ರಾಮನಗರ, ಮೇ.23- ಒಂದು ಸಾವಿರ ಆಮ್ಲಜನಕ ಸಾಂದ್ರಕ ಖರೀದಿಸಲು ಯೋಜಿಸಲಾಗಿದ್ದು, ಮೊದಲು 100 ಆಮ್ಲಜನಕ ಸಾಂದ್ರಕ ಖರೀದಿಸಲಾಗಿದೆ ಅದರ ಕಾರ್ಯವೈಖರಿ ಗುಣ ಮಟ್ಟ ನೋಡಿ ಉಳಿದ ಆಮ್ಲಜನಕ ಸಾಂದ್ರಕವನ್ನು ಖರೀದಿಸಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ವಿಭಾಗ ಮಟ್ಟಕ್ಕೆ 2 ರಂತೆ 10 ಆಕ್ಸಿಜನ್ ಟ್ಸಾಂಕರ್, 10 ಆಕ್ಸಿಜನ್ ಜನರೇಟರ್‌ಗಳನ್ನು …
Read More »Yearly Archives: 2021
ಬೆಂಗಳೂರಿಗೆ ಬರೋ ವ್ಯಕ್ತಿಗಳಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ?
ಬೆಂಗಳೂರು: ಲಾಕ್‍ಡೌನ್ ಮುಗಿದ ಬಳಿಕ ಬೆಂಗಳೂರಿಗೆ ಬರುವ ವ್ಯಕ್ತಿಗಳಿಗೆ ಸರ್ಕಾರ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡುತ್ತಾ ಎಂಬ ಪ್ರಶ್ನೆ ಈಗ ಎದ್ದಿದೆ. ಹೌದು. ಸದ್ಯ ಈಗ ಜೂನ್ 7ರವರೆಗೆ ಲಾಕ್‍ಡೌನ್ ಮುಂದುವರಿಯಲಿದ್ದು, ನಂತರ ಏನು ಎನ್ನುವುದು ತಿಳಿದು ಬಂದಿಲ್ಲ. ಲಾಕ್‍ಡೌನ್ ತೆರವಾದ ಕೂಡಲೇ ಮತ್ತೆ ಊರಿನಿಂದ ಬೆಂಗಳೂರಿಗೆ ವಲಸೆ ಆರಂಭವಾಗಲಿದೆ. ಲಾಕ್‍ಡೌನ್ ಹೇರಿದ ಬಳಿಕವೂ ಕೊರೊನಾ ನಿಯಂತ್ರಣಕ್ಕೆ ಬಾರದೇ ಇದ್ದಲ್ಲಿ ಜೂನ್ 7ರ ಬಳಿಕ ಬೆಂಗಳೂರಿಗೆ ಬರುವ ವ್ಯಕ್ತಿಗಳಿಗೆ …
Read More »ಇಂದಿನಿಂದ ಝೊಮ್ಯಾಟೋ ಉದ್ಯೋಗಿಗಳಿಗೆ ಕೊವೀಡ್ ಲಸಿಕೆ ವಿತರಣೆ: ಸಿಇಒ ಘೋಷಣೆ
ದೆಹಲಿ: ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲೂ ಕೆಲಸ ಮಾಡಿದ ಝೊಮ್ಯಾಟೋ ಆನ್‍ಲೈನ್ ಫುಡ್ ಆರ್ಡರ್ ಕಂಪನಿಯ ಉದ್ಯೋಗಿಗಳು, ಸಿಬ್ಬಂದಿಗೆ ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗುವುದು ಎಂದು ಸಂಸ್ಥೆಯ ಸಿಇಒ ದೀಪಿಂದರ್ ಗೋಯಲ್ ತಿಳಿಸಿದ್ದಾರೆ. ಹೀಗಾಗಿ ಜೊಮ್ಯಾಟೋದ ಸುಮಾರು 1.5 ಲಕ್ಷ ಉದ್ಯೋಗಿಗಳು ಕಂಪನಿಯ ವತಿಯಿಂದ ಉಚಿತವಾಗಿ ಕೊರೊನಾ ಲಸಿಕೆ ಪಡೆಯಲಿದ್ದಾರೆ. ರಾಷ್ಟ್ರರಾಜಧಾನಿಯಲ್ಲಿ ಈಗಾಗಲೇ ಲಸಿಕೆ ವಿತರಣೆ ನಡೆಯುತ್ತಿದ್ದು, ಸಾವಿರಕ್ಕೂ ಹೆಚ್ಚು ಮಂದಿ ವ್ಯಾಕ್ಸಿನೇಶನ್ ಮಾಡಿಸಿಕೊಂಡಿದ್ದಾರೆ. ಇಂದಿನಿಂದ ಮುಂಬೈ ಮತ್ತು ಬೆಂಗಳೂರಿನಲ್ಲಿರುವ ಝೊಮ್ಯಾಟೋ …
Read More »ಅನುಮತಿ ಇಲ್ಲದೆ ವಿವಾಹ ಆಯೋಜನೆ- 25 ಸಾವಿರ ದಂಡ
ಚಿಕ್ಕೋಡಿ/ಬೆಳಗಾವಿ: ಅನುಮತಿ ಪಡೆಯದೇ ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿ ಮದುವೆ ಸಮಾರಂಭದ ಆಯೋಜಿಸಿದ್ದಕ್ಕೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ದಾಳಿ ನಡೆಸಿ ಕುಟಂಬಕ್ಕೆ 25 ಸಾವಿರ ರೂ. ದಂಡ ವಿಧಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕಮತನೂರು ಗ್ರಾಮದಲ್ಲಿ ನಡೆದಿದೆ. ಕಮತನೂರು ಗ್ರಾಮದ ವರ ಕಾಶಿನಾಥ ಕಾಡಿ ಹಾಗೂ ಅವರಗೋಳ ಗ್ರಾಮದ ವಧು ಕಾಂಚನಾ ಬಾಳಾಜಿ ಅವರ ಮದುವೆಯನ್ನು ಶುಕ್ರವಾರ ಕಮತನೂರು ಗ್ರಾಮದಲ್ಲಿ ಆಯೋಜಿಸಲಾಗಿತ್ತು. ಆದರೆ ಗ್ರಾಮ ಪಂಚಾಯಿತಿಯಿಂದ ಅನುಮತಿ ಪಡೆದಿರಲಿಲ್ಲ. …
Read More »ನಾನು ಮುಖ್ಯಮಂತ್ರಿ ಆಗ್ಬೇಕು, ನೀವು ನನ್ನ ಗೆಲ್ಲಿಸ್ತೀರಾ?: ಉಪೇಂದ್ರ
ಬೆಂಗಳೂರು: ನಾನು ಮುಖ್ಯಮಂತ್ರಿ ಆಗ್ಬೇಕು, ನೀವು ನನ್ನ ಗೆಲ್ಲಿಸ್ತೀರಾ? ಎಂದು ಸ್ಯಾಂಡಲ್‍ವುಡ್ ನಟ ಉಪೇಂದ್ರ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಒಂದು ಸುದೀರ್ಘ ಪೋಸ್ಟ್ ಹಂಚಿಕೊಳ್ಳುವ ಮೂಲವಾಗಿ ಸಖತ್ ಸುದ್ದಿಯಲ್ಲಿದ್ದಾರೆ. ನಾನು ಉಪೇಂದ್ರ ಈ ರಾಜ್ಯದ ಮುಖ್ಯಮಂತ್ರಿ (CM ) ಆಗ್ಬೇಕು. ನಾನು ಚುನಾವಣೆಯಲ್ಲಿ ಸ್ಪರ್ಧಿಸಿದರೆ ನೀವು ನನ್ನನ್ನ ಗೆಲ್ಲಿಸ್ತೀರಾ? ಎಂಬ ಪ್ರಶ್ನೆಯೊಂದಿಗೆ ಅವರು ಮಾತು ಆರಂಭಿಸಿದ್ದಾರೆ. ಈ ಕುರಿತಾಗಿ ಅಭಿಮಾನಿಗಳು ಸಕಾರಾತ್ಮಕ ಪ್ರತಿಕ್ರೀಯೆಯನ್ನು ಕೊಟ್ಟಿದ್ದಾರೆ. ನೀವು ನನ್ನನ್ನ …
Read More »ಬ್ಲ್ಯಾಕ್, ವೈಟ್ ಫಂಗಸ್ ನಲ್ಲಿ ವರ್ಣದ ಅಂಶ ಹೊರತು ಬೇರೆ ವ್ಯತ್ಯಾಸವಿಲ್ಲ : ಸುಧಾಕರ್
ಹುಬ್ಬಳ್ಳಿ : ಆಸ್ಪತ್ರೆಗಳಲ್ಲಿ ಬಳಸುವ ಹ್ಯುಮಿಡಿಫೈಡ್‌ಗಳಲ್ಲಿ ಡಿಸ್ಟಿಲ್ ವಾಟರ್ ಬಳಸಬೇಕು. ಆದರೆ ಹಲವೆಡೆ ನಲ್ಲಿಯ ನೀರನ್ನು ಹಾಕಿದ್ದಾರೆ. ಇದರಿಂದ ಫಂಗಸ್ ಬೆಳವಣಿಗೆಯಾಗಿದೆ. ಕ್ಯಾನುಲಾಗಳು ಸೇರಿ ಐಸಿಯುನಲ್ಲಿ ಬಳಸುವ ವೈದ್ಯಕೀಯ ಪರಿಕರಗಳಲ್ಲಿ ಕೂಡ ಫಂಗಸ್ ಬೆಳೆಯತ್ತಿದೆ. ಇವುಗಳನ್ನು ಮತ್ತೂಬ್ಬ ರೋಗಿ ಬಳಸುವಾಗ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಿ ಬಳಸಬೇಕು. ಇಲ್ಲವಾದರೆ ಹೊಸದನ್ನು ಬಳಸಬೇಕು ಎಂಬ ಸಲಹೆಯನ್ನು ತಜ್ಞರ ಸಮಿತಿ ನೀಡಿದೆ. ತಜ್ಞರ ವರದಿ ಆಧರಿಸಿ ಬ್ಲ್ಯಾಕ್ ಫಂಗಸ್ ಸೋಂಕು ಹರಡುವುದನ್ನು ತಡೆಯಲು ಎಲ್ಲ …
Read More »ಮಕ್ಕಳ ಮನೆಗೇ ಬರಲಿದೆ ಪಠ್ಯಪುಸ್ತಕ : ಆಗಸ್ಟ್ ಅಂತ್ಯದ ವೇಳೆಗೆ ಶಾಲೆಗಳಿಂದ ರವಾನೆ
ಬೆಂಗಳೂರು : ಕೊರೊನಾ ದಿಂದಾಗಿ ಮನೆಯಲ್ಲೇ ಇರುವ ವಿದ್ಯಾರ್ಥಿಗಳ ಸ್ವಯಂ ಅಧ್ಯಯನಕ್ಕೆ ಅನುಕೂಲವಾಗುವಂತೆ ಆಗಸ್ಟ್ ಅಂತ್ಯದೊಳಗೆ ಪಠ್ಯಪುಸ್ತಕ ಪೂರೈಕೆಗೆ ಶಿಕ್ಷಣ ಇಲಾಖೆ ಮುಂದಾಗಿದೆ. 2021-22ನೇ ಸಾಲಿನ ಪಠ್ಯಪುಸ್ತಕ ಮುದ್ರಣ ಸಂಬಂಧ ಕರ್ನಾಟಕ ಪಠ್ಯಪುಸ್ತಕ ಸಂಘವು ಎಲ್ಲ ಶಾಲೆಗಳಿಂದ ಈಗಾಗಲೇ ಪುಸ್ತಕದ ಮಾಹಿತಿ ಪಡೆದಿದೆ. ಪುಸ್ತಕ ಮುದ್ರಣ ಕ್ಕಾಗಿ ಟೆಂಡರ್ ಪ್ರಕ್ರಿಯೆ ಆರಂಭವಾಗಿದೆ. ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು, ಕಾರ್ಯಾದೇಶ ನೀಡಿದ 100 ದಿನಗಳೊಳಗೆ ಟೆಂಡರ್ ಪಡೆದ ಸಂಸ್ಥೆ ಪುಸ್ತಕಗಳನ್ನು ಮುದ್ರಿಸಿ, ಕರ್ನಾಟಕ …
Read More »ಗಂಡು ಮಗುವಿಗೆ ಜನ್ಮ ನೀಡಿದ ಶ್ರೇಯ ಗೋಶಲ್
ಮುಂಬೈ : ತಮ್ಮ ಹಾಡಿನ ಮೂಲಕ ಹಲವಾರು ಮಂದಿಯ ಮನಸ್ಸಿನ್ನು ಗೆದ್ದಿರುವ ಹಾಗೂ ಸಂಗೀತ ಜಗತ್ತಿನಲ್ಲಿ ತಮ್ಮದೇ ಛಾಪು ಮೂಡಿಸಿರುವ ಗಾಯಕಿ ಶ್ರೇಯಾ ಘೋಷಾಲ್ ಮಗುವೊಂದಕ್ಕೆ ಜನ್ಮ ನೀಡಿದ್ದಾರೆ. ಈ ಕುರಿತು ಶ್ರೇಯ ಗೋಶಲ್ ಅವರ ಪತಿ ಶೀಲಾದಿತ್ಯ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಗಂಡು ಮಗುವಿಗೆ ಶ್ರೇಯ ಗೋಶಲ್ ನೀಡಿರುವುದಾಗಿ ತಿಳಿಸಿದ್ದಾರೆ. ಮಾರ್ಚ್ ನಲ್ಲಿ ತಮ್ಮ ಮಗುವಿನ ಆಗಮನದ ಬಗ್ಗೆ ಶ್ರೇಯಾ ಖುಷಿ ಹಂಚಿಕೊಂಡಿದ್ದರು .
Read More »ಕೊಲೆ ಪ್ರಕರಣದಲ್ಲಿ ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಬಂಧನ
ನವದೆಹಲಿ: ಯುವ ಕುಸ್ತಿಪಟು ಸಾಗರ್ ರಾಣಾ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎರಡು ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಹಾಗೂ ಅವರ ಬಲಗೈ ಬಂಟ ಅಜಯ್ ಎಂಬಾತನನ್ನು ಪಂಜಾಬ್ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಸುಶೀಲ್ ಕುಮಾರ್ ಅವರನ್ನು ಪಂಜಾಬ್ ಪೊಲೀಸರು ದೆಹಲಿ ಪೊಲೀಸರಿಗೆ ಒಪ್ಪಿಸಲಿದ್ದಾರೆ. ಇದಕ್ಕೂ ಮೊದಲು ದೆಹಲಿ ಕೋರ್ಟ್ ಸುಶೀಲ್ ಕುಮಾರ್‌ಗೆ ಜಾಮೀನು ನೀಡಲು ನಿರಾಕರಿಸಿತ್ತು. ಸುಶೀಲ್ ಕುಮಾರ್ 2008ರ ಬಿಜಿಂಗ್ ಹಾಗೂ 2012ರ ಲಂಡನ್ ಒಲಿಂಪಿಕ್ಸ್‌ನಲ್ಲಿ …
Read More »ಪುತ್ರನನ್ನು ಕಳೆದುಕೊಂಡ ತಂದೆ-1 ಕೋಟಿ ಪರಿಹಾರ ಕೊಟ್ಟ ಕೇಜ್ರಿವಾಲ್
ನವದೆಹಲಿ: ಕೊರೊನಾ ವಾರಿಯರ್ ಆಗಿರುವ ವೈದ್ಯರೊಬ್ಬರು ಕೋವಿಡ್‍ಗೆ ಬಲಿಯಾಗಿದ್ದು, ಅವರ ಕುಟುಂಬಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬರೋಬ್ಬರಿ 1ಕೋಟಿ ರೂಪಾಯಿ ಹಣವನ್ನು ಪರಿಹಾರವಾಗಿ ಕೊಟ್ಟಿದ್ದಾರೆ. ಡಾ. ಅನಾಸ್(26) ಮೃತ ವೈದ್ಯರಾಗಿದ್ದಾರೆ. ಇವರು ಕೊರೊನಾ ಸೋಂಕಿನಿಂದ ಇತ್ತೀಚೆಗಷ್ಟೇ ಮೃತಪಟ್ಟಿದ್ದರು. ಇವರ ಕುಟುಂಬಕ್ಕೆ ಅರವಿಂದ್ ಕೇಜ್ರಿವಾಲ್ ಅವರು ಸಹಾಯವನ್ನು ಮಾಡಿದ್ದಾರೆ. ಮೃತ ಡಾ. ಅನಾಸ್ ಅವರ ಮನೆಗೆ ಭೇಟಿನೀಡಿ ಅವರ ತಂದೆಗೆ ಸಾಂತ್ವನ ಹೇಳಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು …
Read More »