐಸಿಎಂಆರ್​) ಮತ್ತು ವಿಶ್ವ ಆರೋಗ್ಯ ಸಂಸ್ಥೆ ( ಡಬ್ಲ್ಯುಹೆಚ್​ಒ ) ಜಂಟಿಯಾಗಿ ಕೊಳಚೆ ನೀರಿನಲ್ಲಿ ವೈರಸ್ ಪತ್ತೆ ಹಚ್ಚುವ ಕಾರ್ಯಕ್ಕೆ ಮುಂದಾಗಿತ್ತು.ಇದಕ್ಕಾಗಿ ಉತ್ತರ ಪ್ರದೇಶದ ಕೆಲ ಭಾಗಗಳಿಂದ ಕೊಳಚೆ ನೀರು …

Read More »

ಅತ್ಯಾಚಾರ, ಕೊಲೆ ಪ್ರಕರಣದ ತನಿಖೆ ಇನ್ನೂ ಪೂರ್ಣವಾಗಿಲ್ಲ: ಎಸ್‌ಪಿ

ವಿಜಯಪುರ: ‘ಬಾಗೇವಾಡಿ ತಾಲ್ಲೂಕಿನ ಗ್ರಾಮವೊಂದರ ಇಬ್ಬರು ಬಾಲಕಿಯರನ್ನು ಅತ್ಯಾಚಾರ ಮಾಡಿ, ಕೊಲೆಗೈದಿರುವ ಪ್ರಕರಣವನ್ನು ಮುಚ್ಚಿಹಾಕುವ ಹುನ್ನಾರ ನಡೆದಿದೆ’ ಎಂದು ಜಿಲ್ಲೆಯ ವಿವಿಧ ಸಂಘಟನೆಗಳ ಮುಖಂಡರಾದ ಅಡಿವೆಪ್ಪ ಸಾಲಗಲ್, ಉಮೇಶ ನಡುವಿನಮನಿ, ದೇವೇಂದ್ರ ಹಾದಿಮನಿ, ಗುರುರಾಜ ಗುಡಿಮನಿ, ಸಂಜು ಕಂಬಾಗಿ ಮತ್ತಿತರರು ಆರೋಪಿಸಿದ್ದಾರೆ. ಈ ಸಂಬಂಧ ‘ಪ್ರಜಾವಾಣಿ’ಗೆ ಸೋಮವಾರ ಕರೆ ಮಾಡಿ ಮಾತನಾಡಿದ ಸಂಘಟನೆಗಳ ಮುಖಂಡರು, ‘ಬಾಲಕಿಯರ ಅತ್ಯಾಚಾರ, ಕೊಲೆ ಪ್ರಕರಣವನ್ನು ಆತ್ಮಹತ್ಯೆ ಎಂದು ಬಿಂಬಿಸುವ ಹುನ್ನಾರ ನಡೆದಿದೆ. ಇದು ಸಂಪೂರ್ಣ …

Read More »

ಸಬ್‌ ಇನ್ಸ್ ಪೆಕ್ಟರ್‌ ಅರ್ಜುನ್‌ ನ್ನು ಜೈಲಿಗೆ ಕಳಿಸಲು ಸಂಸದ ಹನುಮಂತಯ್ಯ ಒತ್ತಾಯ

ಬೆಂಗಳೂರು: ‘ವಿಚಾರಣೆ ನೆಪದಲ್ಲಿ ದಲಿತ ಯುವಕನನ್ನು ಠಾಣೆಗೆ ಕರೆದೊಯ್ದು ಮೂತ್ರ ನೆಕ್ಕಿಸಿರುವ ಚಿಕ್ಕಮಗಳೂರು ಜಿಲ್ಲೆ ಗೋಣಿಬೀಡು ಠಾಣೆಯ ಸಬ್‌ಇನ್ಸ್‌ಪೆಕ್ಟರ್‌ ಅರ್ಜುನ್‌ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಬೇಕು. ಜೊತೆಗೆ ಸೇವೆಯಿಂದಲೇ ವಜಾಗೊಳಿಸಬೇಕು’ ಎಂದು ರಾಜ್ಯಸಭಾ ಸದಸ್ಯ ಎಲ್‌.ಹನುಮಂತಯ್ಯ ಒತ್ತಾಯಿಸಿದ್ದಾರೆ. ‘ಕಿರುಗುಂದ ಗ್ರಾಮದ ಕೆ.ಎಲ್‌.ಪುನೀತ್‌ ಜೊತೆ ಅರ್ಜುನ್‌ ಅಮಾನುಷವಾಗಿ ನಡೆದುಕೊಂಡಿದ್ದಾರೆ. ಸರ್ಕಾರಿ ಅಧಿಕಾರಿಯಾಗಿ ಅವರು ನಡೆದುಕೊಂಡಿರುವ ರೀತಿ ಖಂಡನೀಯ. ಅವರ ಕ್ರೂರ ವರ್ತನೆಯ ವಿರುದ್ಧ ಸಾಕಷ್ಟು ಟೀಕೆಗಳು ವ್ಯಕ್ತವಾದರೂ ಸರ್ಕಾರವು ಆರಂಭದಲ್ಲಿ ಯಾವುದೇ …

Read More »