ರಾಯಪುರ : ಕೋವಿಡ್-19 ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರ ಹಾಕಿರುವ ಬಗ್ಗೆ ವ್ಯಾಪಕ ಪ್ರಶ್ನೆಗಳು ಎದ್ದಿರುವ ಬೆನ್ನಲ್ಲೇ, ಕಾಂಗ್ರೆಸ್ ಆಡಳಿತವಿರುವ ಛತ್ತೀಸ್‌ಗಢ ಸರ್ಕಾರ 18-44 ವರ್ಷ ವಯೋಮಿತಿಯ ಲಸಿಕೆ ಹಾಕಿಕೊಂಡವರಿಗೆ ತನ್ನದೇ ಪ್ರಮಾಣಪತ್ರ ನೀಡಲು ಆರಂಭಿಸಿದೆ. ಇದರಲ್ಲಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಭಾವಚಿತ್ರವಿದೆ. 18-44 ವಯೋಮಿತಿಯವರು ಲಸಿಕೆಗೆ ನೋಂದಾಯಿಸಿಕೊಳ್ಳಲು ರಾಜ್ಯ ಸರ್ಕಾರ ಈಗಾಗಲೇ ತನ್ನದೇ ಸಿಜಿಟೀಕಾ ಎಂಬ ಪೋರ್ಟೆಲ್ ನಿಯೋಜಿಸಿಕೊಂಡಿದ್ದು, ಲಸಿಕೆ ಹಾಕಿಕೊಂಡವರಿಗೆ ಕೇಂದ್ರ ಸರ್ಕಾರ …
Read More »Yearly Archives: 2021
ಪ್ರಶ್ನಾತೀತ ಪ್ರಧಾನಿ ದೇಶದ ಹಿತಕ್ಕೆ ಹಾನಿ: ಕೃಷ್ಣ ಬೈರೇಗೌಡ
ಪ್ರಧಾನಿ ಪ್ರಶ್ನಾತೀತರೂ ಅಲ್ಲ, ಹಾಗೆ ಆಗಲೂಬಾರದು. ಅದರಿಂದ ಜನಹಿತ ಮತ್ತು ಪ್ರಜಾಪ್ರಭುತ್ವ ಕ್ಷೀಣಿಸುತ್ತದೆ. ಅಂಧ ಸರ್ವಾಧಿಕಾರ ಬೆಳೆಯುತ್ತದೆ. ಅದು ದೇಶಕ್ಕೆ ಹಾನಿ. ಪ್ರಧಾನಿಯನ್ನು ಅಥವಾ ಸರ್ಕಾರವನ್ನು ಪ್ರಶ್ನಿಸುವುದು ದೇಶದ ಬಗ್ಗೆ ನೈಜ ಕಾಳಜಿ ಹೊಂದಿರುವ ಭಾರತೀಯನ ಹಕ್ಕು ಹಾಗೂ ಕರ್ತವ್ಯ. ಇದರಿಂದ ದೇಶ ಮತ್ತಷ್ಟು ಬಲಿಷ್ಠ, ಸದೃಢ ಅಭಿವೃದ್ಧಿಯನ್ನು ಸಾಧಿಸಬಹುದು ನಿಜ, ‘ಪ್ರಜಾಪ್ರಭುತ್ವ ಒಂದು ಕೆಟ್ಟ ಆಡಳಿತ ವ್ಯವಸ್ಥೆ. ಆದರೆ ಅದು ಇಲ್ಲಿಯವರೆಗೂ ಕಂಡಂತಹ ಇತರ ಎಲ್ಲಾ ಆಡಳಿತ ವ್ಯವಸ್ಥೆಗಳಿಗಿಂತ …
Read More »ಸಂವಾದ ; ಕಣ್ಣೀರು ಹೇಡಿಯ ಅಸ್ತ್ರ ಎಂದ ಕಾಂಗ್ರೆಸ್
ಬೆಂಗಳೂರು, : ಆರೋಗ್ಯ ಕಾರ್ಯಕರ್ತರೊಂದಿಗೆ ಸಂವಾದದ ವೇಳೆ ಪ್ರಧಾನಿ ಮೋದಿ ಗದ್ಗಿತರಾದ ಬಗ್ಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ವ್ಯಂಗ್ಯವಾಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕೆಪಿಸಿಸಿ, “ಕಣ್ಣೀರು ಹೇಡಿಯ ಪ್ರಮುಖ ಅಸ್ತ್ರ. ಎದುರಿಗಿದ್ದ ಕ್ಯಾಮೆರಾ ಹಾಗೂ ಟೆಲಿಪ್ರಾಂಪ್ಟರ್ ನೋಡಿಕೊಂಡು ಕಣ್ಣೀರು ಸುರಿಸುವುದು ಅದ್ಬುತ ನಟನಾ ಕೌಶಲ್ಯ! @narendramodi ಅವರೇ, ಜನತೆಗೆ ಬೇಕಿರುವುದು ನಿಮ್ಮ ಕಣ್ಣೀರಲ್ಲ””ಆಕ್ಸಿಜನ್, ಲಸಿಕೆ, ವೈದ್ಯಕೀಯ ವ್ಯವಸ್ಥೆ, ಚಿಕಿತ್ಸೆ, ಆರ್ಥಿಕ ನೆರವು. ಇದ್ಯಾವುದನ್ನೂ ನೀಡದೆ ಎರಡು …
Read More »ಅಬ್ಬಬ್ಬಾ..! 707 ಹುದ್ದೆಗಳಿಗೆ 4.71 ಲಕ್ಷ ಅರ್ಜಿ
ನೂರೈವತ್ತು ಕೋಟಿ ಜನಸಂಖ್ಯೆ ಇರುವ ಭಾರತದಲ್ಲಿ ಪುಟ್ಟದೊಂದು ಕೆಲಸ ಸಿಕ್ಕರೆ ಸಾಕು ಎಂದು ಹಾತೊರೆಯುವ ಕೋಟ್ಯಂತರ ಜೀವಗಳನ್ನು ನೋಡುತ್ತಲೇ ಇರುತ್ತೇವೆ. ಅತಿ ಸಣ್ಣ, ಸಣ್ಣ ಹಾಗೂ ಮಧ್ಯಮ ಉದ್ಯಮಗಳ ಸಂಪರ್ಕ ಪೋರ್ಟಲ್‌ನಲ್ಲಿ ಈ ವಾಸ್ತವದ ಕರಾಳ ರೂಪ ಕಣ್ಣಿಗೆ ರಾಚುವಂತೆ ಕಂಡಿದೆ. ಮೇ 21ರಂದು ಕಂಡಂತೆ 707 ಹುದ್ದೆಗಳಿಗೆ 4,71,922 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಎಂಎಸ್‌ಎಂಇ ಸಂಪರ್ಕ ಪೋರ್ಟಲ್‌ಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಜೂನ್ 2018ರಲ್ಲಿ ಚಾಲನೆ ಕೊಟ್ಟಿದ್ದರು. …
Read More »ಎಸ್‌ಆರ್‌ಎಸ್ ಟ್ರಾವೆಲ್ಸ್ ಮಾಲೀಕ ರಾಜಶೇಖರ್ ವಿಧಿವಶ: ಕೋವಿಡ್-19 ಸೋಂಕಿಗೆ ಬಲಿ
ಬೆಂಗಳೂರು: ದೇಶದ ಸಾರಿಗೆ ಉದ್ಯಮದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಎಸ್‌ಆರ್‌ಎಸ್ ಟ್ರಾವೆಲ್ಸ್ ಮತ್ತು ಲಾಜಿಸ್ಟಿಕ್ಸ್ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಕೆ.ಟಿ. ರಾಜಶೇಖರ್ (78) ಶುಕ್ರವಾರ ನಿಧನರಾದರು. ಮಾಗಡಿ ಮೂಲದ ರಾಜಶೇಖರ್ ಅವರು ದೇಶದ ಪ್ರಮುಖ ಸಾರಿಗೆ ಸಂಸ್ಥೆಗಳಲ್ಲಿ ಒಂದು ಎಂದೇ ಗುರುತಿಸಿಕೊಂಡಿದ್ದ ಎಸ್‌ಆರ್‌ಎಸ್ ಟ್ರಾವೆಲ್ಸ್ ಮತ್ತು ಲಾಜಿಸ್ಟಿಕ್ಸ್ ಸಂಸ್ಥೆ ಸ್ಥಾಪಿಸಿದ್ದರು. ಇದಕ್ಕೂ ಮುನ್ನ ಹಲವು ರೀತಿಯ ಸವಾಲುಗಳನ್ನು ಎದುರಿಸಿದ್ದರು. ಕೃಷಿ ಕುಟುಂಬದ ಹಿನ್ನೆಲೆಯಿಂದ ಬಂದಿದ್ದ ರಾಜಶೇಖರ್, ಆರಂಭದಲ್ಲಿ ಟೂರಿಸ್ಟ್ …
Read More »ಮಾಸ್ಕ್ ಧರಿಸಿ ಅಂದಿದ್ದಕ್ಕೆ ಗ್ರಾ.ಪಂ ಸದಸ್ಯನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ
ಚಿಕ್ಕಬಳ್ಳಾಪುರ: ಹಳ್ಳಿಗಳಲ್ಲಿ ಕೊರೊನಾ ಶರವೇಗದ ಸ್ವರೂಪ ಪಡೆದುಕೊಳ್ಳುತ್ತಿದೆ. ಕೊರೊನಾ ತಡೆಗಟ್ಟುವ ಸಲುವಾಗಿ ಯುವಕರಿಗೆ ಮಾಸ್ಕ್ ಧರಿಸಿ ಅಂತ ಹೇಳಿದ್ದನ್ನೇ ನೆಪವಾಗಿಟ್ಟುಕೊಂಡು ರಾಜಕೀಯ ಜಿದ್ದಿಗೆ ಮಾರಕಾಸ್ತ್ರಗಳಿಂದ ಗ್ರಾಮ ಪಂಚಾಯತಿ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕು ಚೀಡಚಿಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮ ಪಂಚಾಯತ್ ಸದಸ್ಯ ತಮ್ಮೇಗೌಡ ಹಾಗೂ ಈತನನ್ನ ರಕ್ಷಿಸಲು ಹೋದ ಮಂಜು ಶಂಕರ್ ಹಲ್ಲೆಗೊಳಗಾದವರಾಗಿದ್ದಾರೆ. ಇದೇ ಗ್ರಾಮದ ಮರಿಯಪ್ಪರ ಮಗ ಚಾಣಕ್ಯ ಗೌಡ, ಅಕ್ಷಯ್ ಗೌಡ, …
Read More »ಕೊರೊನಾ ಗೆದ್ದ ಒಂದೇ ಕುಟುಂಬದ 16 ಮಂದಿ
ಹುಬ್ಬಳ್ಳಿ: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಹೆಮ್ಮಾರಿ ವೈರಸ್‍ಗೆ ಸಾಕಷ್ಟು ಜನರು ಬಲಿಯಾಗುತ್ತಿದ್ದಾರೆ. ಇದರ ನಡುವೆಯೇ ಅದೃಷ್ಟಶಾಲಿಗಳೆಂಬಂತೆ ವೈರಸ್ ವಿರುದ್ಧ ಹೋರಾಡಿ ಒಂದೇ ಕುಟುಂಬದ 16 ಜನರು ಗುಣಮುಖರಾಗುವ ಮೂಲಕ ಇತರಿಗೂ ಮಾದರಿಯಾಗಿದ್ದಾರೆ. ಸುಳ್ಳ ಗ್ರಾಮದ ಶಿವಳ್ಳಿ ಮಠ ಕುಟುಂಬದ 16 ಜನಕ್ಕೆ ಕೊರೊನಾ ಸೋಂಕು ತಗುಲಿತ್ತು. ಮೇ 3 ರಿಂದ ಎಲ್ಲರೂ ಹೋಮ್ ಐಸೋಲೇಷನ್‍ನಲ್ಲಿ ಇದ್ದುಕೊಂಡು ಚೇತರಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಇದರಲ್ಲಿ ಮೂರು ವರ್ಷದ …
Read More »ಶಾಲಾ, ಕಾಲೇಜು ಶುಲ್ಕ ಕಡಿತಗೊಳಿಸಿ- ಸಿಎಂ ಬಿಎಸ್‍ವೈಗೆ ನಟ ಕಿರಣ್ ರಾಜ್ ಮನವಿ
ಬೆಂಗಳೂರು: ಕೊರೊನಾ ಬಿಕ್ಕಟ್ಟಿನ ಪರಿಸ್ಥಿತಿ ಇರುವುದರಿಂದ ಶಾಲಾ-ಕಾಲೇಜುಗಳ ಶುಲ್ಕವನ್ನು ಕಡಿಮೆಗೊಳಿಸುವಂತೆ ನಟ ಕಿರಣ್ ರಾಜ್, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ಪತ್ರ ಬರೆಯುವ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಕೊರೊನಾದಿಂದ ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿದ್ದು, ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಶಿಕ್ಷಣ ನೀಡಲಾಗುತ್ತಿದೆ. ಅಲ್ಲದೆ ಇದೀಗ ಲಾಕ್‍ಡೌನ್ ಜಾರಿಗೊಳಿಸಲಾಗಿದ್ದು, ಪೋಷಕರು ಜೀವನ ನಡೆಸಲು ಕೂಡ ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ. ಹೀಗಿರುವಾಗ ಮಕ್ಕಳ ಶಾಲಾ ಕಾಲೇಜಿನ ಪೂರ್ತಿ ಶುಲ್ಕವನ್ನು ಪಾವತಿಸಲು ಪೋಷಕರು ಕಷ್ಟಪಡುತ್ತಿದ್ದಾರೆ. ಅಲ್ಲದೆ ಶಾಲಾ ಆಡಳಿತ …
Read More »ಸರಿಯಾಗಿ ಸಂಖ್ಯೆ ನೀಡದವರು ಕೊರೊನಾ ಹೇಗೆ ನಿಯಂತ್ರಿಸ್ತೀರಿ- ಡಿಸಿಗೆ ಬೊಮ್ಮಾಯಿ ಕ್ಲಾಸ್
ಹಾವೇರಿ: ಕೋವಿಡ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸರಿಯಾದ ಮಾಹಿತಿ ನೀಡದ ಹಿನ್ನೆಲೆ ಜಿಲ್ಲಾಧಿಕಾರಿ ಸಂಜಯ್ ಶೆಟ್ಟೆಣ್ಣವರ್ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ್ ಬೊಮ್ಮಾಯಿ ಫುಲ್ ಗರಂ ಆಗಿದ್ದು, ಕ್ಲಾಸ್ ತೆಗೆದುಕೊಂಡಿದ್ದಾರೆ. ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ನೇತೃತ್ವದಲ್ಲಿ ನಡೆಯುತ್ತಿದ್ದ ಕೋವಿಡ್ ಪ್ರಗತಿ ಪರಿಶೀಲನಾ ಸಭೆಯ ಆರಂಭದಲ್ಲಿ ಜಿಲ್ಲೆಯ ಕೋವಿಡ್ ಪ್ರಕರಣಗಳ ಕುರಿತು ಸರಿಯಾದ ಅಂಕಿ ಅಂಶಗಳನ್ನು ನೀಡದ್ದರಿಂದ ಸಚಿವ ಬಸವರಾಜ್ ಬೊಮ್ಮಾಯಿ ಜಿಲ್ಲಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು. ಸರಿಯಾದ ಅಂಕಿ, ಸಂಖ್ಯೆ …
Read More »ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಮೇ.25 ರಂದು ತಜ್ಞವೈದ್ಯರು, ವೈದ್ಯಾಧಿಕಾರಿಗಳ ನೇಮಕಾತಿಗೆ ನೇರ ಸಂದರ್ಶನ
ಹಾವೇರಿ : ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ನಿರ್ವಹಣೆಗೆ ಜಿಲ್ಲಾ ಆಸ್ಪತ್ರೆಯಲ್ಲಿ ರಚಿಸಲಾದ ಐ.ಸಿ.ಯುಗಳು ಮತ್ತು ಆಮ್ಲಜನಕ ಬೆಂಬಲಿತ ಹಾಸಿಗೆಗಳನ್ನು ಕಾರ್ಯಗತಗೊಳಿಸಿ ನಿರ್ವಹಿಸಲು ಹೆಚ್ಚುವರಿಯಾಗಿ ಆರು ತಜ್ಞ ವೈದ್ಯರು, 12 ವೈದ್ಯಾಧಿಕಾರಿಗಳು ಹಾಗೂ ತಲಾ ಓರ್ವ ಮೇಂಟೆನೆನ್ಸ್ ಇಂಜನೀಯರ್ ಹಾಗೂ ಐ.ಸಿ.ಯು ಟೆಕ್ನಿಷಿಯನ್ ಹುದ್ದೆಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಮೇ 25 ರಂದು ಬೆಳಿಗ್ಗೆ 10 ಗಂಟೆಯಿಂದ ನೇರ ಸಂದರ್ಶನ ಹಾವೇರಿ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರ ಕೊಠಡಿಯಲ್ಲಿ …
Read More »